Tel: 7676775624 | Mail: info@yellowandred.in

Language: EN KAN

    Follow us :


ಸುಮಾರು ಐದು ಸಾವಿರ ಪೊಲೀಸ್ ಪ್ರಶಿಕ್ಷಣಾರ್ಥಿಗಳ ತರಬೇತಿಗೆ 50 ಕೋಟಿ ಮೀಸಲು : ರಾಮಲಿಂಗಾ ರೆಡ್ಡಿ

Posted date: 10 Mar, 2018

Powered by:     Yellow and Red

ಸುಮಾರು ಐದು ಸಾವಿರ ಪೊಲೀಸ್ ಪ್ರಶಿಕ್ಷಣಾರ್ಥಿಗಳ ತರಬೇತಿಗೆ 50 ಕೋಟಿ ಮೀಸಲು : ರಾಮಲಿಂಗಾ ರೆಡ್ಡಿ

ಕಲಬುರಗಿ : ರಾಜ್ಯದಲ್ಲಿರುವ ಪೊಲೀಸ್ ತರಬೇತಿ ಶಾಲೆಗಳಲ್ಲಿ ಪ್ರತಿ ವರ್ಷ ಸುಮಾರು 3500 ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿತ್ತು. ಅದನ್ನು 5000ಕ್ಕೆ ಹೆಚ್ಚಿಸಿ ತರಬೇತಿಗಾಗಿ 50 ಕೋಟಿ ರೂ. ಅನುದಾನವನ್ನು ಈ ವರ್ಷದ ಆಯವ್ಯಯದಲ್ಲಿ ಮಿಸಲಿಡಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. 
ಅವರು ಗುರುವಾರ ಕಲಬುರಗಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ (ಪಿ.ಟಿ.ಸಿ.) ಕವಾಯತು ಮೈದಾನದಲ್ಲಿ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಮೂರನೆÉೀ ತಂಡದ ಸ್ಪೆಷಲ್ ಆರ್.ಎಸ್.ಐ./ ಆರ್.ಎಸ್.ಐ. ಮತ್ತು 9ನೇ ತಂಡದ ಸಿ.ಪಿ.ಸಿ. ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಪರಿವೀಕ್ಷಣೆ ಮಾಡಿ ಮಾತನಾಡಿದರು.
ರಾಜ್ಯದಲ್ಲಿ 14 ಪೊಲೀಸ್ ತರಬೇತಿ ಹಾಗೂ 2 ಕೆ.ಎಸ್.ಆರ್.ಪಿ. ತರಬೇತಿ ಶಾಲೆಗಳಿವೆ. ದೇಶದಲ್ಲಿಯೇ ಕರ್ನಾಟಕ ಅತ್ಯುತ್ತಮ ಪೊಲೀಸ್ ವ್ಯವಸ್ಥೆ ಹೊಂದಿದ್ದು, ಕಳೆದ 5 ವರ್ಷಗಳಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಪೊಲೀಸ್ ಕಾನ್ಸ್‍ಟೇಬಲ್ ಮತ್ತು 4000ಕ್ಕೂ ಹೆಚ್ಚು ಸಬ್ ಇನ್ಸ್‍ಪೆಕ್ಟರ್‍ಗಳ ನೇಮಕಾತಿ ಮಾಡಲಾಗಿದೆ. ಆದಾಗ್ಯೂ ಪೊಲೀಸ್ ಬಲದ ಕೊರತೆ ಕಂಡು ಬರುತ್ತದೆ. ಕೊರತೆಯನ್ನು ನಿಗಿಸಲು ಸರ್ಕಾರವು ಹೆಚ್ಚಿನ ಸಿಬ್ಬಂದಿ ನೇಮಕಕ್ಕೆ ಅನುಮತಿ ನೀಡಿದೆ ಎಂದರು. 
ರಾಜ್ಯದಾದ್ಯಂತ 11 ಸಾವಿರ ಪೊಲೀಸ್ ವಸತಿ ಗೃಹಗಳ ನಿರ್ಮಾಣವನ್ನು 2223 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಈಗಾಗಲೇ 2000ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ವಸತಿ ಗೃಹ ಹಂಚಿಕೆ ಮಾಡಲಾಗಿದೆ. 4500ಕ್ಕೂ ಹೆಚ್ಚು ವಸತಿ ಗೃಹಗಳು ಉದ್ಘಾಟನೆಗೆ ಸಿದ್ಧವಾಗಿವೆ. ಈಗಾಗಲೇ ನಾಲ್ಕೂ ಸಾವಿರಕ್ಕೂ ಹೆಚ್ಚು ವಸತಿ ಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. 2019ರ ಅಂತ್ಯದೊಳಗಾಗಿ ಎಲ್ಲ 11 ಸಾವಿರ ವಸತಿ ಗೃಹಗಳ ನಿರ್ಮಾಣ ಪೂರ್ಣಗೊಳ್ಳುವುದು. ರಾಜ್ಯದಲ್ಲಿರುವ ಪೊಲೀಸ್ ಬಲಕ್ಕೆ ಹೋಲಿಸಿದರೆ ಈ ವಸತಿ ಗೃಹಗಳು ಸಾಕಾಗುವುದಿಲ್ಲ. ಮುಂದಿನ ದಿನಗಳಲ್ಲಿ ಸರ್ಕಾರ ಪೊಲೀಸ್ ನೇಮಕ ಮತ್ತು ವಸತಿ ಗೃಹ ನಿರ್ಮಾಣ ಮುಂದುವರೆಸಿದ್ದಲ್ಲಿ ಕೊರತೆ ನಿವಾರಿಸಬಹುದಾಗಿದೆ ಎಂದರು. 
ಪ್ರಶಿಕ್ಷಣಾರ್ಥಿಗಳು ಇಂದು ಪಡೆದ ಪ್ರಮಾಣ ವಚನಕ್ಕನುಗುಣವಾಗಿ ಕರ್ತವ್ಯ ನಿರ್ವಹಿಸಬೇಕು. ಪ್ರತಿಜ್ಞಾ ವಿಧಿಯಲ್ಲಿ ಬೋಧಿಸಿದ ಅಂಶಗಳನ್ನು ಪರಿಪಾಲಿಸಬೇಕು. ಕೆಲಸದಲ್ಲಿ ಹೆಚ್ಚಿನ ಶ್ರದ್ಧೆ, ನಿಷ್ಠೆ ಹೊಂದಿ ರಾಜ್ಯಕ್ಕೆ ಹಾಗೂ ಇಲಾಖೆಗೆ ಒಳ್ಳೆಯ ಹೆಸರು ತರಬೇಕೆಂದು ಕಿವಿ ಮಾತು ಹೇಳಿದರು. 
ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಪ್ರಾಂಶುಪಾಲ ಸವಿತಾ ಹೂಗಾರ ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ನಂತರ ವರದಿ ವಾಚನ ಮಾಡಿ, ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ 2003ರಿಂದ ಇಲ್ಲಿಯವರೆಗೆ ಒಟ್ಟು 4401 ಪ್ರಶಿಕ್ಷಣಾರ್ಥಿಗಳಿಗೆ ಬುನಾದಿ ತರಬೇತಿ ನೀಡಲಾಗಿದೆ. ಬುನಾದಿ ತರಬೇತಿಯಲ್ಲಿ ಪಠ್ಯಕ್ರಮಕ್ಕೆ ಅನುಸಾರವಾಗಿ ಒಳಾಂಗಣ ಮತ್ತು ಹೊರಾಂಗಣ ವಿಷಯಗಳ ಬಗ್ಗೆ ತರಬೇತಿ ನೀಡಲಾಗಿದೆ. ಇಂದು ನಿರ್ಗಮನ ಹೊಂದುತ್ತಿರುವ ಆರ್.ಎಸ್.ಐ. ಪ್ರಶಿಕ್ಷಣಾರ್ಥಿಗಳಿಗೆ 9 ತಿಂಗಳ ಹಾಗೂ ಸಿ.ಪಿ.ಸಿ. ಪ್ರಶಿಕ್ಷಣಾರ್ಥಿಗಳಿಗೆ 8 ತಿಂಗಳ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು. 
ಸ್ಪೆಷಲ್ ಆರ್.ಎಸ್.ಐ./ ಆರ್.ಎಸ್.ಐ. ವಿಭಾಗದಲ್ಲಿ ಸಂತೋಷ ವಸ್ತ್ರದ ಅವರಿಗೆ ಸರ್ವೋತ್ತಮ ಪ್ರಶಿಕ್ಷಣಾರ್ಥಿ, ಬಾಗಣ್ಣ ವಾಲಿಕಾರ ಅವರಿಗೆ ಡಿ.ಜಿ. ಮತ್ತು ಐ.ಜಿ.ಪಿ. ಟ್ರೋಫಿ, ಪ್ರಶಾಂತ ಪಾಟೀಲ ಅವರಿಗೆ 7.62 ಎಂ.ಎಂ. ಎಸ್.ಎಲ್.ಆರ್. ಶೂಟಿಂಗ್, ಮಹಾದೇವ ಅಥಣಿ ಅವರಿಗೆ 9 ಎಂ.ಎಂ. ಪಿಸ್ತೂಲ್ ಶೂಟಿಂಗ್, ಎನ್. ವಿಶ್ವನಾಥ ಅವರಿಗೆ ಹೊರಾಂಗಣ ಅತ್ಯುತ್ತಮ ಹಾಗೂ ಸಂತೋಷ ವಸ್ತ್ರದ ಒಳಾಂಗಣ ಅತ್ಯುತ್ತಮ ಬಹುಮಾನ ನೀಡಲಾಯಿತು. 
ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ ಪ್ರಶಿಕ್ಷಣಾರ್ಥಿಗಳ ವಿಭಾಗದಲ್ಲಿ ವಿನೋದ ಸುನಗದ ಅವರಿಗೆ ಸರ್ವೋತ್ತಮ ಪ್ರಶಿಕ್ಷಣಾರ್ಥಿ, ಮಂಜುನಾಥ ಗುರಿಕಾರ ಅವರಿಗೆ ಡಿ.ಜಿ. ಮತ್ತು ಐ.ಜಿ.ಪಿ. ಟ್ರೋಫಿ, ವಿನಾಯಕ ಲಕ್ಷ್ಮಣ ಸುತಾರ ಅವರಿಗೆ 0.303 ರೈಫಲ್ ಶೂಟಿಂಗ್ ತೃತೀಯ ಪ್ರಶಸ್ತಿ, ಶಿವಕುಮಾರ ಹೆಚ್ ಅವರಿಗೆ 0.303 ರೈಫಲ್ ಶೂಟಿಂಗ್ ದ್ವಿತೀಯ ಪ್ರಶಸ್ತಿ, ಸಂದೀಪ ರಾಠೋಡ ಹಾಗೂ ಶ್ರೀನಾಥ ಎ. ಅವರಿಗೆ 0.303 ರೈಫಲ್ ಶೂಟಿಂಗ್ ಪ್ರಥಮ ಪ್ರಶಸ್ತಿ, ದೌಲತ್ ಮೋರೆ ಹೊರಾಂಗಣ ತೃತೀಯ, ಅರ್ಜುನ ಎಸ್. ಮಾದರ ಹಾಗೂ ಪ್ರದೀಪ ಗಂಧದ ಅವರಿಗೆ ಹೊರಾಂಗಣ ದ್ವಿತೀಯ, ಶ್ರೀನಾಥ ಎ. ಅವರಿಗೆ ಹೊರಾಂಗಣ ಪ್ರಥಮ, ನಿಖಿಲ್ ಎಂ. ನಾಟಿಕಾರ ಅವರಿಗೆ ಒಳಾಂಗಣ ತೃತೀಯ, ಆನಂದ ಭರಮಪ್ಪ ಅವರಿಗೆ ಒಳಾಂಗಣ ದ್ವಿತೀಯ ಹಾಗೂ ವಿನೋದ ಸುನಗದ ಅವರಿಗೆ ಒಳಾಂಗಣ ಪ್ರಥಮ ಬಹುಮಾನ ನೀಡಲಾಯಿತು.
ನಿರ್ಗಮನ ಪಥಸಂಚಲನದಲ್ಲಿ 45 ಜನ ಸ್ಪೆಷಲ್ ಆರ್.ಎಸ್.ಐ., 45 ಜನ ಆರ್.ಎಸ್.ಐ. ಹಾಗೂ 377 ಸಿ.ಪಿ.ಸಿ. ಪ್ರಶಿಕ್ಷಣಾರ್ಥಿಗಳನ್ನು ಹೊಂದಿದ 18 ತುಕಡಿಗಳಿಂದ ಸಚಿವರು ಗೌರವ ವಂದನೆ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ನ್ಯೂಸ್ ಲೇಟರ್-2018ನ್ನು ಸಚಿವರು ಬಿಡುಗಡೆ ಮಾಡಿದರು. 
ಕಾರ್ಯಕ್ರಮದಲ್ಲಿ ತರಬೇತಿ ಪೊಲೀಸ್ ಮಹಾ ನಿರ್ದೇಶಕ ಪದಮ್ ಕುಮಾರ್ ಗರ್ಗ್, ಕೆ.ಎಸ್.ಆರ್.ಪಿ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರರಾವ್, ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಎಸ್. ಮುರುಗನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಮತ್ತಿತರ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑