Tel: 7676775624 | Mail: info@yellowandred.in

Language: EN KAN

    Follow us :


ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ

Posted date: 13 Dec, 2023

Powered by:     Yellow and Red

ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ

ಚನ್ನಪಟ್ಟಣ: ಕಮಲೇಶ್‍ಚಂದ್ರ ಸಮಿತಿ ಶಿಫಾರಸ್ಸು ಜಾರಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ ಹಾಗೂ ಗ್ರಾಮೀಣ ಅಂಚೆ ಸೇವಕರ ರಾಷ್ಟ್ರೀಯ ಒಕ್ಕೂಟದ ಸಹಯೋಗದಲ್ಲಿ ಅಂಚೆ ಇಲಾಖೆಯ ಜಿಡಿಎಸ್ ನೌಕಕರು ಮಂಗಳವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.


ನಗರದ ಕೇಂದ್ರ ಅಂಚೆ ಇಲಾಖೆ ಕಚೇರಿ ಮುಂದೆ ಜಮಾಯಿಸಿದ ಅಂಚೆ ಇಲಾಖೆಯ ಜಿಡಿಎಸ್ ನೌಕರರು, ಅಂಚೆ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಜಿಡಿಎಸ್ ನೌಕಕರಿಗೆ ಇಲಾಖಾ ನೌಕರರಿಗೆ ಸಮಾನಂತರವಾಗಿ ಸವಲತ್ತು ನೀಡದೇ ತಾರಾತಮ್ಯ ಮಾಡಲಾಗುತ್ತಿದ್ದು, ಇದನ್ನು ಸರಿಪಡಿಸುವಂತೆ ಅಗ್ರಹಿಸಿದರು.


ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಜಿಡಿಎಸ್ ನೌಕರರೇ ಅಂಚೆ ಇಲಾಖೆಗೆ ಬೆನ್ನೆಲುಭಾಗಿದ್ದರೂ ಸಹ ಅವರನ್ನು ಕಡೆಗಣಿಸಲಾಗುತ್ತಿದೆ. ಅಂಚೆ ಇಲಾಖೆಯಲ್ಲಿ ಶೇ.50ರಷ್ಟು ಜಿಡಿಎಸ್ ನೌಕರರೇ ಕಾರ್ಯನಿರ್ವಹಿಸುತ್ತಿದ್ದರೂ ಸಹ ಅವರ ಸೇವೆಗೆ ತಕ್ಕನಾದ ಸವಲತ್ತುಗಳನ್ನು ನೀಡದೇ ಅನ್ಯಾಯ ಮಾಡಲಾಗುತ್ತಿದೆ. ಆರೋಗ್ಯ ವಿಮೆ ಸೇರಿದಂತೆ ಸರಿಯಾದ ಸೌಲಭ್ಯಗಳನ್ನು ನೀಡದೇ ತಾರಾತಮ್ಯ ಮಾಡಲಾಗುತ್ತಿದ್ದು, ಇದನ್ನು ಈ ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದರು.


ಜಿಡಿಎಸ್ ನೌಕರರನ್ನು ಜೀತದಾಳುಗಳಂತೆ ನಡೆಸಿಕೊಳ್ಳಲಾಗುತ್ತಿದೆ. ಎಲ್ಲ ಸ್ತರದ ಕಾರ್ಮಿಕರಿಗಿಂತ ನಮ್ಮನ್ನು ಕನಿಷ್ಠವಾಗಿ ನಡೆಸಿಕೊಳ್ಳಲಾಗುತ್ತಿದೆ. ನಮ್ಮ ಬೇಡಿಕೆಗಳ ಕುರಿತು ಸಾಕಷ್ಟು ಬಾರಿ ಗಮನ ಸೆಳೆಯುವ ಕೆಲಸ ಮಾಡಲಾಗಿದೆಯಾದರೂ ಬರೀ ಭರವಸೆ ದೊರಕಿದೆಯೇ ಹೊರತು ನಮ್ಮ ಸಂಕಷ್ಟ ಪರಿಹಾರವಾಗಿಲ್ಲ. ಯಾರು ಎಷ್ಟೇ ಒತ್ತಡ ಹೇರಿದರು ಈ ಬಾರಿ ನಮ್ಮ ಬೇಡಿಕೆಗಳು ಈಡೇರುವವರೆಗೆ ಮುಷ್ಕರ ಹಿಂಪಡೆಯುವುದಿಲ್ಲ ಎಂದು ಘೋಷಿಸಿದರು.


*ಕಮಲೇಶ್‍ಚಂದ್ರ ಶಿಫಾರಸ್ಸು ಜಾರಿಗೊಳಿಸಿ:* ಜಿಡಿಎಸ್ ನೌಕರರ ಬೇಡಿಕೆಗೆ ಸಂಬಂಧಿಸಿದಂತೆ ರಚಿಸಿದ್ದ ಕಮಲೇಶ್‍ಚಂದ್ರ ಸಮಿತಿ ೨೦೧೮ರಲ್ಲೇ ವರದಿ ಸಲ್ಲಿಸಿದ್ದರೂ ಸಹ ಸಮಿತಿ ಶಿಫಾರಸ್ಸುಗಳನ್ನು ಜಾರಿಗೆ ತಾರದೇ ಕಾಲಹರಣ ಮಾಡಲಾಗುತ್ತಿದೆ. ೨೦೧೮ರಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರ ನಡೆಸಿದ್ದಾಗ ಕೇಂದ್ರ ಸರ್ಕಾರದ ಸಚಿವರು ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. ಆದರೆ, ಇಂದಿಗೂ ಈ ಭರವಸೆ ಹಾಗೇ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಗ್ರಾಮೀಣ ಭಾಗದ ಜನರಿಗೆ ಪಿಂಚಣಿ ಸೇರಿದಂತೆ ಇನ್ನಿತರ ಸೇವೆ ಒದಗಿಸುವ ನಮಗೇ ಪಿಂಚಣಿ ಸವಲತ್ತು ಇಲ್ಲವಾಗಿದೆ. ಆರೋಗ್ಯ ಸಮಸ್ಯೆಯಾದರೇ ನೆರವಿಲ್ಲದಂತಾಗಿದೆ. ನಮ್ಮ ಬೇಡಿಕೆಗಳ ಕುರಿತು ಎಷ್ಟೋ ಬಾರಿ ಧರಣಿ, ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರೂ ಸಹ  ಸರ್ಕಾರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸುತ್ತಿಲ್ಲ. ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯಡಿ ವೈದ್ಯಕೀಯ ಒದಗಿಸಬೇಕು. ಗ್ರಾಚುಯಿಟಿ ಸೇರಿ ವಿವಿಧ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.


ಎಐಜಿಡಿಎಸ್‍ಯು ವಿಭಾಗೀಯ ಅಧ್ಯಕ್ಷ ಮಂಜುನಾಥ್,  ವಿಭಾಗೀಯ ಕಾರ್ಯಾಧ್ಯಕ್ಷರಾದ ಮೋಹನ್ ಕುಮಾರ್, ಪದಾಧಿಕಾರಿಗಳಾದ ಬೈಲಪ್ಪ, ಎಸ್.ಕುಮಾರ್, ಶಿವಣ್ಣ, ಸುಖಾನಂದ್, ನಂದೀಶ್ ಇತರರು ಇದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು

ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್

 ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್‍ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ

Top Stories »  


Top ↑