ಮತದಾನ ಪ್ರಮಾಣ ಹೆಚ್ಚಳಕ್ಕೆ ವಿನೂತನ ತಂತ್ರ! ಮಾಡಲಗಿತ್ತು ಜಿಪಂ ಸಿಇಓ
ರಾಮನಗರ: ಪ್ರಜಾತಂತ್ರ ಹಬ್ಬದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತೆ ಮಾಡುವ ಉದ್ದೇಶದಿಂದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ವಿಇಇಪಿ) ಸಮಿತಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಫಲವಾಗಿ ರಾಮನಗರ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಶೇ. 85.04 ದಾಟಿದೆ.
ಈ ನಡುವೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳ ಮಾಹಿತಿ ಪಡೆದ ಸಮಿತಿಯ ಅಧಿಕಾರಿಗಳು, ಅದೇ ಭಾಗದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಅದರಂತೆ ಬೂತ್ ಹಂತದಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾನ ಮಹತ್ವವನ್ನು ಜನರಿಗೆ ತಿಳಿಸುವುದು ಹಾಗೂ ಆ ಮೂಲಕ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯದಂತೆ ಅರಿವು ಮೂಡಿಸಲಾಯಿತು.
2013 ಹಾಗೂ 2018ರ ವಿಧಾನ ಸಭಾ ಚುನಾವಣೆಯಲ್ಲೂ ಶೇ.80 ಕ್ಕೂ ಅಧಿಕ ಮತದಾನ ದಾಖಲಾಗಿತ್ತು, ಈ ಬಾರಿಯ ಪ್ರಜಾ ಪ್ರಭುತ್ವ ಹಬ್ಬದಲ್ಲಿ ಹಿರಿಯ ಹಾಗೂ ಕಿರಿಯ ಮತದಾರರು ಉತ್ಸಾಹದಿಂದ ಭಾಗಿಯಾದರು. ನಡೆಯಲು ಸಾಧ್ಯವಾಗದ ವಯೋವೃದ್ಧರು, ಅಂಗವಿಕಲರು ತಮ್ಮ ಜವಾಬ್ದಾರಿ ಮರೆಯಲಿಲ್ಲ. ಇವರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ಇದ್ದರೂ ಹೆಚ್ಚಿನವರು ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಇದಕ್ಕೆ ಪ್ರೇರಣೆ ನೀಡುವಂತೆ ಜಿಲ್ಲೆಯ ವಿವಿದೆಡೆ ಮತಗಟ್ಟೆಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಸಖಿ ಮತಗಟ್ಟೆಗಳು ಅಲ್ಲದೇ ವಿಕಲಚೇತನರ ಸ್ನೇಹಿ, ಯುವ ಮತದಾರ ಸ್ನೇಹಿ ಮತಗಟ್ಟೆ ಕೇಂದ್ರ ಸ್ಥಾಪಿಸಲಾಗಿತ್ತು. ಕಳೆದ ಚುನಾವಣೆಗಿಂತ ಈ ಬಾರಿ ಮತದಾರರ ಸಂಖ್ಯೆ ಹೆಚ್ಚಿತ್ತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಪ್ರಯತ್ನದ ಜೊತೆಗೆ ಈ ಭಾಗದ ಮತದಾರರು ತಮ್ಮ ಜವಾಬ್ದಾರಿ ಮೆರೆದು ಹಕ್ಕು ಚಲಾಯಿಸಿದ್ದಾರೆ. ಅದಕ್ಕೆ ಮತದಾರರನ್ನು ಅಭಿನಂದಿಸುತ್ತೇನೆಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ದಿಗ್ವಿಜಯ್ ಬೋಡ್ಕೆ ತಿಳಿಸಿದರು.
*ವಿನೂತನ ರೀತಿಯ ಜಾಗೃತಿ!*:
ಜಿಲ್ಲಾ, ತಾಲೂಕು, ಹೋಬಳಿ, ಗ್ರಾಮ ಪಂಚಾಯಿತಿ ಹಾಗೂ ಮತಗಟ್ಟೆ ಕೇಂದ್ರಗಳ ಹಂತಗಳಲ್ಲಿ ಸಾಕಷ್ಟು ಸ್ವೀಪ್ ಕಾರ್ಯಕ್ರಮಗಳಾದ ರಂಗೋಲಿ ಸ್ಪರ್ಧೆಯನ್ನು ಸ್ವಸಹಾಯ ಸಂಘಗಳ, ಸ್ತ್ರೀ ಶಕ್ತಿ ಸಂಘಗಳ ಮಹಿಳೆಯರ ಮೂಲಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ವಿಶೇಷ ಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಹ ಭಾಗಿತ್ವದಲ್ಲಿ 100 ಕ್ಕೂ ಹೆಚ್ಚು ವಿಶೇಷಚೇತನರು ತಮ್ಮ ತ್ರಿಚಕ್ರ ವಾಹನದಲ್ಲಿ ನಗರಗಳ ಪ್ರತಿಷ್ಟಿತ ರಸ್ತೆಗಳಲ್ಲಿ ಜಾಥಾ ಮಾಡುವ ಮೂಲಕ ಮತದಾರರಲ್ಲಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇವಿಎಂ ವಿವಿಪ್ಯಾಟ್ ಡೆಮೋ ನಡೆಸುವ ಮೂಲಕ, ಸೆಲ್ಫಿ ಸ್ಟ್ಯಾಂಡ್, ಪಂಜಿನ ಮೆರವಣಿಗೆ, ಕಾಲೇಜು ವಿದ್ಯಾರ್ಥಿಗಳ ಮೂಲಕ ಮೆರವಣಿಗೆ, ಸರ್ಕಾರಿ ಅಧಿಕಾರಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಲ್ಲಿ ಮತದಾನದ ಪ್ರತಿಜ್ಞಾ ವಿಧಿ ಸ್ವೀಕಾರ, ಬೈಕ್ ಜಾಥಾ ಸೇರಿದಂತೆ ಇತರೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರಲ್ಲಿ ಮತದಾನದ ಕುರಿತು ಅರಿವು/ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
*ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ:*
ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಮ್ಮ ಮತ, ನಮ್ಮ ಭವಿಷ್ಯ ಘೋಷಣೆಯಿರುವಂತಹ ಸ್ಟಿಕ್ಕರ್ ಅಂಟಿಸಲು ಯೋಜನೆ ರೂಪಿಸಿದ್ದು, ಸ್ವಚ್ಛ ವಾಹಿನಿಗಳ ಮೂಲಕ ಜಾಗೃತಿ ಮೂಡಿಸುವುದು, ಬೂತ್ ಮಟ್ಟದಲ್ಲಿ ಜಾಥಾ, ಕ್ಯಾಂಡಲ್ ನಡಿಗೆ, ಬೀದಿ ನಾಟಕ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ನಡೆಸಲಾಯಿತು.
*ಜಿಲ್ಲೆಯಾದ್ಯಂತ ಮೂರು ತಿಂಗಳಿನಿಂದ ವಿನೂತನ ಚಟುವಟಿಕೆಗಳ ಮೂಲಕ ಮತದಾನ ಜಾಗೃತಿ ಮೂಡಿಸಲಾಗಿದೆ, ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಬೂತ್ ಗಳಲ್ಲಿ ವಿಭಿನ್ನ ಪ್ರಯೋಗ ನಡೆಸಿದ್ದೆವು, ವಿವಿಧ ಜಾಗೃತಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಮತದಾನದ ಅರಿವು ಮೂಡಿಸಲಾಯಿತು. ಕಳೆದ ಚುನಾವಣೆಗಿಂತ ಈ ಬಾರಿ ಮತದಾರರ ಸಂಖ್ಯೆ ಹೆಚ್ಚಿತ್ತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಪ್ರಯತ್ನದ ಜೊತೆಗೆ ಈ ಭಾಗದ ಮತದಾರರು ತಮ್ಮ ಜವಾಬ್ದಾರಿ ಮೆರೆದು ಹಕ್ಕು ಚಲಾಯಿಸಿದ್ದಾರೆ. ಅದಕ್ಕೆ ಮತದಾರರನ್ನು ಅಭಿನಂದಿಸುತ್ತೇನೆ.*
*- ದಿಗ್ವಿಜಯ್ ಬೋಡ್ಕೆ,*
ಅಧ್ಯಕ್ಷರು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್, ರಾಮನಗರ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು