Tel: 7676775624 | Mail: info@yellowandred.in

Language: EN KAN

    Follow us :


ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ

Posted date: 08 Aug, 2023

Powered by:     Yellow and Red

ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ

 ಚನ್ನಪಟ್ಟಣ: ಒಂದೆರಡು ದಿನ ಆಹಾರವಿಲ್ಲದಿದ್ದರೂ ಮನುಷ್ಯ ಬದುಕುತ್ತಾನೆ ಆದರೆ, ನೀರಿಲ್ಲದೇ ಬದುಕಲಾರ. ಆದ್ದರಿಂದ ಜನರಿಗೆ ಶುದ್ಧನೀರು ಪೂರೈಕೆ ಮಾಡುವುದು ನಮ್ಮ ಆದ್ಯತೆ ಆಗಿದ್ದು, ನೀರಿನ ಗುಣಮಟ್ಟದಲ್ಲಿ ವ್ಯತ್ಯಾಸವಾಗದಂತೆ ನೋಡಿಕೊಳ್ಳುವುದು ನೀರುಗಂಟಿಗಳ ಜವಬ್ದಾರಿಯಾಗಿದ್ದು, ಇದನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಶಿವಕುಮಾರ್ ಸೂಚನೆ ನೀಡಿದರು.

ಅವರು ನಗರದ ತಾಪಂ ಸಭಾಂಗಣದಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ, ನಿರ್ವಹಣೆ ಹಾಗೂ ಎಫ್ ಟಿ ಕೆ ಕಿಟ್‌ಗಳ ಬಳಕೆಯ ಬಗ್ಗೆ ನೀರುಗಂಟಿಗಳಿಗೆ ಹಮ್ಮಿಕೊಂಡಿರುವ 2 ದಿನದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.


ನೀರಿನ ಓವರ್ ಹೆಡ್ ಟ್ಯಾಂಕ್, ಬೋರ್ ವೆಲ್ ಗಳನ್ನು ಸ್ವಚ್ಛಗೊಳಿಸುವ ಜತೆಗೆ ೧ ಎಫ್ ಟಿ ಕೆ ಕಿಟ್ ಬಳಸಿ ನೀರಿನ ಪರೀಕ್ಷೆ ನಡೆಸುವಂತೆ ತಾಕೀತು ಮಾಡಿದರು.

ಕೇವಲ ನೀರಿನ ಮೋಟಾರ್ ಆನ್, ಆಫ್ ಮಾಡಿ ವಾಲ್ವ್ ಗಳನ್ನು ತಿರುಗಿಸುವುದಷ್ಟೇ ನೀರುಗಂಟಿಗಳ ಕೆಲಸವಲ್ಲ. ನೀರು ಕುಡಿಯಲು ಯೋಗ್ಯವಾಗಿದೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಬೇಕು. ಇದಕ್ಕಾಗಿ ಸರ್ಕಾರ ನೀಡಿರುವ ಎಫ್ ಟಿ ಕೆ ಕಿಟ್ ಗಳನ್ನು ಸಮಪರ್ಕವಾಗಿ ಬಳಕೆ ಮಾಡಿ. ನೀರಿನ ಶುದ್ಧತೆಯ ಕುರಿತು ಯಾವುದೇ ರೀತಿಯ ಅನುಮಾನ ಬಂದರೂ ತಕ್ಷಣ ನೀರನ್ನು ಪರೀಕ್ಷಿಸಿ, ಅನುಮಾನ ಬರಲಿ ಬಾರದಿರಲಿ ಕಡ್ಡಾಯವಾಗಿ ೧೫ದಿನಗಳಿಗೊಮ್ಮೆ ಕಿಟ್ ಬಳಸಿ ನೀರುನ್ನು ಪರೀಕ್ಷಿಸಿ ಎಂದು ಸೂಚಿಸಿದರು.


ನೀರಿನ ಪರೀಕ್ಷೆ ನಡೆಸುವ ಜತೆಗೆ ಕಡ್ಡಾಯವಾಗಿ 15 ದಿನಕ್ಕೊಮ್ಮೆ ತಮ್ಮ ಗ್ರಾಮ ವ್ಯಾಪ್ತಿಯ ಓವರ್ ಹೆಡ್ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸಿ, ಇದರ ಜತೆಗೆ ಬೋರ್ ವೆಲ್ ಮತ್ತಿತರ ನೀರು ಪೂರೈಕೆಯ ಜಾಗಗಳನ್ನು ಸ್ವಚ್ಛಗೊಳಿಸಿ. ಸೋರಿಕೆಯಾಗುವ ಪೈಪ್ ಗಳನ್ನು ದುರಸ್ಥಿಗೊಳಿಸುವ ಜತೆಗೆ ಜಾನುವಾರುಗಳ ಕುಡಿಯುವ ನೀರಿಗಾಗಿ ನಿರ್ಮಿಸಿರುವ ತೊಟ್ಟಿಗಳನ್ನು ಸ್ವಚ್ಛಗೊಳಿಸಿ ಎಂದು ತಿಳಿಸಿದರು.


ತರಬೇತಿ ಕಾರ್ಯಾಗಾರದಲ್ಲಿ ಎಫ್ ಟಿ ಕೆ ಕಿಟ್ ಗಳ ಬಳಕೆಯ ಕುರಿತು ನೀರುಗಂಟಿಗಳಿಗೆ ನಾಲ್ಕು ಹಂತಗಳಲ್ಲಿ ತರಬೇತಿ ನೀಡಲಾಯಿತು. ನೀರಿನಲ್ಲಿ ಕಂಡುಬರುವ ಅಂಶಗಳಾದ    ಪಿ ಹೆಚ್, ಗಡಸುತನ, ಕ್ಲೋರೈಡ್, ಫ್ಲೋರೈಡ್, ನೈಟ್ರೇಟ್, ಕಬ್ಬಿಣದಂಶ, ಸಲ್ಫೇಟ್, ಬ್ಯಾಕ್ಟೀರಿಯಾ    ಸೇರಿದಂತೆ 8 ಅಂಶಗಳ ಪ್ರಯೋಗಿಕವಾಗಿ ತರಬೇತಿ ನೀಡಲಾಯಿತು. 


ಈ ವೇಳೆ ಜಿಲ್ಲಾ ಪಂಚಾಯತ್  ಯೋಜನಾ ನಿರ್ದೇಶಕರಾದ ಮಂಜುನಾಥ್, ತಾಲೂಕು ಸಹಾಯಕ ನಿರ್ದೇಶಕ ಸಿದ್ದರಾಜು, ತಾಪಂ ವ್ಯವಸ್ಥಾಪಕ ಸತೀಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಮಧುಸೂದನ್, ಕಿರಿಯ ಅಭಿಯಂತರರ ಶ್ರೇಯಸ್, READS ಅನುಷ್ಠಾನ ಬೆಂಬಲ ನೆರವು ಸಂಸ್ಥೆ, ರಾಮನಗರ ಜಿಲ್ಲಾ ಪಂಚಾಯತ್ ತಂಡ ದವರು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಸಂಸ್ಕೃತಿ ಎನ್ನುವುದೇ ನಡವಳಿಕೆ ಡಾ ಬಿ ಟಿ ನೇತ್ರಾವತಿಗೌಡ
ಸಂಸ್ಕೃತಿ ಎನ್ನುವುದೇ ನಡವಳಿಕೆ ಡಾ ಬಿ ಟಿ ನೇತ್ರಾವತಿಗೌಡ

ಚನ್ನಪಟ್ಟಣ: ಸಂಸ್ಕೃತಿ ಎಂಬುದೇ ನಡವಳಿಕೆ, ಆ ನಡವಳಿಕೆ ಎಂಬುದು ನಮ್ಮ ಮನೆಯಲ್ಲೇ ಆರಂಭವಾಗಬೇಕು, ನಾವು ನಮ್ಮ ಮಕ್ಕಳಿಗೆ ಬಾಲ್ಯದಲ್ಲಿ ಹೇಗೆ ವರ್ತಿಸಬೇಕು, ಯ

೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ
೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ

ಚನ್ನಪಟ್ಟಣ: ಮಂಗಳವಾರ ಅಥವಾ ಗುರುವಾರದಂದು ಚನ್ನಪಟ್ಟಣ ಬಂದ್ ಗೆ ಕರೆ ನೀಡಲು ಉದ್ದೇಶಿಸಲಾಗಿದ್ದು, ೨೯ನೇ ತಾರೀಖಿನ ಶುಕ್ರವಾರ ಕರ್ನಾಟಕ ಬಂದ್ ಆಚ

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ
ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು:ಸೆ.22: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾ

ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ
ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ

ಚನ್ನಪಟ್ಟಣ: ತಾಲ್ಲೂಕಿನ ಅವ್ವೇರಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಕೆ ವೀರಣ್ಣಗೌಡ ರ ಸಹೋದರ ಡಾ.ಎಚ್.ಕೆ. ಮರಿಯಪ್ಪ ಅಭಿನಂದನಾ ಸಮಿತ

ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:
ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:

ರಾಮನಗರ; ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ ಸಂಬಂಧಪಟ್ಟ ಉಪ ನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು

ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ
ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆಯೊಬ್ಬರು ಅವರದೇ ಹೊಲದ ಪೈಪು ಹೂಳಲು ತೆಗೆದಿದ್ದ ಕಾಲುವೆಯಲ್ಲಿ ಶವವಾಗಿ

ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ
ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ

 ಚನ್ನಪಟ್ಟಣ: ಒಂದೆರಡು ದಿನ ಆಹಾರವಿಲ್ಲದಿದ್ದರೂ ಮನುಷ್ಯ ಬದುಕುತ್ತಾನೆ ಆದರೆ, ನೀರಿಲ್ಲದೇ ಬದುಕಲಾರ. ಆದ್ದರಿಂದ ಜನರಿಗೆ ಶುದ್ಧನೀರು ಪೂರೈಕೆ ಮಾಡುವುದು ನ

ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ
ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ

ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಮಾರಮ್ಮನ ಹಬ್ಬ ಭಕ್ತಿಭಾವದಿಂದ ನೆರವೇರಿತು.

<

ರೋಟರಿ ಕ್ಲಬ್ ವತಿಯಿಂದ ಚಾರಣ
ರೋಟರಿ ಕ್ಲಬ್ ವತಿಯಿಂದ ಚಾರಣ

ಚನ್ನಪಟ್ಟಣ : ಜಂಜಾಟದ ಬದುಕಿನಲ್ಲಿ ಮನಷ್ಯರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಎರಡು ಬಹು ಪ್ರಮುಖವಾಗಿದ್ದು ಇವುಗಳನ್ನು ಕಾಪಾಡಿಕೊಳ್ಳುವುದು ಕೋಟಿ ಸಂಪಾದನೆ

ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ  ಪ್ರೊ. ಜಯಪ್ರಕಾಶ್ ಗೌಡ ಅಭಿಮತ
ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಪ್ರೊ. ಜಯಪ್ರಕಾಶ್ ಗೌಡ ಅಭಿಮತ

ಚನ್ನಪಟ್ಟಣ: ಜನ ಮೆಚ್ಚುವಂತಹ ಹಾಗೂ ಶಾಶ್ವತವಾಗಿ ಉಳಿಯುವಂತಹ ಒಳ್ಳೆಯ ಸೇವಾ ಕೆಲಸಗಳನ್ನು ಮಾಡಿ ನಮ್ಮ ಜೀವನವನ್ನು   ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಮಂಡ್ಯ

Top Stories »  


Top ↑