Tel: 7676775624 | Mail: info@yellowandred.in

Language: EN KAN

    Follow us :


ಐದು ಸಾವಿರ ಎಕರೆ ಭೂಪ್ರದೇಶಕ್ಕೆ ಅನುಕೂಲವಾಗಿದ್ದ ಅಣೆಕಟ್ಟು : ಡಾ.ಎಚ್.ಸಿ. ಮಹಾದೇವಪ್ಪ

Posted date: 21 Mar, 2018

Powered by:     Yellow and Red

ಐದು ಸಾವಿರ ಎಕರೆ ಭೂಪ್ರದೇಶಕ್ಕೆ ಅನುಕೂಲವಾಗಿದ್ದ ಅಣೆಕಟ್ಟು : ಡಾ.ಎಚ್.ಸಿ. ಮಹಾದೇವಪ್ಪ

ಮೈಸೂರು : ಗಂಗರ ಕಾಲದ ಅರಸ ಮಾಧವ ಮಂತ್ರಿಯವರು ಕ್ರಿ.ಶ. 1140 ರಲ್ಲಿ ತಲಕಾಡಿನ ಬಳಿ ಕಾವೇರಿ ನದಿಗೆ ಅಡ್ಡಲಾಗಿ 5 ಸಾವಿರ ಎಕರೆ ಭೂ ಪ್ರದೇಶಗಳಿಗೆ ನೀರಾವರಿಗೆ ಅನುಕೂಲವಾಗುವಂತೆ ಅಣೆಕಟ್ಟೆಯನ್ನು ನಿರ್ಮಿಸಿದ್ದರು. ಈ ಅಣೆಕಟ್ಟೆ ಮುಂದಿನ ದಿನಗಳಲ್ಲಿ ಉಪಯುಕ್ತವಾಗಲಿ ಎಂಬ ದೃಷ್ಠಿಯಿಂದ 67 ಕೋಟಿ ರೂ.ಗಳ ವೆಚ್ಚದಲ್ಲಿ ಆಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಮಾನ್ಯ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಹೇಳಿದರು.
ಜಲ ಸಂಪನ್ಮೂಲ ಇಲಾಖೆ (ಕಾವೇರಿ ನೀರಾವರಿ ನಿಗಮ) ಲೋಕೋಪಯೋಗಿ, ಬಂದರು ಮತ್ತು ಒಳನಾಡ ಜಲಸಾರಿಗೆ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ತಲಕಾಡಿನ ಸರ್ಕಾರಿ ಪ್ರೌಢಶಾಲೆ ಆಟದ ಮೈದಾನದಲ್ಲಿ ಮಾಧವಮಂತ್ರಿ ಅಣೆಕಟ್ಟಿನ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ, ಕಾವೇರಿಪುರದ ಬಳಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನೆ, ತಲಕಾಡು ಮಾಲಂಗಿ ಗ್ರಾಮದ ಮಧ್ಯೆ ಕಾವೇರಿ ನದಿಗೆ ಅಡ್ಡಲಾಗಿ ಪಾದಚಾರಿ ಮೇಲ್ಸೆತುವೆ ಶಂಕುಸ್ಥಾಪನೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಶಂಕುಸ್ಥಾಪನೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸುಮಾರು 878 ವರ್ಷಗಳ ಹಿಂದೆ ಕಟ್ಟಿದ ಮಾಧವ ಮಂತ್ರಿ ಅಣೆಕಟ್ಟೆಯು 2013 ನೇ ಇಸವಿಯಲ್ಲಿ ಅಣೆಕಟ್ಟೆಗೆ 4 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬಂದಿದ್ದರಿಂದ, ಬೃಹತ್ ಬಂಡೆಗಳಿಂದ ನಿರ್ಮಿಸಿ ಅಣೆಕಟ್ಟೆ ಬಿರುಕು ಬಿಟ್ಟಿ ಶಿಥಿಲಗೊಂಡಿತ್ತು, ಮುಂದಿನ ದಿನಗಳಲ್ಲಿಯೂ ಈ ಭಾಗದ ಜನರಿಗೆ ಶಾಶ್ವತವಾಗಿ ನೀರಾವರಿ ಒದಗಿಸಲು 67 ಕೋಟಿ ರೂ.ಗಳ ವೆಚ್ಚದಲ್ಲಿ ಆಭಿವೃದ್ಧಿ ಕಾಮಗಾರಿಗೆ ಹಣ ಬಿಡುಗಡೆಯನ್ನು ಮಾಡಿ ಟೆಂಡರ್‍ನ್ನು ಸಹ ಕರೆಯಲಾಗಿದ್ದು ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.
ಕಾವೇರಿಪುರದ ಬಳಿ ಕಾವೇರಿ ನದಿಗೆ ಅಡ್ಡಲಾಗಿ 50 ಕೋಟಿ ರೂ.ವೆಚ್ಚದಲ್ಲಿ ಸೇತುವೆ ನಿರ್ಮಿಸಿದ್ದೇವೆ.  ತಲಕಾಡು ಮಾಲಂಗಿ ಗ್ರಾಮದ ಮಧ್ಯೆ ಕಾವೇರಿ ನದಿಗೆ ಅಡ್ಡಲಾಗಿ ಪಾದಚಾರಿ ಮೇಲ್ಸೆತುವೆ ನಿರ್ಮಾಣಕ್ಕೆ 38 ಕೋಟಿ, 30 ಹಾಸಿಗೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ನಿರ್ಮಾಣಕ್ಕೆ 8 ಕೋಟಿ.ರೂಗಳನ್ನು ನೀಡಲಾಗಿದೆ ಎಂದರು.
ತಲಕಾಡಿನಲ್ಲಿ ಐ.ಟಿ.ಐ, ಪದವಿ ಕಾಲೇಜು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹಾಗೂ ಸೆಂಟ್ರಲ್ ಸ್ಕೂಲ್, ಹಾಸ್ಟೆಲ್‍ನ್ನು ಮಂಜೂರು ಮಾಡಲಾಗಿದೆ. ಮಹಿಳೆಯರಿಗೆ ರತರಿಗೆ ನೇರವಾಗಲು ಎಂ.ಡಿ.ಸಿ.ಸಿ ಬ್ಯಾಂಕ್ ಶಾಖೆ ತೆರೆಯಲಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಸಾರ್ವಜನಿಕರಿಗೆ ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.
ಈ ಭಾಗದ ಜನ ಸ್ವಾವಲಂಭನೆಯಿಂದ ಸ್ವತಂತ್ರವಾಗಿ ಬದುಕಲು ಶ್ರಮಿಸುವೆ, ತಲಕಾಡಿನ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ಮೂಲಕ ಇಲ್ಲಿನ ಜನರ ಆರ್ಥಿಕ ಮಟ್ಟವನ್ನು ಉತ್ತಮಗೊಳಿಸಬಹುದು ಎಂದು ಅವರು ತಿಳಿಸಿದರು.
ತಿ. ನರಸೀಪುರ, ತಲಕಾಡು ಮಾಧವಮಂತ್ರಿ ನಾಲೆ ಮತ್ತು ಅದರ ಉಪ ನಾಲೆಗಳು, ರಾಮಸ್ವಾಮಿ ನಾಲೆ ಹಾಗೂ ಇನ್ನಿತರ ನಾಲೆಗಳನ್ನು ಖುದ್ದಾಗಿ ವೀಕ್ಷಿಸಿ ಅವುಗಳನ್ನು ಆಧುನೀಕರಣವನ್ನು ಮಾಡಲು ಶ್ರಮಿಸಿದ್ದೇನೆ, ಬೆಟ್ಟಹಳ್ಳಿಯಲ್ಲಿ 3,600 ಎಕರೆ ಪ್ರದೇಶದಲ್ಲಿ 77.ಕೋಟಿ ವೆಚ್ಚದಲ್ಲಿ ಡ್ರಿಪಿಂಗ್‍ನ್ನು ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ನಯೀಮಾ ಸುಲ್ತಾನ್ ನಜೀರ್ ಅಹಮದ್ ಹಾಗೂ ಸದಸ್ಯ ಮಂಜುನಾಥ್, ಟಿ.ನರಸೀಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್.ಚೆಲುವರಾಜು, ಟಿ.ನರಸೀಪುರ ಪುರಸಭೆ ಅಧ್ಯಕ್ಷ ಉಮೇಶ್, ಟಿ.ನರಸೀಪುರ ವಸತಿ ಮತ್ತು ಜಾಗೃತಿ ಸಮಿತಿ ಅಧ್ಯಕ್ಷ ಸುನೀಲ್ ಬೋಸ್, ತಲಕಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಿ.ಹೆಚ್.ಕವಿತಾ ವಿಜಯ್ ಕುಮಾರ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑