Tel: 7676775624 | Mail: info@yellowandred.in

Language: EN KAN

    Follow us :


2020/21 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ” ಪ್ರಕಟ

Posted date: 29 Sep, 2021

Powered by:     Yellow and Red

2020/21 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ” ಪ್ರಕಟ

ಬೆಂಗಳೂರು, ಸೆಪ್ಟೆಂಬರ್:29. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು  ಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ” 2020 ಮತ್ತು 2021 ನೇ ಸಾಲಿಗೆ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಕೋವಿಡ್-19ರ ಹಿನ್ನೆಲೆಯಲ್ಲಿ ಕಳೆದ ವರ್ಷದ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿರಲಿಲ್ಲ, ಈ ವರ್ಷ ಕೋವಿಡ್ ಪ್ರಕರಣ ಕಡಿಮೆಯಾಗುತ್ತಾ ಬಂದಿರುವ ಹಿನ್ನೆಲೆಯಲ್ಲಿ, ಸಕಾರವು ಸದರಿ ಪ್ರಶಸ್ತಿಗಳನ್ನು ಪ್ರದಾನ ಮಾಡಲು ಇಚ್ಚಿಸಿದ್ದು, ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಅಶೋಕ್ ಬಂಗಾರೆಪ್ಪ್ಪಾ ಹಿಂಚಿಗೇರಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು.


ಆಯ್ಕೆ ಸಮಿತಿಯು 2020 ರ ಸಾಲಿಗೆ ಬಾಗಲಕೋಟೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ “ಶ್ರೀಮತಿ ಮೀರಾಬಾಯಿ ಕೊಪ್ಪಿಕರ್” ಮತ್ತು 2021 ನೇ ಸಾಲಿಗೆ  “ಶ್ರೀ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ಧಗಂಗಾ ಮಠ”ವನ್ನು ಪ್ರಶಸ್ತಿಗೆ ಆಯ್ಕೆಮಾಡಿರುತ್ತದೆ.

ಅಕ್ಟೋಬರ್ 2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯಂದು ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ಐದು ಲಕ್ಷ ರೂ. ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಗುವುದು.  


*ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ದಗಂಗಾ ಮಠ:* 

“ನಡೆದಾಡುವ ದೇವರು” ಎಂದೇ ಖ್ಯಾತರಾದ ಪರಮಪೂಜ್ಯ ಡಾ: ಶಿವಕುಮಾರ ಸ್ವಾಮೀಜಿಯವರ ಮಹದಾಶಯದಂತೆ ಸತತವಾಗಿ 80 ವರ್ಷಗಳ ಕಾಲ ಅನ್ನದಾಸೋಹ ಹಾಗೂ ಅಕ್ಷರ ದಾಸೋಹದ ತವರಾಗಿ ಜಾತಿ-ಧರ್ಮ ಬೇಧವಿಲ್ಲದೇ, ಪ್ರಾಂತ್ಯ-ಪ್ರದೇಶ ತಾರತಮ್ಯ ಮಾಡದೆ ಲಕ್ಷಾಂತರ ಮಕ್ಕಳಿಗೆ ಅನ್ನ, ಆಶ್ರಯ ಮತ್ತು ವಿದ್ಯೆಯನ್ನು ದಾನ ಮಾಡಿದ, ರಾಷ್ಟ್ರದಲ್ಲೇ ಪ್ರತಿಷ್ಠಿತ ಸಂಸ್ಥೆ ಎಂದು ಹೆಸರಾದ ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ದಗಂಗಾ ಮಠ, ಕ್ಯಾತಸಂದ್ರ, ತುಮಕೂರು, ಸಾಧನೆಗಳ ತವರು.


*ಮೀರಾಬಾಯಿ ಕೊಪ್ಪಿಕರ್:*

ಶ್ರೀಮತಿ ಮೀರಾಬಾಯಿ ಕೊಪ್ಪಿಕರ್, ಹುಬ್ಬಳ್ಳಿಯ ಅತ್ಯಂತ ಶ್ರೀಮಂತರಾಗಿದ್ದ ಕೊಪ್ಪಿಕರ ವಂಶದ ಕುಡಿ.  ಸದ್ಯ ಇವರಿಗೆ 96 ವರ್ಷ. ಸದ್ಯ ಮುಧೋಳದಲ್ಲಿರುವ ವಾತ್ಸಲ್ಯ ಧಾಮದಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ.  ಪಕ್ಕಾ ಗಾಂಧಿವಾದಿಯಾಗಿದ್ದ ಇವರು ಇತ್ತೀಚಿನವರೆಗೂ ತಾವೇ ನೂಲು ನೇಯ್ದು ಅದರಲ್ಲಿ ವಸ್ತ್ರವನ್ನು ಮಾಡಿಕೊಳ್ಳುತ್ತಿದ್ದರು.  ಈಗ ವಯಸ್ಸಾದ ನಿಮಿತ್ತ ನೇಯ್ಗೆ ಮಾಡುತ್ತಿಲ್ಲ.

ಗಾಂಧಿವಾದಿಗಳಾಗಿದ್ದ ಶ್ರೀಮತಿ ಮೀರಾಬಾಯಿ ಕೊಪ್ಪಿಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು.  ಸಬರಮತಿ ಆಶ್ರಮದಲ್ಲಿ ಇದ್ದರು. ವಿನೋಬಾ ಭಾವೆಯವರ ಜೊತೆಗೂಡಿ ಭೂದಾನ ಚಳವಳಿಯಲ್ಲಿ ಪಾಲ್ಗೊಂಡು, ಕರ್ನಾಟಕದಿಂದ ಒಟ್ಟು 40 ಸಾವಿರ ಎಕರೆ ಭೂಮಿಯನ್ನು ದಾನ ಮಾಡಿಸುವಲ್ಲಿ ಯಶಸ್ವಿಯಾದವರು.

ಯಾರಿಂದಲೂ ಏನನ್ನೂ ಅಪೇಕ್ಷೆ ಮಾಡಿಲ್ಲ. ಇವರ ಮೂಲ ಧ್ಯೇಯ “ಸಮಾಜಕ್ಕೆ ಏನನ್ನಾದರೂ ಕೊಡಬೇಕು.  ಏನನ್ನೂ ಬಯಸಬಾರದು” ಎಂಬುದು.  ಸಾವಯವ ಕೃಷಿ ಮಾಡುತ್ತಿದ್ದ ಇವರು ತಾವೇ ಬೆಳೆದ ವಸ್ತುಗಳನ್ನು ಮಾರಿ ಅದರಲ್ಲಿ ಬಂದ ಆದಾಯದಿಂದ ಜೀವನ ಮಾಡುತ್ತಿದ್ದಾರೆ.

“ವಾತ್ಸಲ್ಯ ಧಾಮ” ವಿನೋಬಾ ಭಾವೆಯವರ ತಾಯಿ ಮೂಲ ಜಮಖಂಡಿಯವರಾದ ರುಕ್ಮಿಣಿ ಭಾವೆಯವರದ್ದು.  ಮುಧೋಳದಲ್ಲಿ ಅವರು 2.5 ಎಕರೆ ಜಾಗವನ್ನು ಕೊಂಡು ಅದರಲ್ಲಿ ಆಶ್ರಮ ನಿರ್ಮಿಸಿದ್ದಾರೆ. ಆರಂಭದಲ್ಲಿ 20 ಜನರಿದ್ದರು.  ಈಗ ಮೂರು ಜನರಷ್ಟೇ ವಾಸ ಮಾಡುತ್ತಾರೆ.  ಶ್ರೀಮತಿ ಮೀರಾಬಾಯಿ ಕೊಪ್ಪಿಕರ್ ಅವರನ್ನು ಸಂದರ್ಶಿಸಲು ಅತಿಥಿಗಳು ಆಗಾಗ್ಗೆ ಬರುತ್ತಿರುತ್ತಾರೆ.  ಜಾತ್ಯಾತೀತ ಮನೋಭಾವದವರಾಗಿದ್ದಾರೆ.

2008 ರಲ್ಲಿ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.  ಪ್ರಶಸ್ತಿಯನ್ನು ಇವರಿಗೆ ಕೊಡಲು ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಆಶ್ರಮಕ್ಕೆ ಆಗಮಿಸಿ, ಚೆಕ್ ಹಾಗೂ ಮೂರು ಗ್ರಾಂ ಬಂಗಾರದ ಪದಕವನ್ನು ಕೊಟ್ಟಿದ್ದರು. ಅವರು ನೀಡಿ ಚೆಕ್ ಹಣ ಇನ್ನೂ ಬ್ಯಾಂಕ್‍ನಲ್ಲಿದ್ದು, ಅದನ್ನು ಜನತೆಯ ಕಲ್ಯಾಣಕ್ಕೆ ಬಳಸಲು ಹೇಳಿದ್ದಾರೆ.  ಬಂಗಾರದ ಪದಕವನ್ನು ಬಡವರಿಗೆ ದಾನ ಮಾಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑