ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ

ಚನ್ನಪಟ್ಟಣ: ನಗರದ ಸಾತನೂರು ಮುಖ್ಯ ರಸ್ತೆಯ ಸುಣ್ಣಘಟ್ಟ ಗ್ರಾಮದ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಟೆಂಪೋ (ಕೆಎ೧೩-ಸಿ ೦೬೨೯) ಹಿಂದೂ ಜಾಗರಣ ವೇದಿಕೆಯ ಸುರೇಶ್ ಮತ್ತು ತಂಡ ಹಾಗೂ ಸುಣ್ಣಘಟ್ಟ ಗ್ರಾಮಸ್ಥರು ಸೇರಿ ಹಿಡಿದು ಪೋಲಿಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ.
ಹಾಸನ ನೋಂದಣಿಯಿರುವ ಟೆಂಫೊದಲ್ಲಿ ಚನ್ನರಾಯಪಟ್ಟಣ ಮೂಲದ ನಾಲ್ಕು ಮಂದಿ ಖದೀಮರ ತಂಡವು ಆನೇಕಲ್ ಮಾರ್ಗವಾಗಿ ಕೇರಳದ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುವ ಕೆಲಸ ನಿರ್ವಹಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಗ್ರಾಮಸ್ಥರು ಟೆಂಪೋವನ್ನು ಅಡ್ಡಗಟ್ಟುತ್ತಿದ್ದಂತೆ ಇಬ್ಬರು ಪರಾರಿಯಾಗಿದ್ದು ಇಬ್ಬರನ್ನು ದಸ್ತಗಿರಿ ಮಾಡಿ ಎಫ್ ಐ ಆರ್ ದಾಖಲಿಸಲಾಗಿದೆ.
ಟೆಂಪೋ ಚಾಲಕ ಆಯಾಜ್ ಹಾಗೂ ಮತ್ತೊಬ್ಬ ಪರಾರಿಯಾಗಿದ್ದು, ಅಲೀಂ ಮತ್ತು ಅಬ್ಬಾಸ್ ಸಿಕ್ಕಿಬಿದ್ದಿದ್ದು ಕಳೆದ ಹಲವಾರು ತಿಂಗಳಿಂದ ಸಾತನೂರು-ಹಲಗೂರು ಮಾರ್ಗವಾಗಿ ಹಸುಗಳನ್ನು ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುವ ಕೆಲಸ ಮಾಡುತ್ತಿದ್ದೆವು ಎಂದು ಒಪ್ಪಿಕೊಂಡಿದ್ದಾರೆ.
ಚನ್ನಪಟ್ಟಣ ಮುಖ್ಯಮಂತ್ರಿ ಗಳ ಕ್ಷೇತ್ರ ಅಷ್ಟೇ ಅಲ್ಲದೆ ಪ್ರಭಾವಿ ರಾಜಕಾರಣಿಯಾದ ಡಿ ಕೆ ಶಿವಕುಮಾರ್ ಸಹ ಇದೇ ಜಿಲ್ಲೆಯವರಾಗಿದ್ದು ಇಂತಹ ಕ್ಷೇತ್ರದಲ್ಲೇ ಈ ರೀತಿಯ ಅಕ್ರಮಗಳು ನಡೆಯುತ್ತಿರುವುದು ರಾಜ್ಯದಲ್ಲಿ ನ ವ್ಯವಸ್ಥೆ ಹೇಗಿದೆ ಎಂಬುದನ್ನು ಊಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ವೇದಿಕೆಯ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಎರಡು ವಾಹನಗಳಲ್ಲಿ ಕ್ರಮವಾಗಿ ತುಂಬಿಸಿ ಕುಂಬಳಗೂಡಿನ ಬಳಿಯ ಗೋ ಶಾಲೆಯಲ್ಲಿ ಬಿಡಲಾಗಿದ್ದು ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೋಲಿಸರು ತನಿಖೆ ಕೈಗೊಂಡಿದ್ದಾರೆ.
ಈ ಸಮಯದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಗಜೇಂದ್ರ ಸಿಂಗ್, ವಕೀಲ ಸುರೇಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಆನಂದಸ್ವಾಮಿ, ಧನಂಜಯ, ಸತೀಶ್, ಚಂದ್ರಶೇಖರ, ಮಹಾಲಿಂಗ, ಸಂಜಯಕುಮಾರ್, ಯೋಗಾನಂದ, ಶ್ರೀಹರಿ,ಚಂದ್ರಶೇಖರ ರೆಡ್ಡಿ, ಆನಂದಕುಮಾರ್,ನಾಗೇಂದ್ರ ಸೇರಿದಂತೆ ಅನೇಕರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »

ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕ

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್ ಅಧಿಕಾರಿ ಮತ್ತು ತಂಡ
ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರ

ಕರಡಿಗಳ ದಾಳಿ ಗಂಭೀರ ಗಾಯ
ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.
ತೆಂಗಿ

ಗಾಂಧಿ ಭವನದ ಆಸ್ತಿ, ಆದಾಯ ಯಾರ ವಶದಲ್ಲಿದೆ ? ಸತ್ಯಾಗ್ರಹ ದಲ್ಲಿ ಸು ತ ರಾಮೇಗೌಡ ಆಗ್ರಹ
ಚನ್ನಪಟ್ಟಣ: ನಗರದ ಹೃದಯ ಭಾಗ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ
ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ
ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ
ಪ್ರತಿಕ್ರಿಯೆಗಳು