Tel: 7676775624 | Mail: info@yellowandred.in

Language: EN KAN

    Follow us :


ವಿವಿಧ ಕ್ಷೇತ್ರಗಳ ಸಾಧಕರಿಗೆ ‘ರಾಮನಗರ ರತ್ನ’ ಪ್ರಶಸ್ತಿ ಪ್ರದಾನ

Posted date: 23 Jul, 2023

Powered by:     Yellow and Red

ವಿವಿಧ ಕ್ಷೇತ್ರಗಳ ಸಾಧಕರಿಗೆ ‘ರಾಮನಗರ ರತ್ನ’ ಪ್ರಶಸ್ತಿ ಪ್ರದಾನ

ರಾಮನಗರ: ಜಾನಪದ ಕಲೆಗಳಿಗೆ ಸಾಮಾಜಿಕ ಬದಲಾವಣೆಯನ್ನು ತರುವ ಶಕ್ತಿ ಇದೆ. ಆ ಕಾರಣಕ್ಕಾಗಿಯೇ, ನಮ್ಮ ಹಿರಿಯರು ಕಲೆಗಳನ್ನು ಬಳಸಿಕೊಂಡು ಸಮಾಜದಲ್ಲಿ ಸುಧಾರಣೆ ತರುವ ಕೆಲಸಗಳನ್ನು ಮಾಡಿದರು’ ಎಂದು ಸಾಹಿತಿ ಹಾಗೂ ಸಾರ್ವಜನಿಕ ಗ್ರಂಥಾಲಯದ ನಿರ್ದೇಶಕ ಸತೀಶ ಕುಮಾರ್ ಹೊಸಮನಿ ಅಭಿಪ್ರಾಯಪಟ್ಟರು.


ಸಾಹಿತಿ ಜಿ.ಪಿ. ರಾಜರತ್ನಂ ಸ್ಮರಣಾರ್ಥ ನಿಸರ್ಗ ಟ್ರಸ್ಟ್ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನಪದ ಉತ್ಸವ ಹಾಗೂ ರಾಮನಗರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.


‘ಕಲೆಗಳು ಕೇವಲ ಮನಸ್ಸಿಗೆ ಮುದ ನೀಡಿ, ಒತ್ತಡವನ್ನು ತಗ್ಗಿಸುವ ಸಾಧನವಷ್ಟೇ ಅಲ್ಲ. ಸಮಾಜ ಮತ್ತು ಸಮುದಾಯಗಳ ಸಂಸ್ಕೃತಿ ಮತ್ತು ಪರಂಪರೆಯ ಕುರುಹುಗಳಾಗಿ ಕಲೆಗಳು ಜನಮಾನಸದಲ್ಲಿ ನೆಲೆಸಿವೆ. ಆಧುನಿಕತೆಯ ಭರಾಟೆಯಲ್ಲಿ ಜಾನಪದ ಕಲೆಗಳು ಅವನತಿ ಅಂಚಿನಲ್ಲಿವೆ. ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದರು.


‘ಸಾಂಪ್ರದಾಯಿಕ ಗ್ರಂಥಾಲಯದ ಜೊತೆಗೆ, ಡಿಜಿಟಲ್ ಗ್ರಂಥಾಲಯವು ಮುನ್ನೆಲೆಗೆ ಬಂದಿದೆ. ರಾಜ್ಯದ ಡಿಜಿಟಲ್ ಗ್ರಂಥಾಲಯದಲ್ಲಿ 1.73 ಕೋಟಿ ಇ- ಪುಸ್ತಕಗಳು ಓದಲು ಲಭ್ಯ ಇವೆ. ಶೈಕ್ಷಣಿಕ ಪಠ್ಯ, ಪಠ್ಯೇತರ, ಮಕ್ಕಳ ಸಾಹಿತ್ಯ ಸೇರಿದಂತೆ ಎಲ್ಲಾ ಬಗೆಯ ಸಾಹಿತ್ಯದ ಪುಸ್ತಕಗಳು ಇಲ್ಲಿವೆ. ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡರೆ ಸುಲಭವಾಗಿ ತಮ್ಮಿಷ್ಟದ ಪುಸ್ತಕಗಳನ್ನು ಓದಬಹುದಾಗಿದೆ’ ಎಂದು ಹೇಳಿದರು. 


ಸಿನಿಮಾ ನಿರ್ದೇಶಕ ಓಂ ಸಾಯಿಪ್ರಕಾಶ್ ಮಾತನಾಡಿ, ‘ಮನುಷ್ಯ ಯಾವಾಗಲೂ ಮತ್ತೊಬ್ಬರಿಗೆ ಸ್ಪೂರ್ತಿಯಾಗಿರಬೇಕು. ಮದರ್ ತೆರೇಸಾ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಸೇರಿದಂತೆ ಹಲವರು ತಮ್ಮ ಬದುಕಿನುದ್ದಕ್ಕೂ ಮತ್ತೊಬ್ಬರಿಗೆ ಪ್ರೇರಣೆಯಾಗುವ ಕೆಲಸಗಳನ್ನು ಮಾಡಿದರು. ಅಂತಹವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು’ ಎಂದು ತಿಳಿಸಿದರು.


‘ಮನುಷ್ಯ ಸಮಾಜ ನನಗೇನು ಕೊಟ್ಟಿತು ಎಂದು ಪ್ರಶ್ನಿಸುವುದರ ಬದಲು, ನನ್ನ ಬೆಳವಣಿಗೆಗೆ ಇಷ್ಟೆಲ್ಲವನ್ನೂ ನೀಡಿರುವ ಸಮಾಜಕ್ಕೆ ನಾನೇನು ಮಾಡಿದ್ದೇನೆ ಎಂದು ಪ್ರಶ್ನಿಸಿಕೊಳ್ಳಬೇಕು. ತನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ಸಮಾಜ ಸೇವೆ ಮಾಡಬೇಕು. ಇದರಿಂದ, ಒಳ್ಳೆಯದು ಮಾಡಿದೆನೆಂಬ ಆತ್ಮತೃಪ್ತಿ ಸಿಗುತ್ತದೆ’ ಎಂದು ಅಭಿಪ್ರಾಯಪಟ್ಟರು.


ನಗರಸಭೆ ಸದಸ್ಯ ಕೆ. ಶೇಷಾದ್ರಿ (ಶಶಿ) ಮಾತನಾಡಿ, ‘ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಿಲ್ಲೆಯವರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ. ಈ ಸಾಧಕರು ಹಲವು ವರ್ಷಗಳಿಂದ ತಮ್ಮ ಕ್ಷೇತ್ರದಲ್ಲಿ ಎಲೆ ಮರೆಯ ಕಾಯಿಯಂತೆ ಸೇವೆ ಮಾಡಿಕೊಂಡು ಬಂದಿದ್ದಾರೆ. ಅವರನ್ನು ಗುರುತಿಸಿ, ಗೌರವಿಸುವುದು ನಮ್ಮೆಲ್ಲರ ಕರ್ತವ್ಯ’ ಎಂದರು.


ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ. ಶೈಲಜಾ ಎಂ.ಜಿ, ಸಹ ಪ್ರಾಧ್ಯಾಪಕ ಡಾ. ರಾಜು ಗುಂಡಾಪುರ, ರಾಮನಗರ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಹದೇವ ಸ್ವಾಮಿ, ಕೃಷ್ಣಸ್ಮೃತಿ ಕಲ್ಯಾಣ ಮಂಟಪದ ಮಾಲೀಕ ಕೃಷ್ಣಮೂರ್ತಿ ಇದ್ದರು.


ನಿಸರ್ಗ ಟ್ರಸ್ಟ್ ಕಾರ್ಯದರ್ಶಿ ಡಾ. ಅಂಕನಹಳ್ಳಿ ಪಾರ್ಥ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಣೆ ಮಾಡಿದರು. ವಿದ್ಯಾರ್ಥಿಗಳ ನೃತ್ಯ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಭಿಕರನ್ನು ರಂಜಿಸಿದವು.


*ಪ್ರಶಸ್ತಿ ಪುರಸ್ಕೃತರು*

ಡಾ.‌ ಸತೀಶ ಎಸ್. ಹೊಸಮನಿ (ಸಾಹಿತ್ಯ ಮತ್ತು ಸಮಾಜಸೇವೆ), ಡಾ. ರಾಜು ಆರ್.ಎಸ್ (ಚಲನಚಿತ್ರ ಮತ್ತು ಸಮಾಜಸೇವೆ), ಡಾ. ಎಂ.ಜಿ. ನಾಗರಾಜು (ಸಾಹಿತ್ಯ ಮತ್ತು ಶಾಸನ ಸಂಶೋಧನೆ), ಡಾ. ಕೆ.ಪಿ. ಹೆಗ್ಡೆ (ವೈದ್ಯಕೀಯ), ಡಾ. ರಾ.ಬಿ. ನಾಗರಾಜು (ಸಂಘಟನೆ), ಎಚ್.ವಿ‌. ಮೂರ್ತಿ (ರಂಗಭೂಮಿ), ದೊಡ್ಡಬಾಣಗೆರೆ ಮಾರಣ್ಣ (ಪತ್ರಿಕೋದ್ಯಮ), ಜೆ. ಶಾಂತಾಬಾಯಿ (ಸಮಾಜ ಸೇವೆ), ಶ್ರೀನಿವಾಸ್ (ಜನಪದ ಕ್ಷೇತ್ರ), ರೇಣುಕಾಪ್ರಸಾದ್ (ನೃತ್ಯ ಕ್ಷೇತ್ರ) ಹಾಗೂ ಮಂಜುಳಾ ಆರ್.ಎಸ್‌ (ಶಿಕ್ಷಣ ಕ್ಷೇತ್ರ) ಅವರಿಗೆ ಗಣ್ಯರು ‘ರಾಮನಗರ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು

ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್

 ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್‍ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ

Top Stories »  


Top ↑