ಶ್ರೀ ಕ್ಷೇತ್ರ ಕಬ್ಬಾಳು ಗ್ರಾಮದ ಬೆಟ್ಟದಲ್ಲಿ ತನ್ನ ಪ್ರೀಯಕರನ ಜೊತೆ ವಿವಾಹಿತ ಯುವತಿ ಆತ್ಮಹತ್ಯೆ

ರಾಮನಗರ: ಸಾತನೂರು ಪೋಲೀಸ್ ಠಾಣೆ ವ್ಯಾಪ್ತಿಯ ಶ್ರೀ ಕ್ಷೇತ್ರ ಕಬ್ಬಾಳು ಗ್ರಾಮದ ಬೆಟ್ಟದಲ್ಲಿ ತನ್ನ ಪ್ರೀಯಕರನ ಜೊತೆ ವಿವಾಹಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕನಕಪುರ ತಾಲೂಕು ಕಬ್ಬಾಳು ಗ್ರಾಮದ ಕಬ್ಬಾಳು ಬೆಟ್ಟದಿಂದ ಹಾರಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕಬ್ಬಾಳು ಬೆಟ್ಟದಲ್ಲಿ ಘಟನೆ ನಡೆದಿದ್ದು ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚಿಟಿ ತಾಲೂಕು ಉರುಗ್ಯಂ ಗ್ರಾಮದ ಚಂದನ(20) ಹಾಗೂ ಆಕೆಯ ಪ್ರಿಯಕರ ಅದೇ ಗ್ರಾಮದ ಸತೀಶ್ ಕುಮಾರ್(24) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.
ಚಂದನಳನ್ನು ಆಕೆಯ ಪೋಷಕರು ತಮ್ಮ ಗ್ರಾಮದ ಪಕ್ಕವಿರುವ ದೊಡ್ಡಮರಳ್ಳಿ ಗ್ರಾಮದ ಗಣೀಶ್ ಎಂಬಾತನ ಜೊತೆ ಕಳೆದ ವರ್ಷ ಮದುವೆ ಮಾಡಿಕೊಟ್ಟಿದ್ದರು. ಗಣೇಶ್ ಪ್ರಸ್ತುತ ಕನಕಪುರದ ವಾಸು ಹೋಟೆಲ್ ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದು, ಕನಕಪುರದಲ್ಲಿ ಕುಟುಂಬದೊಡನೆ ವಾಸವಿದ್ದ ಎಂದು ಹೇಳಲಾಗಿದೆ.
ಒಂದೇ ಗ್ರಾಮದವರಾದ ಚಂದನ ಮತ್ತು ಸತೀಶ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಬೇರೊಬ್ಬನ ಜೊತೆ ಮದುವೆ ಮಾಡಿಕೊಟ್ಟಿದ್ದರಿಂದ ಆಕೆ ಬೇಸತ್ತಿದ್ದಳು ಎಂದು ಹೇಳಲಾಗುತ್ತಿದೆ.
ಸೆ.22 ರಂದು ಚಂದನ ಮನೆಯಿಂದ ಕಾಣೆಯಾಗಿದ್ದು, ಆಕೆ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇಂದು ತನ್ನ ಪ್ರಿಯಕರ ಸತೀಶ್ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಬೆಟ್ಟದಲ್ಲಿ ಓಡಾಡುವ ದನಗುರಿಗಾಹಿಗಳು ಹಾಗೂ ಗ್ರಾಮಸ್ಥರಿಗೆ ಕೊಳೆತು ನಾರುತ್ತಿದ್ದ ಎರಡು ಶವಗಳ ಸುಳಿವು ಸಿಕ್ಕು ಅದನ್ನು ಹತ್ತಿರದ ಸಾತನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ಕನಕಪುರ ಸಿಪಿಐ ಕೃಷ್ಣ ಹಾಗು ಸಾತನೂರು ಪಿಎಸ್ಐ ರವಿಕುಮಾರ್ ಸ್ಥಳಕ್ಕೆ ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಚಂದನಳ ತಾಯಿ ರತ್ನಮ್ಮ ತಮ್ಮ ಪುತ್ರಿ ಕಾಣೆಯಾಗಿರುವ ಬಗ್ಗೆ ಕನಕಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶವಗಳನ್ನು ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಒಪ್ಪಿಸಲಾಗುವುದು ಎಂದು ಪೋಲೀಸರು ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in obituary »

ಹಾವು ಕಚ್ಚಿ ಅರ್ಚಕಿ ಸಾವು
ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ

ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ ನಿಧನರಾದರು.

ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ

ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ

ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ

ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.
ಬ

ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ

ಪತ್ನಿಯನ್ನು ಕೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪತಿ
ರಾಮನಗರ:ಕನಕಪುರ; ಅ/16/21. ಅಂಗಡಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ವ್ಯಾಪಾರಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ ತಾ

ಶ್ರೀ ಕ್ಷೇತ್ರ ಕಬ್ಬಾಳು ಗ್ರಾಮದ ಬೆಟ್ಟದಲ್ಲಿ ತನ್ನ ಪ್ರೀಯಕರನ ಜೊತೆ ವಿವಾಹಿತ ಯುವತಿ ಆತ್ಮಹತ್ಯೆ
ರಾಮನಗರ: ಸಾತನೂರು ಪೋಲೀಸ್ ಠಾಣೆ ವ್ಯಾಪ್ತಿಯ ಶ್ರೀ ಕ್ಷೇತ್ರ ಕಬ್ಬಾಳು ಗ್ರಾಮದ ಬೆಟ್ಟದಲ್ಲಿ ತನ್ನ ಪ್ರೀಯಕರನ ಜೊತೆ ವಿವಾಹಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕನಕಪುರ ತಾಲೂಕು ಕಬ್ಬಾಳು ಗ್ರಾಮದ ಕಬ್ಬಾಳು ಬೆಟ್ಟದಿಂದ ಹಾರ
ಪ್ರತಿಕ್ರಿಯೆಗಳು