Tel: 7676775624 | Mail: info@yellowandred.in

Language: EN KAN

    Follow us :


ತಮ್ಮ ಕಷ್ಟ ಪರಿಹರಿಸಲು ಸರ್ಕಾರವೇ ನಿಮ್ಮ ಮುಂದೆ ಬಂದಿದೆ, ಸದುಪಯೋಗ ಪಡಿಸಿಕೊಳ್ಳಿ ಸಚಿವ ರಾಮಲಿಂಗಾರೆಡ್ಡಿ

Posted date: 05 Jan, 2024

Powered by:     Yellow and Red

ತಮ್ಮ ಕಷ್ಟ ಪರಿಹರಿಸಲು ಸರ್ಕಾರವೇ ನಿಮ್ಮ ಮುಂದೆ ಬಂದಿದೆ, ಸದುಪಯೋಗ ಪಡಿಸಿಕೊಳ್ಳಿ ಸಚಿವ ರಾಮಲಿಂಗಾರೆಡ್ಡಿ

ಚನ್ನಪಟ್ಟಣ :ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಸಮಸ್ಯೆ ಇರುತ್ತದೆ, ಪ್ರತಿ ಪ್ರಜೆಯು ಅಧಿಕಾರಿಗಳನ್ನು ಅಥವಾ ಜನಪ್ರತಿನಿಧಿಗಳನ್ನು ಹುಡುಕಿಕೊಂಡು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದೆ. ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿಕೊಳ್ಳಬೇಕು ಎಂದು ಸಾರಿಗೆ, ಮುಜರಾಯಿ ಇಲಾಖೆ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.


ನಗರದ ಶತಮಾನೋತ್ಸವ ಭವನದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆ ಅಥವಾ ಅಹವಾಲುಗಳಿದ್ದಲ್ಲಿ ಪ್ರತಿ ತಿಂಗಳು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೇರವಾಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದು. ಅವರು ಇತ್ಯರ್ಥ ಪಡಿಸಬಹುದಾದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡುತ್ತಾರೆ. ವಿಳಂಬವಾದರೆ ಹಿಂಬರಹ ನೀಡಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.


ಬೆಂಗಳೂರು ಗ್ರಾಮಾಂತರ ಸಂಸದರಾದ ಡಿ.ಕೆ. ಸುರೇಶ್ ಅವರು ಮಾತನಾಡಿ, ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳು ಒಂದೊಂದು ತಾಲೂಕುಗಳಲ್ಲಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.


ಒಂದು ವೇಳೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪರಿಹರಿಸಲಾಗದ ಸಮಸ್ಯೆಗಳಿಗೆ ರಾಜ್ಯ ಸರ್ಕಾರದೊಂದಿಗೆ ಚರ್ಚೆಯನ್ನು ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಲು ಕಳೆದ ನಾಲ್ಕು ತಿಂಗಳಿಂದ ಜನತಾ ದರ್ಶನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಇದರ ಜೊತೆಗೆ ಓರ್ವ ಸಂಸದನಾಗಿ, ವೈಯುಕ್ತಿಕವಾಗಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖುದ್ದು ಅರ್ಜಿ ಸ್ವೀಕಾರ ಮಾಡಿ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನ ಮಾಡುತ್ತಿದ್ದೇನೆ. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕವಾಗಿ ಕೌಂಟರ್ ಗಳನ್ನು ನಿರ್ಮಿಸಲಾಗಿದ್ದು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವರು ಎಂದು ತಿಳಿಸಿದರು.


ಜಿಲ್ಲೆಯಲ್ಲಿ ಕಳೆದ ಆರು ತಿಂಗಳಿನಿಂದ ಸುಮಾರು ಏಳು ಮಂದಿ ಆನೆದಾಳಿಯಿಂದ ಮೃತಪಟ್ಪಿದ್ದಾರೆ, ಬೆಳೆ ನಾಶ,  ಬೆಳೆ ಪರಿಹಾರ ಮೊತ್ತ ಹೆಚ್ಚಿಸುವ ಕುರಿತು ಹಾಗೂ ಇತರೆ ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಮುತ್ತತ್ತಿ ಭಾಗದಿಂದ ಕಾವೇರಿ ವನ್ಯಜೀವಿಧಾಮದ ಕಾಡಂಚಿನ ಕೊನೆ ಭಾಗದವರೆಗೆ ರೈಲ್ವೇ ಬ್ಯಾರಿಕೇಡ್‍ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಆನೆದಾಳಿಯನ್ನು ನಿಯಂತ್ರಿಸಲು ಕ್ರಮವಹಿಸಲಾಗುವುದು ಎಂದರು.


ಬೆಳೆ ಪರಿಹಾರದ ಮೊತ್ತವನ್ನು ಹೆಚ್ಚುವರಿ ಮಾಡಲು ಕಮಿಟಿಯೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ಹೆಚ್ಚಾಗಿ ಪ್ರಯಾಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚುವರಿ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ವ್ಯವಸ್ಥೆ ಮಾಡಲು ಸಾರ್ವಜನಿಕರಿಂದ ಬೇಡಿಕೆ ಬಂದಿದೆ. ಆದ್ದರಿಂದ ಹೆಚ್ಚುವರಿ ಬಸ್ಸುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಬಸ್ಸುಗಳ ವ್ಯವಸ್ಥೆ ಮಾಡಲಾಗುವುದು ಹಾಗೂ ಇದರಿಂದ ನಿರುದ್ಯೋಗಿಗಳಿಗೆ ಉದ್ಯೋಗಗಳು ಸೃಷ್ಠಿಯಾಗುತ್ತದೆ ಎಂದು ತಿಳಿಸಿದರು.


ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚು ಅರ್ಜಿಗಳು ಬಂದಿದ್ದು ಪೋಡಿ, ಖಾತೆ ಸಮಸ್ಯೆಗಳ ಕುರಿತು ರೈತರು ಅತಿ ಹೆಚ್ಚು ಅರ್ಜಿ ಸಲ್ಲಿಸಿದ್ದು, ಈ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಜಿಲ್ಲೆಯ ಪ್ರತಿ ಹಳ್ಳಿಗೂ ಪೈಪ್‍ಗಳ ಮೂಲಕ ನೀರು ಪೂರೈಸಲು ಯೋಜನೆಯನ್ನು ರೂಪಿಸಲಾಗಿದೆ. ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಪ್ರತಿಯೊಂದು ಮನೆಗಳಿಗೂ ತಲುಪಿಸುವಂತೆ ತಿಳಿಸಿದರು.


ಬಗರ್ ಹುಕುಂ ಸಾಗುವಳಿ ಚೀಟಿಗಾಗಿ ಬೇಡಿಕೆ ಬರುತ್ತಿದೆ. ಇದಲ್ಲದೇ ತಾಲೂಕಿನ ಮಾಕಳಿ ಗ್ರಾಮದ ಬಳಿ ಅರಣ್ಯ ಭೂಮಿಯಲ್ಲಿ ಸಾಗುವಳಿ ನಡೆಸುತ್ತಿರುವವರ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಯಾವ ಮಾಜಿ ಮುಖ್ಯಮಂತ್ರಿಯಾಗಲಿ, ಮಾಜಿ ಅರಣ್ಯ ಸಚಿವರಾಗಲಿ ಈ ಕುರಿತು ಆಸಕ್ತಿ ವಹಿಸಿರಲಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೆಸರೇಳದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.   


ಜನತಾ ದರ್ಶನ ಕಾರ್ಯಕ್ರಮದಲ್ಲಿ ಇಂದು ಒಟ್ಟು  240 ಅರ್ಜಿಗಳು ಸ್ವೀಕೃತವಾಯಿತು. ಅದರಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 124 ಅರ್ಜಿಗಳು ಸ್ವೀಕೃತಗೊಂಡರೆ, ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 33,  ನಗರಸಭೆಗೆ ಸಂಬಂಧಿಸಿದಂತೆ 23 ಅರ್ಜಿಗಳು ಸ್ವೀಕೃತಗೊಂಡವು. ಅಬಕಾರಿ, ಪಶುಪಾಲನಾ, ಆಹಾರ ಮತ್ತು ರೇಷ್ಮೆ ಇಲಾಖೆಯ ವಿರುದ್ಧ ಒಂದೂ ಅರ್ಜಿಗಳು ಸಲ್ಲಿಕೆಯಾಗಿಲ್ಲ. ಉಳಿದ ಇಲಾಖೆಗಳಿಗೆ ಬೆರಳೆಣಿಕೆ ಅರ್ಜಿಗಳು ಸಲ್ಲಿಕೆಯಾದವು.


ಕಾರ್ಯಕ್ರಮದಲ್ಲಿ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ವಿಪತ್ತು ನಿರ್ವಹಣೆ, ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಪೋಲಿಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಬಿನೋಯ್, ತಹಶೀಲ್ದಾರ ಮಹೇಂದ್ರ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಮಾಜಿ ಶಾಸಕ ಎಂ ಸಿ ಅಶ್ವಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್ ಗಂಗಾಧರ್ ಹಾಗೂ ಇತರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in nation »

ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್

ರಾಮನಗರ, ಜೂ. 03:   ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ

ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ  ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ

ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ

ಡಿಸೆಂಬರ್‌ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ

ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ

ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ


ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ

ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು

ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.‌ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ

ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ  ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ

ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ

ಟೊಯೋಟಾ ಕಿರ್ಲೋಸ್ಕರ್  ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ

ಬೆಂಗಳೂರು:ಜ/06/21ಬುಧವಾರ. ಹೊಸ ಫಾರ್ಚೂನರ್ ತಂಡವು ಈಗ ಹೆಚ್ಚು ಶಕ್ತಿಶಾಲಿ ಡೀಸೆಲ್ ಸ್ವಯಂಚಾಲಿತ ಪ್ರಸರಣ ರೂಪಾಂತರಗಳನ್ನು ಮತ್ತು ವಿಶೇಷ ,

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ

ಚನ್ನಪಟ್ಟಣ:ಅ/05/20/ಸೋಮವಾರ.


ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ

ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ

Top Stories »  


Top ↑