Tel: 7676775624 | Mail: info@yellowandred.in

Language: EN KAN

    Follow us :


ಸಾರ್ಥಕ ಬದುಕಿನ, ಸಮಾಜ ಸೇವಕ ಕೋಲೂರು ಪುಟ್ಟಸ್ವಾಮಿ

Posted date: 03 Aug, 2020

Powered by:     Yellow and Red

ಸಾರ್ಥಕ ಬದುಕಿನ, ಸಮಾಜ ಸೇವಕ ಕೋಲೂರು ಪುಟ್ಟಸ್ವಾಮಿ

ಚನ್ನಪಟ್ಟಣ:ಆ/೦೩/ಸೋಮವಾರ. ತಾಲ್ಲೂಕಿನ ಕೋಲೂರು ಗ್ರಾಮದ ಕೆಂಪಮ್ಮ ಚಿಕ್ಕೈದೇಗೌಡರ ಮಗ ಕೋಲೂರು ಪುಟ್ಟಸ್ವಾಮಿ ಯವರು ೮೮ ವರ್ಷ ಸಾರ್ಥಕ ಬದುಕು ನಡೆಸಿ ವಿಧಿವಶರಾಗಿದ್ದಾರೆ.

ಶ್ರೀಯುತರು ಪ್ರಾಥಮಿಕ ಹಾಗೂ ಪ್ರೌಢಶಾಲಾ ವ್ಯಾಸಂಗವನ್ನು ಚನ್ನಪಟ್ಟಣ ನಗರದಲ್ಲಿ ಮುಗಿಸಿ ಬೆಂಗಳೂರಿನಲ್ಲಿ ಬಿಎಸ್ಸಿ ಹಾಗೂ ಬಿಎಲ್ ವಿದ್ಯಾಭ್ಯಾಸವನ್ನು ಮುಗಿಸಿದ್ದರು.


ವಿದ್ಯಾರ್ಥಿಯಾಗಿದ್ದಾಗಲೇ ಸಂಘಟನೆ ಮತ್ತು ಕ್ರೀಡೆಗಳನ್ನು ಮೈಗೂಡಿಸಿಕೊಂಡು ಬೆಳೆದ ಇವರು ಮುಂದೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕುಸ್ತಿ ಹಾಗೂ ವಾಲಿಬಾಲ್ ಪಂದ್ಯಾವಳಿ ಯಲ್ಲಿ ತನ್ನ ಕ್ರೀಡಾಶಕ್ತಿ ಮೆರೆದವರು.

ಬೆಂಗಳೂರು ವಿಶ್ವ ವಿದ್ಯಾಲಯದ ತೋಟಗಾರಿಕಾ ಅಧಿಕಾರಿಯಾಗಿ, ಇಡೀ ಜ್ಞಾನ ಭಾರತಿ ವಲಯವನ್ನು ಹಸಿರುಮಯ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.


ಜನತಾ ಸಹಕಾರ ಬ್ಯಾಂಕಿನ ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಜನತಾ ಶಿಕ್ಷಣ ಸಂಸ್ಥೆಯನ್ನು ಬೆಳೆಸುವಲ್ಲಿ ಅವರ ಪಾತ್ರ ಅಪೂರ್ವವಾದುದು. ಇವರ ಶ್ರಮದಿಂದ ಇಂದು ಈ ಸಂಸ್ಥೆ ವಿವಿಧ ಕವಲುಗಳಾಗಿ ಪಸರಿಸಿ ಸಾವಿರಾರು ಜನ ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿ, ನೂರಾರು ಜನರಿಗೆ  ಕೆಲಸ ನೀಡಿದೆ.


ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ ಅವರು ಇಟ್ಟ ಹೆಜ್ಜೆಯಿಂದ ಅದು ಬೃಹದಾಕಾರವಾಗಿ ಬೆಳೆದು ನಿಂತಿದೆ. ಒಕ್ಕಲಿಗರ ಸಮಾಜ ಸಂಪರ್ಕ ವೇದಿಕೆಯ ನಿರ್ದೇಶಕರಾಗಿ, ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಸದಸ್ಯರಾಗಿ ತಮ್ಮ ಜೀವಿತ ಅವಧಿಯಲ್ಲಿ ಕ್ರಮಿಸಿದ ದಾರಿ ವಿಶೇಷ ವಾದುದು.

ಇವರು ಚನ್ನಪಟ್ಟಣ ಗಾಂಧಿಭವನದ ಮುಂಭಾಗ ಸ್ವಾತಂತ್ರ್ಯ ಹೋರಾಟಗಾರ ವಿ.ವೆಂಕಟಪ್ಪ, ವಿಶ್ವ ವಿಖ್ಯಾತ ಅರ್ಥಶಾಸ್ತ್ರಜ್ಞರಾದ ಪ್ರೊ.ಕೆ ವೆಂಕಟಗಿರೀಗೌಡರ ಪ್ರತಿಮೆ ಸ್ಥಾಪಿಸಿ ಅವರ ಜೊತೆಯಲ್ಲಿ ಬೆಳದ ನೆನಪಿಗೆ ಕಿರು ಕಾಣಿಕೆಯನ್ನು ಸಲ್ಲಿಸಿದ್ದಾರೆ.

ಅಷ್ಟೇ ಅಲ್ಲದೆ ಇಲ್ಲಿನ ಬಾಲಕರ ಕಿರಿಯ ಕಾಲೇಜಿನ ಆವರಣದಲ್ಲಿ ನಿರ್ಮಾಣವಾಗಿರುವ ಶತಮಾನೋತ್ಸವ ಭವನದ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ.


ಪುಟ್ಟಸ್ವಾಮಿಯವರು ಕೋಲೂರಿನವರಾದರೂ ಅವರು ವಿದ್ಯಾರ್ಥಿಯಾಗಿದ್ದಾಗ ತಿಟ್ಟಮಾರನಹಳ್ಳಿಯಲ್ಲಿ ಇದ್ದರು. ಅವರು ನಮಗೆಲ್ಲರಿಗೂ ಅಚ್ಚು ಮೆಚ್ಚಾಗಿದ್ದರು.

ಶ್ರೀಯುತರು ಡಾ.ವರದಪ್ಪನವರ ಸಹಪಾಠಿ ಯಾಗಿದ್ದವರು. ಅವರು ಬಹಳ ಸಾರಿ ಅವರ ಜೊತೆಯಲ್ಲಿ ಸೇರುವಾಗ ನಮಗೆಲ್ಲರಿಗೂ ಚಿರಪರಿಚಿತರು ಎಂದು ಹಿರಿಯ ಪತ್ರಕರ್ತ ಸು ತ ರಾಮೇಗೌಡ ರು ನೆನಪಿನ ಬುತ್ತಿಗೆ ಜಾರಿದರು.


ಶ್ರೀಯುತರಿಗೆ ನಾಡ ಪ್ರಭು ಕೆಂಪೇಗೌಡ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕಾರ ದಕ್ಕಿದೆ. ಅಷ್ಟೇ ಅಲ್ಲದೆ, ಇಂದಿರಾ ಗಾಂಧಿ ರಾಷ್ಟ್ರೀಯ ಏಕತಾ ಪ್ರಶಸ್ತಿ ಪುರಸ್ಕೃತರು ಹೌದು.

ಶ್ರೀಯುತ ಪುಟ್ಟಸ್ವಾಮಿ ಯವರು, ಸಮಾಜಮುಖಿಯಾಗಿ ಆಲೋಚಿಸುವವರಾಗಿದ್ದಾರು. ಆದರ್ಶಣೀಯ ವ್ಯಕ್ತಿತ್ವ ಉಳ್ಳ ಇವರು ವಿಶೇಷವಾಗಿ ಈ ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ವೆಂಕಟಪ್ಪ ಹಾಗೂ ವಿಶ್ವ ಮಟ್ಟದ ಅರ್ಥಶಾಸ್ತ್ರಜ್ಞರಾಸ ಪ್ರೊ.ವೆಂಕಟಗಿರಿಗೌಡರ ನೆರಳಿನಲ್ಲಿ ಬೆಳೆದವರು. ಅವರ ವಿಚಾರಗಳನ್ನು ಮೈಗೂಡಿಸಿಕೊಂಡಿದ್ದರು. ಶ್ರೀಯುತರ ನೆನಪು ಸದಾ ಕಾಲ ಉಳಿಯುವಂತಹದ್ದು.


ಇವರು ಪತ್ನಿ ಶ್ರೀಮತಿ ಪಂಕಜ, ೩ ಜನ ಗಂಡು ಮಕ್ಕಳು ಹಾಗೂ ಓರ್ವ ಹೆಣ್ಣು ಮಗಳನ್ನು ಅಗಲಿದ್ದು ಕೋಲೂರು ಗ್ರಾಮದ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in obituary »

ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು

ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ

ಡಾ ರಾಜಕುಮಾರ್ ಗೆ ಪಿತೃವಿಯೋಗ
ಡಾ ರಾಜಕುಮಾರ್ ಗೆ ಪಿತೃವಿಯೋಗ

ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ

ಹಾವು ಕಚ್ಚಿ ಅರ್ಚಕಿ ಸಾವು
ಹಾವು ಕಚ್ಚಿ ಅರ್ಚಕಿ ಸಾವು

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ

ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ

ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ‌ ನಿಧನರಾದರು.

ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ

ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:

ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ

ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ

ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ‌ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ

ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ

ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.


ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಪುನೀತ್ ಅಭಿಮಾನಿ ನೇಣುಬಿಗಿದು ಸಾವು

ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ

Top Stories »  


Top ↑