Tel: 7676775624 | Mail: info@yellowandred.in

Language: EN KAN

    Follow us :


ಪ್ರಧಾನ ಮಂತ್ರಿಗಳಿಂದ ರಾಮನಗರದ ಫಲಾನುಭವಿಗಳಿಗೆ ಆಸ್ತಿ ಕಾರ್ಡ್ ವಿತರಣೆ, ಸಾಂಕೇತಿಕವಾಗಿ ವಿತರಿಸಿದ ಸಿಇಓ

Posted date: 12 Oct, 2020

Powered by:     Yellow and Red

ಪ್ರಧಾನ ಮಂತ್ರಿಗಳಿಂದ ರಾಮನಗರದ ಫಲಾನುಭವಿಗಳಿಗೆ ಆಸ್ತಿ ಕಾರ್ಡ್ ವಿತರಣೆ, ಸಾಂಕೇತಿಕವಾಗಿ ವಿತರಿಸಿದ ಸಿಇಓ

ರಾಮನಗರ:ಅ/11/20/ಭಾನುವಾರ. ಗ್ರಾಮೀಣ ಪ್ರದೇಶದ ಜಮೀನನ್ನು ಡ್ರೋಣ್ ತಂತ್ರಜ್ಞಾನದಿಂದ ಭೂಮಾಪನ ಮಾಡಿಸಿ, ಆಸ್ತಿ ಕಾರ್ಡ್ ನೀಡುವ ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಯಡಿ ರಾಜ್ಯದ ರಾಮನಗರದ ಫಲಾನುಭವಿಗಳು ಸೇರಿದಂತೆ ದೇವರ ಆರು ರಾಜ್ಯಗಳಲ್ಲಿನ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದರು.


ಪ್ರಧಾನ ಮಂತ್ರಿ ಅವರು ಒಟ್ಟು 763 ಗ್ರಾಮಗಳ ಫಲಾನುಭವಿಗಳಿಗೆ ಅವರುಗಳ ಮೊಬೈಲ್ ಫೋನುಗಳಿಗೆ ಆಸ್ತಿ ಕಾರ್ಡ್‌ ನ್ನು ಡೌನ್ ಲೋಡ್ ಲಿಂಕ್ ಕಳುಹಿಸುವ ಮೂಲಕ ವಿತರಿಸಿದರು. ಇದೇ ವೇಳೆ ರಾಮನಗರ ತಾಲ್ಲೂಕಿನ ಎಂ.ಜಿ ಪಾಳ್ಯ, ಮಜರೆ ಸೀಬಕಟ್ಟೆ ಹಾಗೂ ಮಾಗಡಿ ತಾಲ್ಲೂಕಿನ ಬಸವಾಪಟ್ಟಣ ಮತ್ತು ಮಜರೆ ಶಂಭಯ್ಯನ ಪಾಳ್ಯ ಗ್ರಾಮಗಳಲ್ಲಿನ 157 ಫಲಾನುಭವಿಗಳು ಸಹ ಅವರುಗಳ ಮೊಬೈಲ್ ನಲ್ಲಿ ಡೌನ್ಲೋಡ್ ಲಿಂಕ್ ಅನ್ನು ಸ್ವೀಕರಿಸಿದರು.


ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಗೆ ಪ್ರಧಾನ ಮಂತ್ರಿಗಳು ಕಳೆದ ಏಪ್ರಿಲ್ 24 ರಂದು ದೇಶದಾದ್ಯಂತ ಚಾಲನೆ ನೀಡಿದ್ದರು. ದೇಶದಲ್ಲಿ ಪ್ರಾಯೋಗಿಕವಾಗಿ ಆರು ರಾಜ್ಯಗಳಲ್ಲಿ ಜಾರಿಗೆ ತಂದ ಈ ಯೋಜನೆಗಾಗಿ ಕರ್ನಾಟಕದಿಂದ ರಾಮನಗರ ಜಿಲ್ಲೆಯನ್ನು ಆಯ್ಕೆ ಮಾಡಲಾಗಿತ್ತು. ರಾಜ್ಯದಲ್ಲಿಯೆ ಪ್ರಥಮವಾಗಿ ರಾಮನಗರ ಜಿಲ್ಲೆಯ 4 ಗ್ರಾಮಗಳಲ್ಲಿ ಈ ಯೋಜನೆಯನ್ನು ಯಶಸ್ವಿಯಾಗಿ ಇಲ್ಲಿನ ಜಿಲ್ಲಾ ಪಂಚಾಯಿತಿ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ.


*ಅಡ್ಡಿಯಾದ ನೀತಿ ಸಂಹಿತೆ:* ಪ್ರಧಾನ ಮಂತ್ರಿಗಳು ಆಸ್ತಿ ಕಾರ್ಡ್ ಗಳನ್ನು ವಿತರಿಸಿದ ಬಳಿಕ ಆರು ರಾಜ್ಯಗಳ ಆಯ್ದ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಪೂರ್ವ ನಿಗದಿಯಾದಂತೆ ರಾಮನಗರ ಜಿಲ್ಲೆಯಿಂದ ಶ್ರೀಮತಿ ಮಂಜುಳಾ ಅವರೊಂದಿಗೆ ಪ್ರಧಾನ ಮಂತ್ರಿಗಳು ಸಂವಾದ ನಡೆಸಬೇಕಾಗಿತ್ತು. ಆದರೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ರಾಮನಗರ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ, ಪ್ರಧಾನ ಮಂತ್ರಿಗಳು ಮಂಜುಳಾ ಅವರೊಂದಿಗೆ ಸಂವಾದ ನಡೆಸಲಿಲ್ಲ.


*ಆಸ್ತಿ ಕಾರ್ಡ್ ವಿತರಣೆ:* ಪ್ರಧಾನಿ ಮಂತ್ರಿಗಳ ಕಾರ್ಯಕ್ರಮದ ನಂತರ ರಾಮನಗರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಇಕ್ರಂ ಅವರು ಜಿಲ್ಲಾ ಪಂಚಾಯತಿ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಾಂಕೇತಿಕವಾಗಿ 4 ಗ್ರಾಮಗಳ ಫಲಾನುಭವಿಗಳಿಗೆ ಆಸ್ತಿ ಕಾರ್ಡುಗಳನ್ನು ವಿತರಿಸಿದರು.

ಭೂದಾಖಲೆಗಳ ಉಪನಿರ್ದೇಶಕ ಬಿ.ಜಿ. ಉಮೇಶ ಅವರ ಮಾರ್ಗದರ್ಶನದಲ್ಲಿ ಇನ್ನುಳಿದ ಎಲ್ಲಾ ಫಲಾನುಭವಿಗಳಿಗೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಭೂಮಾಪನ ಇಲಾಖೆಯ ಸಿಬ್ಬಂದಿಗಳು ಭೌತಿಕವಾಗಿ ಆಸ್ತಿ ಕಾರ್ಡುಗಳನ್ನು ವಿತರಿಸಿದರು.


ಈ ಯೋಜನೆಯನ್ನು ಕೇಂದ್ರ ಸರ್ಕಾರವು ಸರ್ವೆ ಆಫ್ ಇಂಡಿಯಾ ಸಂಸ್ಥೆಯ ನೆರವಿನೊಂದಿಗೆ ರಾಜ್ಯದ ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿದೆ. ರಾಮನಗರ ಜಿಲ್ಲೆಯಲ್ಲಿ ಇದುವರೆವಿಗೆ 67 ಗ್ರಾಮಗಳ 24,804 ಆಸ್ತಿಗಳ ಗಡಿಗಳನ್ನು ಗುರುತಿಸಿ ಡ್ರೋಣ್ ಮೂಲಕ ನಕ್ಷೆ ಸಿದ್ಧಪಡಿಸಲಾಗುತ್ತಿದ್ದು, ಯೋಜನೆ ಪ್ರಗತಿಯಲ್ಲಿರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಉಲ್ಲಾ ಷರೀಫ್ ಅವರು ತಿಳಿಸಿದರು.


*ಅಕ್ರಮಕ್ಕೆ ತಡೆ:* ಸ್ವಾಮಿತ್ವ ಯೋಜನೆಯಿಂದ ಪ್ರತಿಯೊಂದು ಆಸ್ತಿಯ ಆಸ್ತಿ ತೆರಿಗೆಯನ್ನು ಸ್ಪಷ್ಟವಾಗಿ ಮತ್ತು ವೈಜ್ಞಾನಿಕವಾಗಿ ನಿರ್ಧರಿಸಲು ಸಹಾಯ ಮಾಡಿಕೊಡುತ್ತದೆ. ಇದರಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಸದೃಢವಾಗಲು ನೆರವಾಗುತ್ತದೆ. ಜೊತೆಗೆ, ಆಸ್ತಿಯ ಮಾಲೀಕರು ಪರಸ್ಪರ ವಿವಾದಗಳಿಲ್ಲದೆ ಆಸ್ತಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಸಹಕಾರಿಯಾಗುತ್ತದೆ. ಕಟ್ಟಡ ಪರವಾನಗಿಯನ್ನು ಪಡೆಯುವ ಪ್ರಕ್ರಿಯೆ ಸರಳವಾಗುತ್ತದೆ ಮತ್ತು ಸರ್ಕಾರಿ ಆಸ್ತಿಯಲ್ಲಿನ ಅಕ್ರಮ ಸ್ವಾಧೀನವನ್ನು ತೆರವುಗೊಳಿಸಬಹುದಾಗಿರುತ್ತದೆ ಎಂದು ಇಕ್ರಂ ಅವರು ಯೋಜನೆಯಿಂದಾಗುವ ಪ್ರಯೋಜನಗಳನ್ನು ವಿವರಿಸಿದರು. 


*ಯೋಜನೆ ಉದ್ದೇಶ:* ‘ಸ್ವಾಮಿತ್ವ’ (SVAMITVA -Survey of vilages and mapping with improvised technology in village areas) ಯೋಜನೆಯಡಿ ಗ್ರಾಮೀಣ ವಸತಿ ಪ್ರದೇಶಗಳಲ್ಲಿರುವ ಆಸ್ತಿಯ ಗಡಿಗಳನ್ನು ಡ್ರೋಣ್ ಕ್ಯಾಮರಾ ಬಳಸಿಕೊಂಡು ಭೂಮಾಪನ ಮಾಡಿಸಿ ಆಸ್ತಿ ಮಾಲೀಕರಿಗೆ ನಕ್ಷೆ ಸಹಿತ ಆಸ್ತಿ ಕಾರ್ಡುಗಳನ್ನು (Property Card) ವಿತರಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಮಾಲೀಕರ ಹೆಸರು, ಆಸ್ತಿಯ ವಿಸ್ತೀರ್ಣ, ಕಟ್ಟಡದ ವಿಸ್ತೀರ್ಣ, ಆಸ್ತಿಯ ಚೆಕ್ಕುಬಂದಿ ವಿವರ, ಆಸ್ತಿಯ ಮೇಲೆ ಋಣಭಾರಗಳು ಇದ್ದಲ್ಲಿ ಅದರ ವಿವರ ಮತ್ತು ಸವಿವರವಾದ ನಕ್ಷೆಯ ವಿವರಗಳನ್ನು ಆಸ್ತಿ ಕಾರ್ಡು ಹೊಂದಿರುತ್ತದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑