16 ಕೆರೆಗಳ ನಿರ್ಮಾತೃ, ದೇಶದ ಗಮನ ಸೆಳೆದಿದ್ದ ದಾಸನದೊಡ್ಡಿಯ ಕಲ್ಮನೆ ಕಾಮೇಗೌಡ ಇನ್ನಿಲ್ಲ

ಮಂಡ್ಯ: 16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಜಿಲ್ಲೆಯ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ (86) ಸೋಮವಾರ (ಅ 17) ಮುಂಜಾನೆ ಅನಾರೋಗ್ಯದಿಂದ ನಿಧನರಾದರು.
ಕಳೆದ ರಾತ್ರಿ ಕಾಮೇಗೌಡ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಇದಾದ ನಂತರ ವಾಂತಿಯನ್ನು ಮಾಡಿಕೊಂಡಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮನೆಯಲ್ಲಿ ಮುಂಜಾನೆ ಕೊಲೆಯುಸಿರೆಳೆದಿದ್ದಾರೆ.
ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕಾಮೇಗೌಡ ಅವರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿದ್ದ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಕಾಮೇಗೌಡರ ಕಾಯಕ ಮೆಚ್ಚಿದ್ದ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕಾಮೇಗೌಡರನ್ನು ಶ್ಲಾಘಿಸಿದ್ದರು. ಯೋಗ ದಿನಕ್ಕಾಗಿ ಮೈಸೂರಿಗೆ ಬಂದಿದ್ದ ಪ್ರಧಾನಿಯನ್ನು ಭೇಟಿಯಾಗುವ ಆಸೆಯನ್ನು ಕಾಮೇಗೌಡರು ವ್ಯಕ್ತಪಡಿಸಿದ್ದರು. ಆದರೆ ಅನಾರೋಗ್ಯದಿಂದ ಅದು ಸಾಧ್ಯವಾಗಿರಲಿಲ್ಲ.
ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಎಂದು ಕಾಮೇಗೌಡ ಅವರು ಸ್ವತಃ ತಮ್ಮ ಕಯ್ಯಾರೆ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು. ಜೊತೆಗೆ ಸಾವಿರಾರು ಗಿಡಗಳನ್ನು ನೆಟ್ಟು ಬೆಟ್ಟದಲ್ಲಿ ಹಸಿರು ಕ್ರಾಂತಿ ಮಾಡುವ ಮೂಲಕ ಪರಿಸರ ಕಾಳಜಿಯನ್ನು ಕಾಮೇಗೌಡರು ಮೆರೆದಿದ್ದರು.
*ಕೆರೆ ನಿರ್ಮಾಣಕ್ಕೆ ಕಾಮೇಗೌಡರು?:* ಕುರಿಗಾಹಿಯಾಗಿದ್ದ ಕಾಮೇಗೌಡರು ಸುಮಾರು 15 ವರ್ಷಗಳ ಹಿಂದೆ ಕುಂದೂರು ಬೆಟ್ಟಕ್ಕೆ ಕುರಿ ಮೇಯಿಸಲು ಹೋಗಿದ್ದರು. ಆಗ ವಿಪರೀತ ದಾಹವಾಗಿ ನೀರಿಗಾಗಿ ಪರದಾಡಿದ್ದರು. ಬಳಿಕ ಸ್ವಲ್ಪ ದೂರದ ಮನೆಗೆ ಹೋಗಿ ನೀರು ಕೇಳಿ ಪಡೆದಿದ್ದರು. ಆಗ ನಾನು ದಾಹ ತೀರಿಸಿಕೊಂಡೆ ಆದರೆ ಪ್ರಾಣಿಗಳ ಪರಿಸ್ಥಿತಿ ಏನು ಎನ್ನುವ ಚಿಂತೆ ಅವರಿಗೆ ಕಾಡಿತ್ತು. ಹೀಗಾಗಿ ಗುಡ್ಡದಲ್ಲಿ ಕೆರೆ ನಿರ್ಮಾಣಕ್ಕೆ ಮುಂದಾದರು.
ಕಾಮೇಗೌಡರು ಗುಡ್ಡದಲ್ಲಿ ಕೆರೆ ತೋಡುತ್ತಿದ್ದನ್ನು ಕಂಡು ಆರಂಭದಲ್ಲಿ ಅನೇಕರು ಗೇಲಿ ಮಾಡಿದ್ದರು. ಇವನಿಗೆ ಹುಚ್ಚು ಹಿಡಿದಿದೆ, ಅದಕ್ಕೆ ಇಲ್ಲಿ ಕೆರೆ ತೋಡುತ್ತಿದ್ದಾನೆ ಎಂದು ಮಾತನಾಡಿದ್ದರು. ಆದರೆ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಕಾಮೇಗೌಡರು, ತಮ್ಮ ಕೆಲಸವನ್ನು ಮುಂದುವರಿಸಿದ್ದರು. ಬಳಿಕ 16 ಕೆರೆಗಳನ್ನು ನಿರ್ಮಿಸಿ ಪ್ರಧಾನಿ ಮೋದಿ, ದೇಶದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಕಾಮೇಗೌಡರು ತೋಡಿದ ಕೆರೆಗಳಲ್ಲಿ ಕಡು ಬೇಸಿಗೆಯಲ್ಲಿ ಕೂಡ ನೀರು ತುಂಬಿರುತ್ತದೆ. ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ನೀರು ಕಡಿಮೆಯಾದರೂ ಇವರು ತೋಡಿದ ಕೆರೆಗಳಲ್ಲಿ ನೀರು ತುಂಬಿರುತ್ತಿತ್ತು. ತಮ್ಮ ಕುರಿಗಳನ್ನು ಮತ್ತು ಜಾನುವಾರುಗಳನ್ನು ಮೇಯಿಸುವಾಗ ಪರ್ವತ ಪ್ರದೇಶದ ಕಣಿವೆಗಳಲ್ಲಿ ನೀರು ಸಿಗದೇ ಪರಿತಪಿಸುತ್ತಿರುವ ಪ್ರಾಣಿ-ಪಕ್ಷಿಗಳನ್ನು ಕಂಡು ಕೆರೆಗಳನ್ನು ಅಗೆಯುವ ಆಲೋಚನೆ ಹೊಳೆಯಿತು ಎಂದು ಕಾಮೇಗೌಡರು ಈ ಹಿಂದೆ ಹೇಳಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in obituary »

ಪೌಳಿದೊಡ್ಡಿ ಗ್ರಾಮದ ಮುಖಂಡ ಜಯರಾಮಯ್ಯ ನಿಧನ
ಚನ್ನಪಟ್ಟಣ: ನ/೧೯/೨೨. ತಾಲ್ಲೂಕಿನ ವಂದಾರಗುಪ್ಪೆ ಗ್ರಾಪಂ ವ್ಯಾಪ್ತಿಯ ಪೌಳಿದೊಡ್ಡಿ ಗ್ರಾಮದ ಹಿರಿಯ ಮುಖಂಡ ಜಯರಾಮಯ್ಯ (78) ಇಂದು ಮುಂಜಾನೆ ನಿಧ

ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು
ಮಂಡ್ಯ, ಅ.24: ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಕೆರೆಯಲ್ಲಿ ಕೈಕಾಲು ತೊಳೆಯುತ್ತಿದ್ದಾಗ ಅಯತಪ್ಪಿ ಬಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಸೋ

16 ಕೆರೆಗಳ ನಿರ್ಮಾತೃ, ದೇಶದ ಗಮನ ಸೆಳೆದಿದ್ದ ದಾಸನದೊಡ್ಡಿಯ ಕಲ್ಮನೆ ಕಾಮೇಗೌಡ ಇನ್ನಿಲ್ಲ
ಮಂಡ್ಯ: 16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಜಿಲ್ಲೆಯ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ (86) ಸೋಮ

ಎಪ್ಪತ್ತು ವರ್ಷ ಬ್ರಿಟನ್ ಆಳಿದ ರಾಣಿ ಎಲಿಜಬೆತ್ II ನಿಧನ
ಲಂಡನ್: ವಯೋಸಹಜ ಖಾಯಿಲೆಯಿಂದ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್-II ತಮ್ಮ 96 ನೇ ವಯಸ್ಸಿನಲ್ಲಿ ಗುರುವಾರ ರಾತ್

ಪಾಂಡವಪುರಮಾಜಿ ಶಾಸಕರಾದ ಕೆ.ಕೆಂಪೇಗೌಡಇನ್ನಿಲ್ಲ
ಮಂಡ್ಯ: ಪಾಂಡವಪುರ;
ಮಾಜಿ ಶಾಸಕ ಕೆ.ಕೆಂಪೇಗೌಡ(96) ವಯೋಸಹಜವಾಗಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಇಂದು ಮಧ್ಯಾಹ್ನ 3 ರಿಂದ 4ಗಂಟೆಯೊಳಗೆ ಸ್ವಗ್ರಾಮ ಪಾಂಡವಪುರ

ಸ್ತಬ್ಧವಾಯ್ತು \'ಉತ್ತರ\'ದ ಧ್ವನಿ: ಸಚಿವ ಉಮೇಶ್ ಕತ್ತಿ ಸವೆಸಿದ ಹಾದಿ
ಬೆಂಗಳೂರು: ರಾಜ್ಯ ಕಂಡ ಅಪರೂಪದ ರಾಜಕಾರಣಿ, ಜನತಾ ಪರಿವಾರ ಮೂಲದ ಹಿರಿಯ ಮುತ್ಸದ್ಧಿ ಉಮೇಶ್ ಕತ್ತಿ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮ

ಮಕ್ಕಳಿಗೆ ವಿಷ ಕುಡಿಸಿ ಸಾವಿಗೆ ಶರಣಾದ ರೈತ ಸಂಘದ ಅಧ್ಯಕ್ಷನ ಪತ್ನಿ
ಮಾಗಡಿ: ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ
ಬೆಂಗಳೂರು: ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ( 83 ) ಗುರುವಾರ ರಾತ್ರಿ ನಗರದ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವ

ಚನ್ನಿಗನಹೊಸಹಳ್ಳಿ ಗ್ರಾಮದಲ್ಲಿ ಕಾಡಾನೆಗೆ ಬಲಿಯಾದ ರೈತ ಮಹಿಳೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭೇಟಿ
ಚನ್ನಪಟ್ಟಣ.ಆ.೦೯: ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿ ತುಳಿದು ಸಾಯಿಸಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಚೆನ್ನಿಗನಹೊಸಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತ ಮಹಿಳೆಯ

ಬಸ್ ಮತ್ತು ಬೈಕ್ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸಾವು
ರಾಮನಗರ: ತಾಲೂಕಿನ ಕೈ ಲಾಂಚ ಹೋಬಳಿಯ ಗೌಡಯ್ಯನದೊ ಡ್ಡಿ ಗ್ರಾಮದ ಸಮೀಪದ ಕೆರೆ ಏರಿ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಬಸ್ ಮತ್ತು ಬೈಕ್ ಅಪಘಾ
ಪ್ರತಿಕ್ರಿಯೆಗಳು