Tel: 7676775624 | Mail: info@yellowandred.in

Language: EN KAN

    Follow us :


ಜೆಡಿಎಸ್, ಬಿಜೆಪಿ ಪಕ್ಷಗಳಂತೆ ಸಹಸ್ರಾರು ಕಾರ್ಯಕರ್ತರ ಜೊತೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ

Posted date: 20 Apr, 2023

Powered by:     Yellow and Red

ಜೆಡಿಎಸ್, ಬಿಜೆಪಿ ಪಕ್ಷಗಳಂತೆ ಸಹಸ್ರಾರು ಕಾರ್ಯಕರ್ತರ ಜೊತೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ

ಚನ್ನಪಟ್ಟಣ:ಏ:20- ಇತ್ತೀಚೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ರವರು ಸಹಸ್ರಾರು ಸಂಖ್ಯೆಯ ಕಾರ್ಯಕರ್ತರ ಜೊತೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದರು. ಅದೇ ರೀತಿಯಲ್ಲಿ ಚನ್ನಪಟ್ಟಣ ವಿಧಾನಸಭಾ ಚುಣಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಗಂಗಾಧರ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್‍ ಜೊತೆಯಲ್ಲಿ ಹಾಗೂ ಸಹಸ್ರಾರು ಕಾರ್ಯಕರ್ತರ ಜೊತೆಯಲ್ಲಿ ಮೆರವಣಿಗೆ ಬಂದು ಚುನಾವಣಾಧಿಕಾರಿ ಮುನೇಗೌಡರವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.


ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಅಂದರೆ ಅಮಾವಾಸ್ಯೆಯ ದಿನವೇ ನಗರದ ಬಸವನಗುಡಿ ದೇವಾಲಯದಿಂದ ಹೊರಟ ತಮಟೆ, ನಗಾರಿ ಪೂಜಾ ಕುಣಿತದ ಮೆರವಣಿಗೆಯೊಂದಿಗೆ, ಸಹಸ್ರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರ ಜಯಘೋಷಗಳೊಡನೆ ಮೆರವಣಿಗೆ ಸಾಗಿತು.

ಪೊಲೀಸ್‍ ಠಾಣೆ ಎದುರು ಇರುವ ಡಾ|| ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಂಸದ ಡಿ.ಕೆ.ಸುರೇಶ್ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್ ರವರು ತೆರೆದ ವಾಹನದಲ್ಲಿ ಮೆರವಣಿಗೆ ತೆರಳಿದರು.


ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಾಗಿದ ಕಾಂಗ್ರೆಸ್ ಕಾರ್ಯಕರ್ತರು ತಾಲ್ಲೂಕು ಕಚೇರಿಯ ಮುಂದೆ ಜಮಾವಣೆಯಾದರು, ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ದೇಶದಲ್ಲಿ ಹಾಗೂ ರಾಜ್ಯದಲ್ಲಿ ಭ್ರಷ್ಟ ಆಡಳಿತವನ್ನು ನಡೆಸುವಲ್ಲಿ ತನ್ನದೇ ಅಕ್ರಮಗಳನ್ನು ಎಸಗುತ್ತಿರುವ ಬಿಜೆಪಿ ಸರ್ಕಾರಕ್ಕೆ ತಕ್ಕಪಾಠ ಕಲಿಸಲು ಕ್ಷೇತ್ರದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದರ ಮುಖಾಂತರ ಬಿಜೆಪಿಯನ್ನು ರಾಜ್ಯದಲ್ಲಿ ಇಲ್ಲದಂತೆ ಮಾಡಬೇಕೆಂದರು.


ಪ್ರತಿಯೊಂದು ಹಂತದಲ್ಲಿಯೂ ರಾಜ್ಯದ ಜನರನ್ನು ಶೋಷಣೆ ಮಾಡುತ್ತಿರುವ ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ ಮಾಡಿರುವ ಅನ್ಯಾಯಗಳು ಒಂದಲ್ಲಾ ಎರಡಲ್ಲಾ ಸಾಕಷ್ಟು ಉದಾಹರಣೆಗಳಿದ್ದು, ಬಿಜೆಪಿ ಸರ್ಕಾರದ ಬಗ್ಗೆ ರೋಸಿ ಹೋಗಿರುವ ರಾಜ್ಯದ ಜನರು, ಜನಪರ ಆಡಳಿತಕ್ಕೆ ಮತ್ತೊಂದು ಹೆಸರಾಗಿರುವ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಸಾರ್ವತ್ರಿಕ ಚುನಾವಣೆಯನ್ನು ಎದುರು ನೋಡುತ್ತಿದ್ದಾರೆಂದರು.


ಕಳೆದ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ರಾಜ್ಯದ ಜನಸಾಮಾನ್ಯರಿಗೆ ಯಾವ ರೀತಿಯಲ್ಲಿಯೂ ಹೊರೆಯಾಗದಂತೆ ಸರ್ವ ಜನಾಂಗೀಯರ ಕಲ್ಯಾಣಕ್ಕೆ ಹಲವಾರು ಯೋಜೆನೆಗಳನ್ನು ಜಾರಿಗೆ ತಂದು, ಪ್ರತಿಯೊಂದು ಕುಟುಂಬಗಳ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತ ಯಾವುದಾದರೂ ರಾಷ್ಟ್ರೀಯ ಪಕ್ಷ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದರೆ ತಪ್ಪಾಗಲಾರದು ಎಂದರು.


ಕಾಂಗ್ರೆಸ್ ಪಕ್ಷದಲ್ಲಿ ನಿಷ್ಟಾವಂತ ಕಾರ್ಯಕರ್ತನಾಗಿರುವ ಎಸ್.ಗಂಗಾಧರ್ ರವರನ್ನು ಗುರುತಿಸಿರುವ ಕಾಂಗ್ರೆಸ್ ಹೈಕಮಾಂಡ್, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ ಫಾರಂ ನೀಡಿರುವುದು ಪಕ್ಷದ ತತ್ವ ಸಿದ್ದಾಂತಗಳಿಗೆ ಸಾಕ್ಷಿಯಾಗಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಗಂಗಾಧರ್ ರವನ್ನು ಆಶೀರ್ವಾದ ಮಾಡಿ ವಿಧಾನಸೌಧಕ್ಕೆ ಕಳುಹಿಸಬೇಕೆಂದರು.


ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್, ಪಕ್ಷದ ಒಬ್ಬ ಕಾರ್ಯಕರ್ತನಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಕ್ಷೇತ್ರದ ಬಿ ಫಾರಂ ನೀಡಿರುವುದು ಸಾಮಾನ್ಯದ ವಿಚಾರವಲ್ಲ, ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷ ನನ್ನನ್ನು ನಂಬಿರುವುದಕ್ಕೆ ನಾನು ಅಭಾರಿಯಾಗಿದ್ದು, ಕ್ಷೇತ್ರದ ಜನರ ಋಣ ತೀರಿಸಲು ನನಗೊಂದು ಅವಕಾಶ ಮಾಡಿಕೊಡಬೇಕೆಂದರು.

ಕಾಂಗ್ರೆಸ್ ಪಕ್ಷದ ಅಭಿವೃದ್ದಿ ಯೋಜನೆಗಳು ಹಾಗೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನೀಡುವ ಯೋಜನೆಗಳನ್ನು ಮನಗಂಡು ಕ್ಷೇತ್ರದ ಮತದಾರರು ಜಾಗೃತರಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾದ ನನಗೆ ನಿಮ್ಮ ಅತ್ಯಮೂಲ್ಯವಾದ ಮತಗಳನ್ನು ನೀಡುವುದರ ಮುಖಾಂತರ ನಿಮ್ಮ ಸೇವೆಗೆ ಒಂದು ಅವಕಾಶ ಮಾಡಿಕೊಡಬೆಕೆಂದರು.


ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್.ರವಿ, ರಾಜ್ಯ ಕಾಂಗ್ರೆಸ್ ವಕ್ತಾರ ದಂತೂರು ವಿಶ್ವನಾಥ್, ಕೆಪಿಸಿಸಿ ಸದಸ್ಯ ಹಿರಿಯ ಕಾಂಗ್ರೆಸ್ ಮುಖಂಡ ರಘುನಂದನ್‍ ರಾಮಣ್ಣ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನೀಲ್, ಅಕ್ಕೂರು ಪುಟ್ಟರಾಜು, ಮಂಗಳವಾರಪೇಟೆ ನಾಗೇಂದ್ರ ಹಾಗೂ ಹಲವಾರು ಮುಖಂಡರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑