ಯುವಗಾಯಕ ಚಿನ್ಮಯ ರಾವ್ ಅವರಿಗೆ ಪುಣೆಯಲ್ಲಿ ಗೌರವ ಡಾಕ್ಟರೇಟ್ ಪುರಸ್ಕಾರ
ಬೆಂಗಳೂರು : ಅತಿ ಹೆಚ್ಚು ಶ್ಲೋಕಗಳನ್ನು ಒಂದು ಧ್ವನಿಮುದ್ರಿಕೆಗಾಗಿ ಒಂದೇ ಗಾಯಕ ಹಾಡಿರುವ ವಿಶ್ವದ ಪ್ರಪ್ರಥಮ ಗಾಯಕ ಎಂದು ಇತ್ತೀಚೆಗಷ್ಟೇ ಹಲವಾರು ವಿಶ್ವದಾಖಲೆಗಳನ್ನು ಪಡೆದಿದ್ದ ಯುವಗಾಯಕ ಚಿನ್ಮಯ ಎಂ.ರಾವ್ ಅವರಿಗೆ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಒಟ್ಟಾರೆ ಸಾಧನೆಗಳನ್ನು ಪರಿಗಣಿಸಿ ಇಂಡಿಯನ್ ವಚ್ರ್ಯುಯಲ್ ಉನಿವರ್ಸಿಟಿ ಫಾರ್ ಪೀಸ್ ಅಂಡ್ ಎಜುಕೇಶನ್ ಪುಣೆಯಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು.
ಮಾರ್ಚ್ 17ರಂದು ಶನಿವಾರ ಪುಣೆಯ ಅಣ್ಣಾಬಾವು ಸಾಥೆ ಸಭಾಂಗಣದಲ್ಲಿ ನಡೆದ ಘಟಿಕೋಟ್ಸವದ ಇದೇ ಸಮಾರಂಭದಲ್ಲಿ ಚಿನ್ಮಯ ಅವರು ತಾವೇ ರಚಿಸಿ ರಾಗಸಂಯೋಜಿಸಿದ ಸೂರ್ಯನ ಕುರಿತಾದ ಸಂಸ್ಕೃತ ಪ್ರಾರ್ಥನಾಗೀತೆಯನ್ನು ಆರಂಭದಲ್ಲಿ ಹಾಡುವಾಗ ವೇದಿಕೆಯಲ್ಲಿದ್ದ ಎಲ್ಲಾ ಗಣ್ಯರೂ ಹಾಗೂ ಪಾಲ್ಗೊಂಡಿದ್ದ ಎಲ್ಲಾ ಸಭಿಕರೂ ಎದ್ದು ನಿಲ್ಲುವ ಮೂಲಕ ಗೌರವ ಸೂಚಿಸಿದರು.
ಈ ಸಂದರ್ಭದಲ್ಲಿ ಇಂಡಿಯನ್ ವಚ್ರ್ಯುಯಲ್ ಅಕಾಡೆಮಿ ಫಾರ್ ಪೀಸ್ ಅಂಡ್ ಎಜುಕೇಶನ್ನ ಚೇರ್ಮನ್ ಡಾ.ಡಾನಿಯಲ್ ಎಡ್ವಿನ್, ಐ.ವಿ.ಎ.ಪಿ ನಿರ್ದೇಶಕ ಡಾ.ಜಾನ್ ಲೆಸ್ಲಿ, ಮೌಂಟ್ ಅಬು ಬ್ರಹ್ಮಕುಮಾರೀಸ್ ಸಂಸ್ಥೆಯ ಕಾರ್ಯದರ್ಶಿ ರಾಜಯೋಗಿ ಬಿ.ಕೆ ಮೃತ್ಯುಂಜಯಜಿ, ಎಸ್.ಪಿ ಪುಣೆ ವಿಶ್ವವಿದ್ಯಾಲಯದ ನಿರ್ದೇಶಕ ಡಾ.ವಿ.ಕೆ ವಾಘ್, ಪುಣೆಯ ಡೀಮ್ಡ್ ವಿಶ್ವವಿದ್ಯಾಲಯದ ಡಿಫೆನ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಡೀನ್ ಡಾ.ಸಂಗೀತಾ ಕಲಾ ಹಾಗೂ ಭಾರತ ಸರ್ಕಾರದ ಎಫ್.ಸಿ.ಐ ಮಂಡಳಿಯ ಶ್ರೀ ಅಶೋಕ್ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಪ್ರಸ್ತುತ ಚಿನ್ಮಯ ಎಂ.ರಾವ್ ಅವರು ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿ ಸಂಸ್ಥಾಪಕರಾಗಿ ಹಾಗೂ ಪ್ರಾಂಶುಪಾಲರಾಗಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ದಕ್ಷಿಣಾದಿ ಶಾಸ್ತ್ರೀಯ ಸಂಗೀತ ಪಾಠ ಮಾಡುತ್ತಿದ್ದಾರೆ.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು