Tel: 7676775624 | Mail: info@yellowandred.in

Language: EN KAN

    Follow us :


ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಸ್ವಾಮಿ ನಿಧನ

Posted date: 07 Aug, 2020

Powered by:     Yellow and Red

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಸ್ವಾಮಿ ನಿಧನ

ಚನ್ನಪಟ್ಟಣ:ಆ/07/20/ಶುಕ್ರವಾರ. ಕರ್ನಾಟಕ ರಾಜ್ಯ ರೈತಸಂಘ ದ (ಕೋಡಿಹಳ್ಳಿ ಚಂದ್ರಶೇಖರ್ ಬಣ) ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಸ್ವಾಮಿ (62) ನಿನ್ನೆ ರಾತ್ರಿ ನಿಧನರಾದರು.


ತಾಲ್ಲೂಕಿನ ಗಡಿ ಗ್ರಾಮವಾದ ಕದರಮಂಗಲ ದ ನಿವಾಸಿಯಾದ ಅವರು ಮೊದಲಿಗೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ, ತಾಲ್ಲೂಕು ರೈತಸಂಘ ದ ಅಧ್ಯಕ್ಷರಾಗಿ, ಜಿಲ್ಲಾಧ್ಯಕ್ಷರಾಗಿ ಸಂಘಟನೆ ಮಾಡಿದ್ದರು. ಕಳೆದ ಇಪ್ಪತ್ತು ವರ್ಷಗಳ ಕಾಲ ಸಂಘಟನೆಯಲ್ಲಿ ತೊಡಗಿದ್ದು, ನೂರಾರು ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ರೈತರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು.


ರೈತ ಸಂಘವು ಹೋಳಾದ ನಂತರ ಕೋಡಿಹಳ್ಳಿ ಚಂದ್ರಶೇಖರ ಬಣದಲ್ಲಿ ಗುರುತಿಸಿಕೊಂಡು, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಂಘಟನೆ ಮಾಡುವಲ್ಲಿ ನಿರತರಾಗಿದ್ದರು. ಇತ್ತೀಚೆಗೆ ನಿಧನರಾದ ವಿಠಲೇನಹಳ್ಳಿ ಚಲುವಯ್ಯ ನವರ ದಿವಸದ ಸಮಯದಲ್ಲಿ, ರೈತ ಹುತಾತ್ಮರ ದಿನದ ಅಂಗವಾಗಿ ಕಾರ್ಯಕ್ರಮ ಮಾಡುವ ಮೂಲಕ ಸರ್ಕಾರದಿಂದ ರೈತರಿಗಾಗುತ್ತಿರುವ ನೋವನ್ನು ತೋಡಿಕೊಂಡಿದ್ದರು.


ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು 10:00 ಗಂಟೆಗೆ ಸ್ವಗ್ರಾಮ ದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


ರೈತ ಮುಖಂಡರಾದ ಸಿ ಪುಟ್ಟಸ್ವಾಮಿ, ಎಂ ರಾಮು, ಆಣಿಗೆರೆ ಮಲ್ಲಯ್ಯ, ಹಿರಿಯ ಪತ್ರಕರ್ತ ಸು ತ ರಾಮೇಗೌಡ, ಅಬ್ಬೂರು ರಾಜಶೇಖರ ಸೇರಿದಂತೆ ಅನೇಕ ಮುಖಂಡರು, ರೈತಸಂಘ ದ ಪದಾಧಿಕಾರಿಗಳು, ಎಲ್ಲಾ ಪಕ್ಷದ ಮುಖಂಡರು ಸಂತಾಪ ಸೂಚಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in obituary »

ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು

ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ

ಡಾ ರಾಜಕುಮಾರ್ ಗೆ ಪಿತೃವಿಯೋಗ
ಡಾ ರಾಜಕುಮಾರ್ ಗೆ ಪಿತೃವಿಯೋಗ

ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ

ಹಾವು ಕಚ್ಚಿ ಅರ್ಚಕಿ ಸಾವು
ಹಾವು ಕಚ್ಚಿ ಅರ್ಚಕಿ ಸಾವು

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ

ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ

ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ‌ ನಿಧನರಾದರು.

ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ

ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:

ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ

ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ

ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ‌ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ

ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ

ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.


ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಪುನೀತ್ ಅಭಿಮಾನಿ ನೇಣುಬಿಗಿದು ಸಾವು

ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ

Top Stories »  


Top ↑