Tel: 7676775624 | Mail: info@yellowandred.in

Language: EN KAN

    Follow us :


ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘವು ಜನರ ಬದುಕು ಹಸನಾಗಲು ಶ್ರಮಿಸುತ್ತಿದೆ ಜಯಕರಶೆಟ್ಟಿ

Posted date: 10 Oct, 2023

Powered by:     Yellow and Red

ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘವು ಜನರ ಬದುಕು ಹಸನಾಗಲು ಶ್ರಮಿಸುತ್ತಿದೆ ಜಯಕರಶೆಟ್ಟಿ

ಚನ್ನಪಟ್ಟಣ: ಧರ್ಮಸ್ಥಳ ಎಂದರೆ ಅದೊಂದು ಧಾರ್ಮಿಕ ಕೇಂದ್ರ, ಪ್ರತಿ ಕ್ಷಣವೂ ಧರ್ಮವನ್ನೇ ಉಸಿರಾಗಿಸಿಕೊಂಡಿರುವ ಧರ್ಮಾಧಿಕಾರಿಗಳಾದ ಡಾ ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಹೆಗ್ಗಡೆಯವರು ಕೇವಲ ಧರ್ಮಸ್ಥಳದಲ್ಲಿ ಮಾತ್ರ ಧರ್ಮ ಇದ್ದರೆ ಸಾಲದು, ಅದು ಪ್ರತಿ ಜನರಿಗೂ ತಲುಪಬೇಕು ಎಂಬ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯನ್ನು ಜಾರಿಗೆ ತಂದು ಬಡವರ ಪಾಲಿನ ದೇವರಾಗಿದ್ದಾರೆ, ಎಲ್ಲಾ ರೀತಿಯ ಕೆಲಸ ಮಾಡುವ ಜನರಿಗೂ ಅವರಿಷ್ಟದ ಬದುಕು ಸಾಗಿಸಲು ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ನಮ್ಮ ಸಂಘ ಸಂಸ್ಥೆಗಳ ಮೂಲಕ ತಲುಪಿಸುತ್ತಿದ್ದೇವೆ. ಗ್ರಾಮೀಣ ಜನರ ಬದುಕನ್ನು ಹಸನಾಗಿಸಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಳೆದ ಎಂಟು ವರ್ಷಗಳಿಂದ ತಾಲೂಕಿನ ಜನರ ಬದುಕನ್ನು ಪರಿವರ್ತಿಸಲು ಸಾಕಷ್ಟು ಕೊಡುಗೆ ನೀಡಿದೆ ಎಂದು ಸಂಸ್ಥೆಯ ಜಿಲ್ಲಾ ನಿರ್ದೇಶಕ ಜಯಕರ್ ಶೆಟ್ಟಿ ತಿಳಿಸಿದರು.


ನಗರದಲ್ಲಿನ ಸಂಸ್ಥೆಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಪರಂಪರೆಯಂತೆ ಅನ್ನದಾನ, ವಿದ್ಯಾದಾನ, ಆರೋಗ್ಯದಾನ ಹಾಗೂ ಅಭಯದಾನದಂಥ ಚತುರ್ದಾನಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದು ಸ್ಥಳೀಯವಾಗಿಯೂ ಭಿನ್ನವಾದ ಯೋಜನೆಗಳನ್ನು ತಂದಿದ್ದಾರೆ ಎಂದರು.


ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ತಾಲೂಕಿನಲ್ಲಿ ಸುಮಾರು 110 ಸೇವಾ ಕಾರ್ಯಕರ್ತರು ಜನಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಶ್ರಮಿಸುತ್ತಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಸೇವಾ ಪ್ರತಿನಿಧಿಗಳು, ಮೇಲ್ವಿಚಾರಕರು, ಯೋಜನಾಧಿಕಾರಿಗಳು ಜನರ ಮನೆ ಬಾಗಿಲಿಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಸ್ವಸಹಾಯ ಸಂಘ ಚಳುವಳಿ, ಮನೆ ಬಾಗಿಲಿಗೆ ಬ್ಯಾಂಕಿಂಗ್ ವ್ಯವಸ್ಥೆ, ಮಹಿಳಾ ಸ್ವಾವಲಂಬನೆ, ಕೃಷಿ ಅಭಿವೃದ್ಧಿ ಕಾರ್ಯಕ್ರಮ, ನಮ್ಮೂರೂ ನಮ್ಮ ಕೆರೆ, ವಿಮಾ ಸೌಲಭ್ಯ ಯೋಜನೆ, ಹಸಿರು ಇಂಧನ ಕಾರ್ಯಕ್ರಮ, ಮಾಸಾಶನ ಹಾಗೂ ಶಿಷ್ಯ ವೇತನ ಕಾರ್ಯಕ್ರಮ, ವಾತ್ಸಲ್ಯ ಕಾರ್ಯಕ್ರಮ, ಸ್ವ-ಉದ್ಯೋಗ, ಶ್ರದ್ಧಾ ಕೇಂದ್ರಗಳ ಶುಚಿತ್ವ ಅಭಿಯಾನ ಸೇರಿದಂತೆ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗಿದೆ ಎಂದು ತಿಳಿಸಿದರು.


ದುರ್ಬಲ ವರ್ಗದವರು, ಕೃಷಿಕರು, ಮಹಿಳೆಯರಲ್ಲಿ ಉಳಿತಾಯದ ಮನೋಭಾವ ಬೆಳೆಸುವ ನಿಟ್ಟಿನಲ್ಲಿ 2676 ಸಂಘಗಳನ್ನು ರಚನೆ ಮಾಡಲಾಗಿದೆ. ಸಂಘದಲ್ಲಿ 21,591 ಸದಸ್ಯರಿದ್ದು, 10ಕೋಟಿ 9ಲಕ್ಷ ರೂ.ಹಣ ಉಳಿತಾಯ ಮಾಡಿದ್ದು, ಬ್ಯಾಂಕ್‍ನಲ್ಲಿ ಜಮಾ ಮಾಡಲಾಗಿದೆ. ಪ್ರಗತಿ ರಕ್ಷಾ ಕವಚ ವಿಮಾ ಯೋಜನೆಯಲ್ಲಿ 50,355 ಸದಸ್ಯರಿಗೆ 25,557 ಕೋಟಿ ವಿಮಾ ಸೌಲಭ್ಯ, ಮೈಕ್ರೋಬಚತ್ ವಿಮಾ ಯೋಜನೆಯಲ್ಲಿ 5300 ಪಾಲಿಸಿಗಳನ್ನು ಮಾಡಿಸಲಾಗಿದೆ ಎಂದರು.  


18 ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ, ಶುದ್ಧ ಕುಡಿಯುವ ನೀರಿನ ಘಟಕ, ಗ್ರಂಥಾಲಯ ಕಟ್ಟಡ, ಶಾಲೆಗಳಿಗೆ ಪೀಠೋಪಕರಣ, ಸಮುದಾಯ ಭವನ, 12 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು ನೀಡಲಾಗಿದೆ. ಇದಲ್ಲದೇ 46 ವಿಶೇಷ ಚೇತನರಿಗೆ ವೀಲ್ ಚೇರ್, ವಾಕರ್, ವಾಟರ್ ಬೆಡ್, ಗಂಭೀರ ಅನಾರೋಗ್ಯ ಸಮಸ್ಯೆಗಳ ಯೋಜನೆಯಿಂದ 14ಮಂದಿಗೆ ಆರ್ಥಿಕ ಸಹಾಯ ಮಾಡಲಾಗಿದೆ.


ಹಸಿರು ಇಂಧನ ಕಾರ್ಯಕ್ರಮದಲ್ಲಿ 1586 ಕುಟುಂಬಗಳಿಗೆ ಸೋಲಾರ್ ಘಟಕ ಅಳವಡಿಕೆ, 2910 ಕುಟುಂಗಳಿಗೆ ಗ್ರೀನ್ ವೇ ಕುಕ್‍ಸ್ಟವ್, 215 ಮಂದಿಗೆ ಮಾಸಾಶನ, 106 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗಿದೆ. 300 ಕುಟುಂಬಗಳು ಸ್ವಉದ್ಯೋಗದ ಮೂಲಕ ಬದುಕು ಕಟ್ಟಿಕೊಳ್ಳಲು ತರಬೇತಿ ನೀಡಲಾಗಿದ್ದು, ಸ್ವಚ್ಛತಾ ಅಭಿಯಾನದ ಮೂಲಕ ಸುಮಾರು 250 ಶ್ರದ್ಧಾ ಕೇಂದ್ರಗಳನ್ನು ಸ್ವಚ್ಛಗೊಳಿಸಲಾಗಿದೆ. ಮದ್ಯವರ್ಜನ ಶಿಬಿರ ಮೂಲಕ 250 ಮಂದಿಯನ್ನು ಪಾನಮುಕ್ತರನ್ನಾಗಿ ಮಾಡಲಾಗಿದೆ ಎಂದು ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರೇಶ್ಮಾ ಎಸ್.ಉಪಸ್ಥಿತರಿದ್ದರರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು

ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್

 ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್‍ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ

Top Stories »  


Top ↑