ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೇಳಿಕೆ; ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆಯ ಎಚ್ಚರಿಕೆ
ರಾಮನಗರ:ಚನ್ನಪಟ್ಟಣ: ವಸತಿ ಹಾಗೂ ವಕ್ಫ್ ಸಚಿವ ಮೇಲಾಗಿ ಮುಸ್ಲಿಂ ಸಮುದಾಯದ ರಾಜ್ಯ ಮುಖಂಡ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಸೈಯದ್ ಫಾಸಿಲ್ ನೀಡಿರುವ ಹೇಳಿಕೆಗೆ ಈ ಕೂಡಲೇ ಕ್ಷಮೆ ಕೇಳಬೇಕು, ಇಲ್ಲವಾದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ನಗರಸಭೆ ಕಾಂಗ್ರೆಸ್ ಸದಸ್ಯ ವಾಸಿಲಾಲಿಖಾನ್ ಎಚ್ಚರಿಕೆ ನೀಡಿದರು.
ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಯನ್ನು ಸಮರ್ಥಿಸುವ ನಿಟ್ಟಿನಲ್ಲಿ, ಫಾಜಿಲ್ ಸಚಿವ ಜಮೀರ್ ಅಹ್ಮದ್ ವಿರುದ್ದ ಹಗುರವಾಗಿ ಮಾತನಾಡಿರುವುದು ಸರಿಯಿಲ್ಲ ಎಂದು ಕಿಡಿ ಕಾರಿದರು. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕುರಿತು ಹಗುರವಾಗಿ ಮಾತನಾಡಿರುವ ಸೈಯ್ಯದ್ ಫಾಜಿಲ್ ಈ ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಅವರ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ಅವರು ಮೊದಲ ಬಾರಿ ಮುಖ್ಯಮಂತ್ರಿ ಆಗಲು ಜಮೀರ್ ಅಹ್ಮದ್, ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ, ಸಚಿವ ಚಲುವರಾಯಸ್ವಾಮಿ ಮುಂತಾದವರು ಕಾರಣರಾಗಿದ್ದರು. ಅಂದು ಕುಮಾರಸ್ವಾಮಿಯನ್ನು ಬೆಂಬಲಿಸದಿದ್ದಲ್ಲಿ ಅವರು ಸಿಎಂ ಆಗುತ್ತಲೇ ಇರಲಿಲ್ಲ ಎಂದರು. ಕಾಲಕಾಲಕ್ಕೆ ಈ ತಂಡ ಕುಮಾರಸ್ವಾಮಿ ಅವರನ್ನು ಬೆಂಬಲಿಸಿದ ಕಾರಣಕ್ಕೆ ಅವರು ಬೆಳೆದರು. ಇದರ ಅರಿವಿಲ್ಲದೇ ಫಾಜಿಲ್ ಜಮೀರ್ ಅಹ್ಮದ್ ಅವರ ಕುರಿತು ಹೇಳಿಕೆ ನೀಡಿರುವುದು ಖಂಡನೀಯ ಎಂದರು.
ಆಗ ಅಟಲ್ ಬಿಹಾರಿ ವಾಜಪೇಯಿ, ಯಡಿಯೂರಪ್ಪ ಅವರಂತಹ ನಾಯಕರು ಇದ್ದರು, ಈ ಹಿಂದೆ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಕೈಜೋಡಿಸಿ ಅಧಿಕಾರ ನಡೆಸಿದಾಗ ಬಿಜೆಪಿ ಇಷ್ಟರ ಮಟ್ಟದ ಕೋಮುವಾದಿ ಪಕ್ಷವಾಗಿರಲಿಲ್ಲ. ಅಂದಿನ ನಾಯಕರು ಎಲ್ಲಾ ಸಮುದಾಯದ ಜನರನ್ನು ಒಂದಾಗಿ ಕಾಣುತ್ತಿದ್ದರು. ಆದರೆ, ಬಸವರಾಜ ಬೊಮ್ಮಾಯಿ ಸರ್ಕಾರ ಬಂದ ನಂತರ ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಳಾಯಿತು. ಇಂಥ ಹೊತ್ತಿನಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಕೈಜೋಡಿಸಿರುವುದು ನಮ್ಮ ಸಮುದಾಯಕ್ಕೆ ಬೇಸರ ತರಿಸಿದೆ ಎಂದರು.
ನಗರಸಭೆಯ ಮಾಜಿ ಸದಸ್ಯ ಭಾವಸಾ ಮಾತನಾಡಿ ಈ ಹಿಂದಿನಿಂದಲೂ ಅಲ್ಪಸಂಖ್ಯಾತ ಸಮುದಾಯ ಜೆಡಿಎಸ್ ಅನ್ನು ಬೆಂಬಲಿಸಿಕೊಂಡು ಬಂದಿತ್ತು. ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಲು, ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗುವಲ್ಲಿ ಮುಸ್ಲಿಂ ಸಮುದಾಯದ ಕೊಡುಗೆ ಹೆಚ್ಚಿದೆ. ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸೋತ ಕಾರಣಕ್ಕೆ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದಾರೆ. ಅವರ ಈ ನಿರ್ಧಾರ ಸರಿಯೋ ತಪ್ಪೋ ಎಂಬುದನ್ನು ಮುಂದಿನ ದಿನಗಳಲ್ಲಿ ರಾಜ್ಯದ ಜನರೇ ತೀರ್ಮಾನಿಸಲಿದ್ದಾರೆ ಎಂದರು.
ನಂತರ ನಗರಸಭೆ ಸದಸ್ಯ ಲಿಯಾಕತ್ ಆಲಿಖಾನ್ ಮಾತನಾಡಿ, ಕುಮಾರಸ್ವಾಮಿಯವರಿಗೆ ರಾಮನಗರದಲ್ಲಿ ತಮ್ಮ ಮಗ ಗೆಲ್ಲಬೇಕಿತ್ತು ಅಷ್ಟೇ. ಆದರೆ ಅವರು ಸೋತರು. ಅದಕ್ಕಾಗಿ ಈಗ ಲೋಕಸಭೆ ಚುನಾವಣೆಯಲ್ಲಿ ಸಂಸದ ಡಿ.ಕೆ.ಸುರೇಶ್ ಅವರನ್ನು ಸೋಲಿಸುವ ನಿಟ್ಟಿನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಮಥೀನ್ ಖಾನ್, ಸಾಬೀಲ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in nation »
ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ
ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ
ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ
ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ
ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ
ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ
ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ
ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ
ಪ್ರತಿಕ್ರಿಯೆಗಳು