ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
![ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು](https://sanmitra.co.in//domains/sanmitra/images/3598_yellowandred_a.jpg)
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊಂಡ ಘಟನೆ ತಾಲ್ಲೂಕಿನ ಭೈರಾಪಟ್ಟಣ ಗ್ರಾಮದಲ್ಲಿ ನಡೆದಿದೆ.
ಐದು ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾಡಳಿತವು ಲಸಿಕೆ ಹಾಕುತ್ತಿದ್ದು, ಇಂದು 11:00 ಗಂಟೆಯ ಸಂದರ್ಭದಲ್ಲಿ ಭೈರಾಪಟ್ಟಣ ಗ್ರಾಮದ ಮೊಹನ್ ಮತ್ತು ಸ್ಫೂರ್ತಿ ಎಂಬ ದಂಪತಿಗಳು ತಮ್ಮ ಮಗುವನ್ನು ದೊಡ್ಡಮಳೂರು ಗ್ರಾಮದಲ್ಲಿರುವ ಅಂಗನವಾಡಿಗೆ ಲಸಿಕೆ ಹಾಕಿಸಲು ಕರೆತಂದಿದ್ದಾರೆ. ಈ ಸಂದರ್ಭದಲ್ಲಿ ಗೀತಾ ಎಂಬ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯು ಮಗುವಿಗೆ ಲಸಿಕೆ ಹಾಕಿದ್ದಾರೆ.
ನಂತರ ಮಗುವನ್ನು ಕರೆದುಕೊಂಡು ಮನೆಗೆ ತೆರಳಿದ ತಕ್ಷಣವೇ ಮಗು ಒದ್ದಾಡುತ್ತಿರುವುದು ಕಂಡು ಬಂದಿದೆ. ಎಚ್ಚೆತ್ತ ಪೋಷಕರು ನಗರದಲ್ಲಿನ ಪುಣ್ಯ ಆಸ್ಪತ್ರೆಗೆ ಕರೆ ತಂದಿದ್ದಾರೆ. ಅಷ್ಟರಲ್ಲಿ ಮಗು ಸಾವನ್ನಪ್ಪಿದೆ.
*ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ:ಮೊ. ನಂ: 9742424949*
ಲಸಿಕೆ ಹಾಕಿಸುವ ಮುನ್ನ ಪೋಷಕರು ಮಗು ನಿನ್ನೆ ರಾತ್ರಿ ಹೆಚ್ಚಾಗಿ ಅಳುತ್ತಿತ್ತು ಎಂದು ಹೇಳಿದಾಗ ಸಣ್ಣ ಮಗು ಅಳುತ್ತದೆ. ಲಸಿಕೆಗು ಅದಕ್ಕೂ ಸಂಬಂಧವಿಲ್ಲ ಎಂದು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತಿಳಿಸಿದ್ದಾರೆ. ಒಮ್ಮೆ ಪರೀಕ್ಷಿಸಿ ನಂತರ ಲಸಿಕೆ ಹಾಕಿ ಎಂದಾಗಲು ಅದೇ ಉತ್ತರ ನೀಡಿದ್ದಾರೆ. ಲಸಿಕೆ ಹಾಕಿದ 15 ರಿಂದ 20 ನಿಮಿಷದೊಳಗೆ ಮಗು ಪ್ರಾಣ ಬಿಟ್ಟಿದೆ. ಇದಕ್ಕೆ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರಾದ ಜಯಕೃಷ್ಣ ದೂರಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿ ರಾಜು ರವರು ಮಾತನಾಡಿ ಪೋಷಕರು ಲಸಿಕೆ ಹಾಕಿದ್ದರಿಂದಲೇ ಮಗು ಮೃತ ಪಟ್ಟಿದೆ ಎನ್ನುತ್ತಿದ್ದಾರೆ. ಆದರೆ, ಒಟ್ಟು 18 ಮಕ್ಕಳಿಗೆ ಲಸಿಕೆ ಹಾಕಿದ್ದು, 17 ಮಕ್ಕಳು ಆರೋಗ್ಯವಾಗಿದ್ದಾರೆ. ಈ ಲಸಿಕೆಯನ್ನು ನಾವು ಲ್ಯಾಬ್ಗೆ ಕಳುಹಿಸಿ ಪರೀಕ್ಷಿಸುತ್ತೇವೆ. ಪೋಷಕರು ಇಚ್ಛೆ ಪಟ್ಟರೆ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿ ವರದಿಯನ್ನು ತರಿಸಿಕೊಳ್ಳುತ್ತೇವೆ ಎಂದಿದ್ದಾರೆ. ಮುಂದುವರೆದು, ಮಗುವು ಲಸಿಕೆ ಹಾಕಿದ್ದರಿಂದಲೇ ಸಾವನ್ನಪ್ಪಿದೆ ಎಂಬ ತೀರ್ಮಾನವನ್ನು ಸರ್ಕಾರದ ಹಿರಿಯ ಅಧಿಕಾರಿಗಳು ತೆಗೆದುಕೊಳ್ಳಬೇಕಾಗುತ್ತದೆ. ಅವರ ಗಮನಕ್ಕೆ ಈಗಾಗಲೇ ವರದಿ ನೀಡಲಾಗಿದೆ ಎಂದರು. ಮಗು ಮರಣಿಸಿದ ಮನೆಯಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಗೊ. ರಾ. ಶ್ರೀನಿವಾಸ...
ಮೊ. ನಂ.-9845856139
Recent news in ramanagara-district »
![ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ](https://sanmitra.co.in//domains/sanmitra/images/3608_yellowandred_a.jpg)
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
![ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು. ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.](https://sanmitra.co.in//domains/sanmitra/images/3605_yellowandred_a.jpg)
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
![ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು](https://sanmitra.co.in//domains/sanmitra/images/3603_yellowandred_a.jpg)
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
![ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ](https://sanmitra.co.in//domains/sanmitra/images/3601_yellowandred_a.jpg)
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
![ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ](https://sanmitra.co.in//domains/sanmitra/images/3599_yellowandred_a.jpg)
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
![ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು](https://sanmitra.co.in//domains/sanmitra/images/3598_yellowandred_a.jpg)
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
![ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್ ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್](https://sanmitra.co.in//domains/sanmitra/images/3596_yellowandred_a.jpg)
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
![ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ. ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.](https://sanmitra.co.in//domains/sanmitra/images/3591_yellowandred_a.jpg)
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ
![ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ](https://sanmitra.co.in//domains/sanmitra/images/3590_yellowandred_a.jpg)
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು
ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್
ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ
ಪ್ರತಿಕ್ರಿಯೆಗಳು