Tel: 7676775624 | Mail: info@yellowandred.in

Language: EN KAN

    Follow us :


ಕಾಡಾನೆ ದಾಳಿಗೆ ಕೂಲಿಕಾರ್ಮಿಕ ಬಲಿ

Posted date: 03 Jun, 2023

Powered by:     Yellow and Red

ಕಾಡಾನೆ ದಾಳಿಗೆ ಕೂಲಿಕಾರ್ಮಿಕ ಬಲಿ

ಚನ್ನಪಟ್ಟಣ: ಇಷ್ಟು ದಿನ ಕಾಡಾನೆಗಳು ರೈತರ ಕೃಷಿ ಜಮೀನುಗಳಿಗೆ ದಾಳಿಯಿಟ್ಟು ಬೆಳೆಯನ್ನ ಹಾಳು ಮಾಡುತ್ತಿದ್ದವು. ಇತ್ತೀಚೆಗೆ ಮನುಷ್ಯರ ಮೇಲೂ ದಾಳಿ ಮಾಡಿ ಪ್ರಾಣ ತೆಗೆಯುತ್ತಿವೆ. ಶನಿವಾರ ಮುಂಜಾನೆ ತಾಲ್ಲೂಕಿನ ವಿರುಪಸಂದ್ರ ಗ್ರಾಮದ ಲೋಕೇಶ್ ಎಂಬುವವರ ಮಾವಿನ ತೋಟದ ಕಾವಲುಗಾರ ವೀರಭದ್ರ (೫೨) ಎಂಬ ವ್ಯಕ್ತಿಯ ಮೇಲೆ ದಾಳಿ ಒಂಟಿ ಸಲಗವೊಂದು ದಾಳಿ ಮಾಡಿದ್ದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇಷ್ಟಾದರೂ ಸಹ ಅರಣ್ಯ ಇಲಾಖೆ ಅಧಿಕಾರಿಗಳಾಗಲಿ ಸರ್ಕಾರವಾಗಲಿ ಶಾಶ್ವತವಾಗಿ ಕಾಡಾನೆಗಳನ್ನು ಓಡಿಸಲು ಯಾವುದೇ ಕ್ರಮವನ್ನು ಕೈಗೊಂಡಿಲ್ಲ.


ಇತ್ತೀಚೆಗೆ ಕನಕಪುರದಲ್ಲಿ ಕಾವಲುಗಾರನನ್ನ ಆನೆ ಕೊಂದ ಘಟನೆ ಮಾಸುವ ಮುನ್ನವೇ ಚನ್ನಪಟ್ಟಣ ತಾಲೂಕಿನ ವಿರುಪಸಂದ್ರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಾವಿನ ತೋಟದ ಕಾವಲುಗಾರ ಮೃತಪಟ್ಟಿರುವ ಘಟನೆ ನಡೆದಿದೆ. ಈ ಹಿಂದೆಯೂ ಸಹ ಅರಳಾಳುಸಂದ್ರ ಗ್ರಾಮದ ರೈತ ಮಹಿಳೆಯೂ ಒಂಟಿ ಸಲಗದ ಕಾಲಿಗೆ ಸಿಕ್ಕಿ ಸಾವನ್ನಪ್ಪಿದ್ದರು.


ವೀರಭದ್ರಯ್ಯ(52) ಎಂಬ ವ್ಯಕ್ತಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಇವರು ಎಂದಿನಂತೆ ವಿರುಪಸಂದ್ರ ಗ್ರಾಮದ ಲೋಕೇಶ್ ಎಂಬುವವರ ಮಾವಿನ ತೋಟದಲ್ಲಿ ಕಾವಲನ್ನು ಕಾಯುತ್ತಿದ್ದರು. ಈ ತೋಟವನ್ನು ಕಲೀಂ ಎಂಬುವವರು ಗುತ್ತಿಗೆಗೆ ಪಡೆದುಕೊಂಡಿದ್ದರು. ಇದೇ ವೇಳೆ ಕಾಡಾನೆ ದಾಳಿ ಮಾಡಿ ವ್ಯಕ್ತಿಯ ತಲೆಯ ಮೇಲೆ ಕಾಲಿಟ್ಟು ಆತ ಮೃತಪಡುವಂತೆ ಮಾಡಿದೆ. ಕನಕಪುರ ಮೂಲದವರಾದ ವೀರಭದ್ರಯ್ಯ ಅವರು ಲೋಕೇಶ್ ಅವರ ಮಾವಿನ ತೋಟದಲ್ಲಿ ಮೂರು ತಿಂಗಳಿಂದ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದರು. 


ಕಾಡಾನೆ ತುಳಿತಕ್ಕೆ ಒಳಗಾದ ವೀರಭದ್ರಯ್ಯ ಅವರು ಸಾವನ್ನಪ್ಪುತ್ತಿದ್ದಂತೆ ರೈತರು ಆಕ್ರೋಶವನ್ನು ಹೊರ ಹಾಕಿ, ನಾವು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಎಷ್ಟೇ ಮನವಿಯನ್ನ ಮಾಡಿದರು ಸಹ ಯಾವುದೇ ಪ್ರಯೋಜನವಾಗಿಲ್ಲ ಕಾಡಾನೆ ದಾಳಿ ನಿರಂತರವಾಗಿ ನಡೆಯುತ್ತಿದೆ. ನಾವು ಸಹ ಆನೆಯ ಜೊತೆಗೆ ಹೋರಾಟವನ್ನು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.


ಅಕ್ಕೂರು ಪೋಲಿಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕ ಬಸವರಾಜು ಮತ್ತು ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಕಿರಣ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಇತ್ತೀಚಿಗೆ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಆನೆ ದಾಳಿ ಮಾಡಿ ಮೃತಪಟ್ಟಿದ್ದರು ಈ ಘಟನೆ ನಡೆದು ಮೂರು ದಿನ ಅಷ್ಟೇ ಆಗಿದ್ದು ಚನ್ನಪಟ್ಟಣದಲ್ಲೂ ಸಹ ಇಂತಹದ್ದೇ ಘಟನೆ ನಡೆದಿರುವುದು ಇತರೆ ಕಾವಲುಗಾರರಲ್ಲಿ ಆತಂಕವನ್ನು ಸೃಷ್ಟಿ ಮಾಡಿದೆ.


*ಓಡಾಡಲು ಭಯವಾಗುತ್ತಿದೆ;*

ಬಿ.ವಿ.ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ವಿರುಪಸಂದ್ರ ದಲ್ಲಿ ನಡೆದಿರುವ ದುರ್ಘಟನೆಯಿಂದ ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಇದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಎರಡನೇ ಘಟನೆಯಾಗಿದ್ದು ಹಾನಿ ತುಳಿತದಿಂದಾಗಿ ನಮಗೆಲ್ಲರಿಗೂ ಸಹ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಗ್ರಾಮದ ಜನರು ಭಯದಿಂದ ಹೇಳಿದ್ದಾರೆ. 


*15ಲಕ್ಷ ಪರಿಹಾರ ಘೋಷಣೆ:*

ಆನೆ ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ ವೀರಭದ್ರಯ್ಯನವರ ಕುಟುಂಬಕ್ಕೆ ವಲಯ ಅರಣ್ಯಾಧಿಕಾರಿ ಕಿರಣ್ ಅವರು ಸರ್ಕಾರದಿಂದ 15 ಲಕ್ಷ ರೂಪಾಯಿ ಪರಿಹಾರ ಬರುತ್ತದೆ. ಅದನ್ನು ಆದಷ್ಟೂ ಶೀಘ್ರವಾಗಿ ಕುಟುಂಬಕ್ಕೆ ನೀಡುತ್ತೇವೆ, ಇದರ ಜೊತೆಗೆ ಎರಡು ವರ್ಷಗಳ ಕಾಲ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿಗಳನ್ನು ಸಹ ನೀಡಲಾಗುತ್ತದೆ ಎಂದು ಸ್ಥಳದಲ್ಲೇ ಘೋಷಣೆ ಮಾಡಿದ್ದಾರೆ. ಪರಿಹಾರ ಘೋಷಣೆ ಮಾಡಿ ಮಾತನಾಡಿದ ಕಿರಣ್ ರವರು ಈ ರೀತಿಯ ದುರ್ಘಟನೆ ನಡೆದಿರುವುದು ನಮಗೂ ಸಹ ತುಂಬಾ ಬೇಸರ ತಂದಿದೆ ಅವರ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದಲೂ ಸಹ ಪರಿಹಾರವನ್ನು ಕೊಡಿಸುವುದಾಗಿ ಭರವಸೆ ನೀಡಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು

ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್

 ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್‍ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ

Top Stories »  


Top ↑