Tel: 7676775624 | Mail: info@yellowandred.in

Language: EN KAN

    Follow us :


ಐದು ವರ್ಷ ಪಿಎಫ್ಐ ಸಂಘಟನೆ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ

Posted date: 28 Sep, 2022

Powered by:     Yellow and Red

ಐದು ವರ್ಷ ಪಿಎಫ್ಐ ಸಂಘಟನೆ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು PFI (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳಿಗೆ ಅಂಕುಶ ಹಾಕಿದೆ. ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.


ಹೌದು, ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾ(ಪಿಎಫ್​ಐ) ಸಂಘಟನೆಗೆ ಕೇಂದ್ರ ಸರ್ಕಾರ ಅಂಕುಶ ಹಾಕಿದೆ. ಐದು ವರ್ಷಗಳ ಕಾಲ ಪಿಎಫ್​ಐ ಬ್ಯಾನ್​ ಮಾಡಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಮುಂದಿನ ಐದು ವರ್ಷಗಳವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧ ಹೇರಿದೆ.

*ಸರ್ಕಾರದ ಅಧಿಸೂಚನೆಯಲ್ಲೇನಿದೆ.* PFI ಮತ್ತು ಅದರ ಅಂಗಸಂಸ್ಥೆಗಳು ಕಾನೂನುಬಾಹಿರ ಕೆಲಸಗಳಲ್ಲಿ ತೊಡಗಿಸಿಕೊಂಡಿವೆ. ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಪೂರ್ವಾಗ್ರಹ ಚಟುವಟಿಕೆಗಳು ಮತ್ತು ಸಾರ್ವಜನಿಕ ಶಾಂತಿ ಮತ್ತು ದೇಶದ ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ದೇಶದಲ್ಲಿ ಉಗ್ರತ್ವವನ್ನು ಬೆಂಬಲಿಸುವ ಕೆಲಸವನ್ನು ಮಾಡುತ್ತಿವೆ. ಸಮಾಜದ ಒಂದು ವಿಭಾಗವು ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ದುರ್ಬಲಗೊಳಿಸಲು ಕೆಲಸ ಮಾಡುತ್ತಿದೆ ಮತ್ತು ದೇಶದ ಸಾಂವಿಧಾನಿಕ ಅಧಿಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳಿಗೆ ಸಂಪೂರ್ಣ ಅಗೌರವವನ್ನು ತೋರಿಸುತ್ತದೆ ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿದೆ.


*ಪಿಎಫ್​ಐನ ಅಂಗ ಸಂಸ್ಥೆಗಳಿಗೂ ಶಾಕ್​*

PFIನ ಕೆಲವು ಸಂಸ್ಥಾಪಕ ಸದಸ್ಯರು ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI) ನಾಯಕರು ಮತ್ತು PFI ಜಮಾತ್-ಉಲ್-ಮುಜಾಹಿದ್ದೀನ್​ ಬಾಂಗ್ಲಾದೇಶ (JMB) ನೊಂದಿಗೆ ಸಂಪರ್ಕವನ್ನು ಹೊಂದಿದೆ. ಇವೆರಡೂ ನಿಷೇಧಿತ ಸಂಘಟನೆಗಳಾಗಿವೆ ಎಂದು ಕೇಂದ್ರವು ತನ್ನ ಅಧಿಸೂಚನೆಯಲ್ಲಿ ಹೇಳಿದೆ. ಜಾಗತಿಕವಾಗಿ PFI ಅಂತಾರಾಷ್ಟ್ರೀಯ ಸಂಪರ್ಕಗಳ ಹಲವಾರು ನಿದರ್ಶನಗಳಿವೆ. ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ದೇಶದಲ್ಲಿ ಅಭದ್ರತೆಯ ಭಾವನೆಯನ್ನು ಉತ್ತೇಜಿಸುವ ಮೂಲಕ ಒಂದು ಸಮುದಾಯದ ಮೂಲಭೂತೀಕರಣವನ್ನು ಹೆಚ್ಚಿಸಲು ರಹಸ್ಯವಾಗಿ ಕೆಲಸ ಮಾಡುತ್ತಿವೆ. ಕೆಲವು ಪಿಎಫ್‌ಐ ಕಾರ್ಯಕರ್ತರು ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ್ದಾರೆ ಎಂಬುದು ಸಾಬೀತಾಗಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.


ಕೇಂದ್ರ ಸರ್ಕಾರ ಮೇಲಿನ ಸಂದರ್ಭಗಳನ್ನು ಪರಿಗಣಿಸಿ PFI ಮತ್ತು ಅದರ ಅಂಗಸಂಸ್ಥೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾನೂನುಬಾಹಿರ ಸಂಘವೆಂದು ಘೋಷಿಸುವುದು ಅವಶ್ಯಕ ಎಂದು ಈ ನಿರ್ಧಾರವನ್ನು ಕೈಗೊಂಡಿದೆ. ಅದರ ಪ್ರಕಾರ ಸದರಿ ಅಧಿನಿಯಮದ ಸೆಕ್ಷನ್ 3 ರ ಉಪ-ವಿಭಾಗ (3) ಕ್ಕೆ ನಿಬಂಧನೆಯಿಂದ ನೀಡಲಾದ ಅಧಿಕಾರಗಳನ್ನು ಚಲಾಯಿಸುವಾಗ ಈ ಅಧಿಸೂಚನೆಯನ್ನು ಕೇಂದ್ರ ಸರ್ಕಾರವು ಈ ಮೂಲಕ ನಿರ್ದೇಶಿಸುತ್ತದೆ. ಸದರಿ ಕಾಯ್ದೆಯ ಸೆಕ್ಷನ್ 4 ರ ಅಡಿಯಲ್ಲಿ ಮಾಡಬಹುದಾದ ಯಾವುದೇ ಆದೇಶಕ್ಕೆ ಒಳಪಟ್ಟಿರುತ್ತದೆ. ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಅನ್ವಯಿಸುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 


*ಸರಣಿ ದಾಳಿ ನಂತರ ಆದೇಶ.*

ಪಿಎಫ್​ಐ ಸಂಘಟನೆ ಮೇಲೆ ಇತ್ತೀಚೆಗೆ ಕೇಂದ್ರೀಯ ತನಿಖಾ ಸಂಸ್ಥೆ (ಎನ್​ಐಎ) ದೇಶಾದ್ಯಂತ ದಾಳಿ ಮಾಡಿತ್ತು. ಈ ವೇಳೆ ನೂರಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆಯಲಾಗಿತ್ತು. ಕರ್ನಾಟಕ ಸೇರಿದಂತೆ ದೇಶದ 93 ಸ್ಥಳಗಳಲ್ಲಿ ಎನ್​ಐಎ ಈ ಕಾರ್ಯಾಚರಣೆ ಕೈಗೊಂಡಿತ್ತು.

ಎನ್​ಐಎ ದಾಳಿ ಬೆನ್ನಲ್ಲೇ ಮಂಗಳವಾರ ಕರ್ನಾಟಕ, ಅಸ್ಸಾಂ, ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ 80ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಮತ್ತು ಗಲಭೆ ಸೇರಿದಂತೆ ಪ್ರಚೋದನಕಾರಿ ಕೃತ್ಯದ ಆರೋಪದಡಿ ರಾಜ್ಯದಲ್ಲಿ ಪಿಎಫ್​ಐ ಮುಖಂಡರನ್ನು ಬಂಧಿಸಿ ವಿಚಾರಣೆ ಕೈಗೊಳ್ಳಲಾಗಿತ್ತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in nation »

ಮಾಹಿತಿ ನೀಡದ ಅಧಿಕಾರಿಗಳಿಗೆ ಒಂದು ಕೋಟಿ ದಂಡ
ಮಾಹಿತಿ ನೀಡದ ಅಧಿಕಾರಿಗಳಿಗೆ ಒಂದು ಕೋಟಿ ದಂಡ

ಸರಿಯಾದ ಸಮಯಕ್ಕೆ ಮಾಹಿತಿ ಕಾರ್ಯಕರ್ತರಿಗೆ ಮಾಹಿತಿ ಒದಗಿಸದ ಕಾರಣ ಒಂದು ಕೋಟಿಗೂ ಹೆಚ್ಚು ಹಣವನ್ನು ದಂಡ ವಿಧಿಸಿದ ರಾಜ್ಯ ಮಾಹಿತಿ ಆಯೋಗ. ನಿಜಕ್ಕೂ ಮಾಹಿತಿ ಹಕ್ಕಿನ ಕಾಯ್ದೆ(RTI) ತನ್ನ ಪವರ್ ನ್ನು ತೋ

ಬ್ರಿಟನ್ ನ ನೂತನ ಪ್ರಧಾನಿ ರಿಷಿ ಸುನಾಕ್ ಬ್ರಿಟನ್ ನಲ್ಲಿ ಅತ್ಯಂತ ಶ್ರೀಮಂತ
ಬ್ರಿಟನ್ ನ ನೂತನ ಪ್ರಧಾನಿ ರಿಷಿ ಸುನಾಕ್ ಬ್ರಿಟನ್ ನಲ್ಲಿ ಅತ್ಯಂತ ಶ್ರೀಮಂತ

ಲಂಡನ್, ಅ.24: ಬ್ರಿಟನ್ ಪ್ರಧಾನಿ ಹುದ್ದೆಯ ರೇಸ್ ನಿಂದ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್(Boris Johnson) ಹಿಂದೆ ಸರಿದ ಬಳಿಕ ನೂತನ ಪ್ರಧಾನಿಯ

ಆಧಾರ್ ಪಡೆದು 10 ವರ್ಷವಾಗಿದ್ದರೆ ಮಾಹಿತಿ ನವೀಕರಿಸಲು ಯುಐಡಿಎಐ ಮನವಿ:
ಆಧಾರ್ ಪಡೆದು 10 ವರ್ಷವಾಗಿದ್ದರೆ ಮಾಹಿತಿ ನವೀಕರಿಸಲು ಯುಐಡಿಎಐ ಮನವಿ:

ನವದೆಹಲಿ: 10 ವರ್ಷಗಳ ಹಿಂದೆ ಆಧಾರ್ ಪಡೆದು, ಇದುವರೆಗೆ ತಮ್ಮ ಮಾಹಿತಿಯನ್ನು ನವೀಕರಿಸದೇ ಇರುವವರು ಹೊಸದಾಗಿ ತಮ್ಮ ಗುರುತು ಮತ್ತು ಮನೆಯ ವಿಳಾಸದ

ಪಿಎಫ್ಐ ಸಂಃಟನೆ ನಿಷೇಧ ಸ್ವಾಗತಾರ್ಹ: ಅಶ್ವತ್ಥನಾರಾಯಣ
ಪಿಎಫ್ಐ ಸಂಃಟನೆ ನಿಷೇಧ ಸ್ವಾಗತಾರ್ಹ: ಅಶ್ವತ್ಥನಾರಾಯಣ

ರಾಮನಗರ: ಸಮಾಜ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಪಿಎಫ್ಐ ಮತ್ತು ಅದರ 8 ಅಂಗಸಂಸ್ಥೆಗಳನ್ನು 5 ವರ್ಷಗಳ ಮಟ್ಟಿಗೆ ನಿಷೇಧಿಸಿ

ಐದು ವರ್ಷ ಪಿಎಫ್ಐ ಸಂಘಟನೆ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ
ಐದು ವರ್ಷ ಪಿಎಫ್ಐ ಸಂಘಟನೆ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು PFI (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್

ಮಧ್ಯಪ್ರದೇಶದಲ್ಲಿ ಏಳು ರೈತರ ಗುಂಪೊಂದು ಲಾಲ್ಕಿಧೇರಿ ಪ್ರದೇಶದ ವಜ್ರದ ಗಣಿಯಲ್ಲಿ ಉತ್ಖನನ ನಡೆಸಿ 3.21 ಕ್ಯಾರೆಟ್ ವಜ್ರ ಪತ್ತೆ ಹಚ್ಚಿದ್ದಾರೆ.
ಮಧ್ಯಪ್ರದೇಶದಲ್ಲಿ ಏಳು ರೈತರ ಗುಂಪೊಂದು ಲಾಲ್ಕಿಧೇರಿ ಪ್ರದೇಶದ ವಜ್ರದ ಗಣಿಯಲ್ಲಿ ಉತ್ಖನನ ನಡೆಸಿ 3.21 ಕ್ಯಾರೆಟ್ ವಜ್ರ ಪತ್ತೆ ಹಚ್ಚಿದ್ದಾರೆ.

ಪನ್ನಾ: ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಬ್ರಿಜ್‌ಪುರ ಮೂಲದ ರೈತರಿಗೆ ಅದೃಷ್ಟ ಖುಲಾಯಿಸಿದೆ. ಸರ್ಕಾರದಿಂದ ಬಾಡಿಗೆ ಮೇಲೆ ಪಡೆದ ಲಾಲ್ಕಿಧೇರಿ ಪ್ರದೇಶದ ವಜ್ರದ ಗಣಿಯಲ್ಲಿ 3.21 ಕ್ಯಾರೆಟ್ ವಜ್ರ ದೊರೆತಿದ

ವಕೀಲರ (ರಕ್ಷಣಾ) ಮಸೂದೆ 2021: ನ್ಯಾಯಾಧೀಶರ ಪೂರ್ವಾನುಮತಿ ಇಲ್ಲದೆ ವಕೀಲರ ಬಂಧನ ಕಾನೂನುಬಾಹಿರ!
ವಕೀಲರ (ರಕ್ಷಣಾ) ಮಸೂದೆ 2021: ನ್ಯಾಯಾಧೀಶರ ಪೂರ್ವಾನುಮತಿ ಇಲ್ಲದೆ ವಕೀಲರ ಬಂಧನ ಕಾನೂನುಬಾಹಿರ!

ವಕೀಲರ ರಕ್ಷಣೆ ಮತ್ತು ವೃತ್ತಿ ನಿರ್ವಹಣೆಗೆ ಅನುಕೂಲವಾಗುವಂತೆ ಮಾಡಲು ದೇಶದಲ್ಲಿ ಪ್ರಬಲ ಕಾನೂನು ರೂಪಿಸುವ ಕಾರ್ಯ ನಡೆದಿದ್ದು, ವಕೀಲರ ರಕ್ಷಣೆ ಮಸೂದೆ 2021 ಬಿಡುಗಡೆಗೊಳಿಸಲಾಗಿದೆ.

ದೇಶಾದ್ಯಂತ ಮಧ್ಯರಾತ್ರಿಯಿಂದಲೇ ಪಿಎಫ್ಐ ಕಚೇರಿಗಳ ಮೇಲೆ ಎನ್​ಐಎ, ಇಡಿ ದಿಢೀರ್‌ ದಾಳಿ
ದೇಶಾದ್ಯಂತ ಮಧ್ಯರಾತ್ರಿಯಿಂದಲೇ ಪಿಎಫ್ಐ ಕಚೇರಿಗಳ ಮೇಲೆ ಎನ್​ಐಎ, ಇಡಿ ದಿಢೀರ್‌ ದಾಳಿ

ಹೈದರಾಬಾದ್​: ಕಳೆದ ಮಧ್ಯರಾತ್ರಿಯಿಂದ ದಿಢೀರ್ ಕಾರ್ಯಾಚರಣೆ ಕೈಗೊಂಡಿರುವ 200ಕ್ಕೂ ಹೆಚ್ಚು ರಾಷ್ಟ್ರೀಯ ತನಿಖಾ ದಳ (ಎನ್​​ಐಎ)ದ ಅಧಿಕಾರಿಗಳು ದೇ

ಅಣ್ಣ ಬ್ಲಡ್ ಕ್ಯಾನ್ಸರ್‌ಗೆ ಬಲಿ, ಅಮ್ಮನಿಗೆ ಬ್ರೆಸ್ಟ್‌ ಕ್ಯಾನ್ಸರ್‌: ಪವರ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದು ಬೂಸ್ಟರ್ ಡೋಸ್ ಕೊಟ್ಟ ಮಗಳು!
ಅಣ್ಣ ಬ್ಲಡ್ ಕ್ಯಾನ್ಸರ್‌ಗೆ ಬಲಿ, ಅಮ್ಮನಿಗೆ ಬ್ರೆಸ್ಟ್‌ ಕ್ಯಾನ್ಸರ್‌: ಪವರ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದು ಬೂಸ್ಟರ್ ಡೋಸ್ ಕೊಟ್ಟ ಮಗಳು!

ಹೈದರಾಬಾದ್: ಬದುಕು ಒಡ್ಡಿದ ಹತ್ತು ಹಲವು ಸಮಸ್ಯೆಗಳನ್ನು ಧೈರ್ಯದಿಂದ ಮೆಟ್ಟಿ ನಿಂತ ಇಲ್ಲೊಬ್ಬ ಹೈದರಾಬಾದ್‌ನ 22 ವರ್ಷದ ಯುವತಿ ಯುವ ಜನತೆಗೆ ಸ್ಫೂರ್ತಿಯ ಸ

ಅಬ್ಬಾ…!,ಎಂಬತ್ತೇಳರ ವೃದ್ದೆಗೆ ಎಂಭತ್ತೊಬ್ಬರ ಗಂಡನಿಂದ ಸೆಕ್ಸ್ ಗೆ ಒತ್ತಾಯ ದೂರು!
ಅಬ್ಬಾ…!,ಎಂಬತ್ತೇಳರ ವೃದ್ದೆಗೆ ಎಂಭತ್ತೊಬ್ಬರ ಗಂಡನಿಂದ ಸೆಕ್ಸ್ ಗೆ ಒತ್ತಾಯ ದೂರು!

ವಡೋದರಾದ 87 ವರ್ಷದ ವೃದ್ಧೆ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ತನ್ನ ಪತಿಯ ವಿರುದ್ಧ ದೂರು ನೀಡಿದ್ದು, ಕರೆಯನ್ನು ಸ್ವೀಕರಿಸಿದ ಅಭಯಂ ತಂಡ ನಿಜಕ್ಕೂ ದಿಗ್ಭ್ರಮೆಗೊಂಡಿದೆ.

ಹೌದು… ಗುಜರಾತ್

Top Stories »  


Top ↑