Tel: 7676775624 | Mail: info@yellowandred.in

Language: EN KAN

    Follow us :


ಸಕಲ ಸರ್ಕಾರಿ ಸೇನಾ ಗೌರವಗಳೊಂದಿಗೆ ಯೋಧ ಚಂದ್ರರವರ ಅಂತ್ಯ ಕ್ರಿಯೆ

Posted date: 16 Mar, 2018

Powered by:     Yellow and Red

ಸಕಲ ಸರ್ಕಾರಿ ಸೇನಾ ಗೌರವಗಳೊಂದಿಗೆ ಯೋಧ ಚಂದ್ರರವರ ಅಂತ್ಯ ಕ್ರಿಯೆ

ಹಾಸನ : ಛತೀಸ್‍ಘಡದಲ್ಲಿ ಮಾವೋವಾದಿಗಳ ಬಾಂಬ್‍ದಾಳಿಗೆ ಹುತಾತ್ಮರಾದ ಅರಕಲಗೂಡು ತಾಲ್ಲೂಕಿನ ಸಿಆರ್‍ಪಿಎಫ್ ಯೋಧ ಚಂದ್ರರವರ ಅಂತ್ಯ ಕ್ರಿಯೆ ಹುಟ್ಟೂರು ಹರದೂರು ಗ್ರಾಮದಲ್ಲಿ ಸಕಲ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ನೆರವೇರಿತು.
ಬುಧವಾರ ಸಂಜೆ ಆಗಮಿಸಿದ ಪಾರ್ಥಿವ ಶರೀರವನ್ನು ಗಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್‍ವಾಡ್, ಉಪವಿಭಾಗಾಧಿಕಾರಿ ಡಾ. ಹೆಚ್.ಎಲ್ ನಾಗರಾಜು ಅವರು ಬರಮಾಡಿಕೊಂಡರು.
ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಂಜು, ಶಾಸಕರಾದ ಹೆಚ್.ಎಸ್ ಪ್ರಕಾಶ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ ಜಾನಕಿ, ಅಪರ ಜಿಲ್ಲಾಧಿಕಾರಿ ಪೂರ್ಣಿಮ ಅವರು ಆಸ್ಪತ್ರೆಯಲ್ಲಿ ಗೌರವ ನಮನ ಸಲ್ಲಿಸಿದ್ದರು.
ಇಂದು ಬೆಳಗ್ಗೆ ಅರಕಲಗೂಡಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ಮೊದಲೇ ವ್ಯವಸ್ಥೆ ಮಾಡಲಾಗಿತ್ತು. ಆದರೆ ಕುಟುಂಬದವರ ಮನವಿಯಂತೆ ಬೆಳಗ್ಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಹೊತ್ತು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಂಜು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎಸ್ ಶ್ವೇತಾ ದೇವರಾಜು, ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಹೊನ್ನವಳ್ಳಿ ಸತೀಶ್, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ವಿವಿಧ ಅಧಿಕಾರಿಗಳು ಹುತಾತ್ಮ ಯೋಧನಿಗೆ ಗೌರವ ನಮನ ಸಲ್ಲಿಸಿದರು.
ನಂತರ ಸಿ.ಆರ್.ಪಿ.ಎಫ್‍ನ ತೆರೆದ ವಾಹನದಲ್ಲಿ ಪಾರ್ಥಿವ ಶರೀರವನ್ನು ಅರಕಲಗೂಡು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು. ಸಾವಿರಾರು ಮಂದಿ ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.
ಅರಕಲಗೂಡಿನಲ್ಲಿ ಪೊಲೀಸ್ ಇಲಾಖೆವತಿಯಿಂದ ಗೌರವವನ್ನು ಸಲ್ಲಿಸಲಾಯಿತು. ನಂತರ ಮೆರವಣಿಗೆ ಮೂಲಕ ಹರದೂರಿಗೆ ಪಾರ್ಥಿವ ಶರೀರವನ್ನು ತರಲಾಯಿತು. ಹರದೂರಿನ ಸಮುದಾಯ ಭವನ ಆವರಣದಲ್ಲಿ ಪೋಲಿಸ್ ಇಲಾಖೆ ವತಿಯಿಂದ ಕುಶಾಲ ತೋಪು ಹಾರಿಸಿಗೌರವ ಸಲ್ಲಿಸಲಾಯಿತು, ಅಧಿಕಾರಿಗಳು ಹಾಗೂ ಸಾವಿರಾರು ಜನರ ಸಮ್ಮುಖದಲ್ಲಿ ಹುತಾತ್ಮ ಚಂದ್ರ ಅವರಿಗೆ ಅಂತ್ಯಕ್ರಿಯೆ ನೆರವೇರಿತು. ಅವರ ನೇತೃತ್ವದ ಸಿ.ಆರ್.ಪಿ.ಎಫ್ ಪಡೆಯು ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ ಕುಶಾಲ ತೋಪು ಹಾರಿಸಿ ಸೇನಾ ಗೌರವ ಸಲ್ಲಿಸಿತು. 
ಮಡುಗಟ್ಟಿದ ದುಖಃ ಕುಟುಂಬದವರ ಆಕ್ರಂದನ: ಚಂದ್ರರವರ ಹುಟ್ಟೂರಿನಲ್ಲಿ ದುಖಃ ಮಡುಗಟ್ಟಿತ್ತು ಗ್ರಾಮಸ್ಥರು ನೆರೆಹೊರೆಯ ಊರಿನವರೆಲ್ಲರು ಕಂಬನಿಗರೆದರು. ಚಂದ್ರುವಿನ ಗುಣಗಳ ಬಗ್ಗೆ ತಮ್ಮ ತಮ್ಮಲ್ಲಿ ಮಾತನಾಡಿ ಮರುಗಿದರು.
ಚಂದ್ರು ಅವರ ಕುಟುಂಬ ಶೋಕ ಸಾಗರದಲ್ಲಿ ಮುಳುಗಿತ್ತು. ತಂದೆ, ತಾಯಿ, ಗರ್ಭಿಣಿ ಪತ್ನಿ ಹಾಗೂ ಬಂಧುಗಳ ಆಕ್ರಂದನ ಎಲ್ಲರನ್ನು ಮರುಗುವಂತೆ ಮಾಡಿತು.
ಸಚಿವರ ಸಹಾಯ ಹಸ್ತ: ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಂಜು ಅವರು ಹುತಾತ್ಮ ಯೋಧ ಚಂದ್ರು ಅವರ ಕುಟುಂಬಕ್ಕೆ ತಮ್ಮ ಒಂದು ತಿಂಗಳ ವೇತನವನ್ನು ಸಹಾಯಧನವಾಗಿ ನೀಡಿದ್ದಾರೆ ಅಲ್ಲದೆ ಹಾಸನ ನಗರದ ನೂತನ ಬಡಾವಣೆಯಾದ ಎಸ್.ಎಂ ಕೃಷ್ಣ ನಗರ ಬಡಾವಣೆಯಲ್ಲಿ ಒಂದು ನಿವೇಶನವನ್ನು ಒದಗಿಸುವುದಾಗಿ ಭರವಸೆ ನೀಡಿದರು.
ಜಿಲ್ಲಾಧಿಕಾರಿ ಸಾಂತ್ವನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹುತಾತ್ಮ ಯೋಧನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ತಂದೆ ತಾಯಿಗಳಿಗೂ ಸಮಾಧಾನ ಪಡಿಸಿದ ಅವರು ರಕ್ತದೊತ್ತಡದಿಂದ ಬಳಲುತ್ತಿರುವ ಚಂದ್ರ ಅವರ ಪತ್ನಿ ಪೃಥ್ವಿ ಅವರು ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ತಿಳಿಸಿದ್ದಾರೆ. ಎಲ್ಲಾ ಕಾರ್ಯಗಳು ಮುಗಿದ ನಂತರ ಮತ್ತೆ ಭೇಟಿಯಾಗಿ ಸರ್ಕಾರದಿಂದ ದೊರೆಯಲಿರುವ ಸಕಲ ಸೌಲತ್ತುಗಳನ್ನು ಒದಗಿಸಲು ಸಹಕರಿಸುವುದಾಗಿ ತಿಳಿಸಿದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑