Tel: 7676775624 | Mail: info@yellowandred.in

Language: EN KAN

    Follow us :


ಸಂರಕ್ಷಿಸಲು ಯುವಜನತೆಗೆ ಕರೆ: ಬಿ.ಎಸ್ ಹೇಮಲತಾ

Posted date: 09 Jun, 2023

Powered by:     Yellow and Red

ಸಂರಕ್ಷಿಸಲು ಯುವಜನತೆಗೆ ಕರೆ: ಬಿ.ಎಸ್ ಹೇಮಲತಾ

ಚನ್ನಪಟ್ಟಣ: ಜಾಗತಿಕ ಪ್ರಪಂಚದಲ್ಲಿ ವಿಜ್ಞಾನ, ತಂತ್ರಜ್ಞಾನ ಬೆಳವಣಿಗೆಯ ಜೊತೆಗೆ ನಮ್ಮನ್ನೆಲ್ಲಾ ಹೊತ್ತು ನಿಂತಿರುವ ವಸುಂಧರೆಯನ್ನು ಸಂರಕ್ಷಣೆ ಮಾಡುವುದು ನೈಸರ್ಗಿಕ ಪರಿಸರವನ್ನು ಉಳಿಸುವುದು ಇಂದಿನ ಯುವಜನತೆಯ ಬಹು ಮುಖ್ಯವಾದ ಜವಬ್ದಾರಿ ಎಂದು ಶ್ರೀ ಮಹದೇಶ್ವರ ಎಜುಕೇಶನ್ ಟ್ರಸ್ಟ್ ನ ಖಜಾಂಚಿ ಬಿ.ಎಸ್ ಹೇಮಲತಾ ಯುವಜನತೆಗೆ ಕರೆ ನೀಡಿದರು.

ಅವರು ನಗರದ ಜ್ಞಾನ ಸರೋವರ ಪದವಿ ಪೂರ್ವ ಮತ್ತು ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ನಗರದ ಪ್ರಮುಖ ಬೀದಿಗಳಲ್ಲಿ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಜಾಥಾವನ್ನು ಉದ್ಘಾಟಿಸಿ ಮಾತನಾಡಿದರು.


ಬದಲಾಗುತ್ತಿರುವ ಸನ್ನಿವೇಶದಲ್ಲಿ ಸಾಂಸ್ಕೃತಿಕ ಪರಿಸರದ ಜೊತೆಗೆ ನೈಸರ್ಗಿಕ ಪರಿಸರವನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಪರಿಸರ ಮಾಲಿನ್ಯದಿಂದ ವಾಯುಮಂಡಲದ ಸಂಯೋಜನೆ ಬದಲಾವಣೆಯಾಗಿದೆ ಮತ್ತು ಅಭಿವೃದ್ಧಿಯ ಹೆಸರಿನಲ್ಲಿ ರಸ್ತೆಗಳ ವಿಸ್ತರಣೆಯ ಹೆಸರಿನಲ್ಲಿ ಮರಗಳ ಮಾರಣಹೋಮ ನಡೆಯುತ್ತಿದೆ. ಇದರ ಪರಿಣಾಮವಾಗಿ ಜಾಗತಿಕ ತಾಪಮಾನ ಹೆಚ್ಚಿ ಋತುಮಾನವೇ  ಬದಲಾಗುತ್ತಿದೆ. ಮರಗಿಡಗಳನ್ನು ಹೆಚ್ಚು ಬೆಳೆಸುವುದರ ಮೂಲಕ  ಪರಿಸರವನ್ನು ಉಳಿಸುವ ಸಂಕಲ್ಪವನ್ನು ಮಾಡಬೇಕಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಮುದಾಯ ಮತ್ತು ಸಾರ್ವಜನಿಕರು ಕಾರ್ಯೋನ್ಮುಕರಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.


ನಗರದ ಮುಖ್ಯ ರಸ್ತೆಗಳಲ್ಲಿ ವಿದ್ಯಾರ್ಥಿಗಳು ಪರಿಸರ ಕುರಿತು ಜಾಗೃತಿ ಮೂಡಿಸುವ ನಾಮಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಗಿಡಗಳನ್ನು ನೆಡುವುದರ ಮೂಲಕ ಮತ್ತು ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸುತ್ತಾ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ನಡೆಸಿದರು. ಈ ಅರಿವಿನ ಜಾಥಾದಲ್ಲಿ ಟ್ರಸ್ಟ್ ನ ಕಾರ್ಯದರ್ಶಿ ಆರ್ ಆದರ್ಶ ಕುಮಾರ್, ಕಾಲೇಜಿನ ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿಗಳು ಮತ್ತು ಭೂಗೋಳಶಾಸ್ತ್ರ ಉಪನ್ಯಾಸಕರಾದ ಹೆಚ್.ಸಿ ಹೊಳೆಸಾಲಯ್ಯ ದಾನವ್, ವ್ಯವಹಾರ ಅಧ್ಯಯನ ಉಪನ್ಯಾಸಕರಾದ ಪ್ರವೀಣ್ ಎಂಆರ್, ಇತಿಹಾಸ ಉಪನ್ಯಾಸಕಿ ಕೆ.ಶೃತಿ, ಲೆಕ್ಕಶಾಸ್ತ್ರ ಉಪನ್ಯಾಸಕಿ ನಿವೇದಿತಾ, ಬೋದಕೇತರ ಸಿಬ್ಬಂದಿ ರೂಪ, ಆರ್ ಅಭಿಲಾಷ್ ಕುಮಾರ್ ಮತ್ತು ಸುಂದರಮ್ಮ ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑