ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್ಳಿಹೈದನ ತಾಂತ್ರಿಕಗಾಥೆ ಕೃತಿ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಇಂಜಿಯರ್, ತಾಲ್ಲೂಕಿನ ಮಂಗಾಡಹಳ್ಳಿಯ ಎಂ.ಎಲ್ ಮಾದಯ್ಯ ಅವರು ತಿಳಿಸಿದರು.
ಅವರು ಇಂದು ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಈ ಪುಸ್ತಕ ಬಿಡುಗಡೆ ಸಮಾರಂಭದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ: ನಿರ್ಮಲಾನಂದನಾಥ ಸ್ವಾಮೀಜಿ ಯವರು ವಹಿಸುವರು. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಕೃತಿಯನ್ನು ಲೋಕಾರ್ಪಣೆ ಮಾಡುವರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರದ ಶಾಸಕರಾದ ಎಚ್.ಡಿ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್, ಮಾಗಡಿ ಶಾಸಕ ಎ.ಮಂಜುನಾಥ್, ನಾಡೋಜ ಡಾ.ವೂಡೇ ಕೃಷ್ಣ ಭಾಗವಹಿಸುವರು, ಕೃತಿಯನ್ನು ಕುರಿತು ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಬೈರಮಂಗಲ ರಾಮೇಗೌಡ ಮಾತನಾಡುವರು ಎಂದರು.
*ಕೃತಿಗೆ ಪ್ರೇರಣೆ:*
ನಾನು 20 ತಿಂಗಳು ಕೊರೊನಾ ದಿಗ್ಬಂಧನಕ್ಕೆ ಒಳಗಾಗಿದ್ದೆ. ಆ ಸಂದರ್ಭದಲ್ಲಿ ಏನಾದರೂ ಬರೆಯಬೇಕು ಎನ್ನಿಸಿತು. ನಿವೃತ್ತಿಯ ನಂತರ ಕೆಲವರು ನಿಮ್ಮ ಸಾಧನೆ ಸಾಕಷ್ಟಿದೆ ಸಮುದಾಯದ ಒಬ್ಬರು ಕ್ರಮಿಸಿದ ದಾರಿ ಗಮನಾರ್ಹ, ಹಾಗಾಗಿ ನಿಮ್ಮ ಬದುಕು ಬೇರೆಯವರಿಗೆ ಪ್ರೇರಣೆಯಾಗಬಹುದು ಹಾಗಾಗಿ ಬರೆಯಿರಿ, ಬರೆಯಲಾಗದಿದ್ದರೆ ಬೇರೆಯವರಿಗೆ ಹೇಳಿ ಬರೆಸಿ ಎಂದರು, ಅದಕ್ಕಾಗಿ ನಾನೇ ಯಾಕೆ ಪ್ರಯತ್ನಿಸಬಾರದು ಎಂದು ಕೃತಿ ರಚನೆಗೆ ಮುಂದಾದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಮತ್ತೊಂದು ಪ್ರಶ್ನೆಗೆ ಇದು ಗ್ರಂಥವಾಗಿ ಹೊರಹೊಮ್ಮಬೇಕು ಎಂದುಕೊಂಡಿದ್ದೆ, ಈ ಮಧ್ಯೆ ಕೆಲವು ಸ್ನೇಹಿತರು ಅದಕ್ಕೆ ಬೇರೆಯವರ ಅಭಿಪ್ರಾಯವನ್ನೂ ಸೇರಿಸಿ ಎಂದು ಕೊಟ್ಟ ಸಲಹೆ ಮೇರೆಗೆ ಇದನ್ನು ಪರಿವರ್ತಿಸಿಕೊಳ್ಳ ಲಾಗಿದೆ ಎಂದರು.
ಆನ್ಲೈನ್ನಲ್ಲಿ ಕೆಲವರು ಬಿಡುಗಡೆ ಮಾಡುವುದನ್ನು ಗಮನಿಸಿದೆ, ಮನೆಯವರು ಆನ್ಲೈನ್ನಲ್ಲೇ ಬಿಡುಗಡೆ ಮಾಡಿ ಎಂದು ಸಲಹೆ ನೀಡಿದರು. ಆದರೆ ನನ್ನ ಜನರ ಮಧ್ಯೆ, ಗುರುಹಿರಿಯರ ಮಧ್ಯೆ ಬಿಡುಗಡೆ ಮಾಡುವುದು ಸೂಕ್ತ ಎಂದು ಈ ರೂಪದಲ್ಲಿ ಪ್ರಕಟಿಸುತ್ತಿದ್ದೇನೆ ಎಂದು ಅವರು ವಿವರಿಸಿದರು.
*ಕಿರು ಪರಿಚಯ*
ಮಂಗಾಡಹಳ್ಳಿಯ ಲೇಟ್ ಲಿಂಗೇಗೌಡರ ಮಗನಾದ ಇವರು, ಈಗ ಬೆಂಗಳೂರು ವಾಸಿ. ಮುಖ್ಯ ಇಂಜಿಯರ್ ಆಗಿ ನಿವೃತ್ತರಾಗಿದ್ದು, ಇವರಿಗೆ ಫೆಲೋಇನ್ ಇನ್ಸ್ಟಿ ಟೂಟ್ ಆಫ್ ಇಂಜಿನಿಯರ್ಸ್, ಫೆಲೋ ಇನ್ ಇನ್ಸ್ಟಿಟೂಟ್ ಆಫ್ ವ್ಯಾಲ್ಯೂರ್ಸ್ ಫೆಲೊ ಇನ್ ಕೌನ್ಸಿಲ್ ಆಫ್ ಆರ್ಬಿಟ್ ರೇರ್ಸ್, ಫೆಲೋ ಇನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಿಕಲ್ ಆರ್ಬಿ ಟ್ರೇಟ್ಸ್ ಚಾರ್ಟರ್ ಇಂಜಿಯರ್ ಆಗಿ ಸೇವೆ ಸಲ್ಲಿಸಿದ್ದಾರೆ.
ಮಂಗಾಡಹಳ್ಳಿಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ, ಕೋಡಂಬಹಳ್ಳಿ ಯಲ್ಲಿ ಮಾಧ್ಯಮಿಕ ಶಾಲೆ, ಚನ್ನಪಟ್ಟಣ ಬಾಲಕರ ಪ್ರೌಢಶಾಲೆ ಹಾಗೂ ಮಂಡ್ಯ ಮುನಿಸಿಪಲ್ ಹೈಸ್ಕೂಲ್ನಲ್ಲಿ ಪ್ರೌಢಶಾಲೆ ಮುಗಿಸಿ, ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯು ಹಾಗೂ ಬೆಂಗಳೂರಿನ ವಿಶ್ವೇಶ್ವರಯ್ಯ ಇಂಜಿಯರಿಂಗ್ ಕಾಲೇಜಿನಲ್ಲಿ 1966 ರಲ್ಲಿ ಬಿಇ ಮುಗಿಸಿ, ಇಂಜಿಯರ್ ಆಗಿ, ಬಡ್ತಿ ಹೊಂದುತ್ತಾ, 2001 ರಲ್ಲಿ ಮುಖ್ಯ ಇಂಜಿಯರ್ ಆಗಿ ನಿವೃತ್ತರಾಗಿದ್ದಾರೆ. ಈಗಲೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಗೋಷ್ಠಿಯಲ್ಲಿ ಬರಹಗಾರ ಡಾ.ಕೂಡ್ಲೂರು ವೆಂಕಟಪ್ಪ ಹಾಗೂ ಮಾದಯ್ಯನವರ ಸಹವರ್ತಿಯಾದ ರಂಗರಾಜು ಸಹ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು