
ಬಮೂಲ್ ಕಛೇರಿಯಲ್ಲಿ ನಿರ್ದೇಶಕರು ಮತ್ತು ಬೆಂಬಲಿಗರ ನಡುವೆ ಜಟಾಪಟಿ
ಚನ್ನಪಟ್ಟಣ.ಜ.೨೭: ನಗರದಲ್ಲಿನ ಬಮೂಲ್ ಕಛೇರಿಯಲ್ಲಿ ಶುಕ್ರವಾರ ಬೆಳಿಗ್ಗೆ ಚುನಾಯಿತ ಬಮೂಲ್ ನಿರ್ದೇಶಕ ಹೆಚ್ ಸಿ ಜಯಮುತ್ತು ಮತ್ತು ಇತ್ತೀಚೆಗೆ ಸರ್ಕಾರದಿಂದ ನಾಮ ನಿರ್ದೇಶಿತ ರಾದ ಎಸ್ ಲಿಂಗೇಶಕುಮಾರ್ ಮತ್ತು ಇವರಿಬ್ಬರ ಬೆಂಬಲಿಗರ ನಡುವೆ ಜಂಗೀ ಕುಸ್ತಿ ನಡೆಯಿತು. ಹಲವಾರು ಬೆಂಬಲಿಗರ ನಡುವೆ ಅಸಂಬದ್ಧ ಪದಗಳ ವಿನಿಮಯದ ಸುರಿಮಳೆ ಜೊತೆಗೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಪೋಲಿಸರ ಮ

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ
ಚನ್ನಪಟ್ಟಣ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ( ರಿ) ತಾಲ್ಲೂಕು ಘಟಕ ಚನ್ನಪಟ್ಟಣ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚನ್ನಪಟ್ಟಣ ಇವರ ಸಹಯೋಗದೊಂದಿಗೆ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದಲ್ಲಿ ಎಸ್.ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು.ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರೌಢಶಾಲಾ ಸಹ ಶಿಕ್ಷಕರ

ಪೌರಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಿ: ಡಾ.ಅವಿನಾಶ್ ಮೆನನ್
ರಾಮನಗರ, ಜ. 2: ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.ಅವರು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ಮಚಾರಿ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕನಕಪುರ,ರಾಮನಗರ,ಚನ್ನಪಟ್ಟಣ, ಮಾಗಡಿ, ಬಿಡದಿ ಹಾಗೂ ಹಾರೋಹಳ್ಳಿ ಈ ಭಾಗದಲ್ಲಿ ಜನ

ಜಿಲ್ಲೆಯ ಕೆರೆಗಳನ್ನು ತುಂಬಿಸಲು ನೀರಾವರಿ ಯೋಜನೆಗಳಿಗೆ ವೇಗ: ಡಾ ಸಿ ಎನ್ ಅಶ್ವತ್ಥನಾರಾಯಣ
ರಾಮನಗರ, ಜ. 2: ಜಿಲ್ಲೆಯಲ್ಲಿರುವ 2,500 ಕೆರೆಗಳಿಗೆ ನೀರು ತುಂಬಿಸುವ ಗುರಿಯೊಂದಿಗೆ ಹಲವಾರು ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಒತ್ತುಕೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ ಗುರುವಾರ ಹೇಳಿದರು. ಅವರು ಜಿಲ್ಲಾಡಳಿತದ ವತಿಯಿಂದ ನಡೆದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಜಿಲ್ಲೆಯ ಜನರಿಗೆ ಕುಡಿಯಲು ಮತ್ತು ವ್ಯವಸಾಯಕ್ಕೆ

ವಸ್ತು, ವ್ಯಕ್ತಿ ಆರಿಸಿಕೊಳ್ಳಲು ಯೋಚಿಸುತ್ತೇವೆ ಜನಪ್ರತಿನಿಧಿ ಆರಿಸಲು ಎಡಗುತ್ತಿದ್ದೇವೆ. ನ್ಯಾ ಎಂ ಮಹೇಂದ್ರ
ಚನ್ನಪಟ್ಟಣ: ಜ:೨೫:೨೩. ಒಂದು ನಿರ್ಜೀವ, ಸಜೀವ, ವ್ಯಕ್ತಿ, ಸಂಗಾತಿ ಆರಿಸಿಕೊಳ್ಳಲು ಹಲವಾರು ಬಾರಿ ಯೋಚಿಸುತ್ತೇವೆ. ನಮ್ಮ ಸಮಾಜವನ್ನು ಉಳಿಸಲು, ದೇಶವನ್ನು ರಕ್ಷಿಸಲು ನಾವೇ ಆರಿಸಿಕೊಳ್ಳಬೇಕಿರುವ ಜನಪ್ರತಿನಿಧಿಯನ್ನು ನಾವು ಕಡೆಗಣಿಸುತ್ತಿದ್ದೇವೆ ಎಂದು ತಾಲ್ಲೂಕಿನ ನ್ಯಾಯಾಲಯದ ಪ್ರಧಾನ ಸಿವಿಲ್

ಹಳೆ ದ್ವೇಷದ ಹಿನ್ನೆಲೆ. ಕಣ್ಣಿಗೆ ಖಾರದ ಪುಡಿ ಎರಚಿ, ಮಚ್ಚು ಬೀಸಿ ಕತ್ತು ಕೊಯ್ದು ಮಾರಣಾಂತಿಕ ಹಲ್ಲೆ
ಮದ್ದೂರು: ೨೪-೨೩; ಜನನಿಬಿಡ ಪ್ರದೇಶವಾದ ತಾಲೂಕು ಕಚೇರಿಯ ಆವರಣದಲ್ಲಿ, ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ತನ್ನ ದಾಯಾದಿ ಮೇಲೆ ಕಣ್ಣಿಗೆ ಖಾರದ ಪುಡಿ ಎರಚಿ, ಮಚ್ಚಿನಿಂದ ಕತ್ತುಕೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಸ್ಥಳದಲ್ಲಿದ್ದ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಮಂಗಳವಾರ ಮಧ್ಯಾಹ್ನ ಜರುಗಿದೆ.ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದನಂದನ್ ಎಂಬ ವ್

ನಗರದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ
ಚನ್ನಪಟ್ಟಣ.ಜ.೨೩: ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುರ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಗಲು ವೇಳೆಯಲ್ಲಿ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ಸಾರಿಗೆ ಬಸ್ನಲ್ಲಿ ಪ್ರಯಾಣ ಮಾಡುವ ಸಾರ್ವಜನಿಕರಿಂದ ಮೊಬೈಲ್, ಜೇಬು ಕಳ್ಳತನ ಮಾಡುತ್ತಿದ್ದ ಹಾಗೂ ರಾತ್ರಿ ವೇಳೆ ಲಾರಿಗಳನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳನ್ನು ತೋ

ಉಜ್ಜನಹಳ್ಳಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ
ಚನ್ನಪಟ್ಟಣ: ಜನ-ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಗುರುವಾರ ರಾತ್ರಿ ಚಿರತೆಯೊಂದು ಬಿದ್ದಿದೆ.ಈ ಭಾಗದಲ್ಲಿ ಚಿರತೆಯೊಂದು ಜನ ಜಾನುವಾರುಗಳಿಗೆ ದುಸ್ವಪ್ನವಾಗಿ ಕಾಡುತ್ತಿತ್ತು. ಜೊತೆಗೆ ಕೆಲವು ಜಾನುವಾರುಗಳ ಮೇಲೆ ದಾಳಿ ನಡೆಸಿ

ಯಶಸ್ವಿಯಾಗಿ ಜರುಗಿದ ಶ್ರೀ ಕೆಂಗಲ್ ಲಕ್ಷ್ಮೀವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ಜಿಲ್ಲಾಡಳಿತ ಭಾಗಿ
ಚನ್ನಪಟ್ಟಣ: ತಾಲ್ಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಮತ್ತು ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸಹಯೋಗದೊಂದಿಗೆ ಅಯ್ಯನಗುಡಿ ಶ್ರೀ ಕೆಂಗಲ್ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಲಕ್ಷ್ಮೀವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವವು ಧಾರ್ಮಿಕ

ಕೆಂಗಲ್ ಜಾತ್ರೆ ರದ್ದುಗೊಳಿಸಿದರೂ ಕಳೆಗಟ್ಟುತ್ತಿರುವ ಜಾನುವಾರುಗಳು
ಚನ್ನಪಟ್ಟಣ: ಜಾನುವಾರುಗಳಿಗೆ ಇತ್ತೀಚೆಗೆ ರಾಜ್ಯದಾದ್ಯಂತ ಚರ್ಮಗಂಟು ರೋಗ ಹರಡಿದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಡಳಿತ ಇತಿಹಾಸ ಪ್ರಸಿದ್ಧ ಕೆಂಗಲ್ ದನಗಳ ಜಾತ್ರೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ನಡುವೆ ಈ ಆದೇಶಕ್ಕೆ ಸೆಡ್ಡು ಹೊಡೆದಿರುವ ರೈತರು ದನಗಳ ಜಾತ್ರೆ ನಡೆಸುವ ಮೂಲಕ ಈ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಯಥಾವತ್ತಾಗಿ ಮುಂದುವರೆಸಿದ್ದಾರೆ.