Tel: 7676775624 | Mail: info@yellowandred.in

Language: EN KAN

    Follow us :


ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

Posted date: 17 Jan, 2024

Powered by:     Yellow and Red

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ, ನಾಗರೀಕರಿಗೆ ಕೈಬರಹದ ಸಹಿಯುಳ್ಳ ನಮೂನೆ-3ನ್ನು ನೀಡುತ್ತಿದ್ದನ್ನು ಸಂಪೂರ್ಣವಾಗಿ ನಿಷೇಧಿಸಿ, ಇ-ಆಸ್ತಿ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿ, ಡಿಜಿಟಲ್ ಸಹಿಯುಳ್ಳ ದಾಖಲೀಕರಣ ಮತ್ತು ಗಣಕೀಕರಣ ಕಾರ್ಯವನ್ನು ನಮೂನೆ-3ನ್ನು ದಿನಾಂಕ:20.04.2016 ರಿಂದ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಲಾಗಿರುತ್ತದೆ.


ಆಸ್ತಿಯ ಮಾಲೀಕರು ತಮ್ಮ ಆಸ್ತಿಗೆ ಸಂಬಂಧಿಸಿದಂತೆ, ತೆರಿಗೆಯನ್ನು ಇನ್ನು ಮುಂದೆ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ದತಿಯಡಿ ಆನ್‌ಲೈನ್ ಮುಖಾಂತರ ಲೆಕ್ಕಾಚಾರ ಮಾಡಿ ಚಲನ್ ಜನರೇಟ್ ಮಾಡಿ ಬ್ಯಾಂಕ್ ಕೌಂಟರ್/ಆನ್‌ಲೈನ್ ಪಾವತಿ (ಬಿಬಿಪಿಎಸ್) ಮುಖಾಂತರ ಆಸ್ತಿ ತೆರಿಗೆ ಅಥವಾ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಎಲ್ಲಾ ರೀತಿಯ ತೆರಿಗೆಗಳನ್ನು ಪಾವತಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.


ಪೌರಾಡಳಿತ ನಿರ್ದೇಶನಾಲಯವು ಆಸ್ತಿಯ ಮಾಲೀಕರಿಗೆ ಸುಲಲಿತವಾಗಿ ಆಸ್ತಿಯ ನಮೂನೆ-03 ರ ನಕಲು ಪ್ರತಿಯನ್ನು ಪಡೆಯಲು 07 ದಿನಗಳು, ಆಸ್ತಿ ಹಕ್ಕು ವರ್ಗಾವಣೆ ಮಾಡಲು 45 ದಿನಗಳು, ಹೊಸದಾಗಿ ಆಸ್ತಿಗೆ ಪಿಐಡಿ ನೀಡಲು 07 ದಿನಗಳ ಕಾಲ ನಿಗದಿಪಡಿಸಿದೆ ಹಾಗೂ ನಿಗದಿಪಡಿಸಿದ ದಿನಾಂಕದೊಳಗೆ ವಿಳಂಬಕ್ಕೆ ಆಸ್ಪದ ನೀಡದೇ ಆಸ್ತಿಯ ಮಾಲೀಕರಿಗೆ ನಮೂನೆ-03 ನ್ನು ವಿತರಿಸಲು ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.


ಆಸ್ತಿಯ ಮಾಲೀಕರು ಪ್ರತಿನಿತ್ಯ ಸ್ಥಳೀಯ ಸಂಸ್ಥೆಗಳ ಕಛೇರಿಗೆ ಅಲೆಯುವುದನ್ನು ತಪ್ಪಿಸಲು ಪೌರಾಡಳಿತ ನಿರ್ದೇಶನಾಲಯವು ಆಸ್ತಿ ಮಾಲೀಕರು ತಮ್ಮ ಆಸ್ತಿಗೆ ಸಂಬಂಧಿಸಿದಂತೆ ಅಥವಾ ಸ್ಥಳೀಯ ಸಂಸ್ಥೆಗಳ ಇನ್ನಿತರ ಸೇವೆಗಳನ್ನು ಆನ್‌ಲೈನ್ ಮೂಲಕವೇ ಪಡೆಯಬಹುದಾಗಿದ್ದು, ಎಲ್ಲಾ ಪ್ರಜ್ಞಾವಂತ ನಾಗರೀಕರು/ ಸಾರ್ವಜನಿಕರು ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ವೆಬ್‌ಸೈಟ್‌ಗಳಲ್ಲಿ ತಮಗೆ ಬೇಕಾಗಿರುವ ಸೇವೆಗಳನ್ನು ಆಯ್ಕೆಮಾಡಿ ಆನ್-ಲೈನ್ ತಂತ್ರಾಂಶ ದಲ್ಲಿಯೇ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.


ಎರಡು ವಿಧಗಳಲ್ಲಿ ತಮ್ಮ ಆಸ್ತಿಗಳ ನಮೂನೆ-03 ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.


ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಹಿತದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಕಚೇರಿಯಲ್ಲಿ ಜನಹಿತ ಕೇಂದ್ರವನ್ನು ತೆರೆಯಲಾಗಿದ್ದು, ಆಸ್ತಿ ಮಾಲೀಕರು ತಮ್ಮ ಅರ್ಜಿಗಳನ್ನು ಸದರಿ ಕೇಂದ್ರದಲ್ಲಿ ಡಾಟಾ ಎಂಟ್ರಿ ಅಪರೇಟರ್ ಮುಖಾಂತರ ಸಲ್ಲಿಸಬಹುದಾಗಿರುತ್ತದೆ. https://eaasthi.karnataka.gov.in ಅಥವಾ  ಆಸ್ತಿಯ ಮಾಲೀಕರು ತಾವಿದ್ದ ಸ್ಥಳದಿಂದಲೇ ತಮ್ಮ ಹೆಸರಿನಲ್ಲಿ ಆನ್‌ಲೈನ್ ತಂತ್ರಾಂಶದಲ್ಲಿ ರಿಜಿಸ್ಟರ್ ಆಗಿ ರಾಜ್ಯದ ಯಾವುದೇ ನಗರ ಸ್ಥಳೀಯ ಸಂಸ್ಥೆಗಳಿಗೆ ಆನ್‌ಲೈನ್ ತಂತ್ರಾಂಶದಲ್ಲಿ ಅರ್ಜಿಯನ್ನು ದಾಖಲಿಸಿ, ಆನ್‌ಲೈನ್ ಸೇವೆಯನ್ನು ಪಡೆಯಬಹುದಾಗಿರುತ್ತದೆ. ಸಾರ್ವಜನಿಕರು ಕೈಬರಹದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ಥಳೀಯ ಸಂಸ್ಥೆಗಳಿಗೆ ಸಲ್ಲಿಸಬಾರದು ಮತ್ತು ಪಡೆಯಬಾರದು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರೂ ಸಹ ಕೈಬರದ ಅರ್ಜಿಗಳನ್ನು ಮತ್ತು ಸ್ವೀಕೃತಿಯನ್ನು ಸಾರ್ವಜನಿಕರಿಗೆ ನೀಡಬಾರದು. ಒಂದು ವೇಳೆ ಸಲ್ಲಿಸಿದ್ದಲ್ಲಿ, ಜಿಲ್ಲಾಡಳಿತ ಹೊಣೆಯಾಗುವುದಿಲ್ಲ.


ಈ ಸೂಚನೆಗಳನ್ನು ಪಾಲಿಸಿಕೊಂಡು ಆನ್‌ಲೈನ್ ತಂತ್ರಾಂಶದಲ್ಲಿ ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಈ ವಿಷಯಗಳಿಗೆ ಸಂಬಂಧಿಸಿದಂತೆ ಚಲನ-ವಲನದ ಮಾಹಿತಿ ಮತ್ತು ಅನುಮೋದಿಸಿದ ಮಾಹಿತಿ ಹಾಗೂ ಆನ್‌ಲೈನ್ ತಂತ್ರಾಂಶದಲ್ಲಿಯೇ ನಮೂನೆ-03ಅನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.


ಸೇವೆಗಳ ಹೆಸರು ಹಾಗೂ ಆನ್‌ಲೈನ್ ಸೇವೆಯ ಲಿಂಕ್‌ಗಳ ವಿವರ: ಉದ್ದಿಮೆ ಪರವಾನಗಿಗೆ ವೆಬ್‌ಸೈಟ್ ವಿವರ https://www.mrc.gov.in/TradeLicense/login, ಕಟ್ಟಡ ಪರವಾನಗಿಗೆ ವೆಬ್‌ಸೈಟ್ ವಿವರ https://bhu-yojane.karnataka.gov.in/Nirmana2/Login, ಸ್ವೀಕೃತಿ (ತೆರಿಗೆ ಪಾವತಿ) http://www.mrc.gov.in/epay/welcome.htm ಆಸ್ತಿ ತೆರಿಗೆ ಲೆಕ್ಕಚಾರ (ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳು http://channapatnacity.mrc.gov.in/ptaxcalculator/ptaxSearch.htm, http://ramanagaracity.mrc.gov.in/ptaxcalculator/PtaxSearch.htm, http://kanakapuracity.mrc.gov.in/ptaxcalculator/ptaxSearch.htm, http://magaditown.mrc.gov.in/ptaxcalculator/ptaxSearch.htm, http://bidaditown.mrc.gov.in/ptaxcalculator/ptaxSearch.htm, http://harohallitown.mrc.gov.in/

/ptaxSearch.htm ಅನ್ನು ಸಂಪರ್ಕಿಸಿ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑