Tel: 7676775624 | Mail: info@yellowandred.in

Language: EN KAN

    Follow us :


ಶಾಸ್ತ್ರೀಯ ಸಂಗೀತವನ್ನು ಸಾಧನೆ ಮಾಡುವ ವಿದ್ಯಾರ್ಥಿಗಳು ಜಗತ್ತಿಗೇ ಪ್ರಭೆ ಚೆಲ್ಲುವ ಪ್ರಖರ ಸೂರ್ಯನಂತೆ

Posted date: 30 Jan, 2018

Powered by:     Yellow and Red

ಶಾಸ್ತ್ರೀಯ ಸಂಗೀತವನ್ನು ಸಾಧನೆ ಮಾಡುವ ವಿದ್ಯಾರ್ಥಿಗಳು ಜಗತ್ತಿಗೇ ಪ್ರಭೆ ಚೆಲ್ಲುವ ಪ್ರಖರ ಸೂರ್ಯನಂತೆ

ಬೆಂಗಳೂರು : ನಗರದ ರಾಜರಾಜೇಶ್ವರಿನಗರದಲ್ಲಿರುವ ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿಯ 2017-18ನೆಯ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವ ಕಳೆದ ಭಾನುವಾರ ಜನವರಿ ಇಪ್ಪತ್ತೊಂದರಂದು ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್ ಟೌನ್ ಶಿಪ್ ನ ಗುಡ್ಡದ ಮೇಲಿರುವ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ  ಕಾಲೇಜಿನ ಒಳಾಂಗಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಜಯನಗರದ ಹೆಚ್.ಎನ್ ರಾಘವೇಂದ್ರ ರಾವ್ ಗುರೂಜಿ ಶಾಸ್ತ್ರೀಯ ಸಂಗೀತವನ್ನು ಸಾಧನೆ ಮಾಡುವ ವಿದ್ಯಾರ್ಥಿಗಳು ತಾರೆಗಳಿಗೂ ಮಿಗಿಲಾಗಿರುವ ಪ್ರಖರವಾದ ಪ್ರಭೆಯನ್ನು ಜಗತ್ತಿಗೆ ಚೆಲ್ಲುವ ಸೂರ್ಯನಂತೆ, ಇಂದು ಈ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡುತ್ತಿಲ್ಲ, ಬದಲಿಗೆ ತಾವು ಕಲಿತ ಸಂಗೀತ ವಿದ್ಯೆಯನ್ನು ಗುರು ಹಿರಿಯರಿಗೆ ಸಮರ್ಪಣೆ ಮಾಡುತ್ತಿದ್ದಾರೆ ಎಂದರು. 

ಉದ್ಯೋಗ ನಿಮಿತ್ತ ವೃತ್ತಿಪರ ಶಿಕ್ಷಣಕ್ಕೇ ಮುಗಿ ಬೀಳುತ್ತಿರುವ ಇಂತಹ ಸ್ಪರ್ಧಾತ್ಮಕ ಯುಗದಲ್ಲೂ ಶಾಸ್ತ್ರೀಯ ಸಂಗೀತಕ್ಕೆ ತಮ್ಮ ಮಕ್ಕಳನ್ನು ಸೇರಿಸಿ ಅದರಲ್ಲಿ ಅವರ ಪಾಂಡಿತ್ಯವನ್ನು ನೋಡುವ ಆಸೆಯಿದೆ ಎನ್ನುವಂತಹ ಮನೋಭಾವದ ಪಾಲಕರಿಗೊಂದು ದೊಡ್ಡ ಸಲಾಮ್ ಎಂದ ಖ್ಯಾತ ಹಿನ್ನೆಲೆ ಗಾಯಕಿ ಸುಮಾ ಎಲ್.ಎನ್ ಶಾಸ್ತ್ರಿ ಸಂಗೀತವೆಂಬುದು ಅಂತರಾತ್ಮಕ್ಕೆ ಸಂಬಂಧಿಸಿದ ಒಂದು ಘನವಿದ್ಯೆ, ಕೇವಲ "ಸ" ಎಂಬ ಒಂದೇ ಒಂದು ಸ್ವರವನ್ನು ಶೃತಿಗೆ ಸೇರಿಸಿ ಹಾಡಿದರೆ ಆಗುವ ಆನಂದಾನುಭೂತಿಯೇ ಬೇರೆ ಎಂದು ವಿದ್ಯಾರ್ಥಿಗಳಿಗೆ ಸಂಗೀತದ ಮಹತ್ವವನ್ನು ಹೇಳಿದರು. ಶಾಸ್ತ್ರೀಯ ಸಂಗೀತದ ನಿರಂತರ ಸಾಧನೆಯಿಂದ ಮಾತ್ರ ಒಬ್ಬ ಒಳ್ಳೆಯ ಗಾಯಕರಾಗಿ ಹೊರಹೊಮ್ಮಬಹುದು. ನಿತ್ಯ ಮುಂಜಾನೆ ಸಂಗೀತದ ಬಾಲಪಾಠಗಳನ್ನು ಅಕಾರ ಮಾಡುವ ಮೂಲಕ ಶೃತಿ ಶುದ್ಧಿ, ಸ್ವರ ಶುದ್ಧಿ ಹಾಗೂ ಭಾವ ಶುದ್ಧಿಯನ್ನು ಹೊಂದಿ ಜಗತ್ತಿನ ಯಾವ ಪ್ರಕಾರದ ಸಂಗೀತವನ್ನೂ ಲೀಲಾಜಾಲವಾಗಿ ಹಾಡಬಹುದು ಎಂದು ಸಂಗೀತ ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆಯ ಯುವನಾಯಕ ಧರ್ಮರಾಜಗೌಡ ಮಾತನಾಡಿ ಕನ್ನಡದ ಪ್ರತಿಭೆಗಳು ನಮ್ಮ ಕನ್ನಡತನವನ್ನು ಉಳಿಸಿಕೊಂಡು ವಿಶ್ವದೆಲ್ಲೆಡೆ ಕೀರ್ತಿ ಪಡೆದರೆ ಮಾತ್ರ ಅದು ಅರ್ಥಪೂರ್ಣ ಎಂದರು. 

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಉದ್ಯಮಿ ಲಹರಿ ವೇಲು ಹಲವು ವಾಹಿನಿಗಳ ರಿಯಾಲಿಟಿ ಶೋಗಳಿಂದ ಅತಿ ಶೀಘ್ರದಲ್ಲಿ ಕೀರ್ತಿ ಪಡೆಯುವ ಕೆಲವು ಮಕ್ಕಳು ಶಾಸ್ತ್ರೀಯ ಸಂಗೀತದ ಸಾಧನೆಯಿಂದ ವಿಮುಖರಾಗುತ್ತಿದ್ದಾರೆ. ಅಂತಹ ಮಕ್ಕಳು ಒಳ್ಳೆಯ ಕಲಾವಿದರಾಗಿ ಬೆಳೆಯಲು ಸಾಧ್ಯವಿಲ್ಲ. ಈ ಬಗ್ಗೆ ಪಾಲಕರೂ ಗಮನ ಹರಿಸಬೇಕಾಗಿದೆ ಎಂದರು. 

ಈ ಸಂದರ್ಭದಲ್ಲಿ ಸಂಸ್ಥೆಗೆ ಬೆನ್ನೆಲುಬಾಗಿ ನಿಂತಿರುವ ರಾಮಚಂದ್ರ ಮಾರ್ಕಾಂಡೆ, ನೀಲಕಂಠ ನಾಯ್ಡು ಹಾಗೂ ಕೇಶವ ಮೂರ್ತಿ ದಂಪತಿಗಳನ್ನು ಸನ್ಮಾನಿಸಲಾಯಿತು. ಚಂದನ ಮುರಳಿ, ಚಿರಾಗ್ ಕಾರ್ತೀಕ್ ಹಾಗೂ ಅನಘ ವಿ.ಭಟ್ ಈ ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.ಮದ್ಯಾಹ್ನ 2 ರಿಂದ ರಾತ್ರಿ 9 ಗಂಟೆಯವರೆಗೆ ಅಂದರೆ ಸುಮಾರು ಏಳು ಗಂಟೆಗಳ ಕಾಲ ವಿದ್ಯಾಲಯದ ಹಲವು ವಿದ್ಯಾರ್ಥಿಗಳ ಸಂಗೀತ ಕಛೇರಿಗಳು ನಡೆಯಿತು. ವಿದ್ವಾನ್ ಬಳ್ಳಾರಿ ಸುರೇಶ್ ಕೆ. ಪಿಟೀಲಿನಲ್ಲಿ ಹಾಗೂ ವಿದ್ವಾನ್ ಜಿ.ಎಲ್ ರಮೇಶ್ ಮೃದಂಗದಲ್ಲಿ ಸಹಕರಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
 
ವಿದ್ಯಾಲಯದ ಸಂಸ್ಥಾಪಕ ಹಾಗೂ ಪ್ರಾಂಶುಪಾಲಕ ಚಿನ್ಮಯ ಎಂ.ರಾವ್, ಅಧ್ಯಕ್ಷರಾದ ಲೆಕ್ಕ ಪರಿಶೋಧಕ ಸಿ.ಎ ಭರತ್ ರಾವ್ ಕೆ.ಎಸ್, ಅಕಾಡೆಮಿಯ ಗೌರವ ಸಲಹೆಗಾರರಾದ ಉದ್ಯಮಿ ರಾಜೇಶ್ ಬಾಬು, ಎಲ್.ಎನ್ ಶರ್ಮಾ, ವಿದ್ಯಾರ್ಥಿಗಳು, ಅವರ ಪಾಲಕರು ಹಾಗೂ ಸಂಗೀತಾಭಿಮಾನಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ದೀಪಕ್ ಸಾಗರ್ ಹಾಗೂ ಕವಿತಾ ಪರ್ವತಿಕರ್ ನಿರೂಪಣೆ ಮಾಡಿದರು.  

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑