Tel: 7676775624 | Mail: info@yellowandred.in

Language: EN KAN

    Follow us :


ಜಾನಪದಕ್ಕೆ ಆದಿ ಅಂತ್ಯವಿಲ್ಲ, ಪದ್ಮಶ್ರೀ ಪುರಸ್ಕೃತ ಸೋಮಣ್ಣ

Posted date: 10 Feb, 2024

Powered by:     Yellow and Red

ಜಾನಪದಕ್ಕೆ ಆದಿ ಅಂತ್ಯವಿಲ್ಲ, ಪದ್ಮಶ್ರೀ ಪುರಸ್ಕೃತ ಸೋಮಣ್ಣ

ರಾಮನಗರ : ಫೆ 10: ಜಾನಪದಕ್ಕೆ ಆದಿ ಅಂತ್ಯವಿಲ್ಲ, ಇಂತಹ ಸಂದರ್ಭದಲ್ಲೇ ಜಾನಪದ ಜನ್ಮತಾಳಿತು. ಮುಂದೆ ಇಂತಹ ಸಮಯದಲ್ಲಿ ಅಂತ್ಯವಾಗುತ್ತದೆ ಎಂದು ಯಾರು ಹೇಳಲು ಸಾಧ್ಯವಾಗುವುದಿಲ್ಲ. ಜನರಿಂದ ಜನರಿಗೆ ತಲುಪಿದ್ದೇ ಜಾನಪದ.  ಈ ಜಾನಪದವು ಇತ್ತಿಚೆಗೆ ನವೀಕರಣಗೊಳ್ಳುತ್ತಿದೆ. ನವೀಕರಣದಲ್ಲಿ ಮೂಲ ಜಾನಪದವನ್ನು ಆಧುನಿಕರು ಬಿಟ್ಟುಕೊಡಬಾರದು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸೋಮಣ್ಣ ಅಭಿಪ್ರಾಯಪಟ್ಟರು.

ಅವರು ಶನಿವಾರ ಕರ್ನಾಟಕ ಜಾನಪದ ಪರಿಷತ್ ರಾಮನಗರದ ಜಾನಪದ ಲೋಕದಲ್ಲಿ ಹಮ್ಮಿಕೊಂಡಿದ್ದ ಲೋಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಜಾನಪದ ಎಂಬುದು ವಿಶ್ವದಾದ್ಯಂತ ಇದೆ. ಆದರೇ ಭಾರತೀಯ ಜಾನಪದ ಅದರಲ್ಲೂ ಕರ್ನಾಟಕ ಜಾನಪದಕ್ಕೆ ಅದರದೇ ಆದ ವಿಶೇಷಣಗಳಿವೆ. ಇಂದಿನ ಪೀಳಿಗೆ ಮೂಲ ಜಾನಪದವನ್ನು ಕಲಿಯಲು ಆಸಕ್ತಿ ತೋರಿಸುತ್ತಿಲ್ಲ. ಮೂಲ ಜಾನಪದದ ಸೊಗಡು ಇಂದಿನ ಆಧುನಿಕ ಜಾನಪದದಲ್ಲಿ ಕಳೆದುಹೋಗುತ್ತಿದೆ. ಇನ್ನೂ ಮುಂದಿನ ಪೀಳಿಗೆಗೆ ಜಾನಪದವನ್ನು ಉಳಿಸುವುದು ಕಷ್ಟವಾಗುತ್ತದೆ. ಕೇವಲ ಗ್ರಂಥಗಳಲ್ಲಿ ಹಾಗೂ ಜಾನಪದ ಲೋಕದಂತಹ ಕಾರ್ಯಗಾರಗಳಲ್ಲಿ ಹುಡುಕಬೇಕಾಗುತ್ತದೆ. ಹಾಗಾಗಿ ಜಾನಪದವನ್ನು ಜನರುಗಳೇ ಬಾಯಿಂದ  ಬಾಯಿಗೆ ಹರಡುವ ಹಾಗೂ ಕೆಲ ಪುರಾತನ ವಸ್ತುಗಳನ್ನು ಶೇಖರಿಸುವ ಜೊತೆಗೆ ಬಳಸುತ್ತಿದ್ದರೆ ಜಾನಪದವು ಅಂತ್ಯವಿಲ್ಲದಂತಾಗುತ್ತದೆ ಎಂದರು.




ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಹಿ ಶಿ ರಾಮಚಂದ್ರೇಗೌಡ ಮಾತನಾಡಿ ಹೆಚ್. ಎಲ್. ನಾಗೇಗೌಡರು    ಐ.ಎ.ಎಸ್. ಅಧಿಕಾರಿಯಾಗಿದ್ದರೂ ಕೂಡ ಜಾನಪದವನ್ನು ಉಳಿಸುವ ಸಲುವಾಗಿ ಶ್ರಮವಹಿಸಿ ಜಾನಪದ ಲೋಕವನ್ನು ಕಟ್ಟಿದ್ದಾರೆ. ಈ ಜಾನಪದ ಲೋಕ ಇಲ್ಲವೆಂದಿದ್ದರೆ ಮುಂದಿನ ಪೀಳಿಗೆ ಇರಲಿ, ಇಂದಿನ ಪೀಳಿಗೆಗೆ ಉಳಿಯುವುದು ಕಷ್ಟವಾಗುತ್ತಿತ್ತು. ಆ ಹಿನ್ನೆಲೆಯಲ್ಲಿ ಪುರಾತನ, ಇತಿಹಾಸ ಬಹಳ ಮುಖ್ಯವಾಗಿ ಈ ದೇಶದ ಬೆನ್ನೆಲುಬಾದ ರೈತರು ಬಳಸುತ್ತಿದ್ದ ವಸ್ತುಗಳನ್ನು ಸಂಗ್ರಹಿಸುವ ಮೂಲಕ ಹಾಗೂ ಕಥೆಗಳು, ಪದಗಳು ಇನ್ನಿತರೆ ಕಲಾ ಪ್ರಕಾರಗಳನ್ನು ಹಿಡಿದಿಟ್ಟಿದ್ದಾರೆ. ಅದನ್ನು ನಾವು ಮುಂದುವರೆಸಿಕೊಂಡು ಹೋಗುತ್ತಿದ್ದು, ಮುಂದಿನವರು ಸಹ ಉಳಿಸಿಕೊಳ್ಳಬೇಕು ಎಂದರು.


ಇದೇ ಸಂದರ್ಭದಲ್ಲಿ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವದಲ್ಲಿ ಕರಕುಶಲ ಮೇಳ, ಕುಂಬಾರಿಕೆ, ಬುಟ್ಟಿ ಹೆಣೆಯುವಿಕೆ, ಲಂಬಾಣಿ ಕಸೂತಿ, ಕೌದಿ ಕಲೆ, ಚರ್ಮ ವಾದ್ಯ ತಯಾರಿಕೆ, ತಂತಿ ವಾದ್ಯ ತಯಾರಿಕೆ ಹೀಗೆ 20 ಕ್ಕೂ ಹೆಚ್ಚಿನ ಮಳಿಗೆಗಳನ್ನು ತೆರೆಯಲಾಗಿತ್ತು, ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ಏರ್ಪಡಿಸಿದ್ದರು. ಲೋಕೋತ್ಸವದಲ್ಲಿ ನಿವೃತ್ತ ಐಎಎಸ್ ಅಧಿಕಾರಿಗಳಾದ ಐ.ಎಂ ವಿಠ್ಠಲಮೂರ್ತಿ ಯವರು, ಎಚ್.ಎಲ್ ನಾಗೇಗೌಡರ ಪರಿಶ್ರಮವನ್ನು, ಮತ್ತು ನಾಡಿಗೆ ಜಾನಪದ ಲೋಕದ ಕೊಡುಗೆಗಳನ್ನು ಮನಸಾರೆ ಕಂಡು ಮೆಚ್ಚುಗೆ ವ್ಯಕ್ತ ಪಡಿಸಿದರು.

 

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್, ಕಾರ್ಯಾಧ್ಯಕ್ಷರಾದ ಪ್ರೊ. ಹಿ. ಚಿ.ಬೋರಲಿಂಗಯ್ಯ, ದಿವ್ಯಸಾನಿದ್ಯವನ್ನು ಅನ್ನದಾನೇಶ್ವರನಾಥ ಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು. ಮ್ಯಾನೇಜಿಂಗ್ ಟ್ರಸ್ಟಿಗಳಾದ ಆದಿತ್ಯ ನಂಜರಾಜ್ ವಂದನೆಗಳನ್ನು ಸಲ್ಲಿಸಿದರು. 30 ಕ್ಕೂ ಹೆಚ್ಚಿನ ಕಲಾತಂಡಗಳು ವೈವಿಧ್ಯ ಕಲೆಯನ್ನು ಪ್ರಸ್ತುತ ಪಡಿಸಿದರು. ಪ್ರವಾಸಿಗರು ಈ ಎಲ್ಲಾ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು. ಕರ್ನಾಟಕ ಜಾನಪದ ಪರಿಷತ್ತಿನ ಡಾ. ನಂದಕುಮಾರ್ ಹೆಗಡೆ,  ಡಾ. ರವಿಕುಮಾರ ಯು. ಎಂ. ಸರಸವಾಣಿ, ಪ್ರದೀಪ್ ಮತ್ತಿತ್ತರರು ಉಪಸ್ಥಿತರಿದ್ದರು.


ಗೊ. ರಾ. ಶ್ರೀನಿವಾಸ

ಮೊ. ನಂ - 9845856139

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑