ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ ಯವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷೆ ಅನುಸೂಯಮ್ಮ ನವರು ಅಭಿಪ್ರಾಯ ಪಟ್ಟರು. ಅವರು ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು. ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಸ್ಪರ್ಧಿಯಾದ ಪಾರ್ವತೀಶ ಬಿಳಿದಾಳೆಯ ವರು, ನಾಡು ನುಡಿಯ ಪರ ಹೋರಾಟ, ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆ, ಕಾರ್ಮಿಕರು ಹಾಗೂ ದಲಿತಪರ ಸಂವೇದನೆಯನ್ನು ಹೊಂದಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ. ಇವರನ್ನು ಸಾಹಿತ್ಯ ಪರಿಷತ್ತಿಗೆ ಆಯ್ಕೆ ಮಾಡುವುದರಿಂದ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚುತ್ತದೆ ಎಂದು ಹೇಳಿದರು.
ಇತಿಹಾಸ ಉಪನ್ಯಾಸಕರಾದ ಡಾ.ಚಿಕ್ಕಚೆನ್ನಯ್ಯ ಮಾತನಾಡಿ, ಸಾಹಿತ್ಯಿಕ ಕ್ಷೇತ್ರದಲ್ಲಿ ಸಮಾನತೆಯ ಆಶಯ ಹಾಗೂ ಸಾಹಿತ್ಯಿಕ ಪ್ರೀತಿ ಬಹಳ ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಪಾರ್ವತೀಶ ಬಿಳಿದಾಳೆಯವರನ್ನು ಆಯ್ಕೆ ಮಾಡಿ, ರಾಜ್ಯ ಮಟ್ಟದಲ್ಲಿ ಕನ್ನಡದ ಅಸ್ಮಿತೆಯನ್ನು ಉಳಿಸಲು ಹೋರಾಟ ಮಾಡಿ, ಸಾಹಿತ್ಯ ಕೃತಿಗಳನ್ನು ಪ್ರಕಟಿಸಿರುವ ಇವರನ್ನು ಪರಿಷತ್ತಿಗೆ ಆಯ್ಕೆ ಮಾಡಲು ಭಿನ್ನವಿಸಿದರು.
ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಪಾರ್ವತೀಶ್ ಬಿಳಿದಾಳೆ ಮಾತನಾಡಿ, ನವೆಂಬರ್ ೨೧ರಂದು ನಡೆಯುವ ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡಿದರೆ, ಸಾಹಿತ್ಯ ಪರಿಷತ್ತಿನಲ್ಲಿ ಹೊಸ ಚಿಂತನೆಗಳು ಹಾಗೂ ಬದಲಾವಣೆ ಅಪೇಕ್ಷಿಸುವ ಸದಸ್ಯರ ಆಶಯವನ್ನು ಈಡೇರಿಸುವುದಾಗಿ, ಅಲ್ಲದೆ ರಚನಾತ್ಮಕ ಕೆಲಸ ಮಾಡುವುದಾಗಿ ಹೇಳಿದರು.
ನಾನು ಜಿಲ್ಲಾ ಕಸಾಪ ಅಧ್ಯಕ್ಷನಾಗಿ ಆಯ್ಕೆಯಾದರೆ ಹಣಕಾಸಿನ ವಿಚಾರದಲ್ಲಿ ಶಿಸ್ತು ಮತ್ತು ಪಾರದರ್ಶಕತೆಯನ್ನು ಕಾಪಾಡುವುದಾಗಿ, ಕನ್ನಡ ಕಟ್ಟುವ ಹಿತಾಸಕ್ತಿಗಳಿಗೆ ಸ್ಪಂದಿಸುತ್ತೇನೆ ಎಂದು ಹೇಳಿ ಜಿಲ್ಲಾ ಕಸಾಪವನ್ನು ಮಾದರಿ ಯಾಗಿಸುವ ತುಡಿತವಿದೆ, ಹಾಗಾಗಿ ನನ್ನನ್ನು ಆಯ್ಕೆ ಮಾಡಿ ಎಂದರು.
ಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಎನ್.ಸಿದ್ದೇಗೌಡ, ಬೆಂಗಳೂರು ವಿವಿ ಸಿಂಡಿ ಕೇಟ್ ಮಾಜಿ ಸದಸ್ಯ ಬಿ.ಶಿವಣ್ಣ, ರಾಮ ಮನೋಹರ ಲೋಹಿಯಾ ಅಧ್ಯಯನ ಕೇಂದ್ರದ ಶ್ರೀನಿವಾಸ್ ಕರಿಯಪ್ಪ, ಜನಮುಖಿ ಟ್ರಸ್ಟಿನ ಕುಂಬಾಪುರ ಬಾಬು ಸೇರಿದಂತೆ ಹಲವರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು