ಬೆಂಮೈ ಹೆದ್ದಾರಿಯ ರಾಮನಗರ ಬಳಿ ಮತ್ತೊಂದು ಅಪಘಾತ: ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಸಾವು
![ಬೆಂಮೈ ಹೆದ್ದಾರಿಯ ರಾಮನಗರ ಬಳಿ ಮತ್ತೊಂದು ಅಪಘಾತ: ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಸಾವು ಬೆಂಮೈ ಹೆದ್ದಾರಿಯ ರಾಮನಗರ ಬಳಿ ಮತ್ತೊಂದು ಅಪಘಾತ: ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಸಾವು](https://sanmitra.co.in//domains/sanmitra/images/3432_yellowandred.jpg)
ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇಂದು ಸಂಜೆ ಮತ್ತೊಂದು ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಎಲೆಕ್ಟ್ರಿಕಲ್ ಬಸ್ ನಿರ್ವಾಹಕ ಸಾವನಪ್ಪಿರುವ ದುರ್ಘಟನೆ ಜರುಗಿದೆ.
ರಾಮನಗರ ತಾಲ್ಲೂಕಿನ ಜಯಪುರ ಬಳಿ ಅಪಘಾತ ಸಂಭವಿಸಿದ್ದು, ಮೈಸೂರು ಕಡೆಯಿಂದ ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಫ್ಲೈವುಡ್ ಶೀಟ್ಗಳನ್ನು ತುಂಬಿಕೊಂಡು ಚಲಿಸುತ್ತಿದ್ದ ಬೊಲೊರೋ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್ನ ಗ್ಲಾಸ್ ಹೊಡೆದು ಫ್ಲೈವುಡ್ ಶೀಟ್ಗಳು ಬಸ್ನೊಳಕ್ಕೆ ನುಗ್ಗಿವೆ. ನಿಯಂತ್ರಣ ತಪ್ಪಿದ್ದ ಬಸ್ ಪಕ್ಕದ ಆರು ಪಥದ ರಸ್ತೆ ಮತ್ತು ಸರ್ವೀಸ್ ರಸ್ತೆ ದಾಟಿ ಬಂದು ಹೊಲದಲ್ಲಿ ನಿಂತಿದೆ. ದುರ್ಘಟನೆಯಲ್ಲಿ ನಿರ್ವಾಹಕ ನೂರು ಅಡಿ ದೂರಕ್ಕೆ ಚಿಮ್ಮಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇಂದು ಸಂಜೆ 4 ಗಂಟೆ ಸಮಯಕ್ಕೆ ಅಪಘಾತ ನಡೆದಿದೆ. ಗಂಭೀರವಾಗಿ ಗಾಯಗೊಂಡ ಚಾಲಕ ಮತ್ತು ಇತರ ಪ್ರಯಾಣಿಕರನ್ನು ರಾಮನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂರು ದಿನಗಳ ಹಿಂದಷ್ಟೇ ಇದೇ ರಸ್ತೆಯಲ್ಲಿ ಬೈಕ್ ಸವಾರ ವಾಹನವೊಂದಕ್ಕೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರು.
*ಆರು ತಿಂಗಳ ಅಪಘಾತಗಳಲ್ಲಿ 111 ಜನ ಸಾವು*
ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಜನವರಿಯಿಂದ ಇಲ್ಲಿಯವರೆಗೂ 111 ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 244 ಅಪಘಾತಗಳು ಸಂಭವಿಸಿದ್ದು, 51 ಜನ ಸಾವನ್ನಪ್ಪಿದರೆ, 190 ಜನರಿಗೆ ಗಾಯಗಳಾಗಿವೆ. ಇನ್ನು ಮಂಡ್ಯ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 575 ಅಪಘಾತಗಳಾಗಿದ್ದು, 60 ಮಂದಿ ಜನ ಸಾವನ್ನಪ್ಪಿದ್ದಾರೆ. 54 ಮಂದಿಗೆ ತೀವ್ರ ಪೆಟ್ಟು ಬಿದ್ದಿದ್ದರೆ, 189 ಮಂದಿಗೆ ಕೈ ಕಾಲು ಮುರಿತವಾಗಿದ್ದು, 295 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಮೂಲಕ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಸಾವಿನ ಹೆದ್ದಾರಿಯಾಗಿ ಮಾರ್ಪಾಡಾಗುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ.
ಕಳೆದೆರಡು ದಿನಗಳ ಹಿಂದೆ ಎಡಿಜಿಪಿ ಅಲೋಕ್ ಕುಮಾರ್ ಸಹ ಬಂದು ರಾಮನಗರ ಜಿಲ್ಲೆಯ ಬೆಂಗಳೂರು ಮೈಸೂರು ಹೆದ್ದಾರಿ ಹಾಗೂ ವಿಶೇಷವಾಗಿ ಅಪಘಾತ ಸ್ಥಳಗಳನ್ನು ವೀಕ್ಷಣೆ ಮಾಡಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಗಸ್ತು ತಿರುಗುವಂತೆ ಪೋಲಿಸರಿಗೆ ಖಡಕ್ ಮಾಹಿತಿ ನೀಡಿ ಹೋಗಿದ್ದರು. ಎರಡೇ ದಿನಕ್ಕೆ ಈ ಅಪಘಾತ ಸಂಭವಿಸಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
![ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ](https://sanmitra.co.in//domains/sanmitra/images/3592_yellowandred_a.jpg)
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
![ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ](https://sanmitra.co.in//domains/sanmitra/images/3586_yellowandred_a.png)
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
![ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ](https://sanmitra.co.in//domains/sanmitra/images/3579_yellowandred_a.jpg)
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
![ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ](https://sanmitra.co.in//domains/sanmitra/images/3573_yellowandred_a.jpg)
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
![ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ](https://sanmitra.co.in//domains/sanmitra/images/3568_yellowandred_a.jpg)
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
![ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ](https://sanmitra.co.in//domains/sanmitra/images/3557_yellowandred_a.jpeg)
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
![ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ](https://sanmitra.co.in//domains/sanmitra/images/3538_yellowandred_a.jpg)
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
![೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ ೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ](https://sanmitra.co.in//domains/sanmitra/images/3528_yellowandred_a.jpg)
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
![ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್ ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್](https://sanmitra.co.in//domains/sanmitra/images/3509_yellowandred_a.jpg)
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
![ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ](https://sanmitra.co.in//domains/sanmitra/images/3504_yellowandred_a.jpg)
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು