Tel: 7676775624 | Mail: info@yellowandred.in

Language: EN KAN

    Follow us :


ಕಳೆದ ಐದು ವರ್ಷಗಳ ಅವಧಿಯಲ್ಲಿ ಒಮ್ಮೆ, ಈ ಅವಧಿಯಲ್ಲಿ ಮೊದಲ ಕೆಡಿಪಿ ಸಭೆ ನಡೆಸಲು ಸಜ್ಜಾದ ಶಾಸಕ ಕುಮಾರಸ್ವಾಮಿ

Posted date: 12 Jun, 2023

Powered by:     Yellow and Red

ಕಳೆದ ಐದು ವರ್ಷಗಳ ಅವಧಿಯಲ್ಲಿ ಒಮ್ಮೆ, ಈ ಅವಧಿಯಲ್ಲಿ ಮೊದಲ ಕೆಡಿಪಿ ಸಭೆ ನಡೆಸಲು ಸಜ್ಜಾದ ಶಾಸಕ ಕುಮಾರಸ್ವಾಮಿ

ರಾಮನಗರ/ಚನ್ನಪಟ್ಟಣ: ಕಳೆದ ಬಾರಿ ಅಂದರೆ ೨೦೧೮-೨೦೨೩ ರ ಅವಧಿಯಲ್ಲಿ ೨೦೨೦ ರ ಸೆಪ್ಟೆಂಬರ್ ತಿಂಗಳಲ್ಲಿ ಒಮ್ಮೆ ಮಾತ್ರ ಪ್ರಗತಿ ಪರಿಶೀಲನೆ (ಕೆಡಿಪಿ) ಸಭೆ ಮಾಡಿದ್ದ ಮಾಜಿ ಮುಖ್ಯಮಂತ್ರಿ, ಶಾಸಕ ಹೆಚ್ ಡಿ ಕುಮಾರಸ್ವಾಮಿ ಯವರು ೨೦೨೩ ಅವಧಿಯ ಎರಡನೇ ತಿಂಗಳಲ್ಲಿ ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನಾಳೆ ಅಂದರೆ ಸೋಮವಾರ ಬೆಳಿಗ್ಗೆ ೧೦:೩೦ ಕ್ಕೆ ಅಧಿಕಾರಿಗಳ ಸಭೆ ಕರೆದಿದ್ದಾರೆ.


೨೦೧೮ ರಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರಿಂದ ಒಂದೂ ದಿನವೂ ಯಾವುದೇ ಇಲಾಖೆಗಳಿಗೆ ಸಂಬಂಧಿಸಿದಂತೆ, ಅಧಿಕಾರಿಗಳ ಸಭೆಯನ್ನು ಕರೆದಿರಲಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಶಾಸಕರಾಗಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಪ್ರಥಮ ಬಾರಿಗೆ ೨೦೨೦ರ ಸೆಪ್ಟೆಂಬರ್ ತಿಂಗಳಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ಅಧಿಕಾರಿಗಳ ಸಭೆಯಾದರೂ ಸಹ ಅಲ್ಲಿ ಹಲವಾರು ಜೆಡಿಎಸ್ ಪಕ್ಷದ ಮುಖಂಡರು ಸಭಾಂಗಣಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುಜುಗರಕ್ಕೆ ಒಳಗಾಗಿದ್ದರು.


ಅಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳು ಇಲ್ಲೇ ಉಳಿಯಲು ಕೆಲವರಿಗೆ ಹಣ ನೀಡಿದ್ದಾರೆ . ಕೆಲ ಏಜೆಂಟ್ ಗಳಿಂದ ಹಣ ವಸೂಲಿ ಮಾಡಿದ್ದಾರೆ, ಯಾರದ್ದೋ ಒತ್ತಡಕ್ಕೆ ಮಣಿದು ಪ್ರತಿ ತಿಂಗಳು ಕಲೆಕ್ಷನ್ ಮಾಡಿ ಕೊಡುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನು ನಾನು ಸಹಿಸುವುದಿಲ್ಲಾ,  ಗ್ರಾಮಾಂತರ ಪೋಲಿಸ್ ಠಾಣೆಯ ಪಿಎಸ್ಐ ಒಬ್ಬರು ಇಲ್ಲೇ ಉಳಿದುಕೊಳ್ಳಲು ನಾಲ್ಕು ಲಕ್ಷ ರೂ ನೀಡಿದ್ದಾರೆ‌‌. ನಾನು ಇನ್ನೂ ಶಕ್ತಿ ಉಳಿಸಿಕೊಂಡಿದ್ದೇನೆ. ಇಂತಹವಕ್ಕೆಲ್ಲಾ ಸೊಪ್ಪು ಹಾಕುವುದಿಲ್ಲಾ ಎಂದು ಸಿ ಪಿ ಯೋಗೇಶ್ವರ್ ಹೆಸರೇಳದೆ ಗುಡುಗಿದ್ದರು.


ಅದಾದನಂತರ ೨೦೨೩ ರ ಚುನಾವಣೆ ವರೆಗೂ ಯಾವುದೇ ಇಲಾಖಾಧಿಕಾರಿಗಳ ಸಭೆ ನಡೆಸದೆ ಪಕ್ಷ ಬಲವರ್ಧನೆಗೆ ಹೆಚ್ಚು ಒತ್ತು ನೀಡಿದ್ದರು. ಐದು ವರ್ಷಗಳ ಕಾಲ ಒಂದೇ ಒಂದು ನಾಡಹಬ್ಬ ಹಾಗೂ ರಾಷ್ಟ್ರೀಯ ಹಬ್ಬಗಳಿಗೂ ಬಾರದೆ ಅಧಿಕಾರಿಗಳು ಸಹ ಬೇಜಾವಬ್ದಾರಿಯಿಂದ ಹಬ್ಬಗಳನ್ನು ಆಚರಿಸಲು ಅನುವು ಮಾಡಿಕೊಟ್ಟಂತಾಗಿತ್ತು. ಈ ಅವಧಿಯಲ್ಲಿ ಅವರ ಮುಖ್ಯಮಂತ್ರಿ ಆಸೆ ವಿಫಲಗೊಂಡಿದ್ದರಿಂದ ಈ ಬಾರಿ ಮೂರು ತಿಂಗಳಿಗೊಮ್ಮೆ ಅಧಿಕಾರಿಗಳ ಸಭೆ ನಡೆಸುವುದಾಗಿ ಹಾಗೂ ಎಲ್ಲಾ ರಾಷ್ಟ್ರೀಯ ಹಬ್ಬಗಳು ಮತ್ತು ನಾಡಹಬ್ಬಗಳಿಗೂ ಹಾಜರಾಗುವುದಾಗಿ ‌ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುವಾಗ ತಿಳಿಸಿದ್ದರು.


ನಾಳೆ ಅಂದರೆ ಸೋಮವಾರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಹಮ್ಮಿಕೊಂಡಿದ್ದು, ಅಧಿಕಾರಿಗಳ ಸಭೆ ನಡೆಸುತ್ತಾರೆ. ಬೆಂಬಲಿಗರನ್ನು ಸಭೆಯಿಂದ ಹೊರಗಿಟ್ಟು, ಅಧಿಕಾರಿಗಳ ಸಭೆ ಮಾತ್ರ ನಡೆಸಿ, ದಿಕ್ಕು ತಪ್ಪುತ್ತಿರುವ ತಾಲ್ಲೂಕು ಆಡಳಿತವನ್ನು ಸರಿಯಾದ ದಿಕ್ಕಿಗೆ ಕೊಂಡೊಯ್ಯಲು ಈ ಸಭೆ ಬಹಳ ಮುಖ್ಯವಾಗಿದೆ. ಅಧಿಕಾರಿಗಳ ಕಿವಿ ಹಿಂಡುವ ಕೆಲಸವನ್ನು ಕುಮಾರಸ್ವಾಮಿ ಯವರು ಮಾಡಬೇಕಾಗಿದೆ. ಆ ಅವಕಾಶವನ್ನು ಕುಮಾರಸ್ವಾಮಿ ಯವರು ಸದುಪಯೋಗಿಸಿಕೊಂಡು, ತಾಲ್ಲೂಕಿನ ಏಳ್ಗೆಗೆ ಶ್ರಮಿಸಬೇಕಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು

ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್

 ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್‍ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ

Top Stories »  


Top ↑