ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:
ರಾಮನಗರ; ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ ಸಂಬಂಧಪಟ್ಟ ಉಪ ನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು ಮಾರುಕಟ್ಟೆ ಮಾರ್ಗಸೂಚಿ ದರಗಳನ್ನು ೫ ವರ್ಷಗಳ ಅವಧಿಯಲ್ಲಿ ಪರಿಷ್ಕರಿಸದೇ ಇರುವುದರಿಂದ ಹಾಗೂ ಸಾಕಷ್ಟು ಭೌತಿಕ ಅಭಿವೃದ್ಧಿ ಹಾಗೂ ಬೆಳವಣಿಗೆಗಳು ಆಗಿರುವುದರಿಂದ ಈ ಎಲ್ಲಾ ನ್ಯೂನ್ಯತೆಗಳನ್ನು ಪ್ರಸ್ತಕ ಸಾಲಿನಲ್ಲಿ ಸರಿಪಡಿಸಿ ಸ್ಥಿರಾಸ್ತಿಗಳ ಅಂದಾಜು ಮಾರುಕಟ್ಟೆ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ತಾತ್ಕಾಲಿಕ ಅಧಿಸೂಚನೆಯ ಪಟ್ಟಿಯನ್ನು ಸೆ. ೬ ರಂದು ಅನುಮೋದಿಸಿ ಸೆ. ೮ರಂದು ಹೊರಡಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರದ ವಿಶೇಷ ರಾಜ್ಯ ಪತ್ರದಲ್ಲಿ (ಇxಣಡಿಚಿoಡಿಜiಟಿಚಿಡಿಥಿ ಉಚಿzeಣಣe) ಪ್ರಕಟಿಸಲಾಗುತ್ತದೆ. ತಾತ್ಕಾಲಿಕ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಜಿಲ್ಲಾ ನೋಂದಣಿ ಕಚೇರಿ, ಉಪ ನೋಂದಣಿ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್, ನಗರದಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಹಾಗೂ ಇಲಾಖೆಯ ಜಾಲತಾಣದಲ್ಲಿ ಸಾರ್ವಜನಿಕ ಮಾಹಿತಿಗಾಗಿ ಲಭ್ಯವಿದೆ.
ಈ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ೧೫ ದಿವಸಗಳೊಳಗಾಗಿ ಸದಸ್ಯ ಕಾರ್ಯದರ್ಶಿಗಳು, ಕೇಂದ್ರ ಮೌಲ್ಯಮಾಪನ ಸಮಿತಿ ಹಾಗೂ ನೋಂದಣಿ ಉಪ ಮಹಾವೀಕ್ಷಕರು, ಕೇಂದ್ರ ಮೌಲ್ಯ ಮಾಪನ ಸಮಿತಿ ಇವರಿಗೆ ಸದಸ್ಯ ಕಾರ್ಯದರ್ಶಿಗಳು, ಕೇಂದ್ರ ಮೌಲ್ಯ ಮಾಪನ ಸಮಿತಿ, ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತ ರವರ ಕಛೇರಿ, ಕಂದಾಯ ಭವನ, ೮ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು ಇಲ್ಲಿಗೆ ಅಂಚೆ ಮೂಲಕವಾಗಲೀ, ಖುದ್ದಾಗಿ ಅಥವಾ ಇ-ಮೇಲ್ ಮೂಲಕ ಆಗಲಿ ಕಳುಹಿಸಲು ತಿಳಿಸಲಾಗಿದೆ. ಪ್ರಕಟಿಸಿದ ದಿನಾಂಕದಿಂದ ೧೫ ದಿವಸಗಳ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬೆಂಗಳೂರಿನ ಸದಸ್ಯ ಕಾರ್ಯದರ್ಶಿಗಳು ಹಾಗೂ ನೋಂದಣಿ ಉಪ ಮಹಾಪರಿವೀಕ್ಷರು (ಪ್ರಭಾರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು