ಗಾಂಜಾ ಸೊಪ್ಪು ಮಾರುತ್ತಿದ್ದ ಏಳು ಮಂದಿ ಬಂಧನ

ರಾಮನಗರ: ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ತಾವರೆಕೆರೆ ಪೊಲೀಸರು ದಾಳಿಯನ್ನು ನಡೆಸಿ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತಾವರೆಕೆರೆ ಟೌನ್‌ನಲ್ಲಿ ಏಳು ಮಂದಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ಹತ್ರಿರವಿರುವ ಗಾಣದಹೊಸೂರು ಗ್ರಾಮದ ಮಧುಕುಮಾರ್ (23), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗುಲ್‌ಸಂದ್ರ ಗ್ರಾಮದ ಲಕ್ಷ್ಮೀಕಾಂತ (23), ಮೈಸೂರಿನ ಕುಂಬಾರಕೊಪ್ಪಲು ನಿವಾಸಿ ಶರತ್ ಗೌಡ (20), ಮಡಿಕೇರಿ ತಾಲೂಕಿನ ಹೆಬ್ಬೆಟ್ಟೆಗಿರಿ ಗ್ರಾಮದ ವಿಜಯ್(26), ತಾವರೆಕೆರೆ ಟೌನ್‌ನ ಗುಣಶೇಖರ್, ರಾಯಚೂರು ಟೌನ್‌ನ ಗಾಂಧಿ ಚೌಕ್ ನಿವಾಸಿ ಪವನ್ ಕುಮಾರ್ (24), ಪಾಂಡಪುರದ ತಂಗರಾಜು (31) ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳಿಂದ ಒಟ್ಟು 2,40,000 ಬೆಲೆ ಬಾಳುವ ಸುಮಾರು 6 ಕೆ.ಜಿ ಗಾಂಜಾ ಸೊಪ್ಪು, 5,000 ನಗದು ಹಣ. ಎರಡು ದ್ವಿಚಕ್ರ ವಾಹನ ಮತ್ತು ಏಳು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
*ಆರೋಪಿಗಳ ವಶಕ್ಕೆ ತಂಡ ರಚನೆ;*
ಆರೋಪಿಗಳನ್ನು ಹಿಡಿಯಲು ತಂಡವನ್ನ ರಚನೆ ಮಾಡಲಾಗಿತ್ತು. ಎಸ್ಪಿ ಕಾರ್ತೀಕ್ ರೆಡ್ಡಿ, ಹೆಚ್ಚುವರಿ ಪೊಲೀಸ್ ಅಧಿಕಾರಿ ಸುರೇಶ್, ಮಾಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಕೃಷ್ಣಕುಮಾರ್ ಅವರ ಮಾರ್ಗದರ್ಶನದಲ್ಲಿ ತಾವರೆಕೆರೆ ಪೊಲೀಸ್ ಠಾಣೆಯ ಪಿಐ ರಾಮಪ್ಪ ಬಿ ಗುತ್ತೇರ್, ಪಿಎಸ್‌ಐ ಮಹಮ್ಮದ್ ಅಲ್ಲಾವುದ್ದೀನ್, ಭಾಸ್ಕರ್ ಹಾಗೂ ಸಿಬ್ಬಂದಿ ಮಂಜುನಾಥ್, ಹೇಮಂತ್ ಕುಮಾರ್, ಲಕ್ಷ್ಮೀಕಾಂತ್, ಗೋವಿಂದರಾಜು, ಮಂಜುನಾಥ, ತಿಪ್ಪೇಸ್ವಾಮಿ , ಹನುಮಂತರಾಜು, ಹರೀಶ್ ಅವರು ಕಳ್ಳರನ್ನು ಪತ್ತೆ ಮಾಡಿದ್ದಾರೆ.
*ತಾವರೆಕೆರೆ ಪೊಲೀಸರ ಕಾರ್ಯಕ್ಕೆ ಶ್ಲಾಘನೆ:*
ಏಳು ಮಂದಿ ಸಮಾಜಘಾತಕ ಕೆಲಸ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವುದಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ತಾವರೆಕೆರೆ ಪೊಲೀಸರನ್ನು ಅಭಿನಂದಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara-district »

ಸಂಸ್ಕೃತಿ ಎನ್ನುವುದೇ ನಡವಳಿಕೆ ಡಾ ಬಿ ಟಿ ನೇತ್ರಾವತಿಗೌಡ
ಚನ್ನಪಟ್ಟಣ: ಸಂಸ್ಕೃತಿ ಎಂಬುದೇ ನಡವಳಿಕೆ, ಆ ನಡವಳಿಕೆ ಎಂಬುದು ನಮ್ಮ ಮನೆಯಲ್ಲೇ ಆರಂಭವಾಗಬೇಕು, ನಾವು ನಮ್ಮ ಮಕ್ಕಳಿಗೆ ಬಾಲ್ಯದಲ್ಲಿ ಹೇಗೆ ವರ್ತಿಸಬೇಕು, ಯ

೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ
ಚನ್ನಪಟ್ಟಣ: ಮಂಗಳವಾರ ಅಥವಾ ಗುರುವಾರದಂದು ಚನ್ನಪಟ್ಟಣ ಬಂದ್ ಗೆ ಕರೆ ನೀಡಲು ಉದ್ದೇಶಿಸಲಾಗಿದ್ದು, ೨೯ನೇ ತಾರೀಖಿನ ಶುಕ್ರವಾರ ಕರ್ನಾಟಕ ಬಂದ್ ಆಚ

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ
ಬೆಂಗಳೂರು:ಸೆ.22: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾ

ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ
ಚನ್ನಪಟ್ಟಣ: ತಾಲ್ಲೂಕಿನ ಅವ್ವೇರಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಕೆ ವೀರಣ್ಣಗೌಡ ರ ಸಹೋದರ ಡಾ.ಎಚ್.ಕೆ. ಮರಿಯಪ್ಪ ಅಭಿನಂದನಾ ಸಮಿತ

ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:
ರಾಮನಗರ; ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ ಸಂಬಂಧಪಟ್ಟ ಉಪ ನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು

ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ
ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆಯೊಬ್ಬರು ಅವರದೇ ಹೊಲದ ಪೈಪು ಹೂಳಲು ತೆಗೆದಿದ್ದ ಕಾಲುವೆಯಲ್ಲಿ ಶವವಾಗಿ

ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ
ಚನ್ನಪಟ್ಟಣ: ಒಂದೆರಡು ದಿನ ಆಹಾರವಿಲ್ಲದಿದ್ದರೂ ಮನುಷ್ಯ ಬದುಕುತ್ತಾನೆ ಆದರೆ, ನೀರಿಲ್ಲದೇ ಬದುಕಲಾರ. ಆದ್ದರಿಂದ ಜನರಿಗೆ ಶುದ್ಧನೀರು ಪೂರೈಕೆ ಮಾಡುವುದು ನ

ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ
ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಮಾರಮ್ಮನ ಹಬ್ಬ ಭಕ್ತಿಭಾವದಿಂದ ನೆರವೇರಿತು.
<

ರೋಟರಿ ಕ್ಲಬ್ ವತಿಯಿಂದ ಚಾರಣ
ಚನ್ನಪಟ್ಟಣ : ಜಂಜಾಟದ ಬದುಕಿನಲ್ಲಿ ಮನಷ್ಯರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಎರಡು ಬಹು ಪ್ರಮುಖವಾಗಿದ್ದು ಇವುಗಳನ್ನು ಕಾಪಾಡಿಕೊಳ್ಳುವುದು ಕೋಟಿ ಸಂಪಾದನೆ

ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಪ್ರೊ. ಜಯಪ್ರಕಾಶ್ ಗೌಡ ಅಭಿಮತ
ಚನ್ನಪಟ್ಟಣ: ಜನ ಮೆಚ್ಚುವಂತಹ ಹಾಗೂ ಶಾಶ್ವತವಾಗಿ ಉಳಿಯುವಂತಹ ಒಳ್ಳೆಯ ಸೇವಾ ಕೆಲಸಗಳನ್ನು ಮಾಡಿ ನಮ್ಮ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಮಂಡ್ಯ
ಪ್ರತಿಕ್ರಿಯೆಗಳು