Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯದಲ್ಲಿ ಸಮಾನತೆಯ ಆಡಳಿತ: ಹೆಚ್. ಆಂಜನೇಯ

Posted date: 12 Mar, 2018

Powered by:     Yellow and Red

ರಾಜ್ಯದಲ್ಲಿ ಸಮಾನತೆಯ ಆಡಳಿತ: ಹೆಚ್. ಆಂಜನೇಯ

ಮಂಡ್ಯ :  ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಮಾಜದ ಸರ್ವ ಜನರಿಗೂ ಸಮಾನತೆಯ ಅವಕಾಶ ಕಲ್ಪಿಸುವ ಆಡಳಿತವನ್ನು ಸರ್ಕಾರ ಜಾರಿಗೊಳಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ತಿಳಿಸಿದರು.
ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿದ್ದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಮಾಜದಲ್ಲಿರುವ ಪ್ರತಿಯೊಂದು ಸಮುದಾಯದ ಅಶಕ್ತರಿಗೆ ಹಾಗೂ ಬಡವರಿಗೆ ಸಮಾನತೆ ಒದಗಿಸುವುದೇ ಸರ್ಕಾರದ ಬದ್ಧತೆಯಾಗಿದ್ದು, ಈ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಲಾಗಿದೆ ಎಂದರು.
ರಾಜ್ಯದ ವಸತಿ ಹೀನರಿಗೆ ಶಾಶ್ವತ ಸೂರು ಒದಗಿಸಲು ಸರ್ಕಾರ ತ್ವರಿತ ಗತಿಯ ನಿರ್ಧಾಗಳನ್ನು ಕೈಗೊಂಡಿದೆ. ಆ ಮೂಲಕ ಲಕ್ಷಾಂತರ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಹಲವಾರು ವಸತಿ ಶಾಲೆಗಳನ್ನು ತೆರೆಯುವ ಮೂಲಕ ಸುಮಾರು 1.5 ಲಕ್ಷ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವ್ಯವಸ್ಥೆ ಹಾಗೂ ವಿದ್ಯಾರ್ಥಿನಿಲಯದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ರೂ.12.5 ಕೋಟಿ ವೆಚ್ಚದಲ್ಲಿ ಸುಸರ್ಜಿತವಾದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಟ್ಟಡ ನಿರ್ಮಾಣ ಮಾಡಲಾಗಿದೆ. ಸ್ವಲ್ಪ ಮಟ್ಟಿಗೆ ಕೆಲಸ ಕಾರ್ಯಗಳು ನಡೆಯಬೇಕಿದೆ ಹಾಗಾಗಿ ಇದರ ಅವಶ್ಯಕತೆಗೆ ಬೇಕಾಗಿರುವ ಉಳಿದ ಅನುದಾನವನ್ನು ಮಂಜೂರು ಮಾಡಲಾಗುವುದು ಹಾಗೂ ಅಂಬೇಡ್ಕರ್ ಭವನ ನಿಮಾಣಕ್ಕೆ ರಾಜ್ಯಮಟ್ಟ, ಜಿಲ್ಲಾಮಟ್ಟ, ತಾಲ್ಲೂಕು ಮಟ್ಟ, ಹಾಗೂ ಹೋಬಳಿ ಮಟ್ಟದಲ್ಲಿ ಭವನ ನಿರ್ಮಾಣಕ್ಕೆ ಹಣ ಮಂಜೂರು ಮಾಡಲಾಗಿದೆ ಎಂದು ಅವರು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ರವರ 125 ಜನ್ಮದಿನಾಚರಣೆಯ ಅಂಗವಾಗಿ ಅಂತರಾಷ್ಟ್ರೀಯ ಸೆಮಿನಾರ್ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಗಿದೆ. 120 ವಸತಿ ಶಾಲೆ ತೆರೆದಿದ್ದು, ರಾಜ್ಯದ ಯಾವ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು. 
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಸತಿ ಸಚಿವರಾದ ಎಂ.ಕೃಷ್ಣಪ್ಪ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ನನಗೆ ಎದುರಾದ ಮೈಷುಗರ್ ಸಮಸ್ಯೆ ಹಾಗೂ ಅಂಬೇಡ್ಕರ್ ಭವನವನ್ನು ಪೂರ್ಣಗೊಳಿಸುವ ಆಶ್ವಾಸನೆ ಈಡೇರಿಸಿದ್ದೇನೆ ಎಂದು ಅವರು ತಿಳಿಸಿದರು.
ದೇಶದ ಎಲ್ಲ ಮಹಾನಾಯಕರು ಒಂದಾಗಿ ಸಮನ್ವಯತೆಯಿಂದ ಬಾಳುವಂತೆ ಸಂದೇಶ ನೀಡಿದ್ದಾರೆ. ಅದರಂತೆ ನಾವೆಲ್ಲಾ ಒಂದಾಗಿ ಬಾಳಬೇಕು. ಸಿದ್ದರಾಮಯ್ಯ ಸರ್ಕಾರ ದಲಿತ ಜನಾಂಗಕ್ಕೆ ನಿಗಿದಿ ಪಡಿಸಿರುವ 24.75 ಅನುದಾನವನ್ನು ಇತರೆ ಸಮುದಾಯಕ್ಕೆ ಬಳಸುವ ಮೂಲಕ ಈ ಜನಾಂಗದ ಹಿತ ಕಾಯ್ದಿದ್ದಾರೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಕರಾದ ಡಾ.ಎಂ.ಹೆಚ್ ಅಂಬರೀಶ್ ಅವರು ಮಾತನಾಡಿ ಮಂಡ್ಯ ನಗರದಲ್ಲಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನವು ಹಲವು ವಿಚಾರಗಳಿಗೆ ಮಾದರಿಯಾಗ ಬೇಕು ಭಾರತ ದೇಶದ ಸಂವಿದಾನಕ್ಕೆ ನಾವು ಅರ್ಥ ತರುವ ನಿಟ್ಟಿನಲ್ಲಿ ನಾವು ಸಮಾಜಿಕ ಕಾಳಜಿ ಬದ್ದತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಕೆ.ಟಿ.ಶ್ರೀಕಂಠೇಗೌಡ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ವೀರಯ್ಯ, ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ, ಮೂಡಾ ಅಧ್ಯಕ್ಷ ಮುನಾವರ್ ಖಾನ್, ಜಿಲ್ಲಾಧಿಕಾರಿ ಮಂಜುಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶರತ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑