ಚನ್ನಪಟ್ಟಣದ ಗೊಂಬೆಗೆ ಜಾಗತಿಕ ಮಾನ್ಯತೆಗೆ ಮೈಸೂರು ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಸಂಶೋಧನೆ

ಮೈಸೂರು:ಅಕ್ಟೋಬರ್ 20: ಇತಿಹಾಸ ಹಾಗೂ ಪುರಾಣ ಪ್ರಸಿದ್ಧ, ಸಾಂಪ್ರದಾಯಿಕ ಚನ್ನಪಟ್ಟಣದ ಗೊಂಬೆಗಳಿಗೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ ದೊರೆಯುವಂತೆ ಮಾಡುವುದು ನನ್ನ ಕನಸಾಗಿದೆ. ಅದಕ್ಕಾಗಿ ಸಂಶೋಧನೆ ನಡೆಸುತ್ತಿದ್ದೇನೆ ಎಂದು ಮೈಸೂರು ರಾಜವಂಶದ ಸೊಸೆ ತ್ರಿಷಿಕಾ ಕುಮಾರಿ ಒಡೆಯರ್ ಹೇಳಿದ್ದಾರೆ.
ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್ ವತಿಯಿಂದ ಬುಧವಾರ ನಗರದ ಖಾಸಗಿ ಹೋಟೆಲ್ನಲ್ಲಿ ಬಿಗ್ ಟೆಕ್ ಶೋನ 2ನೇ ಆವೃತ್ತಿ ಅಂಗವಾಗಿ 'ಉದ್ಯೋಗ ಸ್ಥಳದಲ್ಲಿ ಮಹಿಳೆ' ಕುರಿತ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ತ್ರಿಷಿಕಾ ಕುಮಾರಿ, "ನಾನು ಒಮ್ಮೆ ಮೈಸೂರು-ಬೆಂಗಳೂರು ರಸ್ತೆಯಲ್ಲಿ ಪ್ರಯಾಣಿಸುವಾಗ ಚನ್ನಪಟ್ಟಣದ ಗೊಂಬೆ ನೋಡಿದೆ. ನನ್ನ ಮಗನಿಗೂ ಇದು ಇಷ್ಟ. ಬಣ್ಣ ತಯಾರಿಸಲು ಸ್ಥಳೀಯರ ಕೌಶಲ್ಯ ಹಾಗೂ ಇಷ್ಟು ಮೌಲ್ಯಯುತ ಗೊಂಬೆಗಳು ವಿದೇಶಗಳಲ್ಲಿಯೂ ದೊರಕುವುದಿಲ್ಲ ಎಂಬುದು ತಿಳಿಯಿತು. ಈ ರೀತಿಯ ಕಲೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಏನಾದರೂ ಮಾಡಬೇಕು ಎನಿಸಿತು. ಹೀಗಾಗಿ ಈ ಕೌಶಲ್ಯ ಉಳಿಸುವ ನಿಟ್ಟಿನಲ್ಲಿ ಏನು ಮಾಡಬಹುದು ಎಂಬುದರ ಬಗ್ಗೆ ಸಂಶೋಧನೆ ಮಾಡುತ್ತಿದ್ದೇನೆ," ಎಂದರು.
"ಸಾಂಸ್ಕೃತಿಕ ನಗರಿ ಮೈಸೂರು ಐಟಿ ಹಬ್ ಆಗಿರುವ ಬೆಂಗಳೂರಿನ ಸನಿಹದಲ್ಲಿದೆ. ಹೀಗಾಗಿ ನಗರನ್ನು ಐಟಿ ಸೆಕ್ಯೂರಿಟಿ ಹಬ್ ಆಗಿ ಬೆಳೆಸಬೇಕೆಂಬುದು ನಮ್ಮ ಬಯಕೆಯಾಗಿದೆ. ಜೊತೆಗೆ ಮೈಸೂರಿನಲ್ಲಿ ಉದ್ಯಮಶೀಲತೆ ಬೆಳೆಸಬೇಕೆಂಬುದು ನಮ್ಮ ಗುರಿಯಾಗಿತ್ತು. ಇದಕ್ಕಾಗಿ ನಾನು ಹಾಗೂ ಯದುವೀರ್ ಸೇರಿ ಒಂದು ಫೌಂಡೇಶನ್ ಆರಂಭಿಸಿದೆವು. ನಾನು ಟೆಕ್ನಾಲಜಿ ಹಿನ್ನೆಲೆಯಿಂದ ಬಂದವಳಲ್ಲ. ಇಲ್ಲಿ ಸಾಕಷ್ಟು ಸವಾಲುಗಳಿದ್ದು, ಇದನ್ನು ನಿರ್ವಹಿಸಲು ಸಜ್ಜಾಗಿದ್ದೇವೆ. ಮೈಸೂರಿನಿಂದ ಈ ಕಾರ್ಯ ಮಾಡುತ್ತಿರುವ ಬಗ್ಗೆ ಹೆಮ್ಮೆ ಇದೆ,'' ಎಂದು ಸಂತಸ ವ್ಯಕ್ತಪಡಿಸಿದರು.
ಈ ಹಿಂದಿನ ಮಹಾರಾಣಿಯರ ಕೊಡುಗೆ ಬಗ್ಗೆ ಮಾತನಾಡಿದ ತ್ರಿಷಿಕಾ ಕುಮಾರಿ,"ಟಿಪ್ಪು ಸುಲ್ತಾನ್ ತನ್ನ ಕುಟುಂಬವನ್ನೇ ಸೆರೆಯಲ್ಲಿರಿಸಿದ್ದಾಗ, ರಾಣಿ ಲಕ್ಷ್ಮಮ್ಮಣ್ಣಿ ಅವರು 3ನೇ ಕೃಷ್ಣರಾಜ ಒಡೆಯರ್ ಅವರಿಗೆ ಸಂಸ್ಥಾನವನ್ನು ವಾಪಸ್ ತಂದುಕೊಡುವ ಕಾರ್ಯದಲ್ಲಿ ಮುಖ್ಯಪಾತ್ರ ವಹಿಸಿದರು. ಮಾತ್ರವಲ್ಲದೇ ಇಡೀ ರಾಜ್ಯವು ಎಂಡಮಿಕ್ ಪರಿಸ್ಥಿತಿ ಎದುರಿಸಬೇಕಾದಾಗ ಇವರು ಜನರಿಗೆ ಲಸಿಕೆ ತೆಗೆದುಕೊಳ್ಳುವಂತೆ ಪ್ರೇರೇಪಿಸಿದರು. ಲಿಂಗರಾಜಮ್ಮಣ್ಣಿ, ದೇವರಾಜಮ್ಮಣ್ಣಿ ಅವರು ಲಿಂಗಾಂಬುಧಿ ಕೆರೆಯಂತಹ ದೊಡ್ಡ ಕೆರೆಗಳನ್ನು ನಿರ್ಮಿಸಿದ್ದಲ್ಲದೇ ಕರೆಗಳ ಜೀರ್ಣೋದ್ಧಾರಕ್ಕೆ ಒತ್ತು ನೀಡಿದರು. ಹೀಗೆ ಮೈಸೂರು ಸಂಸ್ಥಾನದಲ್ಲಿ ಮಹಿಳಾ ನಾಯಕತ್ವವನ್ನು ಗುರುತಿಸಬಹುದಾಗಿದೆ,'' ಎಂದು ಸ್ಮರಿಸಿದರು.
ಬಿಗ್ ಟೆಕ್ ಶೋನ 2ನೇ ಆವೃತ್ತಿ ಅಂಗವಾಗಿ 'ಉದ್ಯೋಗ ಸ್ಥಳದಲ್ಲಿ ಮಹಿಳೆ' ಕುರಿತ ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್ (ಕೆಡಿಇಎಂ) ಸಿಇಓ ಸಂಜೀವ್ ಗುಪ್ತಾ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »

ಅರ್ಹತೆ ಮೇರೆಗೆ ಮತ್ತೀಕೆರೆ ಜಯರಾಮ ರವರನ್ನು ಮೇಲ್ಮನೆಗೆ ಕಳುಹಿಸಲು ಸರ್ವಪ್ರಯತ್ನ. ಶಾಸಕ ಅನ್ನದಾನಿ
ಮಂಡ್ಯ: 06/2022. ಭಾನುವಾರ. ಮೇಲ್ಮನೆ ಸದಸ್ಯರನ್ನಾಗಿ ನೇಮಕ ಮಾಡಲು ಯಾರು ಹಣ ತೆಗೆದುಕೊಳ್ಳುತ್ತಾರೋ ನನಗೆ ಗೊತ್ತಿಲ್ಲ. ಆದರೆ ಮುಂದಿನ ದಿನಗಳಲ್

ನವೆಂಬರ್ 11 ರಂದು ಮೊದಲ ರೈಲು ಕೇವಲ 15 ಸಾವಿರ ರೂಪಾಯಿಗಳಲ್ಲಿ 8 ದಿನಗಳ ಕಾಶಿ ದರ್ಶನ ಪ್ಯಾಕೇಜ್ ಟೂರ್
ಬೆಂಗಳೂರು: ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ಪ್ಯಾಕೇಜ್ ಟೂರ್ ಗೆ ಬುಕ್

ಆಧಾರ್ ನೋಂದಣಿಗಾಗಿ ಭಾನುವಾರವೂ ಕೆಲಸ ನಿರ್ವಹಿಸಲಿವೆ ಅಟಲ್ ಜೀ ಕೇಂದ್ರಗಳು
ಕರ್ನಾಟಕ ಸರ್ಕಾರದ ನಿರ್ದೇಶನಾಲಯ ಅಟಲ್ ಜೀ ಜನಸ್ನೇಹಿ ಕೇಂದ್ರ ಬೆಂಗಳೂರು ರವರು ರಾಜ್ಯದ ಎಲ್ಲಾ ತಾಲೂಕು ಕಚೇರಿಗಳಲ್ಲಿನ ಅಟಲ್ ಜೀ ಜನಸ್ನೇಹಿ ಕೇಂದ್ರ ಗಳಲ್ಲಿ ಪ್ರತಿ ಭಾನುವಾರಗಳಂದು ಆಧಾರ್ ನೋಂದಣಿ ಕಾ

ಪೃಕೃತಿ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ಬಂದ ಇಂಗ್ಲೆಂಡ್ ರಾಣಿ ಕ್ಯಾಮಿಲ್ಲಾ
ಬೆಂಗಳೂರು, ಅ.24: ಪೃಕೃತಿ ಚಿಕಿತ್ಸೆ ಪಡೆಯಲು ಇಂಗ್ಲೆಂಡ್ ರಾಣಿ(ಕ್ವೀನ್ ಕಾನ್ಸಾರ್ಟ್) ಕ್ಯಾಮಿಲ್ಲಾ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.
<

ರಾಜಕೀಯಕ್ಕೆ ಮರಳುವ ಬಗ್ಗೆ ಸೂಕ್ತ ಸಮಯದಲ್ಲಿ ತಿಳಿಸುವೆ: ಮಾಜಿ ಸಚಿವ ಜನಾರ್ದನರೆಡ್ಡಿ
ಬಳ್ಳಾರಿ; ಅ.24: ರಾಜಕೀಯಕ್ಕೆ ವಾಪಸ್ ಆಗುವ ಮತ್ತು 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಈಗಲೇ ನಾನೇನೂ ಹೇಳಲಾ

ಚನ್ನಪಟ್ಟಣದ ಗೊಂಬೆಗೆ ಜಾಗತಿಕ ಮಾನ್ಯತೆಗೆ ಮೈಸೂರು ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಸಂಶೋಧನೆ
ಮೈಸೂರು:ಅಕ್ಟೋಬರ್ 20: ಇತಿಹಾಸ ಹಾಗೂ ಪುರಾಣ ಪ್ರಸಿದ್ಧ, ಸಾಂಪ್ರದಾಯಿಕ ಚನ್ನಪಟ್ಟಣದ ಗೊಂಬೆಗಳಿಗೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ ದೊರೆಯುವಂತೆ ಮಾಡುವುದು ನನ್ನ ಕನಸಾಗಿದೆ. ಅದಕ್ಕಾಗಿ ಸಂಶೋಧನೆ ನಡೆಸ

ಒಕ್ಕಲಿಗರು ಕುರಿಗಳಲ್ಲ, ನಾಡನ್ನಾಳಿದ ಸಿಂಹಗಳು : ಡಾ. ನಿರ್ಮಲಾನಂದನಾಥ ಸ್ವಾಮೀಜಿ
ಮೈಸೂರು: ಇತಿಹಾಸ ಮತ್ತು ಪುರಾಣಗಳನ್ನೇ ತೆಗೆದುಕೊಳ್ಳಿ, ತಲಕಾಡು ಗಂಗರು– ನಾವುಗಳೆಲ್ಲರೂ ಒಂದೇ. ಉಪ ಪಂಗಡಗಳ ಭೇದ ತೊರೆದು, ಆಡಳಿತದಲ್ಲಿ ಮುಂದೆ

ನಾಡದೇವಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಮೈಸೂರು, ಅ.೫: ನಾಡಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ಬುಧವಾರ ವಿಜೃಂಭಣೆಯಿಂದ ನೆರವೇರಿದ್ದು ಸಮಯ ಸಂಜೆ 05:37ಕ್ಕೆ

ನಾಡ ಅಧಿದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾ 2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಂದ ವಿದ್ಯುಕ್ತ ಚಾಲನೆ
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನ

ಮಂಗಳೂರಿನಲ್ಲಿ ನಾಪತ್ತೆಯಾದ ಮೂವರು ವಿದ್ಯಾರ್ಥಿನಿಯರು ಚೆನ್ನೈ ನಲ್ಲಿ ಪತ್ತೆ- ಇವರ ನಾಪತ್ತೆಗೆ ಕಾರಣ ಗೊತ್ತೇ!
ಮಂಗಳೂರು:ಮಂಗಳೂರಿನಲ್ಲಿ ಸೆಪ್ಟೆಂಬರ್ 21 ರಂದು ನಾಪತ್ತೆಯಾಗಿದ್ದ ಮೂವರು ಕಾಲೇಜು ವಿದ್ಯಾರ್ಥಿನಿಯರು ಚೆನ್ನೈ ನಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಮೇರಿ ಹಿಲ್ ನ ವಿಕಾಸ ಕಾಲೇಜಿನ ಮೂವರು ಪಿ ಯು ಸಿ ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ
ಪ್ರತಿಕ್ರಿಯೆಗಳು