Tel: 7676775624 | Mail: info@yellowandred.in

Language: EN KAN

    Follow us :


ಬುಧವಾರ ಕೆಆರ್ ಪೇಟೆಯಲ್ಲಿ ನಡೆಯುವ ಕಸಾಪ ದತ್ತಿ ಪ್ರಶಸ್ತಿ ಸ್ವೀಕರಿಸಲಿರುವ ಜಿಲ್ಲೆಯ ಜಾನಪದ ಕಲಾವಿದೆ ಲಕ್ಷ್ಮಿ ಶ್ರೀನಿವಾಸ

Posted date: 28 Nov, 2023

Powered by:     Yellow and Red

ಬುಧವಾರ ಕೆಆರ್ ಪೇಟೆಯಲ್ಲಿ ನಡೆಯುವ ಕಸಾಪ ದತ್ತಿ ಪ್ರಶಸ್ತಿ ಸ್ವೀಕರಿಸಲಿರುವ ಜಿಲ್ಲೆಯ ಜಾನಪದ ಕಲಾವಿದೆ ಲಕ್ಷ್ಮಿ ಶ್ರೀನಿವಾಸ

ರಾಮನಗರ/ಚನ್ನಪಟ್ಟಣ:ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ೨೦೨೦ ೨೦೨೧ ಹಾಗೂ ೨೦೨೨ ನೇ ಸಾಲಿನ "ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ ಪ್ರಶಸ್ತಿ' ಪ್ರಕಟಗೊಂಡಿದ್ದು, ೨೦೨೦ನೇ ಸಾಲಿನ ಪ್ರಶಸ್ತಿಗೆ ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕಿನ ಜಾನಪದ ಕಲಾವಿದೆ ಲಕ್ಷ್ಮಿ ಗೋ ರಾ ಶ್ರೀನಿವಾಸ್ ಆಯ್ಕೆಯಾಗಿದ್ದು, ನವೆಂಬರ್.೨೯ರ ಬುಧವಾರ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ  ಪಿಇಎಸ್ ಕಾಲೇಜು ಆವರಣದಲ್ಲಿ ಕೊಡಮಾಡುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.


ಕೊರೋನಾ ಹಿನ್ನೆಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ದತ್ತಿ ಪ್ರಶಸ್ತಿಯನ್ನು ನೀಡಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ೨೦೨೦, ೨೦೨೧, ೨೦೨೨ ಸಾಲಿನ ಪ್ರಶಸ್ತಿಯನ್ನು ಒಟ್ಟಾಗಿ ಪ್ರಕಟಿಸಿದ್ದು, ತಲಾ ಮೂರು ಮಂದಿಯಂತೆ ಒಟ್ಟು ೯ ಮಂದಿ ಕಲಾವಿದರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.


ಮಂಡ್ಯ ಜಿಲ್ಲೆಯ ಹಿರಿಯ ಸಮಾಜಸೇವಕ ಎಸ್. ಎಂ.ಶಂಕರ್ (ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ರವರ ಸಹೋದರ) ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿಯನ್ನು ಸ್ಥಾಪಿಸಿದ್ದು, ಪ್ರತಿ ವರ್ಷ ಜನಪದ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ.


೨೦೨೦ನೇ ಸಾಲಿನ ಪ್ರಶಸ್ತಿಗೆ ಮಂಡ್ಯ ಜಿಲ್ಲೆಯ ಆರ್. ಕೆ. ಸ್ವಾಮಿ, ಚನ್ನಪಟ್ಟಣದ ಲಕ್ಷ್ಮಿ ಗೋ ರಾ ಶ್ರೀನಿವಾಸ್ ಮತ್ತು ಶ್ರೀರಂಗಟ್ಟಣದ ಮಂಟೆ ಲಿಂಗಯ್ಯ ಅವರು. ೨೦೨೧ನೇ ಸಾಲಿನ ಪ್ರಶಸ್ತಿಗೆ ಮಳವಳ್ಳಿಯ ಕುಂತೂರು ಕುಮಾರ, ಕೆ.ಆರ್. ಪೇಟೆಯ ಪಿ.ಆರ್.ಶಾಂತಮ್ಮ ಮತ್ತು ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ತಮಟೆ ನರಸಮ್ಮ ಅವರು ಹಾಗೂ ೨೦೨೨ನೇ ಸಾಲಿನ ಪ್ರಶಸ್ತಿಗೆ ಪಾಂಡವಪುರದ ಸೋಬಾನೆ ನಾಗಮ್ಮ, ಮಂಡ್ಯದ ಮಂಜುಳ ಆಲದಳ್ಳಿ ಮತ್ತು ಕೊಳ್ಳೇಗಾಲದ ಎಂ. ಕೈಲಾಸಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.


*ಲಕ್ಷ್ಮಿ ಗೋ ರಾ ಶ್ರೀನಿವಾಸ ಪರಿಚಯ:*

ಲಕ್ಷ್ಮಿ ಗೋ ರಾ ಶ್ರೀನಿವಾಸ ಮೂಲ ಮೈಸೂರು ನಗರದವರಾಗಿದ್ದು, ಚನ್ನಪಟ್ಟಣ ತಾಲೂಕಿನ ಗೋವಿಂದೇಗೌಡನದೊಡ್ಡಿ ಗ್ರಾಮದ ಗೋ.ರಾ. ಶ್ರೀನಿವಾಸ್ ಎಂಬುವವರನ್ನು ಮದುವೆಯಾಗಿ ಬಂದ ನಂತರವೂ ಸಹ ತಮ್ಮಲ್ಲಿರುವ ಕಲೆಯನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಮೈಸೂರಿನಲ್ಲಿ ವಿದ್ಯಾರ್ಥಿ ದೆಸೆಯಲ್ಲಿಯೇ ಕರಾಟೆ ಮತ್ತು ನೃತ್ಯದಲ್ಲಿ ನೈಪುಣ್ಯತೆಯನ್ನು ಹೊಂದಿದ್ದರು. ಹೀಗಾಗಿಯೇ ಮೂರು ವರ್ಷಗಳ ಕಾಲ ಯುವ ದಸರಾ ಉತ್ಸವದಲ್ಲಿ ಪಾಲ್ಗೊಂಡಿದ್ದರು.


ಮದುವೆಯಾಗಿ ಬಂದ ನಂತರ ತಾಲ್ಲೂಕಿನ ಮಾರುತಿ ಡಿ.ಎಡ್ ಕಾಲೇಜಿನಲ್ಲಿ ಡಿ.ಎಡ್ ಪದವಿ ಪಡೆಯುವ ಸಮಯದಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ಅಲ್ಲಿಂದ ಆರಂಭವಾಗಿ ಜಾನಪದ ಲೋಕದಲ್ಲಿ ಹಲವಾರು ಜಾನಪದ ಕಲೆಗಳನ್ನು ಕಲಿತು, ನಾಟಕಗಳನ್ನು ಅಭ್ಯಸಿಸಿ, ರಾಜ್ಯದ ಅನೇಕ ಕಡೆ ಪ್ರದರ್ಶನ ನೀಡಿದ್ದಾರೆ. ಒಟ್ಟಾರೆ ರಾಮನಗರ ಜಿಲ್ಲೆಯಲ್ಲೇ ಪ್ರಪ್ರಥಮವಾಗಿ ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪಡೆದ ಮಹಿಳೆಯಾಗಿ, ರಾಮನಗರ ಬಿಜಿಎಸ್ ವರ್ಲ್ಡ್ ಸ್ಕೂಲ್‍ನಲ್ಲಿ ಕರಾಟೆ ಶಿಕ್ಷಕಿಯಾಗಿ ಹಾಗೂ ಗಂಡು ವೇಷದಾರಿಯ ಕಲಾವಿದೆಯಾಗಿ ನೆನಪಿನಲ್ಲಿ ಉಳಿಯುವಂತಹ ಅಭಿನಯವನ್ನು ನೀಡಿದ್ದಾರೆ.


ರಾಮನಗರ ಜಿಲ್ಲೆಯಲ್ಲಿ ಗಂಡು ಕಲಾ ಪ್ರದರ್ಶನಗಳಾದ ತಮಟೆ, ನಗಾರಿ, ಪಟಕುಣಿತ ಮತ್ತು ಡೊಳ್ಳು ಕುಣಿತ ಪ್ರದರ್ಶಿಸಿದ ಮೊದಲ ಮಹಿಳಾ ಪ್ರದರ್ಶಕಿ. ಬಯಲು ಯಕ್ಷಗಾನ ನಾಟಕದ ಗಂಡು ಪಾತ್ರಧಾರಿಯಾಗಿ ಹಲವು ಜಿಲ್ಲೆಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಹಾಲಿ ಕರ್ನಾಟಕ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಹಿ.ಶಿ ರಾಮಚಂದ್ರೇಗೌಡರು ಮತ್ತು ಭೈರನಹಳ್ಳಿ ಶಿವರಾಮು ರವರ ಸಾರಥ್ಯದಲ್ಲಿ ಕರಿಭಂಟನ ಕಾಳಗ ಮತ್ತು ಕಾಡು ಸಿದ್ದಯ್ಯನ ಕಥೆ ನಾಟಕಗಳಲ್ಲಿ ಮುಖ್ಯ ಪಾತ್ರಧಾರಿಣಿಯಾಗಿ ಹಾವೇರಿ, ಹಾಸನ. ಮಂಡ್ಯ, ರಾಮನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ತಂಡದೊಂದಿಗೆ ಪ್ರದರ್ಶನ ನೀಡಿದ್ದಾರೆ


ಡಾ.ಎಂ ಭೈರೇಗೌಡ ಸಾರಥ್ಯದಲ್ಲಿ ಕಿಲಾಡಿ ದಾಸಯ್ಯ ನಾಟಕದಲ್ಲಿ ಮುಖ್ಯ ಪಾತ್ರಧಾರಿ ದಾಸಯ್ಯನಾಗಿ, ಮಹದೇಶ್ವರ ಸ್ವಾಮಿ ಕುರಿತ ಎರಡು ವಿಡಿಯೋ ಧ್ವನಿ ಸುರುಳಿಗಳಲ್ಲಿ ನಟೆಯಾಗಿ. ಸಿನಿಮಾ ನಿರ್ದೇಶಕ ಅರುಣ್ ರವರ ನಿರ್ದೇಶನದಲ್ಲಿ ಧರಣಿ ಎಂಬ ಸಾಕ್ಷ್ಯಚಿತ್ರ (ಇನ್ನೂ ಬಿಡುಗಡೆ ಆಗಿಲ್ಲ) ದಲ್ಲಿ ನಾಯಕಿಯಾಗಿ ನಟನೆ ಮಾಡಿದ್ದಾರೆ. ನಗರದಲ್ಲಿ ಮಹಿಳೆಯರೇ ಸೇರಿ ಕುರುಕ್ಷೇತ್ರ ನಾಟಕವೊಂದನ್ನು ಪ್ರದರ್ಶನ ಮಾಡಲು ಸಜ್ಜಾಗಿದ್ದು ಇವರು 'ಶಕುನಿ' ಪಾತ್ರಧಾರಿಯಾಗಿದ್ದಾರೆ.


ಮನೆಗೆ ಬಂದು ತಮಟೆಯನ್ನು ಕಲಿಯುವ ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಉಚಿತವಾಗಿ ತಮಟೆ ವಾದನವನ್ನು ಕಲಿಸುತ್ತಿದ್ದಾರೆ. ಅರಳಾಳುಸಂದ್ರ ಗ್ರಾಮದಲ್ಲಿ ೬ ತಿಂಗಳುಗಳ ಕಾಲ ಉಚಿತವಾಗಿ ೨೦ ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಿದ್ದಾರೆ. ತಾಲ್ಲೂಕು ಆಡಳಿತ ಸೇರಿದಂತೆ ಹಲವಾರು ಸಂಘಸಂಸ್ಥೆಗಳು ಇವರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಿದ್ದಾರೆ. ಇಂತಹ ಮಹಿಳಾ ಸಾಧಕಿಯನ್ನು ರಾಜ್ಯ ಮಟ್ಟದ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ಜಾನಪದ ಪರಿಷತ್ತು ಸೇರಿದಂತೆ ರಾಮನಗರ ಜಿಲ್ಲೆಯ ಅನೇಕ ಜಾನಪದ ಕಲಾವಿದರು ಮತ್ತು ಗಣ್ಯರು ಅಭಿನಂದನೆ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑