Tel: 7676775624 | Mail: info@yellowandred.in

Language: EN KAN

    Follow us :


ಅರಸತನ ಮೇಲಲ್ಲಾ, ಅಗಸತನ ಕೀಳಲ್ಲಾ ಎಂದ ಮಹಾಮಾನವತವಾದಿ ಮಾಚಿದೇವರು, ತಹಶಿಲ್ದಾರ್ ಬಣ್ಣನೆ

Posted date: 02 Feb, 2024

Powered by:     Yellow and Red

ಅರಸತನ ಮೇಲಲ್ಲಾ, ಅಗಸತನ ಕೀಳಲ್ಲಾ ಎಂದ ಮಹಾಮಾನವತವಾದಿ ಮಾಚಿದೇವರು, ತಹಶಿಲ್ದಾರ್ ಬಣ್ಣನೆ

ಚನ್ನಪಟ್ಟಣ,ಫೆ:೧೧ ೨ನೇ ಶತಮಾನದಲ್ಲೇ ಅರಸತನ ಮೇಲಲ್ಲಾ, ಅಗಸತನ ಕೀಳಲ್ಲಾ ಎಂಬ ವಚನವನ್ನು ಕಟ್ಟುವ ಮೂಲಕ ಇಡೀ ಸಮಾಜದಲ್ಲಿ ಯಾವ ವ್ಯಕ್ತಿಯು ದೊಡ್ಡವನಲ್ಲಾ, ಪ್ರತಿಯೊಬ್ಬರೂ ಸಮಾನರು ಎಂದು ಹನ್ನೆರಡನೇ ಶತಮಾನದಲ್ಲಿ ತನ್ನದೇ ಆದ ವಚನಗಳ ಮುಖಾಂತರ ಸಮಾಜದಲ್ಲಿ ಬೇರೂರಿದ್ದ ಅಸಮಾನತೆ ಹಾಗೂ ಲಿಂಗತಾರತಮ್ಯವನ್ನು ಹೋಗಲಾಡಿಸಲು ಶ್ರಮಿಸಿದ ಬಸವಣ್ಣರವರ ಸಮಾಕಾಲಿನರಾದ ಮಡಿವಾಳ ಮಾಚೀದೇವರ ಸಮಾಜಿಕ ಕ್ರಾಂತಿಯು ಕೂಡ ಒಂದಾಗಿದೆ ಎಂದು ತಾಲ್ಲೂಕು ದಂಡಾಧಿಕಾರಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ಮಹೇಂದ್ರ ತಿಳಿಸಿದರು.


ಅವರು ನಗರದ ತಾಲ್ಲೂಕು ಕಚೇರಿಯಲ್ಲಿನ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಆಯೋಜನೆ ಮಾಡಿದ್ದ, ಸರ್ಕಾರದ ಆದೇಶದನ್ವಯ ಮೊದಲನೇ ವರ್ಷದ ಶ್ರೀ ಮಡಿವಾಳ ಮಾಚೀದೇವರ ಜಯಂತಿಯ ಸಮಾರಂಭದಲ್ಲಿ, ಕ್ರಾಂತಿಕಾರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ವಾರ್ಚನೆ ಮಾಡಿ ಮಾತನಾಡಿದರು.


ಸಮಾಜದಲ್ಲಿ ಜಾತಿ-ಜಾತಿ ನಡುವೆ ವೈಷಮ್ಯವನ್ನು ಸೃಷ್ಟಿ ಮಾಡಿದ ಮೇಲ್ವರ್ಗದವರ ದೌರ್ಜನ್ಯವನ್ನು ತೊಡೆದು ಹಾಕಲು ತಾನು ತನ್ನ ಕುಲವನ್ನೇ ಧಿಕ್ಕರಿಸಿ, ವೈರಾಗಿಯಾಗಿ ಕುಲಕುಲವೆಂದು ಹೊಡೆದಾಡದಿರಿ ನೀವು ಕುಲದ ನೆಲಯನ್ನಾದರೂ ಬಲ್ಲಿರಾ ಎಂದು ೧೨ ನೇ ಶತಮಾನದಲ್ಲಿಯೇ ಅನುಭವ ಮಂಟಪವನ್ನು ಸ್ಥಾಪನೆ ಮಾಡಿ ಆ ಮಂಟಪದಲ್ಲಿ ಸ್ಥಾನ ಪಡೆದು, ಬಸವಣ್ಣರವರ ಜೊತೆ ಜಾತಿಯತೆಯನ್ನು ಹೋಗಲಾಡಿಸಲು ಹೆಗಲು ಕೊಟ್ಟವರು ಶ್ರೀ ಮಡಿವಾಳ ಮಾಚಿದೇವರು ಎಂದು ತಿಳಿಸಿದರು.


ಕ್ರಿ.ಪೂ.೧೧೨೦-೧೧೩೦ರ ಮಧ್ಯಭಾಗದಲ್ಲಿ ಬೀಜಾಪುರ ಜಿಲ್ಲೆಯ ದೇವರ ಹಿಪ್ಪರಗಿ ಗ್ರಾಮದ ಬಡಕುಟುಂಬದ ಅಗಸ ಸಮುದಾಯದಲ್ಲಿ ಜನಿಸಿದ ಮಾಚಿದೇವರು, ತಮ್ಮ ಸಮುದಾಯವಲ್ಲದೆ ಪ್ರತಿಯೊಂದು ಕೆಳ ಸಮುದಾಯದ ಶೋಷಣೆಯ ವಿರುದ್ದ ಬಸವಣ್ಣರವರ ಮಾರ್ಗದರ್ಶನದಲ್ಲಿ ತಮ್ಮ ಸಮಾಕಾಲಿನವರಾದ ಅಲ್ಲಮಪ್ರಭು, ಅಕ್ಕಮಹಾದೇವಿ, ಅಕ್ಕನಾಗಮ್ಮ, ಅಯ್ಯಕ್ಕಲಕ್ಕಮ್ಮ ಹಾಗೂ ಹಲವಾರು ಮಂದಿ ಶರಣರ ಸಂಪರ್ಕದಲ್ಲಿ ಸಮಾಜಕ್ಕೆ ಆರೋಗ್ಯಕರ ಸಂದೇಶ ನೀಡಿದರು ಎಂದರು.


ಅರಸತನ ಮೇಲಲ್ಲ, ಅಗಸತನ ಕೀಳಲ್ಲಾ ಎಂಬ ಸಂದೇಶವನ್ನು ನೀಡಿದ, ಮಾಚಿದೇವರು, ತಮ್ಮ ವೃತ್ತಿಯನ್ನು ಗೌರವ ವೃತ್ತಿ ಎಂದು ಭಾವಿಸುವುದರ ಜೊತೆಗೆ ತಮ್ಮ ಸಮುದಾಯವು ಕೂಡ ಜ್ಞಾನಾರ್ಜನೆಗೆ ಹೆಚ್ಚು ಒತ್ತು ನೀಡಬೇಕು, ತಮ್ಮ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ಕನಸು ಕಂಡಿದ್ದರು ಎಂದರು.


  ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ದಿ ಸಂಘದ ತಾಲ್ಲೂಕು ಅಧ್ಯಕ್ಷ ರಾಘವೇಂದ್ರ, ಸಮುದಾಯಕ್ಕೆ ತನ್ನದೇ ಆದ ತತ್ವಸಿದ್ದಾಂತಗಳ ಮುಖಾಂತರ, ಉತ್ತಮವಾದ ಸಂದೇಶ ನೀಡಿದ ಶ್ರೀ ಮಡಿವಾಳ ಮಾಚಿದೇವರ ಕನಸನ್ನು ನನಸು ಮಾಡಲು ಸಮುದಾಯ ಸಂಘಟಿತರಾಗವುದರ ಮುಖಾಂತರ, ಸರ್ಕಾರದಿಂದ ಪ್ರತಿಯೊಂದು ಸೌಲಭ್ಯಗಳನ್ನು ಪಡೆಯವುದರ ಜೊತೆಯಲ್ಲಿ, ರಾಜಕೀಯ ಸ್ಥಾನಮಾನಗಳು ನೀಡುವಂತೆ ಮನವಿ  ಮಾಡಬೇಕು ಎಂದರು.


ಈ ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ರಂಗಸ್ವಾಮಿ,  ಪ್ರಧಾನಕಾರ್ಯಧರ್ಶಿ ಶಿವಕುಮಾರ್ ಖಜಾಂಚಿ ಪ್ರದೀಪ್, ಮುಖಂಡರುಗಳಾದ ಸುನಿತಾ, ವಸಂತ, ನಾಗಮಣಿ ಹಾಗೂ ಹಲವಾರು ಮುಖಂಡರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in nation »

ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್

ರಾಮನಗರ, ಜೂ. 03:   ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ

ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ  ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ

ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ

ಡಿಸೆಂಬರ್‌ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ

ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ

ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ


ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ

ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು

ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.‌ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ

ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ  ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ

ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ

ಟೊಯೋಟಾ ಕಿರ್ಲೋಸ್ಕರ್  ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ

ಬೆಂಗಳೂರು:ಜ/06/21ಬುಧವಾರ. ಹೊಸ ಫಾರ್ಚೂನರ್ ತಂಡವು ಈಗ ಹೆಚ್ಚು ಶಕ್ತಿಶಾಲಿ ಡೀಸೆಲ್ ಸ್ವಯಂಚಾಲಿತ ಪ್ರಸರಣ ರೂಪಾಂತರಗಳನ್ನು ಮತ್ತು ವಿಶೇಷ ,

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ

ಚನ್ನಪಟ್ಟಣ:ಅ/05/20/ಸೋಮವಾರ.


ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ

ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ

Top Stories »  


Top ↑