ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ ಕೃತಿಯನ ಲೋಕಾರ್ಪಣೆ ಮಾಡಿದ ರಾಜ್ಯದ ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸಿ.ಎನ್ ಅಶ್ವತ್ಥ ನಾರಾಯಣ ರವರು, ಎಂ.ಎಲ್ ಮಾದಯ್ಯನವರ ಜೀವನ ನಮ್ಮಲ್ಲಿನ ಎಲ್ಲರಿಗೂ ಆದರ್ಶಣೀಯವಾದದು, ಅವರ ಮಾರ್ಗದಲ್ಲಿ ನಮ್ಮ ವಿದ್ಯಾವಂತ ಸಮೂಹ ಮುಂದುವರಿಯಬೇಕಾಗಿದೆ ಎಂದರು.
ಅಂದಿನ ಕಾಲದಲ್ಲಿ ಕುಗ್ರಾಮದಲ್ಲಿ ಹುಟ್ಟಿದ ವ್ಯಕ್ತಿ ಇಂಜಿಯರಿಂಗ್ ಪರೀಕ್ಷೆಯಲ್ಲಿ 8 ನೇ ರ್ಯಾಂಕ್ ಪಡೆದು, ಸಹಾಯಕ ಇಂಜಿಯರ್ ಆಗಿ, ತಮ್ಮ ಪ್ರತಿಭೆಯ ಪ್ರದರ್ಶನದ ಮೂಲಕ ರಾಜ್ಯದ ಮುಖ್ಯ ಇಂಜಿಯರ್ ಆಗಿ ಲೋಕೋಪಯೋಗಿ ಇಲಾಖೆಯಲ್ಲಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಈಗಲೂ ಸಹ ಅವರು ವಿವಿಧ ಸಂಸ್ಥೆಗಳಲ್ಲಿ ಸಲಹೆಗಾರರಾಗಿ ದುಡಿಯುತ್ತಾ ತಮ್ಮ ಕೀರ್ತಿಯನ್ನು ಮೆರೆದಿದ್ದಾರೆ ಎಂದರು.
ಇಂತಹವರ ರೀತಿಯಲ್ಲಿ ನಮ್ಮ ರಾಮನಗರ ಜಿಲ್ಲೆಯ ಅನೇಕ ಜನರು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ವಿಶ್ವ ಮಟ್ಟದಲ್ಲಿ ಬೆಳೆಯಬೇಕು ಎಂಬುದು ನನ್ನ ಬಯಕೆ. ಮನಸ್ಸಿದ್ದರೆ ಮಾರ್ಗ ಎಂಬುದು ಇವರಿಂದ ನಾವು ಕಲಿಯುವ ಪಾಠವಾಗಿದೆ. ಅದನ್ನು ಸಾಧಿಸಿ ತೋರಿಸುವ ಛಲ ನಮ್ಮ ಯುವಕರಲ್ಲಿ ಬರಲಿ ಎಂದು ಅವರು ಆಶಿಸಿ ಅವರ ಅನುಭವಗಳನ್ನು ಈ ಪುಸ್ತಕದಲ್ಲಿ ಬರೆದಿಟ್ಟಿದ್ದಾರೆ, ಅದನ್ನು ಎಲ್ಲರೂ ಓದುವಂತಾಗಲಿ ಎಂದರು.
ದಿವ್ಯ ಸಾನಿಧ್ಯ ವಹಿಸಿದ್ದ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು, ಮಾದಯ್ಯನವರನ್ನು ನಾನು ಹತ್ತಿರದಿಂದ ಬಲ್ಲೆ, ಅವರ ಶಿಸ್ತು, ಸಂಯಮ ಹಾಗೂ ಪ್ರಾಮಾಣಿಕತೆಗಳು, ಅವರನ್ನು ನಾಲ್ಕು ಜನರು ಗುರುತಿಸುವಂತಾಗಿದೆ.ಅವರಂತೆ ಎಲ್ಲರೂ ಆದರೆ ಈಗಿನ ಘಾತುಕತನ ಕಡಿಮೆಯಾಗುತ್ತದೆ ಎಂದರು.
ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ನಾಡೋಜ, ಶಿಕ್ಷಣ ತಜ್ಞರಾದ ವೂಡೇ ಪಿ.ಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಅ.ದೇವೇಗೌಡ, ಮಾಜಿಮಂತ್ರಿ ಮುಳುಬಾಗಿಲು ಶಾಸಕ ಹೆಚ್. ನಾಗೇಶ್ ಅವರು ಉಪಸ್ಥಿತರಿದ್ದರು.
ವಿಶೇಷ ಆಹ್ವಾನಿತರಾಗಿ ಕುವೆಂಪು ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಡಾ.ಚಿದಾನಂದಗೌಡ, ಆರ್ಜಿಯುಹೆಚ್ಎಸ್ ವಿಶ್ರಾಂತ ನಿರ್ದೇಶಕರಾದ ಡಾ.ಕೆ.ಪಿ ಪುತ್ತೂರಾಯ, ವಿಧಾನ ಪರಿಷತ್ ಸದಸ್ಯ ಅ ದೇವೇಗೌಡ, ಪ್ರೊ ಕೆ ಮಲ್ಲಯ್ಯ ಪಾಲ್ಗೊಂಡಿದ್ದರು.
ಕೃತಿಯನ್ನು ಕುರಿತು ಮಾತನಾಡಿದ ಬಿಎಂ ಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಬೈರಮಂಗಲ ರಾಮೇಗೌಡ ಅವರು, ಈ ಕೃತಿಯಲ್ಲಿ ಮಾದಯ್ಯನವರ ನಿಜ ವಿಚಾರ ಲಹರಿ ಹರಿದು ಬಂದಿದೆ. ಈಗಿನ ಅಧಿಕಾರಿಗಳು ಅದನ್ನು ಓದುವ ಮೂಲಕ ಸಾರ್ಥಕ ಮಾಡಿಕೊಳ್ಳಬೇಕು ಎಂದರು.
ಸಂದರ್ಭದಲ್ಲಿ ಕೃತಿಕಾರ ಎಂ.ಎಲ್ ಮಾದಯ್ಯನವರು, ತಮ್ಮ ಪತ್ನಿ ಸಮೇತ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನ ಪ್ರಾಂಶುಪಾಲರಾದ ರಾಮಲಿಂಗಯ್ಯ, ಪ್ರೌಢ ಶಾಲಾವಿಭಾಗದ ಉಪ ಪ್ರಾಂಶುಪಾಲರಾದ ಪಾರ್ವತಮ್ಮ, ಹಿರಿಯ ವಿದ್ಯಾರ್ಥಿಸಂಘದ ಪ್ರಮುಖ ತಿಟ್ಟಮಾರನಹಳ್ಳಿ ಸಿದ್ದೇಗೌಡ ಅವರನ್ನು ಸನ್ಮಾನಿಸಲಾಯಿತು. ಹಾಗೂ ಎಸ್ಎಸ್ ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದರು.
ಬೆಂಗಳೂರಿನ ಎಸ್ಎಲ್ಎನ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಕೂಡ್ಲೂರು ವೆಂಕಟಪ್ಪ ನಿರೂಪಣೆ ಮಾಡಿದರು. ಡಾ.ಮಾದಯ್ಯ ಕುಟುಂಬದ ವರಾದ ರಾಘವೇಂದ್ರ ಅವರು ಸ್ವಾಗತ ಬಯಸಿದರು. ಕಾರ್ಯಕ್ರಮದಲ್ಲಿ ಅನೇಕ ನಿವೃತ್ತ ಅಧಿಕಾರಿಗಳು, ಸಾಹಿತ್ಯಾಸಕ್ತರು ಪಾಲ್ಗೊಂಡಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು