ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು

ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರತವನ್ನು ಒಂದು ಹಿಡಿಯಾಗಿ ನೋಡುವ ಕನಸು ಅವರಲ್ಲಿತ್ತು. ಹಾಗಾಗಿಯೇ ಅವರು ಜಾತಿ, ಧರ್ಮ ಮೀರಿ ನಿಂತು ಎಲ್ಲರಿಗೂ ಒಬ್ಬ ನಾಯಕನಾಗಿ ಗೋಚರಿಸಿದ್ದರು. ಅಂತಹ ನಾಯಕ ನಮ್ಮ ಜಿಲ್ಲೆಯವರಾಗಿದ್ದು ನಮ್ಮೆಲ್ಲರ ಹೆಮ್ಮೆ ಎಂದು ಎಲ್ಐಸಿ ನಾಗರಾಜು ತಿಳಿಸಿದರು.
ಅವರು ಭಾನುವಾರ ಸುಣ್ಣಘಟ್ಟ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕೆಂಪೇಗೌಡರ 512 ನೇ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು.
ಕೆಂಪೇಗೌಡರನ್ನು ನಮ್ಮವರೇ ಒಳಸಂಚು ಮಾಡಿ ಕೊಲೆ ಮಾಡಿಸಿದರು. ಅವರು ಅಂದು ಕೊಲೆಯಾಗದೇ ಹೋಗಿದ್ದರೆ, ಬೆಂಗಳೂರಿನಂತಹ ಅನೇಕ ನಗರಗಳನ್ನು, ಧರ್ಮಾತೀತವಾಗಿ, ಜಾತ್ಯಾತೀತವಾಗಿ ಕಟ್ಟುತ್ತಿದ್ದರು. ನಾಡನ್ನಷ್ಟೇ ಅಲ್ಲದೆ ರಾಷ್ಟ್ರವನ್ನು ಸದೃಢವಾಗಿ ಕಟ್ಟುವ ಕನಸು ಅವರಲ್ಲಿತ್ತು. ಇಡೀ ಪ್ರಪಂಚವೇ ತಿರುಗಿ ನೋಡುವಂತಹ ಆಡಳಿತಗಾರರಾಗುವುದರಲ್ಲಿ ಅನುಮಾನವೇ ಇರಲಿಲ್ಲ. ಇಂತಹ ಕೆಂಪೇಗೌಡರು 500 ವರ್ಷಗಳ ಹಿಂದೆ ಇದ್ದರು ಎಂಬುದನ್ನು ನಾವು ನೆನಪಿಸಿಕೊಳ್ಳುತ್ತೇವೆ ಎಂದರೆ ಅದು ಅವರು ಮಾಡಿರುವ ಕೆಲಸ ಕಾರ್ಯಗಳೇ ಕಾರಣ ಎಂದು ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಉಮೇಶ್ ಅವರ ಪುತ್ರ ಕಾರ್ತಿಕ್ ಎಸ್ ಯು, ಅವರ ರಾಜ್ಯಮಟ್ಟದ 14 ವರ್ಷದೊಳಗಿನ ಕ್ರಿಕೆಟ್ ಟೀಂ ಗೆ ಆಯ್ಕೆಯಾಗಿದ್ದು, ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಿಂಗಮ್ಮ ಕುಮಾರ್, ಉಪಾಧ್ಯಕ್ಷೆ ರಶ್ಮಿ ವೆಂಕಟೇಶ್, ಸದಸ್ಯರಾದ ರಮೇಶ್, ಮಾಜಿ ಸದಸ್ಯರಾದ ಉದಯಕುಮಾರ್ ಹಾಗೂ ಗ್ರಾಮಸ್ಥರು ಹಾಜರಿದ್ದರು. ಈ ಕಾರ್ಯಕ್ರಮವನ್ನು ಯುವ ಮುಖಂಡರಾದ ಸುಕೇಶ್ ಅಶ್ವತ್ , ಸ್ಕೂಲ್ ಮಾಸ್ಟರ್ ನಾಗೇಶ್ ಯಶಸ್ವಿಯಾಗಿ ನಡೆಸಿಕೊಟ್ಟರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in nation »

ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ

ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ

ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ

ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ

ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ
ಪ್ರತಿಕ್ರಿಯೆಗಳು