ಬಾದಾಮಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ?
ಬೆಂಗಳೂರು: ಬಾಗಲಕೋಟೆಯ ಬಾದಾಮಿಯಿಂದ ಸ್ಪರ್ಧಿಸುವ ಕುರಿತು ಕ್ಷೇತ್ರದ ಮುಖಂಡರ ಜತೆ ಸಿಎಂ ನಡೆಸುತ್ತಿದ್ದ ಸಭೆ ಅಂತ್ಯಗೊಂಡಿದೆ. ಬಾದಾಮಿಯಿಂದಲೂ ತಾವು ಸ್ಪರ್ಧಿಸುತ್ತಿದ್ದು, ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರು ಮುಖಂಡರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರತಿಕೂಲ ಪರಿಸ್ಥಿತಿ ಗೋಚರಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಕ್ಷೇತ್ರದಿಂದಲೂ ಸ್ಪರ್ಧಿಸುವುದಾಗಿ ಸುದ್ದಿಗಳು ಹರಿದಾಡುತ್ತಿದ್ದವು. ಸೂಕ್ತ ಕ್ಷೇತ್ರ ಹುಡುಕುತ್ತಿದ್ದ ಸಿದ್ದರಾಮಯ್ಯ ಬಾದಾಮಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಆದರೆ, ಅಲ್ಲಿನ ಸ್ಥಳೀಯ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಸಿದ್ದರಾಮಯ್ಯ ಅವರ ನಡೆಯಿಂದ ಬೇಸರಗೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಿ.ಬಿ.ಚಿಮ್ಮನಕಟ್ಟಿ ಅವರೂ ಸೇರಿದಂತೆ ಕ್ಷೇತ್ರದ ಮುಖಂಡರು, ಕುರುಬ ಸಮುದಾಯದ ಮುಖಂಡರ ಜತೆ ಸಿದ್ದರಾಮಯ್ಯ ಅವರು ಇಂದು ಚರ್ಚೆ ನಡೆಸಿದ್ದರು. ಅಂತಿಮವಾಗಿ ಚಿಮ್ಮನಕಟ್ಟಿಯವರನ್ನು ಮನವೊಲಿಸಿರುವ ಸಿಎಂ ಬಾದಾಮಿಯಲ್ಲಿ ತಮ್ಮ ಗೆಲುವಿಗೆ ಶ್ರಮಿಸುವಂತೆ ಸೂಚಿಸಿದ್ದಾರೆ. ಚಿಮ್ಮನಕಟ್ಟಿ ಅವರೂ ತಾವೇ ಮುಂದೆ ನಿಂತು ಕೆಲಸ ಮಾಡುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಏ.೨೪ರಂದು ನಾಮಪತ್ರ ಸಲ್ಲಿಸುತ್ತೇನೆ. ನನ್ನ ಮೇಲೆ ೨೨೪ ಕ್ಷೇತ್ರದ ಜವಾಬ್ದಾರಿ ಇದೆ. ಹೀಗಾಗಿ ನಾನು ಹೆಚ್ಚು ಕ್ಷೇತ್ರಕ್ಕೆ ಬರಲು ಸಾಧ್ಯವಿಲ್ಲ. ನೀವೇ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ಗೆಲ್ಲಿಸಿಕೊಂಡು ಬರಬೇಕು. ನನ್ನ ಸೋಲಿಸಲು ಬಿಜೆಪಿ, ಜೆಡಿಎಸ್ ಒಬ್ಬನೇ ಅಭ್ಯರ್ಥಿ ಕಣಕ್ಕಿಳಿಸಬಹುದು. ಎಚ್ಚರದಿಂದ ಕೆಲಸ ಮಾಡಿ. ಸಚಿವ ಎಚ್.ಎಂ ರೇವಣ್ಣ ಚುನಾವಣೆ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು