ಮಾರ್ಚ್ ಅಂತ್ಯದೊಳಗೆ ಕಬ್ಬು ಪೂರೈಕೆಯ ಬಾಕಿ ಹಣ ಪಾವತಿಸಲು ಸೂಚನೆ
ಮಂಡ್ಯ : ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿರುವ ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾದ ಬಾಕಿ ಹಣವನ್ನು ಮಾರ್ಚ್ ಅಂತ್ಯದೊಳಗೆ ನೀಡಲು ಸಕ್ಕರೆ ಕಾರ್ಖಾನೆಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎನ್. ಮಂಜುಶ್ರೀ ಅವರು ಸೂಚಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಆಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯ ಬಹಳಷ್ಟು ರೈತರು, ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಕೆಯ ಹಣವನ್ನು ಪಾವತಿಸಲು ವಿಳಂಬ ಮಾಡುತ್ತಿರುವ ಬಗ್ಗೆ ದೂರು ನೀಡಿದ್ದಾರೆ. ಸಕ್ಕರೆ ಕಾರ್ಖಾನೆಗಳ ಮಾಲೀಕರು ವಿಳಂಬ ಮಾಡದೆ, ಮಾರ್ಚ ಅಂತ್ಯದೊಳಗೆ ಬಾಕಿ ಹಣವನ್ನು ಕಬ್ಬು ಬೆಳೆಗಾರಿಗೆ ಪಾವತಿ ಮಾಡಬೇಕು ಎಂದು ತಿಳಿಸಿದರು.
2017 -18 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಇರುವ ಸಕ್ಕರೆ ಕಾರ್ಖಾನೆಗಳಾದ ಪಾಂಡವಪುರದ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯು 3,88,726 ಟನ್ ಕಬ್ಬು ನುರಿದಿದ್ದು, ಕಬ್ಬು ಬೆಳೆಗಾರರಿಗೆ ರೂ.21 ಕೋಟಿ ಬಾಕಿ ಹಣವನ್ನು ಪಾವತಿಸಬೇಕಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿ ಅವರು ಕೊಪ್ಪದ ಎನ್.ಎಸ್.ಎಲ್ ಷುಗರ್ ಕಾರ್ಖಾನೆ 5,27,123 ಟನ್ ಕಬ್ಬು ನುರಿದಿದ್ದು, ಕಬ್ಬು ಬೆಳೆಗಾರರಿಗೆ ರೂ. 11 ಕೋಟಿ ಬಾಕಿ ಹಣವನ್ನು ಪಾವತಿಸಬೇಕಿದೆ ಎಂದರು.
ಮಂಡ್ಯ ನಗರದಲ್ಲಿರುವ ಮೈಷುಗರ್ ಸಕ್ಕರೆ ಕಾರ್ಖಾನೆ 2017 -18 ನೇ ಸಾಲಿನಲ್ಲಿ 10,10,58 ಟನ್ ಕಬ್ಬು ನುರಿದಿದ್ದು, ರೂ. 1 ಕೋಟಿ ಬಾಕಿ ಹಣವನ್ನು ಕಬ್ಬು ಬೆಳೆಗಾರರಿಗೆ ನೀಡಬೇಕಿದ್ದು, ಕಬ್ಬು ಸಾಗಾಣಿಕೆ ವೆಚ್ಚ ರೂ. 2.35 ಕೋಟಿ ಹಣವನ್ನು ಪಾವತಿ ಮಾಡಬೇಕಾಗಿದೆ. ಈ ಎಲ್ಲಾ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳ ಮಾಲೀಕರು ಮಾರ್ಚ್ ಅಂತ್ಯದೊಳಗೆ ಕಬ್ಬು ಬೆಳೆಗಾರರಿಗೆ ಪಾವತಿ ಮಾಡಬೇಕು. ಇಲ್ಲದಿದ್ದರೆ, ಸಕ್ಕರೆ ಕಾರ್ಖಾನೆಗಳಲ್ಲಿ ದಾಸ್ತಾನಿರುವ ಸಕ್ಕರೆಯನ್ನು ವಶಪಡಿಸಿಕೊಳ್ಳಲು ಜಿಲ್ಲಾಡಳಿತ ಮುಂದಾಗಲಿದೆ ಎಂದು ತಿಳಿಸಿದರು.
ಈ ಸಭೆಯಲ್ಲಿ ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಕುಮುದ, ಸಹಾಯಕ ನಿರ್ದೇಶಕರಾದ ರಾಮಚಂದ್ರ, ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು