ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್

ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಇತ್ಯರ್ಥಗೊಳಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಅಧ್ಯಕ್ಷರಾದ ನ್ಯಾ. ನಿಂಗಪ್ಪ ಪರಶುರಾಮ ಕೋಪರ್ಡೆ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ರಾಮನಗರ ಜಿಲ್ಲೆಯಾದ್ಯಂತ ಒಟ್ಟು 20 ಬೆಂಚ್ಗಳಲ್ಲಿ ಜುಲೈ 8ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬಹುದಾಗಿದೆ.
ಜಿಲ್ಲೆಯಾದ್ಯಂತ ಏಕಕಾಲಕ್ಕೆ ಜುಲೈ 8ರಂದು ನಡೆಯುವ ಲೋಕ ಅದಾಲತ್ಗಾಗಿ ಜುಲೈ 7ರವರೆಗೆ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳಲಾಗುತ್ತದೆ. ರಾಮನಗರ ಜಿಲ್ಲಾ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಕಲಾಪವು ನಡೆಯಲಿದೆ. ನ್ಯಾಯಾಲಯದ ಕಲಾಪಗಳಲ್ಲಿ ವಕೀಲರು ಭಾಗವಹಿಸಬಹುದು, ಅವಶ್ಯಕತೆ ಇದ್ದಲ್ಲಿ ಕಕ್ಷಿದಾರರನ್ನು ಆನ್ಲೈನ್ ಮೂಲಕ ಸಂಪರ್ಕಿಸಲಾಗುವುದು.
ಜಿಲ್ಲೆಯಲ್ಲಿ ಒಟ್ಟು 50481 ಪ್ರಕರಣಗಳು ಬಾಕಿ ಇದೆ. ಅವುಗಳ ಪೈಕಿ ರಾಜಿಯಾಗಬಹುದಾದ ಎಲ್ಲಾ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಕೈಗೆತ್ತಿಕೊಳ್ಳಲಾಗಿದೆ. ವಕೀಲರು ಖುದ್ದಾಗಿ ಹಾಗೂ ಆನ್ಲೈನ್ ಮೂಲಕ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ. ಎಲ್ಲರಿಗೂ ನ್ಯಾಯ ದೊರಕಿಸಿ ಕೊಡುವ ಉದ್ದೇಶದಿಂದ ಲೋಕ ಅದಾಲತ್ಗೆ ಚಾಲನೆ ನೀಡಲಾಗಿದೆ.
ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳು, ನೆಗೋಷಬಲ್ ಇನ್ಸ್ಟ್ರೂಮೆಂಟ್ ಕಾಯಿದೆ (ಎನ್ಐ ಆಕ್ಟ್) ಪ್ರಕರಣಗಳು, ಸಾಲ ವಸೂಲಾತಿ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪ್ರಕರಣ, ಕಾರ್ಮಿಕ ವಿವಾದ ಪ್ರಕರಣಗಳು, ಗಣಿ ಮತ್ತು ಭೂ ವಿಜ್ಞಾನ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ಆಸ್ತಿ ವಿಭಾಗ ಪ್ರಕರಣಗಳು, ನಿರ್ಧಿಷ್ಟ ಪ್ರಕರಣಗಳು, ಜಾರಿ ಪ್ರಕರಣಗಳು, ಹಕ್ಕು ಘೋಷಣೆ, ಶಾಶ್ವತ ನಿರ್ಭಂದಕಾಜ್ಞೆ ಹಾಗೂ ಇತರೆ, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಲಘು ವ್ಯಾಜ್ಯ, ಪ್ರಕರಣಗಳನ್ನು ರಾಜಿಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಕಕ್ಷಿದಾರರಿಗೆ ಕರೆ ನೀಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in nation »

ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ

ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ

ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ

ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ

ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ
ಪ್ರತಿಕ್ರಿಯೆಗಳು