Tel: 7676775624 | Mail: info@yellowandred.in

Language: EN KAN

    Follow us :


ನಾಡೋಜ, ಸಮನ್ವಯ, ನಿತ್ಯೋತ್ಸವ ಬಿರುದಾಂಕಿತ ಕವಿ ನಿಸಾರ್ ಅಹಮದ್ ನಿಧನ

Posted date: 03 May, 2020

Powered by:     Yellow and Red

ನಾಡೋಜ, ಸಮನ್ವಯ, ನಿತ್ಯೋತ್ಸವ ಬಿರುದಾಂಕಿತ ಕವಿ ನಿಸಾರ್ ಅಹಮದ್ ನಿಧನ

ಬೆಂಗಳೂರು:ಮೇ/೦೩/೨೦/ಭಾನುವಾರ. ಸಮನ್ವಯ ಕವಿ, ನಿತ್ಯೋತ್ಸವ ಕವಿ ಎಂಬ ಬಿರುದನ್ನು ಹೊಂದಿದ್ದ, ಶಿವಮೊಗ್ಗದಲ್ಲಿ ನಡೆದ ೭೩ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ನಾಡೋಜ ಕೊಕ್ಕರೆ ಹೊಸಳ್ಳಿ ಶೇಖ್ ಹೈದರ್ ನಿಸಾರ್ ಅಹಮದ್ (೮೪) ವಯೋಸಹಜ ಕಾಯಿಲೆಗಳಿಂದ ಬಳಲಿ ಇಂದು ಇಹಲೋಕ ತ್ಯಜಿಸಿದರು.


ದೇವನಹಳ್ಳಿ ಯಲ್ಲಿ ೧೯೩೬ ರ ಫೆಬ್ರವರಿ ೦೫ ರಂದು ಜನಿಸಿದ ಅವರು, ೧೯೫೯ ರಲ್ಲಿ ಭೂವಿಜ್ಞಾನದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು ಅಧ್ಯಾಪಕ ರಾಗಿ ನಂತರ ಪ್ರಾಧ್ಯಾಪಕರಾಗಿ ೧೯೯೪ ರವರೆಗೆ ಸೇವೆ ಸಲ್ಲಿಸಿದ್ದರು. ೧೯೮೧ ರಲ್ಲಿ ಇವರ ಕನ್ನಡ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿತು.


ಶಿವಮೊಗ್ಗದಲ್ಲಿ ನಡೆದ ೭೩ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು, ೨೦೦೩ ರಲ್ಲಿ ನಾಡಿನ ಅತ್ಯುನ್ನತ ಗೌರವವದ ನಾಡೋಜ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಯಿತು.

ನಿತ್ಯೋತ್ಸವ ತಾಯಿ ನಿನಗೆ ನಿತ್ಯೋತ್ಸವ ಎಂಬ ಸುಮಧುರ ಭಾವಗೀತೆಯು ಧ್ವನಿ ಸಾಂದ್ರಿಕೆಯಾಗಿ ಹೊರಹೊಮ್ಮಿದ್ದು ಕೇಳುಗರ ಮನಮುಟ್ಟುವಂತೆ ಮಾಡಿತು. ಕುರಿಗಳು ಸಾರ್ ಕುರಿಗಳು ಗೀತೆಯಂತು ಎಂತಹವರ ಬಾಯಲ್ಲೂ ಗುನುಗುತ್ತಿತ್ತು. ಕೊನೆಗೆ ಇದೇ ಹೆಸರಲ್ಲಿ ಒಂದು ಹಾಸ್ಯ ಚಲನಚಿತ್ರವು ತಯಾರಾಯಿತು.


ಹಲವಾರು ಕಥಾಸಂಕಲನಗಳು, ಕವನ ಸಂಕಲನಗಳನ್ನು ರಚಿಸಿದ್ದು ಪ್ರಾಥಮಿಕ ಶಾಲೆಯ ಮಕ್ಕಳಿಂದ ದ್ವಿತೀಯ ಪಿಯುಸಿ ಮಕ್ಕಳ ಪಠ್ಯ ದಲ್ಲಿ ಪದ್ಯಗಳಾಗಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಹಾಸುಹೊಕ್ಕಾಗಿವೆ.

ನಾನೆಂಬ ಪರಕೀಯ, ನಿತ್ಯೋತ್ಸವ, ಅರವತ್ತೈದರ ಐಸಿರಿ, ಸ್ವಯಂ ಸೇವೆಯ ಗಿಳಿಗಳು, ಅನಾಮಿಕ ಆಂಗ್ಲರು, ಬರಿರಂತರ, ನವೋಲ್ಲಾಸ, ಆಕಾಶಕ್ಕೆ ಸರಹದ್ದುಗಳಿಲ್ಲ, ಮನಸ್ಸು ಗಾಂಧಿ ಬಜಾರು, ನೆನೆದವರ ಮನದಲ್ಲಿ, ಸುಮುಹೂರ್ತಂ, ಸಂಜೆ ಐದರ ಮಳೆ ಇವೇ ಮೊದಲಾದ ಕಥಾ ಮತ್ತು ಕವನ ಸಂಕಲನಗಳನ್ನು ಹೊರ ತಂದಿದ್ದಾರೆ.


ಮುಖ್ಯಮಂತ್ರಿ ಯಡಿಯೂರಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ ಟಿ ರವಿ, ಸಚಿವರು, ಖ್ಯಾತ ಕವಿಗಳು ಸೇರಿದಂತೆ ನಾಡಿನ ಅನೇಕ ವಿದ್ವಾಂಸರು, ವಿದ್ಯಾರ್ಥಿಗಳು ನುಡಿನಮನ ಅರ್ಪಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in obituary »

ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು

ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ

ಡಾ ರಾಜಕುಮಾರ್ ಗೆ ಪಿತೃವಿಯೋಗ
ಡಾ ರಾಜಕುಮಾರ್ ಗೆ ಪಿತೃವಿಯೋಗ

ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ

ಹಾವು ಕಚ್ಚಿ ಅರ್ಚಕಿ ಸಾವು
ಹಾವು ಕಚ್ಚಿ ಅರ್ಚಕಿ ಸಾವು

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ

ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ

ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ‌ ನಿಧನರಾದರು.

ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ

ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:

ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ

ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ

ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ‌ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ

ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ

ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.


ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಪುನೀತ್ ಅಭಿಮಾನಿ ನೇಣುಬಿಗಿದು ಸಾವು

ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ

Top Stories »  


Top ↑