Tel: 7676775624 | Mail: info@yellowandred.in

Language: EN KAN

    Follow us :


ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏಪ್ರಿಲ್ 14ರ ವರೆಗೆ ಅವಕಾಶ

Posted date: 04 Apr, 2018

Powered by:     Yellow and Red

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏಪ್ರಿಲ್ 14ರ ವರೆಗೆ ಅವಕಾಶ

ಬೆಂಗಳೂರು: ಮೇ 12ಕ್ಕೆ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಿಸಿ ಫೆ.28ಕ್ಕೆ ಅಂತಿಮ ಪಟ್ಟಿ ಬಿಡುಗಡೆಗೊಳಿಸಿದೆ. ಆದರೆ ಇನ್ನೂ ಅನೇಕರು ಮತದಾರರ ಪಟ್ಟಿಯಿಂದ ಹೊರಗೆ ಇದ್ದಾರೆ. ಪ್ರತಿಯೊಬ್ಸಬರ ಹೆಸರು ಮತದಾರ ಪಟ್ಟಿಯಲ್ಲಿ ಇರಬೇಕು. ಮತದಾರರ ಅಂತಿಮ ಪಟ್ಟಿ ಪ್ರಕಟಗೊಂಡಿದೆ. ಈಗ ಏನು ಮಾಡಬೇಕು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ವ್ಯಥೆ ಪಡಬೇಡಿ. ಏಕೆಂದರೆ, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಏಪ್ರಿಲ್‌ 14ರವರೆಗೆ ಅವಕಾಶವಿದೆ. ಚಿಂತೆ ಬಿಡಿ ಫಾರಂ ಸಂಖ್ಯೆ 6 ಹಿಡಿದು ಹೆಸರು ಸೇರ್ಪಡೆ ಮಾಡಿ.

ಈ ದಾಖಲೆಗಳು ಬೇಕು:
ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಫಾರಂ ಸಂಖ್ಯೆ 6ನ್ನು ಬಳಸಿ ಎರಡು ಕಲರ್‌ ಅಥವಾ ಕಪ್ಪು/ಬಿಳುಪು ಭಾವಚಿತ್ರವನ್ನು ಫಾರಂ 6 ನೊಂದಿಗೆ ಲಗತ್ತಿಸಿ ಜನ್ಮ ಪ್ರಮಾಣ ಪತ್ರದ ಜೆರಾಕ್ಸ್‌ ಪ್ರತಿ ಸೇರಿಸಿ (ನಗರ ಸಭೆಯಿಂದ ನೀಡಿದ ಜನ್ಮ ಪ್ರಮಾಣ ಪತ್ರ ಅಥವಾ ಮೆಟ್ರಿಕ್ಯುಲೇಶನ್‌ ದೃಢೀಕರಣ ಪತ್ರ ಅಥವಾ ಶಾಲೆ/ಕಾಲೇಜಿನಿಂದ ನೀಡಿದ ದೃಢೀಕರಣ ಪತ್ರ) ವಿಳಾಸ ಪುರಾವೆಯ ಜೆರಾಕ್ಸ್‌ ಪ್ರತಿಯನ್ನು ಲಗತ್ತಿಸಿ (ಬ್ಯಾಂಕ್‌ ಅಂಚೆ ಕಚೇರಿಯ ಪ್ರಸ್ತುತ ಪಾಸ್‌ ಬುಕ್‌, ಪಡಿತರ ಚೀಟಿ ಅಥವಾ ಡ್ರೈವಿಂಗ್‌ ಲೈಸನ್ಸ್‌ /ಆದಾಯ ತೆರಿಗೆ ನಿರ್ಧಾರಣ ಆದೇಶ ಅಥವಾ ಆ ವಿಳಾಸದ ಇತ್ತೀಚಿನ ನೀರು/ದೂರವಾಣಿ/ವಿದ್ಯುತ್ಛಕ್ತಿ /ಅಡುಗೆ ಅನಿಲ ಸಂಪರ್ಕದ ಬಿಲ್‌ (ಅರ್ಜಿದಾರ ಅಥವಾ ಆತ/ಆಕೆಯ ಹೆತ್ತವರ ವಿಳಾಸದಲ್ಲಿ ಇತ್ಯಾದಿ) ಅಥವಾ ಆ ವಿಳಾಸದ ಅರ್ಜಿದಾರ ಹೆಸರಿನಲ್ಲಿ ಅಂಚೆ ಇಲಾಖೆಯ ಸ್ವೀಕೃತ/ ಕಳುಹಿಸಿದ ಅಂಚೆಗಳು.

ಎಸ್‌ಎಸ್‌ಎಲ್‌ಸಿ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ವಿವಾಹ ನೋಂದಣಿ ಪತ್ರ, ರೇಷನ್‌ ಕಾರ್ಡ್‌ ಮುಂತಾದ ವಯೋಮಿತಿ ತಿಳಿಸುವ ದಾಖಲೆಗಳು ಹೆಸರು ನೋಂದಣಿ ಮಾಡಿಸಲು ಸಾಕು.

ಅರ್ಜಿ ಸಲ್ಲಿಕೆ ಹೇಗೆ?
ನೀವು ನಗರ ಸಭೆಯ ಪ್ರದೇಶದಲ್ಲಿ ವಾಸಿಸುತ್ತಿದ್ದರೆ, ನಿಮ್ಮ ಅರ್ಜಿಯನ್ನು ಸಹಾಯಕ ಆಯುಕ್ತರು (ನಗರ ಪಾಲಿಕೆಯ ಕಚೇರಿ)ಅಂಚೆ ಕಚೇರಿಗಳು, ವಾಣಿಜ್ಯ ಮಳಿಗೆಗಳ ಡ್ರಾಪ್‌ ಡೌನ್‌ ಪೆಟ್ಟಿಗೆಗಳು, ಪೆಟ್ರೋಲ್‌ ಬಂಕುಗಳು. ನೀವು ನಗರಸಭೆ ಪ್ರದೇಶದಲ್ಲಿಲ್ಲದಿದ್ದರೆ, ನಿಮ್ಮ ಅರ್ಜಿಯನ್ನು ನಿಮ್ಮ ಜಿಲ್ಲೆಯಲ್ಲಿ ಸಲ್ಲಿಸಿ: ಉಪ ಪರೀಕ್ಷಕ ಕಚೇರಿ. ರೆವಿನ್ಯೂ ಡಿವಿಶನಲ್‌ ಅಧಿಕಾರಿ ಕಚೇರಿ (ಮತದಾರ ನೋಂದಣಿ ಅಧಿಕಾರಿ)ತಹಶೀಲ್ದಾರರ ಕಚೇರಿ (ಸಹಾಯಕ ಮತದಾರ ನೋಂದಣಾಧಿಕಾರಿ)

ಯಾವ್ಯಾವುದಕ್ಕೆ ಯಾವ್ಯಾವ ಅರ್ಜಿ?
ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಫಾರಂ 6, ಫಾರಂ 7, ಫಾರಂ 8, ಫಾರಂ 8ಎ ಎಂಬ ನಾಲ್ಕು ರೀತಿಯ ಅರ್ಜಿಗಳಿವೆ. ಹೊಸದಾಗಿ ಹೆಸರು ನೋಂದಾಯಿಸಲು, ಹೆಸರು ಬದಲಾವಣೆ ಮಾಡಿಸಲು, ಸ್ಥಳ ಬದಲಾವಣೆ ಮಾಡಿದ ನಂತರ ಹೆಸರು ನೋಂದಣಿ ಮಾಡಿಸಲು ನಿಮಗೆ ಅಗತ್ಯವಿರುವ ಅರ್ಜಿಗಳನ್ನು ಬಳಸಬಹುದಾಗಿದೆ.

ಮತದಾರರ ಪಟ್ಟಿಯಲ್ಲಿ ನೂತನವಾಗಿ ಹೆಸರು ಸೇರಿಸಲು, ಸ್ಥಳ ಬದಲಾವಣೆ ಬಗ್ಗೆ ಮಾಹಿತಿ ನೀಡಲು ಮತ್ತು ಹೆಸರು ಕಣ್ಮರೆ ಆಗಿದ್ದರೆ ಪುನಃ ಸೇರಿಸಲು ಫಾರಂ 6 ಅನ್ನು ಬಳಸಬಹದು. ಫಾರಂ 7 ಮುಖಾಂತರ ನಿಮ್ಮ ಹೆಸರನ್ನು ರದ್ದು ಪಡಿಸಬಹುದು, ಮರಣ ಹೊಂದಿದ ವ್ಯಕ್ತಿಯ ಹೆಸರು ತೆಗೆಸಬಹುದಾಗಿದೆ.

ಮತದಾರರ ಪಟ್ಟಿಯ ತಪ್ಪುಗಳನ್ನು ಬದಲಿಸಲು ಫಾರಂ 8 ಮತ್ತು ಒಂದೇ ಚುನಾವಣಾ ಕ್ಷೇತ್ರದಲ್ಲಿ ಮತದಾರರ ಹೆಸರನ್ನು ಇನ್ನೊಂದು ಜಾಗಕ್ಕೆ ಸ್ಥಳಾಂತರಿಸಲು ಅಂದರೆ ನಿಮ್ಮ ವಿಳಾಸ ಬದಲಾಗಿದ್ದರೆ ಫಾರಂ 8ಎ ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. ನೀವು ಅರ್ಜಿಯನ್ನು ಪಡೆದುಕೊಂಡ ಕಚೇರಿಯಲ್ಲಿಯೇ ಮರಳಿ ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಬೇಕು. ಮತದಾರರ ನೋಂದಣಿ ವರ್ಷಪೂರ್ತಿ ನಡೆಯುತ್ತದೆ. ಆದರೆ, ಚುನಾವಣೆ ವೇಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಿರುವವರೆಗೆ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿದೆ.

ಪ್ರತಿಕ್ರಿಯೆಗಳು2 comments

  • mallikarjuna wrote:
    05 Apr, 2018 05:36 pm

    Add for tha new oting liste

  • mallikarjuna wrote:
    05 Apr, 2018 05:36 pm

    Add for tha new oting liste

  • mallikarjuna wrote:
    05 Apr, 2018 05:37 pm

    Add for tha new oting liste

  • Nagesh B H wrote:
    06 Apr, 2018 12:50 pm

    Baynavardtha kopalu amrthuru hobile kunigal tahalku thumakur gelia

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑