ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ

ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡುವುದೇ ಒಂದು ಸೊಗಸು.
ಇನ್ನು ಖಗೋಳ ತಜ್ಞರಿಗಂತೂ ಗ್ರಹಣದ ಬಗೆಗೆ ಇನ್ನಷ್ಟು ಸಂಶೋಧನೆ, ಮಾಹಿತಿ ಕಲೆಹಾಕುವ ಕೌತುಕ. ಹಗಲಲ್ಲಿ ಒಮ್ಮೆಗೆ ಸೂರ್ಯನ ಬೆಳಕು ಮಸುಕಾದಾಗ, ವಾತಾವರಣ ತಂಪಾದಾಗ, ಸಂಜೆಯಾಯಿತೆಂದು ಭಾವಿಸಿ ಗೂಡು ಸೇರುವ ಪಕ್ಷಿಗಳು, ಗ್ರಹಣದ ಕೊನೆಗೆ ತೋರುವ ವಜ್ರದುಂಗುರ, ಭೂಮಿಯ ಮೇಲೆ ಸರ್ಪಗಳಂತೆ ಓಡುತ್ತಿರುವ ಸೌರ ಪಟ್ಟೆಗಳು ಇವೆಲ್ಲವನ್ನು ನೋಡಿದರೆ ಮಾತ್ರ ಅನುಭವಿಸಲು ಸಾಧ್ಯ.
ಟೂರಿಸ್ಟ್ ಕಂಪೆನಿಗಳಿಗೆ ಇದೊಂದು ಸುಸಂದರ್ಭ. ಈಗಿನ ಗ್ರಹಣ ಹಡಗುಗಳಲ್ಲಿ ನೋಡಲು ಅನುಕೂಲ.
ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸೂರ್ಯ ಗ್ರಹಣವಾಗುವುದು. ಚಂದ್ರನ ನೆರಳು ಭೂಮಿಯ ಮೇಲೆ ಬಿದ್ದು ಸೂರ್ಯ ಕಿರಣಗಳನ್ನು ಪೂರ್ಣವಾಗಿ ಅಥವಾ ಆಂಶಿಕವಾಗಿ ತಡೆಯುತ್ತದೆ. ಈ ವಿದ್ಯಮಾನ ಅಮಾವಾಸ್ಯೆಯ ದಿನ ಸಂಭವಿಸುತ್ತದೆ. ಸೂರ್ಯ ಗ್ರಹಣಗಳಲ್ಲಿ ಮೂರು ವಿಧಗಳಿದ್ದು ಅವೆಂದರೆ ಪೂರ್ಣ, ಕಂಕಣ ಮತ್ತು ಆಂಶಿಕ. ಚಂದ್ರ ಭೂಮಿಯ ಸುತ್ತ ದೀರ್ಘ ವೃತ್ತಾಕಾರದ ಪಥದಲ್ಲಿ ಚಲಿಸುವಾಗ ಒಮ್ಮೆ ಭೂಮಿಗೆ ಹತ್ತಿರವಾಗಿ, ಒಮ್ಮೆ ದೂರವಾಗುತ್ತದೆ. ಅಮಾವಾಸ್ಯೆಯ ದಿನ ಚಂದ್ರ ಭೂಮಿಗೆ ಹತ್ತಿರದಲ್ಲಿದ್ದರೆ ಚಂದ್ರನ ದಟ್ಟ ನೆರಳು ಭೂಮಿಯ ಯಾವ ಪ್ರದೇಶದಲ್ಲಿ ಬೀಳುತ್ತದೋ ಆ ಪ್ರದೇಶದಲ್ಲಿ ಸೂರ್ಯ ಸಂಪೂರ್ಣವಾಗಿ ಮರೆಯಾಗುತ್ತಾನೆ. ಇದೇ ಪೂರ್ಣ ಸೂರ್ಯ ಗ್ರಹಣ.
ಚಂದ್ರನ ನೆರಳು ಬೀಳುತ್ತಿರುವ ಭೂಭಾಗಗಳಲ್ಲಿ ಸೂರ್ಯ ಭಾಗಶಃ ಮರೆಯಾಗುತ್ತಿದ್ದರೆ ಅದು ಆಂಶಿಕ ಸೂರ್ಯ ಗ್ರಹಣ. ಅಮಾವಾಸ್ಯೆಯ ದಿನ ಚಂದ್ರ ಭೂಮಿಗೆ ದೂರದಲ್ಲಿದ್ದು ಚಂದ್ರ ಸೂರ್ಯನನ್ನು ಸಂಪೂರ್ಣವಾಗಿ ಮರೆಮಾಡದೆ ಸೂರ್ಯ ಬಿಂಬದ ಅಂಚು ಬಳೆಯಾಕಾರದಲ್ಲಿ ಗೋಚರಿಸುವುದೇ ಕಂಕಣ ಸೂರ್ಯ ಗ್ರಹಣ.
ಗಾತ್ರದಲ್ಲಿ ಸೂರ್ಯ ಚಂದ್ರನಿಗಿಂತ 400ಪಟ್ಟು ದೊಡ್ಡದಿದ್ದರೂ ಚಂದ್ರ ಸೂರ್ಯನನ್ನು ಸಂಪೂರ್ಣವಾಗಿ ಮರೆ ಮಾಡಬಲ್ಲ. ಇದಕ್ಕೆ ಕಾರಣ ಸೂರ್ಯನು ಭೂಮಿ ಮತ್ತು ಚಂದ್ರನ ನಡುವಿನ ಅಂತರದ 400ಪಟ್ಟು ದೂರದಲ್ಲಿರುವುದು. ಇದರಿಂದಾಗಿ ಸೂರ್ಯ ಮತ್ತು ಚಂದ್ರ ಬಿಂಬಗಳು ಸಮನಾದ ಗಾತ್ರದಲ್ಲಿರುವಂತೆ ತೋರುತ್ತದೆ.
ಭೂಮಿ ಮತ್ತು ಚಂದ್ರನ ಪರಿಭ್ರಮಣ ಸಮತಲಗಳು 5 ಡಿಗ್ರಿ ಓರೆಯಾಗಿವೆ. ಹಾಗಾಗಿ ಪ್ರತೀ ಅಮಾವಾಸ್ಯೆಯಂದು ಸೂರ್ಯಗ್ರಹಣ ಸಂಭವಿಸುವುದಿಲ್ಲ. ಸಾಮಾನ್ಯವಾಗಿ ಸೂರ್ಯ ಗ್ರಹಣವು ಚಂದ್ರ ಗ್ರಹಣದ ಮೊದಲು ಅಥವಾ ಅನಂತರದ ಎರಡು ವಾರಗಳ ಅವಧಿಯಲ್ಲಿ ಸಂಭವಿಸುತ್ತದೆ. ನ. 19ರ ಚಂದ್ರ ಗ್ರಹಣದ ಅನಂತರ ಈ ಗ್ರಹಣ ಗೋಚರಿಸುತ್ತಿದೆ.
ಅಂಟಾರ್ಕ್ಟಿಕ್ ದಲ್ಲಿ ಪೂರ್ಣ ಸೂರ್ಯ ಗ್ರಹಣ ವೀಕ್ಷಣೆಗೆ ಲಭ್ಯವಾದರೆ ದಕ್ಷಿಣ ಆಫ್ರಿಕಾ, ದಕ್ಷಿಣ ಅಮೆರಿಕ, ದಕ್ಷಿಣ ಅಟ್ಲಾಂಟಿಕ್ ಮತ್ತು ಆಸ್ಟ್ರೇಲಿಯಾಗಳಲ್ಲಿ ಆಂಶಿಕ ಸೂರ್ಯ ಗ್ರಹಣ ಗೋಚರಿಸುತ್ತದೆ. ಭಾರತದಲ್ಲಿ ಈ ಗ್ರಹಣ ಗೋಚರವಾಗದು.
*ನೇರ ವೀಕ್ಷಣೆಗೆ ಅವಕಾಶ:* ನಾಸಾದವರ ಯೂಟ್ಯೂಬ್ ಮತ್ತು nasa.gov/live ಈ ತಾಣದಲ್ಲಿ ಹಾಗೂ CosmoSapiens ಎಂಬ ಯೂಟ್ಯೂಬ್ ಚಾನೆಲ್ನಲ್ಲಿ ಪೂರ್ಣ ಸೂರ್ಯ ಗ್ರಹಣದ ನೇರ ಪ್ರಸಾರ ಲಭ್ಯವಿದೆ. ಗ್ರಹಣದ ವಿವರಗಳನ್ನು timean3ate ಜಾಲತಾಣದಲ್ಲಿ ನೋಡಬಹುದು.
ಇದರಂತೆ ಭಾರತೀಯ ಕಾಲಮಾನದ ಪ್ರಕಾರ ಗ್ರಹಣ ಆರಂಭವಾಗುವ ಮೊದಲ ಸ್ಥಳದಲ್ಲಿ ಡಿ. 4ರ ಬೆಳಗ್ಗೆ ಗಂಟೆ 10:59ಕ್ಕೆ ಆಂಶಿಕ ಮತ್ತು ಮಧ್ಯಾಹ್ನ ಗಂಟೆ 12:30ಕ್ಕೆ ಪೂರ್ಣ ಸೂರ್ಯ ಗ್ರಹಣ ಆರಂಭವಾಗಲಿದೆ. ಗ್ರಹಣ ಕೊನೆಗೊಳ್ಳುವ ಪ್ರದೇಶದಲ್ಲಿ ಅಪರಾಹ್ನ ಗಂಟೆ 01:36ಕ್ಕೆ ಪೂರ್ಣ ಸೂರ್ಯ ಗ್ರಹಣ ಅಂತ್ಯವಾದರೆ 03:07 ಗಂಟೆಗೆ ಆಂಶಿಕ ಗ್ರಹಣ ಅಂತ್ಯವಾಗಲಿದೆ.
ಭಾರತದಲ್ಲಿ ಈ ಗ್ರಹಣವು ಗೋಚರಿಸದಿರುವುದರಿಂದ ಆಸಕ್ತರು ಯೂಟ್ಯೂಬ್ ಚಾನೆಲ್ ಮತ್ತು ಜಾಲತಾಣದಲ್ಲಿ ಗ್ರಹಣದ ನೇರ ವೀಕ್ಷಣೆ ಮಾಡಬಹುದಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in nation »

ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ

ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ

ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ

ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ

ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ
ಪ್ರತಿಕ್ರಿಯೆಗಳು