Tel: 7676775624 | Mail: info@yellowandred.in

Language: EN KAN

    Follow us :


ಕಾರ್ಯಕರ್ತರು, ಹಿತೈಷಿಗಳಿಗಾಗಿ ರಾಜಕೀಯದಲ್ಲಿದ್ದೇನೆ: ಹೆಚ್ಡಿಕೆ

Posted date: 13 Jun, 2023

Powered by:     Yellow and Red

ಕಾರ್ಯಕರ್ತರು, ಹಿತೈಷಿಗಳಿಗಾಗಿ ರಾಜಕೀಯದಲ್ಲಿದ್ದೇನೆ: ಹೆಚ್ಡಿಕೆ

ಚನ್ನಪಟ್ಟಣ: ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.


ಬಹುತೇಕ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಇಲಾಖಾವಾರು ವರದಿ ಮಂಡಿಸಿದರು. ಎಲ್ಲಾ ವರದಿಗಳನ್ನು ಆಲಿಸಿ, ಇಲಾಖೆಗೆ ಸಂಬಂಧಿಸಿದಂತೆ ಕೆಲವು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡ ಅವರು ಮುಂದಿನ ದಿನಗಳಲ್ಲಿ ಎಲ್ಲಾ ಇಲಾಖೆಯ ವರದಿ ಪಡೆದು ತಾಲ್ಲೂಕನ್ನು ಸಮಗ್ರ ಅಭಿವೃದ್ಧಿ ಮಾಡಲು ಶ್ರಮಿಸುತ್ತೇನೆ ಎಂದರು. ಈ ಸಭೆಯಲ್ಲಿ ತಹಶಿಲ್ದಾರ್ ಮಹೇಂದ್ರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ್ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಸಭೆಗೂ ಮುನ್ನಾ ತಾಲ್ಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಈಗಾಗಲೇ ಇರುವಂತ ಶಾಸಕರ ಕಛೇರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಜಯಮುತ್ತು ಸೇರಿದಂತೆ ಹಲವಾರು ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.


ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ.

ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ.

ನನ್ನದು ಬಿಡಿ ಹಾಲಿ ಸಂಸದರ ಕಥೆಯೇ ಕೇಳಿ.

ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ.

ಅಂತಹವರೇ ಚುನಾವಣೆ ಬೇಡಾ ಅಂತ ಹೇಳುತ್ತಿರುವಾಗ ನಮ್ಮದೆಲ್ಲಾ ಯಾವ ಲೆಕ್ಕ !

ಎಂದು ಸಂಸದ ಡಿ.ಕೆ.ಸುರೇಶ್ ಹೆಸರೇಳದೆ ಹೆಚ್ಡಿಕೆ ಟಾಂಗ್ ನೀಡಿದರು.


ಕಾಂಗ್ರೆಸ್ ಪಕ್ಷದವರು ಘೋಷಣೆ ಮಾಡಿದಾಗ ನನಗೂ ಫ್ರೀ, ನಿನಗೂ ಫ್ರೀ ಅಂದಿದ್ರು.!

ಈಗ ಅದನ್ನ ಯಾವರೀತಿ ನಿಭಾಯಿಸುತ್ತಾರೆ ಎಂದು ನೋಡಬೇಕು ಎಂದು ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಕಿಡಿ ಕಾರಿದರು.


ಲೋಕಸಭಾ ಚುನಾವಣಾ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರವಾಗಿ

ಚನ್ನಪಟ್ಟಣದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಯವರು ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ.

ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲಾ. ಆ ಸಮಯ ಬಂದಾಗ ನೋಡಿಕೊಳ್ಳೋಣಾ ಎಂದರು.

ಈ ವಿಚಾರವನ್ನ ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ.

ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ಮಾಡಿದ್ದೇನೆ.

ಗೆದ್ದವರು, ಸೋತವರ ಜೊತೆ ಮಾತನಾಡಿದ್ದೇನೆ.

ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ ಎಂದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು

ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್

 ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್‍ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ

Top Stories »  


Top ↑