Tel: 7676775624 | Mail: info@yellowandred.in

Language: EN KAN

    Follow us :


ಕೆಂಪೇಗೌಡರು ಬೆಂಗಳೂರಿಗಷ್ಟೇ ಸೀಮಿತವಾಗಿರಲಿಲ್ಲ, ಏಕನಾಥ ಕಾಂತಾ ಸ್ವಾಮೀಜಿ

Posted date: 28 Jun, 2023

Powered by:     Yellow and Red

ಕೆಂಪೇಗೌಡರು ಬೆಂಗಳೂರಿಗಷ್ಟೇ ಸೀಮಿತವಾಗಿರಲಿಲ್ಲ, ಏಕನಾಥ ಕಾಂತಾ ಸ್ವಾಮೀಜಿ

ಚನ್ನಪಟ್ಟಣ: ನಾಡಪ್ರಭು ಕೆಂಪೇಗೌಡರು ಬೆಂಗಳೂರಿಗಷ್ಟೇ ಸೀಮಿತವಾಗಿರಲಿಲ್ಲ, ಅವರ ಬಿರುದೇ ಸೂಚಿಸುವಂತೆ ಇಡೀ ನಾಡಿಗೆ ದೊರೆ ಆಗಿದ್ದರು, ಸಾಮಂತ ರಾಜರಾಗಿದ್ದರೂ ಸಹ ನಾಡು ಕಟ್ಟಿ ವಿಸ್ತರಿಸುವಲ್ಲಿ ವಿಶೇಷವಾದ ಜ್ಞಾನ ಉಳ್ಳವರಾಗಿದ್ದರು. ವಿಶೇಷವಾಗಿ ಬಹಳ ದೂರದೃಷ್ಟಿಯ ಚಿಂತಕರಾಗಿದ್ದ ನಾಡಪ್ರಭು ಕೆಂಪೇಗೌಡರು ಬೆಂಗಳೂರು ಸೇರಿದಂತೆ 12 ಪ್ರಾಂತ್ಯಗಳ ವ್ಯಾಪ್ತಿ ಒಳಗೊಂಡಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದರು. ಪಶು-ಪಕ್ಷಿಗಳು ಸೇರಿದಂತೆ ನಾಡಿನ ರೈತರಿಗೆ ಅನುಕೂಲ ಆಗುವಂತಹ ಕೆರೆ ಕಟ್ಟೆಗಳನ್ನು ಕಟ್ಟಿಸುವ ಮೂಲಕ ಅವರ ಕಾಲದಲ್ಲಿ ಸಾಲು ಸಾಲು ಅಭಿವೃದ್ಧಿ ಕಾರ್ಯಗಳು ಜರುಗಿದವು ಎಂದು ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಏಕನಾಥ ಕಾಂತಾ ಸ್ವಾಮೀಜಿ ತಿಳಿಸಿದರು.  


ನಗರದ ಬೆಂಮೈ ಹೆದ್ದಾರಿಯ ಮಂಗಳವಾರಪೇಟೆಯ ಬಸವನಗುಡಿ ಯಿಂದ ಬಂದ ಮೆರವಣಿಗೆಯ ನಂತರ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 514 ಜಯತ್ಯುಂತ್ಸವದಲ್ಲಿ ಆರ್ಶಿರ್ವಚನ ನೀಡಿದ ಅವರು, ಕೆಂಪೇಗೌಡರು ತಮ್ಮ ಕಾಲದಲ್ಲಿ ಅಭಿವೃದ್ಧಿಯಲ್ಲಿ ಸಾಧನೆಗಳ ಶಿಖರವನ್ನೇ ನಿರ್ಮಿಸಿದ್ದು, ಅವರ ಹಾದಿಯನ್ನು ನಾವು ಅನುಸರಿಸಬೇಕಿದೆ ಎಂದರು.


ತಾಲೂಕಿನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಣಾ ಸಮಿತಿ ಬಹಳ ಅಚ್ಚುಕಟ್ಟಾಗಿ ಆಯೋಜಿಸಿದೆ. ಯಾವುದೇ ರಾಜಕೀಯಕ್ಕೆ ಆಸ್ಪದ ನೀಡದೇ ಎಲ್ಲರೂ ಒಗ್ಗೂಡಿ ಸ್ವಾಭಿಮಾನದಿಂದ, ಸಾಮೂಹಿಕವಾಗಿ ಕಾರ್ಯಕ್ರಮದ ನಿರ್ವಹಣೆಯನ್ನು ಮಾಡಿರುವುದು ಶ್ಲಾಘನೀಯ. ಮುಂದಿನ ವರ್ಷಗಳಲ್ಲಿ ಇನ್ನಷ್ಟು ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಹಾರೈಸಿದರು.


*ಅದ್ಭುತ ಆಡಳಿತಗಾರ:*

ನಾಡಪ್ರಭು ಕೆಂಪೇಗೌಡರ ಕುರಿತು ಉಪನ್ಯಾಸ ನೀಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಚಂದ್ರು, ಅದ್ಭುತ ಆಡಳಿತಗಾರರಾಗಿದ್ದ ಕೆಂಪೇಗೌಡರು ಬೆಂಗಳೂರು ನಗರವನ್ನು ನಿರ್ಮಿಸಿ ಅದನ್ನು ಚಿರಸ್ಥಾಯಿಯಾಗಿಸಿದ್ದಾರೆ. ತಮ್ಮ 21 ವಯಸ್ಸಿಗೆ ಅಧಿಕಾರಕ್ಕೆ ಬಂದ ಕೆಂಪೇಗೌಡರು ತಮ್ಮ ಆಡಳಿತಾವಧಿಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತಂದರು. ಬಾಲ್ಯದಲ್ಲೇ ವಿದ್ಯಾಭ್ಯಾಸ ಹಾಗೂ ಸಮರಕಲೆಗಳಲ್ಲಿ ಪ್ರಾವೀಣ್ಯತೆ ಪಡೆದಿದ್ದ ಅವರಿಗೆ ಆಡಳಿತ ನಡೆಸುವುದು ಕಷ್ಟವೇನು ಆಗಲಿಲ್ಲ ಎಂದರು.


ಬಾಲ್ಯದಲ್ಲೇ ಕೃಷ್ಣದೇವರಾಯರ ವಿಜಯನಗರದ ಸಾಮಾಜ್ಯದ ವೈಭವನ್ನು ನೋಡಿದ್ದ ಕೆಂಪೇಗೌಡರಿಗೆ ತಮ್ಮ ವ್ಯಾಪ್ತಿಯಲ್ಲೂ ಇಂಥದ್ದೇ ಒಂದು ಮಹಾನಗರವನ್ನು ನಿರ್ಮಿಸುವ ಅಭಿಲಾಷೆ ಇತ್ತು. ಇದಕ್ಕಾಗಿ ಸೂಕ್ತ ಸ್ಥಳದ ಹುಡುಕಾಟಕ್ಕೆ ಹೊರಟು ಅವರಿಗೆ ಯಲಹಂಕದಿಂದ ದಕ್ಷಿಣಕ್ಕೆ ಹತ್ತು ಮೈಲಿ ದೂರದಲ್ಲಿ ಸೂಕ್ತ ಪ್ರದೇಶ ಸಿಕ್ಕಿತ್ತು. ಆ ಜಾಗವನ್ನೇ ಆಯ್ದುಕೊಂಡ ಕೆಂಪೇಗೌಡರು ಇಂದು ಜಗತ್ತೇ ನಮ್ಮತ್ತ ನೋಡುವಂತ  ಬೆಂಗಳೂರನ್ನು ನಿರ್ಮಿಸಿದರು ಎಂದು ತಿಳಿಸಿದರು.


ಬೆಂಗಳೂರು ನಿರ್ಮಿಸುವಾಗಲೇ ದೂರದೃಷ್ಟಿಯಿಂದ ಕೆಂಪೇಗೌಡರು ವಿಶಾಲವಾದ ರಸ್ತೆಗಳನ್ನು ನಿರ್ಮಿಸಿದರು, ಇದಲ್ಲದೇ ನಾಲ್ಕು ಕಡೆಯೂ ಗೋಪುರಗಳನ್ನು ಸ್ಥಾಪಿಸಿದರು. ಇದಷ್ಟೇ ಅಲ್ಲದೇ ಅಭಿವೃದ್ಧಿ ದೃಷ್ಟಿಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ ಸಾಕಷ್ಟು ಕೆರೆಗಳನ್ನು ನಿರ್ಮಿಸಿದರು. ಅವರ ಮುಂದಾಲೋಚನೆಯ ಫಲವಾಗಿ  16ನೇ ಶತಮಾನದಲ್ಲೇ ಬೆಂಗಳೂರು ಪಾಶ್ಚಾತ್ಯ ವ್ಯಾಪಾರಿಗಳ ಗಮನ ಸೆಳೆದಿತ್ತು. ಇಂದು ಬೆಂಗಳೂರು ಐಟಿ ಹಬ್ ಆಗಿ ಗುರುತಿಸಿಕೊಂಡು ಬೆಳೆದು ನಿಂತಿದೆಯೆಂದರೆ ಅದಕ್ಕೆ ಕೆಂಪೇಗೌಡರು ಹೊಂದಿದ್ದ ದೂರದೃಷ್ಟಿಯೇ ಕಾರಣ ಎಂದರು.


ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ಸಹಕಾರ ನೀಡಿದ ಜೆಡಿಎಸ್ ಮುಖಂಡ ಪ್ರಸನ್ನ ಪಿ.ಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ವೆಂಕಟರಾಮೇಗೌಡ, ಪ್ರಮೋದ್ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು. ಇದೇ  ವೇಳೆ ಉನ್ನತ ವ್ಯಾಸಂಗದಲ್ಲಿ ಸಾಧನೆ ಮಾಡಿದ ತಾಲೂಕಿನ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.


ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ ಹಲವು ಮುಖಂಡರು ಭಾಗವಹಿಸಿದ್ದರು.


*ಅದ್ಧೂರಿ ಮೆರವಣಿಗೆ;*

ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯುತ್ಸವ ಅಂಗವಾಗಿ ನಗರದ ಮಂಗಳಾರಪೇಟೆ ಬಳಿ ಇರುವ ಬಸವೇಶ್ವರ ದೇವಸ್ಥಾನದ ಬಳಿಯಿಂದ ಕೊಲ್ಲಾಪುರದಮ್ಮನ ದೇವಸ್ಥಾನದವರೆಗೆ ಅದ್ಧೂರಿ ಮೆರವಣಿಗೆ ನಡೆಸಲಾಯಿತು.


ಮಂಗಳವಾರ ಬೆಳಗ್ಗೆ ಬಸವೇಶ್ವರ ದೇವಸ್ಥಾನದ ಬಳಿ ಮೆರವಣಿಗೆಗೆ ತಾಲೂಕು  ದಂಡಾಧಿಕಾರಿ ಮಹೇಂದ್ರ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮರೀಗೌಡ ಚಾಲನೆ ನೀಡಿದರು. ವಿವಿಧ ಕಲಾತಂಡಗಳೊಂದಿಗೆ ಬೆಳ್ಳಿ ರಥದಲ್ಲಿ ಕೆಂಪೇಗೌಡರ ಭಾವಚಿತ್ರವಿಟ್ಟು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಲಾಯಿತು. ರಸ್ತೆಯುದ್ದಕ್ಕೂ ಪಟಾಕಿ ಸಿಡಿಸಿ ಕಲಾತಂಡದೊಂದಿಗೆ ಹಜ್ಜೆ ಹಾಕುತ್ತಾ ಕೆಂಪೇಗೌಡರ ಅಭಿಮಾನಿಗಳು ಸಂಭ್ರಮಿಸಿದರು. ಹಳ್ಳಿಕಾರ್ ತಳಿಯ ರಾಸುಗಳು ಹಾಗೂ ಕುರಿಯನ್ನು ಮೆರವಣಿಯ ಮುಖಾಂತರ ವೇದಿಕೆಗೆ ಕರೆತಂದಿದ್ದು ವಿಶೇಷವೆನಿಸಿತು.


 ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು

ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್

 ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್‍ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ

Top Stories »  


Top ↑