Tel: 7676775624 | Mail: info@yellowandred.in

Language: EN KAN

    Follow us :


ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ

Posted date: 17 Oct, 2023

Powered by:     Yellow and Red

ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ

ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದೊಂದಿಗೆ ವೈದ್ಯ ವೆಂಕಟಪ್ಪ ನವರು ಹದಿನಾಲ್ಕು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸರ್ಕಾರಿ ಶಾಲೆ ನಿರ್ಮಿಸಿ ಕೊಡುತ್ತಿರುವುದು ಶ್ಲಾಘನೀಯ, ಇಂತಹವರ ಸಂಖ್ಯೆ ಸಹಸ್ರವಾಗಲಿ, ಸರ್ಕಾರ ಹಾಗೂ ಸರ್ವಜನರ ಪರವಾಗಿ ವೆಂಕಟಪ್ಪ ರವರನ್ನು ಅಭಿನಂದಿಸುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಅಭಿಪ್ರಾಯ ಪಟ್ಟರು.


ಎಲ್ಲಾ ಮಕ್ಕಳಿಗೂ ಸಮಾನ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸುವ ಉದ್ದೇಶವಿದ್ದು, ಮುಂದಿನ ಮೂರು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.


ತಾಲೂಕಿನ ಹೊಂಗನೂರು ಗ್ರಾಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಣ್ವ ಡಯೋಗ್ನಸ್ಟಿಕ್‌ನ ಡಾ. ವೆಂಕಟಪ್ಪ ನೂತನವಾಗಿ ನಿರ್ಮಿಸುತ್ತಿರುವ  ನೂತನ ಸರ್ಕಾರಿ ಪ್ರೌಢಶಾಲೆಯ ಕಟ್ಟಡವನ್ನು ವೀಕ್ಷಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.


ಎಲ್ಲಾ ಮಕ್ಕಳಿಗೆ ಸಮಾನತೆಯ ಹಾಗೂ  ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಎರಡರಿಂದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ. ಸೌಲಭ್ಯವಿದ್ದ ಕಡೆ ಇರುವ ಶಾಲೆಯನ್ನೇ ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು, ಸೌಲಭ್ಯವಿಲ್ಲದ ಕಡೆ ನೂತನವಾಗಿ ಶಾಲೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.


ಗ್ರಾಮೀಣ ಭಾಗದಲ್ಲಿ ಉತ್ತಮ ಸೌಲಭ್ಯವುಳ್ಳ ಸರ್ಕಾರಿ ಶಾಲೆಗಳನ್ನು ನಿರ್ಮಿಸಿದಲ್ಲಿ ಮಕ್ಕಳು ಶಿಕ್ಷಣಕ್ಕಾಗಿ ಬೆಂಗಳೂರು, ಮಂಗಳೂರು ಮುಂತಾದ ಮಹಾ ನಗರಗಳಿಗೆ ವಲಸೆ ಹೋಗುವುದನ್ನು ತಡೆಯಬಹುದಾಗಿದೆ. ಆ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಉತ್ತಮ ಮೂಲಸೌಲಭ್ಯಗಳಿರುವ ಶಾಲೆಗಳನ್ನು ನಿರ್ಮಿಸಲು ಸರ್ಕಾರ ಆದ್ಯತೆ ನೀಡಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಮಕ್ಕಳಿಗೆ ನಮ್ಮ ಸಂಸ್ಕೃತಿಯನ್ನು ಕಲಿಸುವ ನಿಟ್ಟಿನಲ್ಲಿ ನೃತ್ಯ, ಸಂಗೀತಾ, ಕ್ರೀಡೆಗಳ ಕುರಿತು ತರಬೇತಿ ನೀಡಿದಲ್ಲಿ ಮಕ್ಕಳು ಖಾಸಗಿ ಶಾಲೆಗಳಿಗೆ ಹೋಗುವುದನ್ನು ತಪ್ಪಿಸಬಹುದಾಗಿದೆ ಎಂದರು.


ಸಿಎಸ್‌ಆರ್ ಅನುದಾನ ಬಳಕೆ: ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕಂಪನಿಗಳ ಸಿಎಸ್ಆರ್ ಅನುದಾನವನ್ನು ಸರ್ಕಾರಿ ಶಾಲೆಗಳಿಗೆ ನೀಡುವಂತೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಿಎಸ್ಆರ್ ಫಾರ್ಚುನ್ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಸ್ಆರ್ ಅನುದಾನವನ್ನು ಬಳಕೆ ಮಾಡಿಕೊಂಡು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.


*ಶಿಕ್ಷಕರ ಕೊರತೆ ನೀಗಿಸಲು ಕ್ರಮ:*

ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸುವ ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿದ್ದು, ಹಂತಹಂತವಾಗಿ ಶಿಕ್ಷಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದ್ದು,  ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಶಿಕ್ಷಕರ ಕೊರತೆ ನೀಗಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.


*ಹಿಂದಿನ ಸರ್ಕಾರದ ಬಳುವಳಿ:*

ರಾಜ್ಯದಲ್ಲಿ ಇರುವ ಶಿಕ್ಷಕರ ಕೊರತೆ ನಮ್ಮ ಅವಧಿಯಲ್ಲಿ ಆದ ಸಮಸ್ಯೆಯಲ್ಲ. ಇದು ಹಿಂದಿನ ಸರ್ಕಾರ ನಮಗೆ ನೀಡಿದ ಬಳುವಳಿಯಾಗಿದೆ. ಶಿಕ್ಷಕರ ವರ್ಗಾವಣೆಯಿಂದ ಕೆಲವು ಕಡೆ ಸಮಸ್ಯೆಯಾಗಿದೆ. ಶಿಕ್ಷಕರನ್ನು ಪಡೆದುಕೊಂಡು ತಾಲೂಕಿನವರಿಗೆ ಸಂತಸವಾಗಿದ್ದರೆ, ಶಿಕ್ಷಕರನ್ನು ಕಳೆದುಕೊಂಡ ತಾಲೂಕಿಗೆ ಸಮಸ್ಯೆಯಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕರ ಕೊರತೆ ಎದುರಿಸುತ್ತಿರುವ ಕಡೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಸಮಸ್ಯೆ ಪರಿಹರಿಸಲಾಗುವುದು. ಇನ್ನೊಂದು ವಾರದಲ್ಲಿ ಈ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ತಿಳಿಸಿದರು.


*ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳಕ್ಕೆ ಮನವಿ:*

ಅತಿಥಿ ಶಿಕ್ಷಕರಿಗೆ ಈಗ ನೀಡುತ್ತಿರುವ ಗೌರವ ಧನ ಕಡಿಮೆ ಇದೆ ಎಂಬ ಅಸಮಾಧಾನವಿದೆ. ಈ ಸಮಸ್ಯೆಯ ಅರಿವಿದ್ದು, ನವಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಭೇಟಿಗೆ ಸಮಯ ನಿಗದಿಯಾಗಿದ್ದು, ಅಲ್ಲಿ ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ ಹಾಗೂ ಶಿಕ್ಷಕರ ಕೊರತೆಯ ಚರ್ಚಿಸಲಾಗುವುದು ಎಂದು ತಿಳಿಸಿದರು.


*ಸರ್ಕಾರಿ ಶಾಲೆಗಳಲ್ಲಿ ಇರುವ ಶಿಕ್ಷಕರಷ್ಟು ಪ್ರತಿಭಾವಂತರು:* ನಿಮಗೆ ಖಾಸಗಿ ಶಾಲೆಗಳಲ್ಲಿ ಸಿಗುವುದಿಲ್ಲ. ಸರ್ಕಾರಿ ಶಾಲೆಗಳಿಗೆ ಆಯ್ಕೆಯಾಗುವ ಶಿಕ್ಷಕರು ಮೆರಿಟ್ ಮೂಲಕ ಆಯ್ಕೆಯಾದವರಾಗಿದ್ದಾರೆ. ಅವರ ಪ್ರತಿಭೆಯನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ಪೋಷಕರು ಸಹ ಖಾಸಗಿ ಶಾಲೆಗಳ ವ್ಯಾಮೋಹ ತೊರೆಯಬೇಕು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯ ದೊರೆತಲ್ಲಿ ಪೋಷಕರು ತಮ್ಮ ಮಕ್ಕಳನ್ನು ಇಲ್ಲಿಗೇ ಸೇರಿಸುತ್ತಾರೆ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಸರ್ವ ಕ್ರಮ ಕೈಗೊಂಡಿದೆ ಎಂದರು.

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಈಗಾಗಲೇ ಎರಡು ಬಾರಿ ಮೊಟ್ಟೆ, ಊಟ, ಹಾಲು ನೀಡುವ ಕೆಲಸ ಮಾಡಲಾಗುತ್ತಿದೆ. ಇದಿಷ್ಟು ನೀಡಿದರೆ ಸಾಲದು ಶಾಲೆಗಳಿಗೆ ಮೂಲಸೌಲಭ್ಯ ಸಹ ನೀಡಬೇಕು ಎಂಬ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಸೌಲಭ್ಯ ಕಲ್ಪಿಸಿದರೂ ಸಹ ಕೆಲವು ಕಡೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಇದೆ. ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿರುವ ಶಾಲೆಗಳನ್ನು ಅನಿವಾರ್ಯವಾಗಿ ಮುಚ್ಚಬೇಕಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


*ವೆಂಕಟಪ್ಪ ಕೊಡುಗೆ ಶ್ಲಾಘನೀಯ:*

ತಾವು ಹುಟ್ಟಿ ಬೆಳೆದ ಊರಿಗೆ, ಕಲಿತ ಶಾಲೆಗೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ವೆಂಕಟಪ್ಪ ತಮ್ಮ ಸ್ವಗ್ರಾಮ ಹೊಂಗನೂರಿನಲ್ಲಿ ಸುಸಜ್ಜಿತ ಶಾಲೆಯನ್ನು ನಿರ್ಮಿಸಿಕೊಡುತ್ತಿದ್ದಾರೆ. ಅವರ ಈ ಕೊಡುಗೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ನೂತನವಾಗಿ ನಿರ್ಮಿಸುತ್ತಿರುವ ಶಾಲೆಯ ಕಟ್ಟಡವನ್ನು ಸಚಿವ ಮಧುಬಂಗಾರಪ್ಪ ವೀಕ್ಷಿಸಿದರು. ಶಾಲೆಯಲ್ಲಿ ಆಗಿರುವ ಕಾಮಗಾರಿ ಇನ್ನೂ ಆಗಬೇಕಾಗಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.


ಇದೇ ವೇಳೆ ಕನಕಪುರ ತಾಲೂಕಿನಿಂದ  ಬೇರೆ ತಾಲೂಕಿಗೆ  ವರ್ಗಾವಣೆಗೊಂಡಿರುವ ಶಿಕ್ಷಕರು ತಮಗಿನ್ನೂ ರಿಲೀವ್ ಮಾಡದ ಕಾರಣ ಸಮಸ್ಯೆಯಾಗಿದೆ ಎಂದು ಸಚಿವರ ಬಳಿ ಅಳಲು ತೋಡಿಕೊಂಡರು. ಇದಕ್ಕೆ ಸ್ಪಂದಿಸಿದ ಸಚಿವರ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವ ಭರವಸೆ ನೀಡಿದರು. ಮೆಂಗಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ದುಸ್ಥಿತಿಗೆ ಸಂಬಂಧಿಸಿದಂತೆ ಮಹೇಶ್ ಮೆಂಗಹಳ್ಳಿ ಸಚಿವರ ಗಮನ ಸೆಳೆದರು. ಸರ್ಕಾರಿ ಶಾಲೆಯ ಕೆಲವು ಶಿಕ್ಷಕರು ಸೇರಿದಂತೆ ಹಲವಾರು ಮಂದಿ ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಮಾಡಿದರು.


ಈ ಸಂದರ್ಭದಲ್ಲಿ  ಡಿಡಿಪಿಐ ಬಸವರಾಜೇಗೌಡ, ಡಿಡಿಪಿಯು ಗೋವಿಂದೇಗೌಡ, ಬಿಇಒ ಮರೀಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಆರ್. ಪ್ರಮೋದ್, ಸುನೀಲ್, ಮುಖಂಡರಾದ ಬೋರ್‌ವೆಲ್ ರಂಗನಾಥ್, ಚಂದ್ರಸಾಗರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑