Tel: 7676775624 | Mail: info@yellowandred.in

Language: EN KAN

    Follow us :


ನಗರಸಭಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ!?

Posted date: 18 Dec, 2023

Powered by:     Yellow and Red

ನಗರಸಭಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ!?

ಸ್ಪಂದಿಸದ ಕಮೀಷನರ್, ಕೌನ್ಸಿಲರ್, ಡಿಸಿ, ಶಾಸಕರು ಹಾಗೂ ಜೆಡಿಎಸ್ ಮುಖಂಡರು. ಏಕಾಂಗಿಯಾದ ಅಧ್ಯಕ್ಷ, ನಗರದ ಪ್ರಥಮ ಪ್ರಜೆಗೆ ಫಜೀತಿ ತಂದಿಟ್ಟ ಇ-ಖಾತೆ ಮತ್ತು ಕಸದ ಸಮಸ್ಯೆ, ನಗರಸಭೆ ಅಧ್ಯಕ್ಷ, ಸದಸ್ಯ ಸ್ಥಾನದ ಜೊತೆಗೆ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ!?


ಚನ್ನಪಟ್ಟಣ:

ನಗರದ ಪ್ರಥಮ ಪ್ರಜೆ ಅರ್ಥಾತ್‌ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ ರವರು ರಾಜೀನಾಮೆ ನೀಡುತ್ತಾರೆ ಎಂಬುದು ದೃಢಪಟ್ಟಿದೆ. ಪೌರಾಯುಕ್ತರು, ಸದಸ್ಯರು ನಗರಸಭೆ ಅಭಿವೃದ್ಧಿಗೆ ಸ್ಪಂದಿಸುತ್ತಿಲ್ಲಾ, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲಾ, ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ ಯವರ ಬಳಿ ಅಳಲು ತೋಡಿಕೊಂಡರೂ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ನಗರಸಭೆ ಅಧ್ಯಕ್ಷ, ಸದಸ್ಯ ಹಾಗೂ ಜೆಡಿಎಸ್ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಆಪ್ತ ವಲಯದಲ್ಲಿ ಹೇಳಿಕೊಂಡಿದ್ದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ.


ಕಳೆದ ಎರಡು ವರ್ಷಗಳ ಹಿಂದೆ ಜಿದ್ದಾಜಿದ್ದಿಯಲ್ಲಿ ನಗರಸಭೆ ಚುನಾವಣೆ ನಡೆದು ಜೆಡಿಎಸ್ ಗದ್ದುಗೆ ಏರಿತು. ಮೂಲತಃ ಚನ್ನಪಟ್ಟಣ ನಗರದವರಾದರೂ ಬೆಂಗಳೂರು ವಾಸಿಯಾದ ಪ್ರಶಾಂತ್ ರವರಿಗೆ ಚುನಾವಣಾ ಮುನ್ನಾ ಹಾಗೂ ಚುನಾವಣಾ ನಂತರವೂ ಹಲವಾರು ಅಡೆತಡೆಗಳನ್ನು ಒಡ್ಡಲಾಯಿತು. ಅಂತಹ ಸಮಯದಲ್ಲೂ ಅಧ್ಯಕ್ಷ ಸ್ಥಾನ ಪಡೆಯುವಲ್ಲಿ ಪ್ರಶಾಂತ್ ಯಶಸ್ವಿಯಾಗಿದ್ದಲ್ಲದೆ ಎರಡು ವರ್ಷಗಳಿಗೂ ಹೆಚ್ಚು ಅವಧಿಯನ್ನು ಅಧ್ಯಕ್ಷರಾಗಿಯೇ ಕಳೆದಿದ್ದಾರೆ. ಮೀಸಲಾತಿ ಅಧ್ಯಕ್ಷ ಸ್ಥಾನಕ್ಕೆ ಇನ್ನೂ ಆರು ತಿಂಗಳು ಬಾಕಿ ಇದೆ.


ಈ ನಡುವೆ ನಗರದಲ್ಲಿರುವ ಒಂದು ಬಡಾವಣೆಯ ನಿವೇಶನಗಳಿಗೆ ಇ-ಖಾತೆ ವಿಷಯವಾಗಿ ಅಧ್ಯಕ್ಷ ಹಾಗೂ ಕೆಲ ಬೆರಳೆಣಿಕೆ ಸದಸ್ಯರು ಮತ್ತು ಪೌರಾಯುಕ್ತ ಸಿ ಪುಟ್ಟಸ್ವಾಮಿ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿ, ಅರ್ಧ ಕೋಟಿಯಷ್ಟು ಹಣದ ವ್ಯವಹಾರ ನಡೆದಿರುವುದಾಗಿ ಊಹಾಪೋಹಗಳು ಎದ್ದು, ಅದು ಸತ್ಯ ಎಂಬುದಾಗಿ ಹೆಸರೇಳಲಿಚ್ಚಿಸದ ಕೆಲ ಸದಸ್ಯರು ಹಾಗೂ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಇದರ ಜೊತೆಜೊತೆಗೆ ನಗರದ ಖಾಲಿ ನಿವೇಶನಗಳು ಹಾಗೂ ನಿವಾಸಗಳಿಗೆ ಇ-ಖಾತೆ ಬಗ್ಗೆಯೂ ಪೌರಾಯುಕ್ತ, ಕೆಲ ಅಧಿಕಾರಿಗಳು ಹಾಗೂ ಸದಸ್ಯರ ಜೊತೆ ಪ್ರತಿದಿನವೂ ಹಗ್ಗಜಗ್ಗಾಟ ನಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.


ಪ್ರತಿ ವಾರ್ಡುಗಳಲ್ಲಿಯೂ ಕಸ, ಯುಜಿಡಿ ಸೇರಿದಂತೆ ಹಲವಾರು ಸಮಸ್ಯೆಗಳು ಬಿಗಡಾಯಿಸಿದ್ದು, ಇದಕ್ಕೆ ಉತ್ತಮ ಮಾರ್ಗೋಪಾಯಗಳನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ, ಯಾವುದೇ ಯೋಜನೆಗಳನ್ನು ತಂದರೂ ಅನುಷ್ಠಾನ ಮಾಡಲಾಗಿಲ್ಲ. ಎಲ್ಲಾ ಯೋಜನೆಗಳು ಪತ್ರಗಳಲ್ಲಿಯೇ ಉಳಿದುಕೊಂಡಿವೆ. ನಾನು ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಒಂದಷ್ಟು ಕೆಲಸ ಮಾತ್ರ ಮಾಡಲು ಸಾಧ್ಯವಾಗಿದ್ದು, ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗಿಲ್ಲಾ, ನಮ್ಮ ಪಕ್ಷದ ಮುಖಂಡರುಗಳು, ವರಿಷ್ಠರು ಸಹ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಮ್ಮ ಆಪ್ತ ವಲಯದಲ್ಲಿ ಹೇಳಿಕೊಂಡಿರುವುದರಿಂದ ರಾಜೀನಾಮೆ ನೀಡುವುದು ದೃಢವಾಗಿದೆ.


*ಬುಧವಾರ ರಾಜೀನಾಮೆ?:*

ಕಳೆದ ಒಂದು ವಾರದಿಂದ ಜೆಡಿಎಸ್ ಪಾಳೆಯದಲ್ಲಿ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ ರವರ ರಾಜೀನಾಮೆ ಕುರಿತು ಚರ್ಚೆಗಳಾರಂಭವಾಗಿದ್ದು, ಏಕಾಂಗಿಯಾಗಿ ಅಥವಾ ಸಮಾನ ಮನಸ್ಕರೊಡಗೂಡಿ ರಾಮನಗರ ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ನೀಡುವುದಾಗಿ ಆಪ್ತ ಮೂಲಗಳು ತಿಳಿಸಿವೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು

ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್

 ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್‍ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ

Top Stories »  


Top ↑