Tel: 7676775624 | Mail: info@yellowandred.in

Language: EN KAN

    Follow us :


ಭಾರತ ಆಹಾರ ನಿಗಮವು ರಾಷ್ಟ್ರಕ್ಕೆ ಆಹಾರ ಪೂರೈಸುವ ಜೀವನಾಡಿ

Posted date: 11 Apr, 2020

Powered by:     Yellow and Red

ಭಾರತ ಆಹಾರ ನಿಗಮವು ರಾಷ್ಟ್ರಕ್ಕೆ ಆಹಾರ ಪೂರೈಸುವ ಜೀವನಾಡಿ

ಭಾರತ ಆಹಾರ ನಿಗಮವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಯಡಿಯಲ್ಲಿ ರಾಜ್ಯಕ್ಕೆ ಅಗತ್ಯವಾದ ಆಹಾರ ಧಾನ್ಯಗಳನ್ನು ನಿರಂತರವಾಗಿ ಪೂರೈಸುವುದರ ಮೂಲಕ ಕರ್ನಾಟಕ ರಾಜ್ಯದಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತಿದೆ. ಇದರೊಂದಿಗೆ ಭಾರತ ಸರ್ಕಾರವು ಇತ್ತಿಚಿಗೆ ಘೋಷಿಸಿರುವ ಪ್ರಧಾನಮಂತ್ರಿಗಳ ಕಲ್ಯಾಣಯೋಜನೆ (PMGKAY) ಯಡಿಯಲ್ಲಿ ಏಪ್ರಿಲ್ ತಿಂಗಳಿನಿಂದ ಜೂನ್ ತಿಂಗಳವರೆಗೆ ಪ್ರತಿ ತಿಂಗಳು ೦೫ ಕಿಲೋ ಹೆಚ್ಚುವರಿ ಅಕ್ಕಿಯನ್ನು ರಾಜ್ಯದ ಸುಮಾರು ನಾಲ್ಕು ಕೋಟಿ ಫಲಾನುಭವಿಗಳಿಗೆ ಉಚಿತವಾಗಿ ನೀಡಲು ಅವಿರತವಾಗಿ ಶ್ರಮಿಸುತ್ತಿದೆ. ಹೆಚ್ಚುವರಿಯಾಗಿ, ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗಳನ್ನು ನೀಡಲಾಗಿದೆ, ಆದರೆ ಎನ್‌ಎಫ್‌ಎಸ್‌ಎ ವ್ಯಾಪ್ತಿಗೆ ಒಳಪಡದ ಫಲಾನುಭವಿಗಳಿಗೆ ಮೂರು ತಿಂಗಳವರೆಗೆ ಪ್ರತಿ ವ್ಯಕ್ತಿಗೆ ಇನ್ನೂ ೦೫ ಕಿಲೋ ಆಹಾರ ಧಾನ್ಯಗಳನ್ನು ನೀಡಲಾಗಿದೆ. ಆದ್ದರಿಂದ, ರಾಜ್ಯದ ಎಲ್ಲಾ ಕಾರ್ಡ್ ಹೊಂದಿರುವವರು ಅರ್ಹರಾಗಿರುತ್ತಾರೆ. ಈ ಮೂರು ತಿಂಗಳು ಹೆಚ್ಚುವರಿ ೦೫ ಕಿಲೋಗಳನ್ನು ಸ್ವೀಕರಿಸಬಹುದಾಗಿದೆ.


ಈ ಕಾರ್ಯ ನಿರ್ವಹಿಸುವುದಕ್ಕಾಗಿ, ಭಾರತ  ಆಹಾರ ನಿಗಮವು ರಾಜ್ಯಾದ್ಯಂತ ಹರಡಿರುವ ತನ್ನೆಲ್ಲಾ ೭೧ ಗೋದಾಮುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು ೩,೦೦೦ ಕಾರ್ಮಿಕ ಮತ್ತು ಇತರೆ ಸಾರಿಗೆ ವ್ಯವಸ್ಥೆ ಸಲಕರಣೆಗಳನ್ನು ಜಾಗೃತಗೊಳಿಸಿ ಬೇರೆ ರಾಜ್ಯಗಳಿಂದ ಅಗತ್ಯವಾದ ಅಕ್ಕಿ ಮತ್ತು ಗೋಧಿಯನ್ನು ರೈಲ್ವೆ ಗಾಡಿಗಳ ಮೂಲಕ ರಾಜ್ಯದ ಗೋದಾಮುಗಳಿಗೆ ಸಾಗಿಸುತ್ತಿದೆ. ಇದೇ ಸಮಯದಲ್ಲಿ ಕರ್ನಾಟಕಕ್ಕೆ ಹಂಚಿಕೆಯಾಗಿರುವ ಅಕ್ಕಿ ಮತ್ತು ಗೋಧಿಯನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿಯಲ್ಲಿ ಸರಬರಾಜು ಮಾಡಲಾಗುತ್ತಿದೆ. 


ಭಾರತ ಆಹಾರ ನಿಗಮದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಡಿ.ವಿ.ಪ್ರಸಾದರವರು ಹೇಳಿದ್ದೇನೆಂದರೆ “ಭಾರತ ಆಹಾರ ನಿಗಮವು ೫೩೮.೧೯ ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯವನ್ನು ಗೋದಾಮುಗಳಲ್ಲಿ ಸಂಗ್ರಹಿಸಿದೆ. ಇದರಲ್ಲಿ ೩೦೧.೭೩ ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮತ್ತು, ೨೩೬.೪೬ ಲಕ್ಷ ಮೆಟ್ರಿಕ್ ಟನ್ ಗೋಧಿ ಇದೆ . ಈ ಲಾಕ್ಡೌನ್ ಸಮಯದಲ್ಲಿ ಭಾರತ ಆಹಾರ ನಿಗಮವು ಗಣನೀಯ ಪ್ರಮಾಣದ  ೧೭.೫೬ ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮತ್ತು ೦೮.೪೬ ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ಸುಮಾರು ೨೬ ಎಲ್ಎಂಟಿ ಹೆಚ್ಚುವರಿ ಉತ್ಪಾದಿಸುವ ರಾಜ್ಯಗಳಿಂದ ಕೊರತೆಯಿರುವ ರಾಜ್ಯಗಳಿಗೆ ೯೨೯ ರೈಲ್ವೆ ಗಾಡಿಗಳಲ್ಲಿ ಸಾಗಾಟ ಮಾಡಲಾಗಿದೆ. 


ಈ ಲಾಕ್ ಡೌನ್ ಸಮಯದಲ್ಲಿ,  ಭಾರತ ಆಹಾರ ನಿಗಮವು ೪೯ ಲಕ್ಷ ಬ್ಯಾಗ್ (೫೦ ಕಿಲೋ) ಗಳನ್ನು ೮೭ ರೈಲ್ವೆ ಗಾಡಿಗಳಲ್ಲಿ ಕರ್ನಾಟಕಕ್ಕೆ ಸಾಗಿಸಲಾಗಿದೆ. ಮತ್ತು ೫೫ ಲಕ್ಷ ಅಕ್ಕಿ ಬ್ಯಾಗ್ ಗಳನ್ನು ಮತ್ತು ೦೯ ಲಕ್ಷ  ಗೋಧಿ ಬ್ಯಾಗ್ ಗಳನ್ನು ರಾಜ್ಯಕ್ಕೆ ಸಾರ್ವಜನಿಕ ವಿತರಣೆಗಾಗಿ ಪೂರೈಕೆ ಮಾಡಲಾಗಿದೆ. ಇನ್ನೂ ಭಾರತ ಆಹಾರ ನಿಗಮವು ೦೬.೦೪ ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯವನ್ನು ತನ್ನ ಗೋದಾಮುಗಳಲ್ಲಿ ಸಂಗ್ರಹಿಸಿಟ್ಟಿದೆ. 


ಮೇಲಾಗಿ ಭಾರತ ಆಹಾರ ನಿಗಮವು ಸರ್ಕಾರದ ಎಲ್ಲಾ ನಿಯಮಗಳನ್ನು ಮತ್ತು ಸೋಶಿಯಲ್ ಡಿಸ್ಟೆನ್ಸ್ ಅನ್ನು ಪಾಲಿಸಿಕೊಂಡು ರಾಜ್ಯಕ್ಕೆ ಅಗತ್ಯವಿರುವ ಆಹಾರ ಧಾನ್ಯಗಳನ್ನು ಪೂರೈಸಲಿದೆ.


ಭಾರತ ಸರ್ಕಾರವು ಮತ್ತೊಂದು ಫಲಾನುಭವಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದರ ಮೂಲಕ ಸರ್ಕಾರೇತರ ಸಂಘ ಸಂಸ್ಥೆಗಳು ಮತ್ತು ದತ್ತಿ ಸಂಸ್ಥೆಗಳು ಭಾರತದ ಆಹಾರ ನಿಗಮದ ಮೂಲಕ ಅಕ್ಕಿ ಪ್ರತಿ ಕೆಜಿಗೆ ರೂ ೨೨ ರೂಪಾಯಿ ಮತ್ತು ಗೋಧಿ ರೂ ೨೧ ಬೆಲೆಗೆ ಖರೀದಿಸಿ ವಲಸೆ ಕಾರ್ಮಿಕರಿಗೆ ಮತ್ತು ದುರ್ಬಲ ವರ್ಗದವರಿಗೆ  ಬಿಸಿಯೂಟ ವ್ಯವಸ್ಥೆ ಮಾಡಬಹುದಾಗಿದೆ. ಆದಕಾರಣ ಅವರು ಸಂಬಂಧಪಟ್ಟವರಿಗೆ ಇದರ ಸದುಪಯೋಗ ಪಡೆದುಕೊಳ್ಳಲು ಹತ್ತಿರದ ಜಿಲ್ಲಾ ಕಾರ್ಯಾಲಯಗಳಿಗೆ ಭೇಟಿಯಾಗಲು ಮನವಿ ಮಾಡಿದ್ದಾರೆ.  


ಈ ವ್ಯವಸ್ಥೆಯಿಂದ ಎಲ್ಲಾ ವರ್ಗದವರಿಗೂ ಆಹಾರ ತಲುಪುತ್ತಿದ್ದು ಯಾರೂ ಹಸಿವಿನಿಂದ ಬಳಲದಂತೆ  ಮಾಡಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in nation »

ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್

ರಾಮನಗರ, ಜೂ. 03:   ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ

ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ  ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ

ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ

ಡಿಸೆಂಬರ್‌ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ

ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ

ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ


ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ

ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು

ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.‌ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ

ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ  ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ

ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ

ಟೊಯೋಟಾ ಕಿರ್ಲೋಸ್ಕರ್  ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ

ಬೆಂಗಳೂರು:ಜ/06/21ಬುಧವಾರ. ಹೊಸ ಫಾರ್ಚೂನರ್ ತಂಡವು ಈಗ ಹೆಚ್ಚು ಶಕ್ತಿಶಾಲಿ ಡೀಸೆಲ್ ಸ್ವಯಂಚಾಲಿತ ಪ್ರಸರಣ ರೂಪಾಂತರಗಳನ್ನು ಮತ್ತು ವಿಶೇಷ ,

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ

ಚನ್ನಪಟ್ಟಣ:ಅ/05/20/ಸೋಮವಾರ.


ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ

ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ

Top Stories »  


Top ↑